• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆ ಮರು ಪರಿಶೀಲನೆ; ಪಿಎಂ ಮೋದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪತ್ರ

P K Channakrishna by P K Channakrishna
June 21, 2022
in STATE
Reading Time: 1 min read
0
ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆ ಮರು ಪರಿಶೀಲನೆ; ಪಿಎಂ ಮೋದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪತ್ರ

ಮಾಧ್ಯಮಗೋಷ್ಠಿಯಲ್ಲಿಆರ್.ಆಂಜನೇಯ ರೆಡ್ಡಿ, ಮಳ್ಳೂರು ಹರೀಶ್, ನಾಗದೇನಹಳ್ಳಿ ನಾರಾಯಣಸ್ವಾಮಿ, ಆನೂರು ದೇವರಾಜ್, ವಿಜಯಭಾವ ರೆಡ್ಡಿ, ಉಷಾರಾಣಿ, ಶ್ರೀನಿವಾಸ್.

1.4k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾ. ಜಿಲ್ಲೆಗಳಿಗೆ ಜಲ ಅನ್ಯಾಯ: ಮೋದಿ ಮಧ್ಯಪ್ರವೇಶಕ್ಕೆ ಆಗ್ರಹ

ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆಗುತ್ತಿರುವ ನೀರಾವರಿ ಅನ್ಯಾಯಗಳ ಬಗ್ಗೆ ನಿರಂತರವಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ಗಮನ ಸೆಳೆದರೂ ಫಲಿತಾಂಶ ಶೂನ್ಯವಾದ ನಂತರ ಬೇಸತ್ತ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಂತಿಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಜಲ ಅನ್ಯಾಯ ಸರಿಪಡಿಸುವಂತೆ ಒತ್ತಾಯ ಮಾಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಅವರು; ಪ್ರಧಾನಿ ಅವರಿಗೆ ಬರೆದಿರುವ ಸುದೀರ್ಘ ಪತ್ರದ ಬಗ್ಗೆ ಮಾಹಿತಿ ನೀಡಿದರಲ್ಲದೆ, ಪ್ರಧಾನಿಗಳ ಮುಂದೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಇರಿಸಲಾಗಿದೆ ಎಂದರು.

ಈಗಾಗಲೇ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿದ್ದಾಗ್ಯೂ ಯಾವುದೇ ಫಲಿತಾಂಶ ಕಾಣದ ಎತ್ತಿನಹೊಳೆ ಯೋಜನೆಯ ಜಲ ವಿಜ್ಞಾನ ಹಾಗೂ ಆ ಜಲ ವಿಜ್ಞಾನವನ್ನು ಕೇಂದ್ರಿಯ ಜಲ ಆಯೋಗದಿಂದ ಪರಿಶೀಲನೆ ಮಾಡಿಸಲು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಆದೇಶ ನೀಡಬೇಕು ಎಂಬುದು ನಮ್ಮ ಪ್ರಮುಖ ಒತ್ತಾಯವಾಗಿದೆ ಎಂದು ಅವರು ತಿಳಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ತ್ಯಾಜ್ಯ ನೀರು ಹರಿದುಬಿಡುವ ಕೆ.ಸಿ.ವ್ಯಾಲಿ ಮತ್ತು ಹೆಚ್.‌ಎನ್.‌ವ್ಯಾಲಿ ಯೋಜನೆಗಳಲ್ಲಿ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಹರಿಯಬಿಡಲು CPHEEO ಕೈಪಿಡಿ 2013ರ ಶಿಫಾರಸುಗಳು ಹಾಗೂ ಮಾನದಂಡಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಸರಕಾರಕ್ಕೆ ಸ್ಪಷ್ಟ ನೀರ್ದೇಶನ ನೀಡಬೇಕು ಎನ್ನುವುದು ನಮ್ಮ ಎರಡನೇ ಬೇಡಿಕೆಯಾಗಿದೆ ಎಂದು ಆಂಜನೇಯ ರೆಡ್ಡಿ ಹೇಳಿದರು.

ಪ್ರತಿ ಗ್ರಾಮದಲ್ಲಿ ಆರ್‌ಒ ಘಟಕಗಳ ಪರೀಕ್ಷೆಯೊಂದಿಗೆ ಎಲ್ಲಾ ನಿಯತಾಂಕಗಳೊಂದಿಗೆ ಎಲ್ಲಾ ಕೊಳಬೆ ಬಾವಿಗಳಲ್ಲಿನ ಕುಡಿಯುವ ನೀರಿನ ಪರೀಕ್ಷೆಗಳನ್ನು ನಡೆಸಬೇಕು. ಅದಕ್ಕೆ ಕೇಂದ್ರ ಮತ್ತು ರಾಜ್ಯದ ಸಂಬಂಧಪಟ್ಟ ಇಲಾಖೆಗಳು ಹಾಗೂ ಏಜೆನ್ಸಿಗಳಿಗೆ ಆದೇಶ ನೀಡಬೇಕು. ಇದು ನಮ್ಮ ಮೂರನೇ ಬೇಡಿಕೆ ಎಂದರು ಅವರು.

ಕೃಷ್ಣಾ ನದಿಯನ್ನು ಪೆನ್ನಾರ್‌ ಜಲಾನಯನ ಪ್ರದೇಶದೊಂದಿಗೆ ಜೋಡಿಸಲು ರಾಷ್ಟ್ರೀಯ ಜಲ ಅಭಿವೃದ್ಧಿ ಮಂಡಳಿ ಸಂಸ್ಥೆ (NWDA) ಯಿಂದ ಸಮಗ್ರವಾದ ಯೋಜನಾ ವರದಿಯನ್ನು (DPR) ತಕ್ಷಣವೇ ಸಿದ್ಧಪಡಿಸಲು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂಬುದು ನಮ್ಮ ನಾಲ್ಕನೇ ಒತ್ತಾಯವಾಗಿದೆ ಎಂದು ರೆಡ್ಡಿ ಅವರು ಮಾಹಿತಿ ನೀಡಿದರು.

ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸಲು ಬಹಳಷ್ಟು ಭಗೀರಥರು ಬಂದು ಹೋಗಿದ್ದಾರೆ. ಈ ದಿನದವರೆಗೂ ಜನರಿಗೆ ಹಸಿಸುಳ್ಳುಗಳನ್ನೇ ಹೇಳುತ್ತಿದ್ದಾರೆ. ಸುಜಲಾ ಒಂದು, ಸುಜಲಾ ಎರಡು ಹಾಗೂ ಜಲಾನಯನ ಅಭಿವೃದ್ಧಿ ಪ್ರದೇಶ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆಯಲಾಗಿದೆ. ಇನ್ನಾದರೂ ನಮಗೆ ನ್ಯಾಯ ಸಿಗಲಿ ಎನ್ನುವ ಉದ್ದಶದಿಂದ ಪ್ರಧಾನಿಗಳೇ ಪತ್ರ ಬರೆದಿದ್ದೇವೆ. ಮುಂದಿನ ಹೋರಾಟವನ್ನೂ ಬೇರೆಯದ್ದೇ ರೀತಿಯಲ್ಲಿ ರೂಪಿಸುತ್ತೇವೆ.

ಆರ್.ಆಂಜನೇಯ ರೆಡ್ಡಿ, ಅಧ್ಯಕ್ಷರು, ಶಾಶ್ವತ ನೀರಾವರಿ ಹೋರಾಟ ಸಮಿತಿ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಬರೆದಿರುವ ಪತ್ರ
ನೀರಿನ ಭದ್ರತೆ ಅಗತ್ಯ

ಬರಪೀಡಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನೀರಾವರಿ ಹೆಸರಿನಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಎಂದು ತೋರಿಸಿ ಕೊಳ್ಳೆ ಹೊಡೆಯಲಾಗಿದೆ. ಜನರ ನೀರಾವರಿ ಹಾಹಾಕಾರವನ್ನೇ ವ್ಯಾಪಾರ ಮಾಡಿಕೊಂಡಿರುವ ಮೂರೂ ಜಿಲ್ಲೆಗಳ ರಾಜಕಾರಣಿಗಳು ಹಾಗೂ ಸರಕಾರಗಳು ಅಪಾರ ಹಣವನ್ನು ಕೊಳ್ಳೆ ಹೊಡೆದಿವೆ. ಕಳೆದ ಎಪ್ಪತ್ತೈದು ವರ್ಷಗಳಿಂದ ಆಗುತ್ತಿರುವ ಈ ಜಲ ಅನ್ಯಾಯವನ್ನು ಕೊನೆಗಾಣಿಸಲು ಸ್ವತಃ ತಾವೇ ಮಧ್ಯಪ್ರವೇಶ ಮಾಡಬೇಕು ಎಂದು ಆಂಜನೇಯ ರೆಡ್ಡಿ ಅವರು ಪ್ರಧಾನಿಗಳಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ.

ಸಾಂಪ್ರಾಯಿಕ ಜಲಮೂಲಗಳನ್ನು ಪುನರುಜ್ಜೀವನಗೊಳಿಸದರೆ ಈ ಮೂರೂ ಬರಪೀಡಿತ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಜಲಸಂಪನ್ಮೂಲವನ್ನು ಸಂಗ್ರಹ ಮಾಡಬಹುದು. ಅಲ್ಲದೆ, ಪಾರಂಪರಿಕ ಜಲ ಸಂಗ್ರಹಗಾರಗಳಾದ ಕೆರೆ ಕುಂಟೆಗಳನ್ನು ಜೀರ್ಣೋದ್ಧಾರ ಮಾಡಿದರೆ ಸುಮಾರು ಐವತ್ತಕ್ಕೂ ಹೆಚ್ಚು ಟಿಎಂಸಿ ನೀರನ್ನು ಆಂತರಿಕವಾಗಿಯೇ ಹಿಡಿದಿಟ್ಟುಕೊಳ್ಳಬಹುದಾಗಿದೆ. ಆದರೆ, ಉತ್ತಮ ಮಳೆಯಾಗುತ್ತಿದ್ದರೂ ಆ ನೀರನ್ನು ಈ ಜಿಲ್ಲೆಗಳಲ್ಲಿ ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಆ ನೀರೆಲ್ಲ ಆಂಧ್ರ ಪ್ರದೇಶಕ್ಕೆ ಹರಿದು ಹೋಗುತ್ತಿದೆ. ಸಣ್ಣ ನೀರಾವರಿ ಇಲಾಖೆ ಸತ್ತು ಹೋಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಳ್ಳೂರು ಹರೀಶ್, ನಾಗದೇನಹಳ್ಳಿ ನಾರಾಯಣಸ್ವಾಮಿ, ಆನೂರು ದೇವರಾಜ್, ವಿಜಯಭಾವ ರೆಡ್ಡಿ, ಉಷಾರಾಣಿ, ಶ್ರೀನಿವಾಸ್ ಅವರು ಉಪಸ್ಥಿತರಿದ್ದರು.

Tags: chikkaballapurahn valley projectkarnatakakc valley projectkolarnarendra modiprime ministeryettinahole
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

Leave a Reply Cancel reply

Your email address will not be published. Required fields are marked *

Recommended

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ, ಎಲ್ಲ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದೆ ಚಿಕಿತ್ಸೆ

5 years ago
ಮಾರ್ಚ್ 24ರಿಂದ ವಾರದ ಕಾಲ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಲಾಂಛನ ಅನಾವರಣ ಮಾಡಿದ ಯಡಿಯೂರಪ್ಪ

ಮಾರ್ಚ್ 24ರಿಂದ ವಾರದ ಕಾಲ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಲಾಂಛನ ಅನಾವರಣ ಮಾಡಿದ ಯಡಿಯೂರಪ್ಪ

6 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ