• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ 40% ಕಮೀಷನ್‌ ಕಲೆಕ್ಷನ್‌ ಆರೋಪ

cknewsnow desk by cknewsnow desk
August 24, 2022
in NATION, STATE
Reading Time: 1 min read
0
ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಮುನಿರತ್ನ

976
VIEWS
FacebookTwitterWhatsuplinkedinEmail

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇರ ಆರೋಪ

ಬೆಂಗಳೂರು: ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರು ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಲಂಚದ ಹಣ ಡಿಮಾಂಡ್‌ ಮಾಡುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇರವಾಗಿ ಆರೋಪ ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಪ್ರತಿಪಕ್ಷಗಳ ಕಡೆಯಿಂದ 40% ಕಮಿಷನ್ ಆರೋಪ ಪದೇಪದೆ ಕೇಳಿಬರುತ್ತಿರುವ ಬೆನ್ನಲ್ಲೇ ಈಗ ಕ್ಯಾಬಿನೆಟ್ ಸಚಿವರೊಬ್ಬರ ಮೇಲೆಯೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಗಣಬೀರವಾದ ಕಮಿಷನ್ ಕಲೆಕ್ಷನ್ ಆರೋಪ ಮಾಡಿದ್ದಾರೆ.

ಅಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆ ಮೇಲೆ ನಿಂತು ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಭಾಷಣ ಮಾಡುವ ವೇಳೆ; ದೇಶದಿಂದ ಲಂಚಾವತಾರವನ್ನು ನಿರ್ಮೂಲನೆ ಮಾಡುವುದಾಗಿ ಭಾಷಣ ಮಾಡಿದ್ದರು. ಆದರೆ, ಇದಕ್ಕೆ ವಿರೋಧಾಭಾಸ ಎನ್ನುವಂತೆ ಅವರದ್ದೇ ಪಕ್ಷ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅವರು ದೂರಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಕೋಲಾರ ಉಸ್ತುವಾರಿ ಸಚಿವ ಮುನಿರತ್ನ ಅವರೇ ಕಮಿಷನ್ ಹಣ ಕೇಳುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಸಂಗ್ರಹ ಮಾಡಿಕೊಂಡು ಬನ್ನಿ ಎಂದು ಹೇಳುತ್ತಿದ್ದಾರೆ ಎಂದು ಕೆಂಪಣ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದೇ ವೇಳೆ ಸಚಿವರು, ಶಾಸಕರು ಗುತ್ತಿಗೆದಾರರನ್ನು ಹಣಕ್ಕಾಗಿ ಹಿಂಡಿಹಿಪ್ಪೆ ಮಾಡುತ್ತಿರುವ ಬಗ್ಗೆ ಕೆಂಪಣ್ಣ ಅವರು ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಆ ಭೇಟಿ ನಂತರ ಕೆಂಪಣ್ಣ ಅವರು ಮುನಿರತ್ನ ಅವರ ಕಮಿಷನ್ ಪುರಾಣವನ್ನು ಮಾಧ್ಯಮಗಳ ಮುಂದೆ ಬಹಿರಂಗ ಮಾಡಿದ್ದಾರೆ.

ಕೆಂಪಣ್ಣ ಅವರ ಜತೆ ಗುತ್ತಿಗೆದಾರರ ಸಂಘದ ನಿಯೋಗದ 30ಕ್ಕೂ ಹೆಚ್ಚು ಸದಸ್ಯರು ಸಿದ್ದರಾಮಯ್ಯ ಅವರನ್ನೇ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, “ಸಚಿವ ಮುನಿರತ್ನ ಗುತ್ತಿಗೆದಾರರಿಂದ ಹಣ ಸಂಗ್ರಹ ಮಾಡಿಕೊಡಲು ಕಾರ್ಯನಿರ್ವಾಹಕ ಅಭಿಯಂತರರಿಗೆ ಹೇಳುತ್ತಾರೆ. ಪರ್ಸೆಂಟೇಜ್ ಕಲೆಕ್ಷನ್ ಮಾಡದಿದ್ದರೇ ಸಸ್ಪೆಂಡ್ ಮಾಡುವುದಾಗಿ ಹೆದರಿಸುತ್ತಾರೆ. ಜಿಲ್ಲಾ ಉಸ್ತುವಾರಿ‌ ಸಚಿವರೇ ಹಣ ಕಲೆಕ್ಟ್ ಮಾಡಿ ಅಂತಾರೆ. ಇದು ಅತ್ಯಂತ ಭ್ರಷ್ಟ ಸರಕಾರ ಎಂದು ಅವರು ಆರೋಪಿಸಿದರು.

ಮಾನ ಮರ್ಯಾದೆ ಇಲ್ಲದೇ ಕಮಿಷನ್ ಕೇಳುತ್ತಾರೆ. ಕೆಲ ಕಡೆ ಶೇ.100ರಷ್ಟ ಕಮಿಷನ್ ಇದೆ. ಎಲ್ಲಾ ಶಾಸಕರು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಹೀಗಾಗಿ  40 ಪರ್ಸೆಂಟ್ ಕಮಿಷನ್ ಕೇಸ್ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು.  15 ದಿನಗಳಲ್ಲಿ ಮತ್ತೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಕೆಂಪಣ್ಣ ಹೇಳಿದ್ದಾರೆ.

ಸಿದ‍್ಧರಾಮಯ್ಯ ಭೇಟಿ ವೇಳೆ ಯಾವುದೇ ದಾಖಲೆ ನೀಡಿಲ್ಲ. ಅವರು ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ಕೆಲವು ದಾಖಲೆ ನೀಡಿದ್ದರಿಂದ ಕೆಲ ಗುತ್ತಿಗೆದಾರರಿಗೆ ಗುತ್ತಿಗೆ ನೀಡಿದೇ ಸಮಸ್ಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಸ್ತುವಾರಿ ಸಚಿವರ ದಾಖಲೆ!!

ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ನೇರವಾಗಿ ಕಮೀಷನ್‌ ಸಂಗ್ರಹಕ್ಕೆ ಮುಂದಾಗಿರುವುದು ರಾಜ್ಯದ ಇತಿಹಾಸದಲ್ಲಿ ಅಪರೂಪದ ಘಟನೆ ಎಂದು ಹೆಸರೇಳಲಿಚ್ಛಿಸದ ಇನ್ನೊಬ್ಬರು ಗುತ್ತಿಗೆದಾರರು ತಿಳಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಇದೇ ಮುನಿರತ್ನ ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಶಾಸಕರಾಗಿದ್ದರು. ಆಗ ಮುನಿರತ್ನ ಅವರ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಕೆಲ ಆಯ್ದ ಶಾಸಕರ ಕ್ಷೇತ್ರಗಳಿಗೆ ಯಥೇಚ್ಛವಾಗಿ ಅನುದಾನ ಹರಿದುಹೋಯಿತು. ವಿಪರ್ಯಾಸ ಎಂದರೆ; ಹಾಗೆ ಅನುದಾನದ ಬಂಪರ್‌ ಹೊಡೆದ ಶಾಸಕರೆಲ್ಲ ಆಪರೇಷನ್‌ ಕಮಲಕ್ಕೆ ತುತ್ತಾಗಿ ಬಿಜೆಪಿಗೆ ಹೋಗಿ ಈಗ ಸಚಿವರಾಗಿದ್ದಾರೆ. ಅವರ ಭ್ರಷ್ಟಾಚಾರದ ವಿರುದ್ಧ ಹಿಂದೆ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರೇ ಹೋರಾಟ ನಡೆಸಿದ್ದರು! ಈಗ ಅವರೇ ಬಿಜೆಪಿಯಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸುತ್ತಾರೆ.

Tags: 40%40% bribe40% commissioncknewsnowkarnatakakempannakolarkolar IN charge miniterminister muniratnamuniratna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

ಕಮೀಷನ್‌ ಕಲೆಕ್ಷನ್:‌ ಮುನಿರತ್ನ ಪರ ಡಾ.ಕೆ.ಸುಧಾಕರ್‌ ಬ್ಯಾಟಿಂಗ್!!‌

Leave a Reply Cancel reply

Your email address will not be published. Required fields are marked *

Recommended

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

2 years ago
ಶಿಕ್ಷಣದಲ್ಲಿ ಮೂಲಭೂತ ಬದಲಾವಣೆ ಉದ್ದೇಶವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎಂದ ಪಿಎಂ

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೂ ಹೆಚ್ಚಾಗುತ್ತಿದೆ ಬೇಡಿಕೆ; 2ಎ ಪ್ರವರ್ಗಕ್ಕೂ ಸೇರಿಸಿಕೊಳ್ಳಲು ಆಗ್ರಹ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ