RAT ಪರೀಕ್ಷೆಯಲ್ಲಿ ಪಾಸಿಟಿವ್, RTPCRನಲ್ಲಿ ನೆಗೆಟಿವ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಶಾಲೆವೊಂದರಲ್ಲಿ ಸೋಮವಾರ RAT ಪರೀಕ್ಷೆ ಮಾಡಿಸಿದಾಗ 31 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿತ್ತು. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳನ್ನು RTPCR ಪರೀಕ್ಷೆಗೆ ಒಳಪಡಿಸ ಬುಧವಾರ ನೆಗೆಟಿವ್ ವರದಿ ಬಂದಿದೆ, ಪೋಷಕರು ಹಾಗೂ ಶಿಕ್ಷಕ ವರ್ಗಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಆರೋಗ್ಯ ಸಿಬ್ಬಂದಿ ತಂಡವು ಜೂನ್ 9 ರಂದು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ರಾಜಗೋಪಾಲ ನಗರದ ನ್ಯೂ ಸ್ಟಾಂಡರ್ಡ್ ಇಂಗ್ಲಿಷ್ ಶಾಲೆ ಮತ್ತು ಪೀಣ್ಯ ಎರಡನೇ ಹಂತದಲ್ಲಿರುವ ಎಂಇಎಸ್ ಶಾಲೆಗೆ ಭೇಟಿ ನೀಡಿತ್ತು. ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ RAT ಪರೀಕ್ಷೆ ಮಾಡಿದ್ದಾರೆ. ಈ ವೇಳೆ 31 ವಿದ್ಯಾರ್ಥಿಗಳಿಗೆ ಸೋಂಕು ತಗಲಿರುವುದು ಧೃಡವಾಯಿತು.
ನ್ಯೂ ಸ್ಟಾಂಡರ್ಡ್ ಇಂಗ್ಲಿಷ್ ಶಾಲೆಯಲ್ಲಿ 405 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು, 6ನೇ ತರಗತಿಯ 21 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ. 6ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ, ಎಲ್ಲರ ಮೂಗು, ಗಂಟಲು ದ್ರವವನ್ನು RTPCR ಪರೀಕ್ಷೆಗೆ ಕಳುಹಿಸಿದರು. ವರದಿ ನೆಗೆಟಿವ್ ಬಂದಿದೆ.
ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ, ಎಲ್ಲ ವಿದ್ಯಾರ್ಥಿಗಳನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಇನ್ನು ಕೆಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ’ ಎಂದು ದಾಸರಹಳ್ಳಿ ವಲಯದ ಸಹಾಯಕ ಆರೋಗ್ಯಾಧಿಕಾರಿ ಡಾ.ಸುರೇಶ್ ರುದ್ರಪ್ಪ ತಿಳಿಸಿದರು.
RTPCR ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಹಾಗಾಗಿ, ಪೋಷಕರು, ಶಿಕ್ಷಕರು ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಶಾಲೆಗಳ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಪಾಲಿಕೆಯ ವಿಶೇಷ ಆಯುಕ್ತ (ಆರೋಗ್ಯ) ಡಾ. ಕೆ. ವಿ. ತ್ರಿಲೋಕ್ ಚಂದ್ರ ಹೇಳಿದರು.
2-3 ದಿನಗಳ ಹಿಂದೆ ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಶಾಲೆಯ ಎಲ್ಲ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ. ಹಾಗಾಗಿ ಪೆÇೀಷಕರು ಆತಂಕಪಡುವ ಅಗತ್ಯವಿಲ್ಲ’ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ಕೆಳಗಿನ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ…