• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜಾಹೀರಾತಿನಲ್ಲಿ ನೆಹರು ಚಿತ್ರಕ್ಕೆ ಕೊಕ್; ಸಣ್ಣತನದ ಪರಮಾವಧಿ

cknewsnow desk by cknewsnow desk
August 14, 2022
in STATE
Reading Time: 1 min read
0
ಜಾಹೀರಾತಿನಲ್ಲಿ ನೆಹರು ಚಿತ್ರಕ್ಕೆ ಕೊಕ್; ಸಣ್ಣತನದ ಪರಮಾವಧಿ
966
VIEWS
FacebookTwitterWhatsuplinkedinEmail

ಬಿಜೆಪಿ, ಕಾಂಗ್ರೆಸ್ ಪಕ್ಷಗಳು ರಾಷ್ಟ್ರಧ್ವಜದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ ಪಕ್ಷಕ್ಕೇ ಸೇರಿರಲಿ, ಆದರೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದಿದೆ. ಅಂತವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಕ್ಲಿಷ್ಟಕರ ಪರಿಸ್ಥಿತಿ ಇತ್ತು. ಆದರೂ ದೇಶ ಮುಂದಕ್ಕೆ ತೆಗೆದುಕೊಂಡು ಹೋದರು ನೆಹರು ಅವರು. ಅವರ ಚಿತ್ರಕ್ಕೆ ಕೊಕ್ಕೆ ಹಾಕಿದ ಇವರು ದೇಶಪ್ರೇಮಿಗಳಲ್ಲ. ದೇಶಪ್ರೇಮದ ಹೆಸರಿನಲ್ಲಿ ದೇಶವನ್ನು ಛಿದ್ರ ಛಿದ್ರ ಮಾಡುತ್ತಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟ ಈ ದೇಶ. ಎಲ್ಲಾ ಕುಟುಂಬಗಳು ಹೀಗೆ ಬದುಕಬೇಕಿದೆ. ಆದರೆ ಈಗ ಏನಾಗಿದೆ ಎಂದು ಅವರು ಪ್ರಶ್ನಿಸಿದರು.

ನೆಹರು ಅವರಿಂದ ದೇಶ ವಿಭಜನೆ ಆಯಿತು, ಹಾಗಾಗಿ ಬಿಜೆಪಿ ಇಂದು ಕರಾಳ ದಿನ ಆಚರಣೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ,
ನೆಹರು ತಪ್ಪು ಮಾಡಿದ್ದರೆ ಆಗ ವೀರ ಸಾವರ್ಕರ್ ಟೀಂ ಇತ್ತಲ್ಲಾ, ಅವರ ವಿರುದ್ಧ ಆಂದೋಲನ ಮಾಡಬೇಕಿತ್ತು. ಏನು ಮಾಡುತ್ತಿದ್ದರು ಅವರು? ವಿಭಜನೆ ಆದಾಗ ಲಕ್ಷಾಂತರ ಕುಟುಂಬಗಳು ಅಂದು ಸಾವು ನೋವು ಕಂಡಿವೆ. ಅನೇಕ ಕುಟುಂಬದ ಹೆಣ್ಣು ಮಕ್ಕಳು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಮತ್ತೊಮ್ಮೆ ಇಂಥ ಕೃತ್ಯಗಳಿಗೆ ಅವಕಾಶ ಕೊಡಬೇಕು ಅನ್ನೋದು ಇವರ ಉದ್ದೇಶವೇ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಬಿಜೆಪಿಯವರನ್ನು ಪ್ರಶ್ನಿಸಿದರು.

ಸಾವರ್ಕರ್ ಮತ್ತು ಟಿಪ್ಪು ಫ್ಲೆಕ್ಸ್ ಹರಿದ ತಕ್ಷಣ ದೇಶದ ಸಮಸ್ಯೆಗಳು ಬಗೆಹರಿಯಲ್ಲ. ಇರುವ ಸಮಸ್ಯೆಗಳು ಇನ್ನೂ ಹೆಚ್ಚಾಗುತ್ತವೆ. ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯವನ್ನು ಹಾಳು ಮಾಡುವ ದುರುದ್ದೇಶ ಅಷ್ಟೇ ಇದರ ಹಿಂದೆ ಅಡಗಿದೆ ಎಂದು ಅವರು ಹೇಳಿದರು.

ರಾಷ್ಟ್ರ ಧ್ವಜದ ಹೆಸರಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ರಾಜಕೀಯ ಮಾಡುತ್ತಿವೆ

ರಾಷ್ಟ್ರಧ್ವಜದ ಹೆಸರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿಗಳು, ಕಳೆದ ಎಂಟತ್ತು ದಿನಗಳಿಂದ ಎರಡು ರಾಷ್ಟ್ರೀಯ ಪಕ್ಷದಲ್ಲಿ ಅಮೃತ ಮಹೋತ್ಸವದ ಹಬ್ಬದ ಆಚರಣೆ ಆಗುತ್ತಿದೆ. ಧ್ವಜ ಇಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿವೆ ಎಂದು ಅವರು ಟೀಕಿಸಿದರು.

ಬಿಜೆಪಿ ಮನೆಗಳ ಮೇಲೆ ಧ್ವಜ ಹಾರಿಸಿ ಎನ್ನುತ್ತಿದ್ದರೆ, ಕಾಂಗ್ರೆಸ್ ಪಕ್ಷ ತಿರಂಗ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಪೈಪೋಟಿಯಲ್ಲಿ ತಿರಂಗ ಯಾತ್ರೆ ಮಾಡುತ್ತಿದ್ದಾರೆ. ಈ ರೀತಿಯ ಪೈಪೋಟಿ ಏನಿದೆ ಎಂದು ಅವರು ಕುಟುಕಿದರು.

ರಾಷ್ಟ್ರಧ್ವಜವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಜನರ ಮುಂದೆ ಇಡುವ ಅಹವಾಲು ಏನಿದೆ? ಅಗ್ಗದ ಪ್ರಚಾರಕ್ಕಾಗಿ ಹೀಗೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಲ್ಲಿ ಸಿದ್ದರಾಮೋತ್ಸವಕ್ಕೆ ಟಕ್ಕರ್ ಕೊಡಲು ಪಾದಯಾತ್ರೆ ಅಂತ ಅವರೇ ಹೇಳಿಕೊಂಡಿದ್ದಾರೆ. ರಾಷ್ಟ್ರಧ್ವಜದ ಗೌರವ ಹೆಚ್ಚಿಸಲು ಅಲ್ಲ. ನಾಳೆ ಮತ್ತೊಂದು ಟೀಂ ಪಾದಯಾತ್ರೆ ಮಾಡ್ತಾ ಇದೆ ಎಂದು ಅವರು ಟೀಕಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳಿಗೆ ಅವರ ಹೃದಯದಲ್ಲಿ ಧ್ವಜದ ಬಗ್ಗೆ ಕಿಂಚಿತ್ತಾದರೂ ಗೌರವಭಾವನೆ ಇದ್ದರೆ ದೇಶದಲ್ಲಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಒಂದು ಕಡೆ ಇವರು ಧ್ವಜದ ಬಗ್ಗೆ ಪೈಪೋಟಿ ಮಾಡ್ತಾ ಇದ್ದಾರೆ. ಇನ್ನೊಂದೆಡೆ ಸಂವಿಧಾನವನ್ನೇ ಬುಡಮೇಲು ಮಾಡುವ ಕೆಲಸ ಆಗುತ್ತಿದೆ. ಸಾಂವಿಧಾನಿಕ ಸಂಸ್ಥೆಗಳು ನಿರ್ಭಿತಿಯಿಂದ ಕೆಲಸ ಮಾಡಲು ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಡತನ ಎಷ್ಟಿದೆ ದೇಶದಲ್ಲಿ, ಎರಡು ತುತ್ತಿನ ಅನ್ನಕ್ಕೂ ಪರಿತಪಿಸುತ್ತಿದ್ದಾರೆ. ಒಂದೊಂದು ಯೋಜನೆಯಲ್ಲೂ ದೇಶದ ಹಣ ಲೂಟಿ ಎಷ್ಟಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇನೆ.
ಭ್ರಷ್ಟ ವ್ಯವಸ್ಥೆ ಬಗ್ಗೆ ನಿತ್ಯ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ.
ಸ್ವಾತಂತ್ರ ಹಬ್ಬದ ಆಚರಣೆ ಇದ್ದರೆ ವರ್ಷಕ್ಕೆ 17 ಲಕ್ಷ ಕುಟುಂಬಗಳಲ್ಲಿ ಜನಿಸಿದ ಮಕ್ಕಳು ಅಪೌಷಿಕತೆಯಿಂದ ಸಾಯುತ್ತಿವೆ. ರಾಜ್ಯದಲ್ಲಿ ನೋಡಿದರೆ ಮಕ್ಕಳ ಪೌಷ್ಟಿಕ ಆಹಾರದಲ್ಲೂ ಲೂಟಿ ಆಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಆರೋಗ್ಯ ಶಿಕ್ಷಣ, ರೈತರ ಬದುಕಿಗೆ ಏನು ಮಹತ್ವ ಕೊಡಬೇಕೋ ಅದು ಆಗುತ್ತಿಲ್ಲ. ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ಎರಡು ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ಅವರಲ್ಲಿ ಸರುಕು ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಂದೆ ಏನು ಯೋಜನೆ ಅಂತ ಮುಂದಾಲೋಚನೆ ಇಲ್ಲ.‌ಜನರಿಗೆ ವಂಚನೆಯ ಕೆಲಸ ಮಾಡ್ತಾ ಇದ್ದಾರೆ. ಇದನ್ನು ಮೊದಲು ನಿಲ್ಲಿಸಬೇಕು. ಜನರ ಅಭಿವೃದ್ಧಿ ಗೆ ಪೈಪೋಟಿ ಮಾಡಬೇಕು. ಎಷ್ಟೋ ಜನರಿಗೆ ಮನೆ ಇಲ್ಲ. ಅನೇಕರು ಫ್ಲೈ ಓವರ್ ಕೆಳಗೆ ಮಲಗುತ್ತಿದ್ದಾರೆ. ಅವರಿಗೆ ಮನೆ ಇಲ್ಲ. ಇನ್ನೆಲ್ಲಿ ಅವರು ರಾಷ್ಟ್ರಧ್ವಜ ಹಾರಿಸ್ತಾರೆ. ಮೊದಲು ಅವರಿಗೆ ಬದುಕು ಕೊಡಿ ಎಂದರು ಮಾಜಿ ಮುಖ್ಯಮಂತ್ರಿಗಳು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಜುನಾಥ್ ಅವರು ಹಾಜರಿದ್ದರು.

Tags: agust 15azadi ka amrit mahotsavcknewsnowhd kumaraswamyindependence dayjawaharlal nehrukarnataka government
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ

ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ

Leave a Reply Cancel reply

Your email address will not be published. Required fields are marked *

Recommended

ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

5 years ago
ಸಚಿವ ಡಾ.ಕೆ.ಸುಧಾಕರ್‌ ಅವರ ಪ್ರೈವೇಟ್‌ ಟ್ರಸ್ಟ್‌ ಏಜೆಂಟರಾದರಾ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ &  ಪೊಲೀಸ್‌ ವರಿಷ್ಠಾಧಿಕಾರಿ!!??

ಸಚಿವ ಡಾ.ಕೆ.ಸುಧಾಕರ್‌ ಅವರ ಪ್ರೈವೇಟ್‌ ಟ್ರಸ್ಟ್‌ ಏಜೆಂಟರಾದರಾ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ & ಪೊಲೀಸ್‌ ವರಿಷ್ಠಾಧಿಕಾರಿ!!??

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ