• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೋವಿಡ್‌: ಹೋಂ ಐಸೋಲೇಷನ್ ವೇಳೆ ಜೈ ಭೀಮ್, ಜನಗಣಮನ ವೀಕ್ಷಿಸಿದ HDK

P K Channakrishna by P K Channakrishna
July 18, 2022
in NATION
Reading Time: 1 min read
0
ಕೋವಿಡ್‌: ಹೋಂ ಐಸೋಲೇಷನ್ ವೇಳೆ ಜೈ ಭೀಮ್, ಜನಗಣಮನ ವೀಕ್ಷಿಸಿದ HDK
942
VIEWS
FacebookTwitterWhatsuplinkedinEmail

ಮತ್ತೆ ವಿಚಾರಣಾಧೀನ ಕೈದಿಗಳ ಬಗ್ಗೆ ದನಿಯೆತ್ತಿದ ಮಾಜಿ ಸಿಎಂ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆ ಪ್ರಸ್ತಾಪ

ಬೆಂಗಳೂರು: ಎರಡನೇ ಬಾರಿ ಕೋವಿಡ್ ಸೊಂಕಿಗೆ ತುತ್ತಾಗಿ ಬಿಡದಿಯ ತೋಟದಲ್ಲಿ ಹೋಮ್ ಐಸೋಲೇಷನ್ ಆಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರ ಸಮಯ ಕಳೆದದ್ದು ಹೇಗೆ? ಅವರೇ ಹೇಳಿದ್ದಾರೆ ಓದಿ..

ಕೋವಿಡ್ ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದ ನಾನು, ಓದು & ಸಿನಿಮಾ ವೀಕ್ಷಣೆಯಲ್ಲಿಯೇ ಸಮಯ ಕಳೆದೆ. ಈ ಬಿಡುವಿನಲ್ಲಿ ಎರಡು ಸಿನಿಮಾಗಳನ್ನು ವೀಕ್ಷಿಸಿದೆ. 1.ʼಜೈ ಭೀಮ್ʼ. 2.ಜನ ಗಣ ಮನ. ಸೂಕ್ಷ್ಮ ಕಥಾಹಂದರದ ಈ ಸಿನಿಮಾಗಳೆರಡೂ ನನ್ನ ಮನ ಕಲಕಿವೆ, ಮತ್ತೂ ತೀವ್ರ ತಳಮಳಕ್ಕೆ ಕಾರಣವೂ ಆಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸುಪ್ರೀಂ ಕೋರ್ಟ್’ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು; ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ & ʼಜೈ ಭೀಮ್ʼ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದಿದ್ದಾರೆ.

ಕೋವಿಡ್ ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದ ನಾನು, ಓದು & ಸಿನಿಮಾ ವೀಕ್ಷಣೆಯಲ್ಲಿಯೇ ಸಮಯ ಕಳೆದೆ. ಈ ಬಿಡುವಿನಲ್ಲಿ ಎರಡು ಸಿನಿಮಾಗಳನ್ನು ವೀಕ್ಷಿಸಿದೆ. 1.ʼಜೈ ಭೀಮ್ʼ. 2.ಜನ ಗಣ ಮನ.
ಸೂಕ್ಷ್ಮ ಕಥಾಹಂದರದ ಈ ಸಿನಿಮಾಗಳೆರಡೂ ನನ್ನ ಮನ ಕಲಕಿವೆ, ಮತ್ತೂ ತೀವ್ರ ತಳಮಳಕ್ಕೆ ಕಾರಣವೂ ಆಗಿವೆ.1/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 18, 2022

ಭಾರತೀಯ ನ್ಯಾಯ ವ್ಯವಸ್ಥೆ ಬಡವರು ದಲಿತರು, ಅಶಕ್ತರಿಗೆ ಗಗನ ಕುಸುಮವಾ? ಓರ್ವ ಸಿರಿವಂತ ಅಪರಾಧಿಗೆ ಕೆಲ ಗಂಟೆಗಳಲ್ಲೇ ಜಾಮೀನು ಸಿಕ್ಕಿದರೆ, ಅದೇ ಬಡ ಅಪರಾಧಿಗಳ (ಅನೇಕ ಪ್ರಕರಣಗಳಲ್ಲಿ ಮುಗ್ಧರು) ಅರ್ಜಿಗಳಿಗೆ ಮೋಕ್ಷವೇ ಕಾಣುವುದಿಲ್ಲ. ಸರಳುಗಳ ಹಿಂದಿನ ನರಕವನ್ನು ʼಜೈ ಭೀಮ್ʼ ನೈಜವಾಗಿ ತೋರಿಸಿದೆ. ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದು ಇದನ್ನೇ. ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಸೆರೆ ಪ್ರಶ್ನಾರ್ಹ.ನಮ್ಮ ದೇಶದಲ್ಲಿ ಸೆರೆವಾಸದಲ್ಲಿರುವ 6.10 ಲಕ್ಷ ಕೈದಿಗಳಲ್ಲಿ ಶೇ.80ರಷ್ಟು ಜನ ವಿಚಾರಣಾಧೀನ ಕೈದಿಗಳೇ!! ಇವರೆಲ್ಲರೂ ವಿಚಾರಣೆ ಪೂರ್ಣಗೊಳ್ಳದೇ ಕಂಬಿಗಳ ಹಿಂದೆ ಜೀವಶ್ಚವಗಳಂತೆ ಬದುಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

2017ರಲ್ಲಿ ಛತ್ತೀಸಗಢದಲ್ಲಿ CRPF ಜವಾನರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ 121 ಬುಡಕಟ್ಟು ಜನರನ್ನು ಬಂಧಿಸಲಾಗಿತ್ತು. 5 ವರ್ಷ ಅವರು ಜೈಲುಗಳಲ್ಲಿ ನರಕ ಅನುಭವಿಸಿದ ರು. ಕೊನೆಗೆ ಅವರ ಪಾತ್ರದ ಬಗ್ಗೆ ಸಾಕ್ಷ್ಯ ಇಲ್ಲ ಎಂದು ಎನ್ಐಎ ಕೋರ್ಟ್ ತೀರ್ಪು ನೀಡಿ, ಆ ಮುಗ್ಧರನ್ನು ಖುಲಾಸೆಗೊಳಿಸಿದೆ. ಇದು ಸಮಾಧಾನದ ಸಂಗತಿ. ಹಾಗಾದರೆ, 5 ವರ್ಷಗಳ ಅವರ ಸೆರೆವಾಸಕ್ಕೆ ಉತ್ತರದಾಯಿಗಳು ಯಾರು? ಅವರ ಕುಟುಂಬ ಸದಸ್ಯರು ಅನುಭವಿಸಿದ ಕಷ್ಟಕ್ಕೆ ಪರಿಹಾರವೇನು?. ಆತುರಗೆಟ್ಟ ಆರೋಪ ಪಟ್ಟಿ, ವಿವೇಚನೆ ಇಲ್ಲದ ಬಂಧನ, ಜಾಮೀನು ಪಡೆಯಲು ಹೆಣಗಾಟದ ಕರಾಳತೆಯ ಮೇಲೆ ʼಜೈ ಭೀಮ್ʼ ಬೆಳಕು ಚೆಲ್ಲಿದೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಇದನ್ನೇ ಹೇಳಿ ಕಳವಳ ವ್ಯಕ್ತಪಡಪಡಿಸಿದ್ದಾರೆ. ಅವರ ದನಿ ದೇಶಕ್ಕೇ ಕೇಳಿಸಿದೆ. ಹಾಗಾದರೆ, ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ʼನಿಂದ ಕಟ್ಟಕಡೆಯ ಬಡಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ತಮಿಳುನಾಡಿನ ಕಡಲೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ‘ಜೈ ಭೀಮ್’ ಚಿತ್ರ ಮನುಷ್ಯತ್ವಕ್ಕೇ ಸವಾಲೆಸೆಯುವ ಅನೇಕ ಪ್ರಶ್ನೆಗಳನ್ನು ಎತ್ತಿದೆ ಎಂದು ಹೇಳಿದ್ದಾರೆ.

ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ. ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು ಎಂದು ಹೆಚ್ ಡಿಕೆ ಶ್ಲಾಘಿಸಿದ್ದಾರೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ CEO ಕಾರ್ ಡ್ರೈವರ್ ಹೆಸರಿನಲ್ಲಿ ಹಣ ವಸೂಲಿ

ಅಚ್ಚರಿ!! 8 ದಿನದ ನಂತರ ಚಿಕ್ಕಬಳ್ಳಾಪುರಕ್ಕೆ ಹೊಸ ಜಿಲ್ಲಾಧಿಕಾರಿ!!!

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ