• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಪಕ್ಕದ ಜಿಲ್ಲೆಗೇ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.‌ಲತಾ ವರ್ಗ!

cknewsnow desk by cknewsnow desk
July 11, 2022
in EDITORS'S PICKS, STATE
Reading Time: 1 min read
0
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಜಿಲ್ಲಾಧಿಕಾರಿ ಆರ್‌.ಲತಾ

1.6k
VIEWS
FacebookTwitterWhatsuplinkedinEmail

ಡಾ.ಕೆ.ಸುಧಾಕರ್‌ ಉಸ್ತುವಾರಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಗೇ ಪೋಸ್ಟಿಂಗ್‌ ಆದರು ಮೇಡಂ!!

ಬೆಂಗಳೂರು: ಎಲ್ಲರೂ ಚಕಿತಗೊಳ್ಳುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.‌ಲತಾ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರೇ ಜಿಲ್ಲಾ ಉಸ್ತುವಾರಿ ಹೊಂದಿರುವ ನೆರೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿದ್ದಾರೆ.

ಸಾಮಾನ್ಯವಾಗಿ ಬೇರೆ ಅರ್ಹ ಇಲಾಖೆಗಳಿಗೆ ಅಥವಾ ನೆರೆಯ ಜಿಲ್ಲೆಗಳಲ್ಲದೇ ದೂರದ ಜಿಲ್ಲೆಗಳಿಗೆ ವರ್ಗವಾಗುವ ಸಂಪ್ರದಾಯವನ್ನು ಮೀರಿ ಲತಾ ಅವರನ್ನು ಹೆಚ್ಚೂಕಮ್ಮಿ ಚಿಕ್ಕಬಳ್ಳಾಪುರ ಜಿಲ್ಲೆಗೇ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೇ ವರ್ಗಾವಣೆ ಮಾಡಿರುವುದು ಎಲ್ಲರ ಹುಬ್ಬೇರಿಸಿದೆ.

ಅಲ್ಲದೆ; ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಇಷ್ಟಲ್ಲದೆ, ಲತಾ ಅವರ ವರ್ಗಾವಣೆಯಿಂದ ತೆರವಾಗಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ವರ್ಗ ಮಾಡದಿರುವುದು ಕೂಡ ತೀವ್ರ ಚರ್ಚೆಗೆ ಕಾರಣವಾಗಿದೆ.

dpar-300-sas-2022-11.07.2022Download

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಲ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರಾದರೂ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಣತಿಯಂತೆ ಕೆಲಸ ಮಾಡಿದ್ದರು ಎಂಬುದು ಇಡೀ ಜಿಲ್ಲೆಯಲ್ಲಿರುವ ದಟ್ಟ ಅಭಿಪ್ರಾಯ. ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಸೃಷ್ಟಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿಗಳ ಪಾತ್ರವೂ ದೊಡ್ಡದು ಎನ್ನುವ ಆರೋಪವೂ ಇದೆ. ಅವರಿಗೆ ಸಚಿವರು ಹೇಳಿದ್ದೇ ವೇದವಾಕ್ಯವಾಗಿತ್ತು. ಇದೀಗ ಅದೇ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿರುವುದು ಅಚ್ಚರಿಗೆ ಕಾರಣವಾಗಿದೆ.

ಎಸ್.ಪಿ ವರ್ಗದ ಬೆನ್ನ ಹಿಂದೆ ಡಿಸಿಯೂ ವರ್ಗ

ಸಚಿವ ಡಾ.ಕೆ.ಸುಧಾಕರ್‌ ಅವರ ಕಣ್ಣಳತೆಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳೆಲ್ಲ ಜಿಲ್ಲೆಯಿಂದ ಎತ್ತಂಗಡಿ ಆಗಿದ್ದು, ಕೆಲ ದಿನಗಳ ಹಿಂದೆ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಆಗಿದ್ದ ಮಿಥುನ್‌ ಕುಮಾರ್‌ ಬೆಂಗಳೂರಿನ ಸಿಐಡಿ ಕೇಂದ್ರ ಕಚೇರಿಗೆ ವರ್ಗ ಆಗಿದ್ದರು. ಈಗ ಜಿಲ್ಲಾಧಿಕಾರಿ ಲತಾ ಅವರು ವರ್ಗಾವಣೆಯಾಗಿದ್ದಾರೆ.

ಒಟ್ಟಾರೆ ವರ್ಗ ಆಗಿರುವ ಎಲ್ಲ ಐಎಎಸ್‌ ಅಧಿಕಾರಿಗಳ ಪಟ್ಟಿ ಹೀಗಿದೆ;

  • ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ.
  • ಕ್ಯಾಪ್ಟನ್ ಡಾ.ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನುಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ.
  • ಸುಂದರೇಶಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ಇವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್,ಗೆ ನೇಮಕ ಮಾಡಲಾಗಿದೆ.
  • ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ , ಇವರನ್ನು ಮುಂದಿನ ಆದೇಶದವರೆಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
  • ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರನ್ನು ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
  • ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಅವರನ್ನು ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
  • ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.
  • ಶಿವಾನಂದ ಕಾಪಶಿ, ಐಎಎಸ್ (ಕೆಎನ್: 2012), ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲೆ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ದಾವಣಗೆರೆ ವೈಸ್ ಶ್ರೀ ಮಹಾಂತೇಶ ಬಿಳಗಿ, ಐಎಎಸ್ ವರ್ಗಾವಣೆ ಮಾಡಿದ್ದಾರೆ.

Tags: bengaluru ruralchikkaballapuracknewsnowdr k sudhakarIASias officers transferkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್‌ ಪಾಸಿಟಿವ್

Leave a Reply Cancel reply

Your email address will not be published. Required fields are marked *

Recommended

ಉಕ್ರೇನ್ ಚೇತರಿಕೆ ನಡುವೆ ತೈಲ ಸಂಗ್ರಹಗಾರಗಳ ಮೇಲೆ ರಷ್ಯಾ ದಾಳಿ

ಉಕ್ರೇನ್ ಚೇತರಿಕೆ ನಡುವೆ ತೈಲ ಸಂಗ್ರಹಗಾರಗಳ ಮೇಲೆ ರಷ್ಯಾ ದಾಳಿ

5 years ago
ಕೋವಿಡ್‌ನಿಂದ ಕೊರಗಿದ ಪ್ರವಾಸೋದ್ಯಮ

ಕೋವಿಡ್‌ನಿಂದ ಕೊರಗಿದ ಪ್ರವಾಸೋದ್ಯಮ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ