• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಪ್ಲ್ಯಾಸ್ಟಿಕ್‌ ಮುಕ್ತ ನಂದಿಬೆಟ್ಟ; ಬೆಂಗಳೂರು ದಂಪತಿಯ ಪರಿಸರ ಸೇವೆ

cknewsnow desk by cknewsnow desk
June 20, 2022
in EDITORS'S PICKS, STATE
Reading Time: 1 min read
0
ಪ್ಲ್ಯಾಸ್ಟಿಕ್‌ ಮುಕ್ತ ನಂದಿಬೆಟ್ಟ; ಬೆಂಗಳೂರು ದಂಪತಿಯ ಪರಿಸರ ಸೇವೆ

ಎಸ್.ರಾಜು ಮತ್ತು ನಂದಿನಿ

1.1k
VIEWS
FacebookTwitterWhatsuplinkedinEmail

ಪ್ಲ್ಯಾಸ್ಟಿಕ್‌ ಬಾಟೆಲ್, ಪೇಪರ್ ಹಾಕದಂತೆ ಅರಿವು; ವೀಕೆಂಡ್ʼನಲ್ಲಿ ವಿನೂತನ ಅಭಿಯಾನ

ಬೆಂಗಳೂರು: ಮಂಜಿನ ಮಡಿಲಲ್ಲಿ ಸ್ವರ್ಗದ ಅನುಭವ ನೀಡುವ ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಗಿರಿಧಾಮದಲ್ಲಿ ಪ್ರವಾಸಿಗರು ಪ್ಲ್ಯಾಸ್ಟಿಕ್‌ ಬಾಟೆಲ್, ಪೇಪರ್ ನಂಥ ತ್ಯಾಜ್ಯವಸ್ತುಗಳನ್ನು ಎಲ್ಲೆಂದರಲ್ಲಿ ಬೀಸಾಡುತ್ತಾರೆ. ಅದರಿಂದ ಬೆಟ್ಟದ ಪರಿಸರ ಹಾಳಾಗುತ್ತಿದೆ. ಮುಂದಿನ ಪೀಳಿಗೆಗೆ ಉಳಿಸಿ ಸಂರಕ್ಷಣೆ ಮಾಡಬೇಕಾದ ಗಿರಿಧಾಮದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಾಡಬೇಕಿದೆ. ದಂಪತಿಯೊಬ್ಬರು ಸದ್ಸಿಲ್ಲದೆ, ಶ್ರೀ ಯೋಗನಂದೀಶ್ವರ ಸನ್ನಿಧಿಯಲ್ಲಿ ತ್ಯಾಜ್ಯವನ್ನು ತೆಗೆಯುತ್ತಾ ಪರಿಸರ ಕಾಳಜಿ ಮೆರೆದಿದ್ದಾರೆ.

ಬೆಂಗಳೂರು ಮೂಲದ ಎಸ್.ರಾಜು ಮತ್ತು ನಂದಿನಿ ಎಂಬ ದಂಪತಿ ತಮ್ಮ ವೀಕೆಂಡ್ʼನಲ್ಲಿ ಹತ್ತಿರದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಸರದ ಬಗ್ಗೆ ಪ್ರವಾಸಿಗರಿಗೆ ಅರಿವು ಮೂಡಿಸುವುದಷ್ಟೇ ಅಲ್ಲದೆ, ಅಲ್ಲೆಲ್ಲ ಜನರು ಬೀಸಾಡಿರುವ ಪ್ಲ್ಯಾಸ್ಟಿಕ್‌ ಬಾಟೆಲ್, ಪ್ಲ್ಯಾಸ್ಟಿಕ್‌ ಕ್ಯಾರಿ ಬ್ಯಾಗ್‍ಗಳು, ಆಹಾರ ತಿಂದು ಬೀಸಾಡಿದ ಪ್ಲ್ಯಾಸ್ಟಿಕ್‌ ಪೊಟ್ಟಣಗಳನ್ನು ಆಯ್ದು ವಿಲೇವಾರಿ ಮಾಡುತ್ತಿಷದ್ದಾರೆ. ಜತೆಗೆ; ಪ್ರವಾಸಿ ಮತ್ತು ಧಾರ್ಮಿಕ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಎಸ್.ರಾಜು
ನಂದಿಬೆಟ್ಟದಲ್ಲಿ ದಂಪತಿ ಆಯ್ದಿರುವ ಪ್ಲ್ಯಾಸಿಕ್‌ ತ್ಯಾಜ್ಯ.

ಬೆಟ್ಟದಲ್ಲಿ ಪ್ಲಾಸ್ಟಿಕ್ ಬೀಸಾಡಬೇಡಿ

ಬೆಟ್ಟದ ಪರಿಸರಕ್ಕೆ ಪ್ಲ್ಯಾಸ್ಟಿಕ್‌ ಮಾರಕವಾಗಿದ್ದು, ನಿಷೇಧವಿದ್ದರೂ ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿ ಸಮಸ್ಯೆ ಸೃಷ್ಟಿಯಾಗಿದೆ. ಕಸ ಸಂಗ್ರಹ ಮಾಡಿ ಅದನ್ನು ವಿಲೇವಾರಿ ಮಾಡುವುದು ತುಂಬಾ ಕಷ್ಟದ ಕೆಲಸ. ಹಾಗಾಗಿ ಬೆಂಗಳೂರಿನ ಈ ಯುವ ದಂಪತಿ ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಿಗೆ ಬೇಟಿ ನಾಡುತ್ತಾರೆ. ಅದರ ಜತೆಗೆ ಸಾಮಾಜಿಕ ಕಳಕಳಿಯಿಂದ ಬೆಟ್ಟದ ಮೇಲೆ ಕಸದ ಸಂಗ್ರಹಣೆ ಸೇರಿದಂತೆ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಂಡು ಎಲ್ಲರಿಗೂ ಅರಿವು ಮೂಡಿಸುತ್ತಿರುವ ರೀತಿಗೆ ಪ್ರವಾಸಿಗರುಬ ಮನಸೋತ್ತಿದ್ದಾರೆ.

ಪರಿಸರದ ಅಂದ ಕೆಡುತ್ತಿದೆ

ನಂದಿ ಬೆಟ್ಟದ ಪ್ರಕೃತಿಯಲ್ಲಿ ನಾನಾ ಜಾತಿಯ ಪಕ್ಷಿಗಳು, ಪ್ರಾಣಿಗಳು ನೆಲೆ ಕಂಡುಕೊಂಡಿವೆ. ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದಾಗಿ ಪ್ರಾಣಿಗಳು ಆಹಾರದ ನೆಪದಲ್ಲಿ ಪ್ಲಾಸ್ಟಿಕ್ ಸೇವಿಸುತ್ತಿವೆ. ಜತೆಗೆ, ಬೆಟ್ಟದ ಅಂದಕ್ಕು ಕಸ ಅಡ್ಡಿಯನ್ನುಂಟು ಮಾಡುತ್ತಿದೆ. ಇನ್ನು ನಂದಿಬೆಟ್ಟದ ಮೇಲಿರುವ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟಕ್ಕೆ ಅವಕಾಶವಿಲ್ಲ. ಕಳೆದ ಮೂರ್ನಾಲ್ಕು ವರ್ಷದಿಂದ ಈ ನಿಯಮವನ್ನು ಪಾಲಿಸಲಾಗುತ್ತಿದೆ. ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ, ಕವರುಗಳನ್ನು ತರುವುದರಿಂದ ಸಮಸ್ಯೆ ಎದುರಾಗುತ್ತಿದೆ. ಪ್ರತಿಯೊಬ್ಬರನ್ನು ಪರಿಶೀಲಿಸಲು ಸಾಧ್ಯವಾಗದ ಹಿನ್ನೆಲೆ ಬೆಟ್ಟದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗಿ ಕಂಡುಬರುತ್ತಿದೆ ಇದಕ್ಕೆ ಸೂಕ್ತವಾದ ಪರಿಹಾರ ಕ್ರಮಗಳನ್ನು ಪ್ರವಾಸೋದ್ಯಮ ಇಲಾಖೆ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವರ್ಷಕ್ಕೆ 15 ಟನ್ ಪ್ಲಾಸ್ಟಿಕ್ ಸಂಗ್ರಹ

ದಕ್ಷಿಣ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ವರ್ಷಕ್ಕೆ 28 ಟನ್ ಕಸ ವಿಲೇವಾರಿಯಾಗುತ್ತಿದೆ. ಅದರಲ್ಲಿ ಬರೋಬ್ಬರಿ 15 ಟನ್ ಪ್ಲ್ಯಾಸ್ಟಿಕ್‌ ತ್ಯಾಜ್ಯ ಸಂಗ್ರಹ ಆಗುತ್ತಿದೆ, ಇದನ್ನು ನಿರ್ವಹಣೆ ಮಾಡುತ್ತಿರುವುದೇ ದೊಡ್ಡ ತಲೆ ನೋವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಪ್ರವಾಸಿಗರು ತಮ್ಮ ಮೋಜು, ಮಸ್ತಿಗಾಗಿ ಪರಿಸರ ಹಾಳು ಮಾಡುತ್ತಿದ್ದಾರೆ. ಎಲ್ಲಾ ಪ್ರಜ್ಞಾವಂತ ಯುವಕ, ಯುವತಿಯರು ಹೆಚ್ಚಾಗಿ ಬರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ನಮ್ಮ ಮುಂದಿನ ಪೀಳಿಗೆಗೆ ಪರಿಸರ ಉಳಿಸಿ ನಾವು ಕೊಡುಗೆ ನೀಡಬೇಕು ಎನ್ನುತ್ತಾರೆ ಈ ಯುವ ದಂಪತಿ.

ವಾರಾಂತ್ಯದಲ್ಲಿ ಸ್ವಚ್ಚತಾ ಅಭಿಯಾನ

ಬೆಂಗಳೂರಿನ ಕೆಂಪಾಪುರದ ಈ ಯುವ ದಂಪತಿ ರಾಜು ಮತ್ತು ನಂದಿನಿ ಅವರು ವಾರಾಂತ್ಯದಲ್ಲಿ ಸುತ್ತಮುತ್ತಲಿನ ಪ್ರವಾಸಿ ತಾಣಗಳ ಚಾರಣಕ್ಕಾಗಿ ಹೋಗುತ್ತಾರೆ. ಅಲ್ಲಿ ಪ್ರವಾಸಿಗರು ಬೀಸಾಡಿದ ಪ್ಲಾಸ್ಟಿಕ್ ಬಾಟಲಿಗಳು, ಗಾಜಿನ ಬಾಟಲಿಗಳು, ಆಹಾರದ ಪೊಟ್ಟಣಗಳು ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ವರ್ಗೀಕರಿಸಿ ಸಂಗ್ರಹ ಮಾಡುತ್ತಾರೆ ಅಲ್ಲದೆ ಪ್ರವಾಸಿಗರಿಗೆ ಪರಿಸರದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಈ ಪರಿಸರ ಪ್ರೇಮಿ ಕೆಲಸಕ್ಕೆ ಪ್ರವಾಸಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಎಸ್.ರಾಜು ಮತ್ತು ನಂದಿನಿ

ನಾವು ಪ್ರತೀ ವಾರಾಂತ್ಯದಲ್ಲಿ ನಂದಿಬೆಟ್ಟಕ್ಕೆ ಚಾರಣಕ್ಕಾಗಿ ಬರುತ್ತೇವೆ. ಪ್ರವಾಸಿಗರು ಬೀಸಾಡಿದ ಪ್ಲ್ಯಾಸ್ಟಿಕ್‌ ಬಾಟಲಿಗಳು ಎಲ್ಲೆಂದರಲ್ಲಿ ಬಿದ್ದಿರುತ್ತವೆ. ನಾವು ಪರಿಸರವನ್ನು ಉಳಿಸಬೇಕಾದರೆ, ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ನಾವು ಪರಿಸರವನ್ನು ರಕ್ಷಿಸಲು ಮುಂದಾಗದಿದ್ದರೂ ಪರವಾಗಿಲ್ಲ. ಕೊನೆಪಕ್ಷ ನಮ್ಮಿಂದ ಯಾವುದೇ ಪರಿಸರ ಹಾನಿ ಕೆಲಸ ಮಾಡದೇ ಇದ್ದರೆ ಸಾಕು, ಪ್ರವಾಸಿತಾಣಗಳಿಗೆ ಬೇಟಿ ಮಾಡುವ ಪ್ರವಾಸಿಗರು ಪ್ಲಾಸ್ಟಿಕ್ ಬಳಕೆ ಹಾಗೂ ಬೀಸಾಡುವುದು ನಿಲ್ಲಿಸಬೇಕು. ನಮ್ಮ ಈ ಕೆಲಸದಿಂದ ಬೇರೆ ಪ್ರವಾಸಿಗರಿಗೆ ಅರಿವು ಮೂಡಲಿ ಅನ್ನುವ ಉದ್ದೇಶ ಅವರು ಸಹ ಇತರರಿಗೆ ಮಾದರಿಯಾಗಲಿ. ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯ, ನಾವು ಪರಿಸರಕ್ಕೆ ಗೌರವ ಕೊಡಬೇಕು, ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಬೇಕು ಇದು ನಮ್ಮೆಲ್ಲರ ಜವಾಬ್ದಾರಿ.

-ರಾಜು, ಪರಿಸರ ಪ್ರೇಮಿ, ಬೆಂಗಳೂರು.

ಇತ್ತೀಚಿಗೆ ನಂದಿಬೆಟ್ಟದಲ್ಲಿ ಪ್ರವಾಸಿಗರು ತಮ್ಮ ಮೋಜಿಗಾಗಿ ಪರಿಸರ ಹಾಳು ಮಾಡುತ್ತಿದ್ದಾರೆ. ಪ್ರಜ್ಞಾವಂತರು ಈ ರೀತಿಯ ಕೆಲಸ ಮಾಡಬಾರದು. ನಂದಿಬೆಟ್ಟದಲ್ಲಿ ಪ್ಲ್ಯಾಸ್ಟಿಕ್‌ ಬೀಸಾಡಿರುವುದನ್ನು ನಮ್ಮ ಕೈಯಲ್ಲಿ ಆದ ಸ್ವಚ್ಚತೆ ಮಾಡುತ್ತಿದ್ದೇವೆ. ಇದು ನಮ್ಮ ವೈಯಕ್ತಿಯ ಸಂತೋಷ ಹಾಗೂ ಪರಿಸರ ಕಾಳಜಿ. ಹಾಗಾಗಿ ನಾವು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಲು ಎಲ್ಲರು ಕೈ ಜೋಡಿಸಬೇಕು. ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ಪ್ಲ್ಯಾಸ್ಟಿಕ್‌ ನಿಂದ ಕೂಡಿದ ಪರಿಸರ ನೀಡಬೇಕಾಗುತ್ತದೆ. ಪ್ರವಾಸಿಗರು ತಮ್ಮ ಸುತ್ತಮುತ್ತಲಿನ ಪರಿಸರ ಕಾಪಾಡಿಕೊಳ್ಳಲು ಮುಂದಾಗಬೇಕು.

-ನಂದಿನಿ, ಪರಿಸರ ಪ್ರೇಮಿ, ಬೆಂಗಳೂರು
Tags: chikkaballapuraclean nandi hillsenvironmentkarnatakaKarnataka tourismNandi bettaNandi hillspalstic
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆಯ ದೇವನಹಳ್ಳಿಯಲ್ಲೇ ಹಳ್ಳಹಿಡಿದ ಸ್ವಚ್ಛಭಾರತ!!

ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆಯ ದೇವನಹಳ್ಳಿಯಲ್ಲೇ ಹಳ್ಳಹಿಡಿದ ಸ್ವಚ್ಛಭಾರತ!!

Leave a Reply Cancel reply

Your email address will not be published. Required fields are marked *

Recommended

ಗರ್ಭಿಣಿ ಪತ್ನಿಯನ್ನು ಕೊಚ್ಚಿಕೊಲೆ ಮಾಡಿದ ಕುಡುಕ ಪತಿ

ಗರ್ಭಿಣಿ ಪತ್ನಿಯನ್ನು ಕೊಚ್ಚಿಕೊಲೆ ಮಾಡಿದ ಕುಡುಕ ಪತಿ

4 years ago
ಬೆಡ್‌ ಬ್ಲಾಕಿಂಗ್‌ ದಂಧೆಗೆ ಮುಲಾಮು: ಇನ್ಮುಂದೆ ಹೊಸ ತಂತ್ರಾಂಶದ ಮೂಲಕ Q ಪದ್ಧತಿಯಲ್ಲಿ ಬೆಡ್‌ ಹಂಚಿಕೆ, ವಂಚನೆಗೆ ಚಾನ್ಸೇ ಇಲ್ವಂತೆ!!

ಬೆಡ್‌ ಬ್ಲಾಕಿಂಗ್‌ ದಂಧೆಗೆ ಮುಲಾಮು: ಇನ್ಮುಂದೆ ಹೊಸ ತಂತ್ರಾಂಶದ ಮೂಲಕ Q ಪದ್ಧತಿಯಲ್ಲಿ ಬೆಡ್‌ ಹಂಚಿಕೆ, ವಂಚನೆಗೆ ಚಾನ್ಸೇ ಇಲ್ವಂತೆ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ