• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೊಲೆಯಾದ ಕೂಡಲೇ ಕಾಲ್ಕಿತ್ತ ಸಿಎಂ!!

P K Channakrishna by P K Channakrishna
July 29, 2022
in STATE
Reading Time: 1 min read
0
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ
916
VIEWS
FacebookTwitterWhatsuplinkedinEmail

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲಕಚ್ಚಿದೆ ಎನ್ನುವುದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು; ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಸರಣಿ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ @BSBommai ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? 2/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 29, 2022

ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು. 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 29, 2022

ಮಸೂದ್, ಪ್ರವೀಣ್ ನೆಟ್ಟಾರು; ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, @BJP4Karnataka ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ. 5/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 29, 2022

ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೊಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ ಎಂದಿರುವ ಅವರು; ಮಸೂದ್, ಪ್ರವೀಣ್ ನೆಟ್ಟಾರು, ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, ಬಿಜೆಪಿ ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ರಾಜ್ಯ ಬಿಜೆಪಿ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ. ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್ ವ್ಯವಸ್ಥೆಗೆ ಶಕ್ತಿ ತುಂಬಬೇಕು. ಕಾಣದ ಕೈಗಳ ಸಂಕೋಲೆಯಿಂದ ಇಲಾಖೆಯನ್ನು ಮುಕ್ತಗೊಳಿಸಿ ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು. ಇಲ್ಲವಾದರೆ, ಡಬಲ್ ಎಂಜಿನ್ ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು ಎಂದು ಹೆಚ್ಡಿಕೆ ಎಚ್ಚರಿಕೆ ನೀಡಿದ್ದಾರೆ.

Tags: bjpcknewsnowcrimehd kumaraswamyjdskarnatakaMangaloreMangalore murders
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

Leave a Reply Cancel reply

Your email address will not be published. Required fields are marked *

Recommended

ನಾಯಿ ಬೊಗಳಿದರೆ ಆನೆ ತಲೆ ಕೆಡಿಸಿಕೊಳ್ಳಲ್ಲ; ಸಿದ್ದರಾಮಯ್ಯ ಅವರದ್ದು ಯಾವ ಪಕ್ಷ? ʼಎಸ್ಎಫ್ʼ ಪಕ್ಷವೇ?

“ಕಲ್ಲು ಬಂಡೆಗಳನ್ನೇ ನುಂಗಿ ಜೀರ್ಣ ಮಾಡಿಕೊಂಡವರಿಗೆ ನನ್ನ ಟೀಕೆಗಳನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟವೇ?”

4 years ago
ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ

ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ