• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಮೀಷನ್‌ ಕಲೆಕ್ಷನ್:‌ ಮುನಿರತ್ನ ಪರ ಡಾ.ಕೆ.ಸುಧಾಕರ್‌ ಬ್ಯಾಟಿಂಗ್!!‌

P K Channakrishna by P K Channakrishna
August 24, 2022
in STATE
Reading Time: 1 min read
0
REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!
1.2k
VIEWS
FacebookTwitterWhatsuplinkedinEmail

ಗುತ್ತಿಗೆದಾರರ ಹಿಂದೆ ಕಾಂಗ್ರೆಸ್‌ ಇದೆ ಎಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಂತ್ರಿ!!!

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕ್ಷಣದಿಂದ ಏನೇನೋ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಭ್ರಷ್ಟಾಚಾರ ನಡೆಸಿ ಜನರಿಂದ ಕಿತ್ತೊಗೆಯಲ್ಪಟ್ಟ ಕಾಂಗ್ರೆಸ್‌, ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣನವರು ವಯಸ್ಸಲ್ಲಿ ಹಾಗೂ ಅನುಭವದಲ್ಲಿ ಹಿರಿಯರು. ಅವರು ಬಯಸಿದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿ ಅವರ ಸಲಹೆ, ದೂರು, ಅಹವಾಲುಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರು ಕೊಟ್ಟ ಸಲಹೆಗಳನ್ನೂ ಜಾರಿ ಮಾಡಿದ್ದಾರೆ. ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವ ಸರ್ಕಾರವೂ ಇಂತಹ ಉತ್ತಮ ಕ್ರಮವನ್ನು ಜಾರಿ ಮಾಡಿಲ್ಲ. ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್‌ಗಳನ್ನು ವಿಲೇವಾರಿ ಮಾಡಲಾಗಿದೆ. ಇದುವರೆಗೆ ಕೆಂಪಣ್ಣ ದೇವರಂತೆ ಇದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಏನಾಯ್ತು ಎಂದು ಗೊತ್ತಿಲ್ಲ. ಅವರಿಬ್ಬರ ನಡುವೆ ಏನು ಚರ್ಚೆಯಾಗಿದೆ ಹಾಗೂ ಚರ್ಚೆ ಬಳಿಕ ಏಕೆ ಹೇಳಿಕೆ ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

ಕೆಂಪಣ್ಣ ಅವರಿಗೆ ಇನ್ನೂ ಏನಾದರೂ ಸಹಾಯ ಮಾಡಬೇಕೆಂದರೆ ಸರ್ಕಾರ ಆ ಕೆಲಸ ಮಾಡಲು ಸಿದ್ಧವಿದೆ. ಅವರಿಗೆ ಸಾಮಾಜಿಕ ಕಳಕಳಿ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಿತ್ತು. ಆದರೆ ಇವೆಲ್ಲ ಕಾಂಗ್ರೆಸ್‌ ಸ್ಪಾನ್ಸರ್‌ ಆಗಿದ್ದು, ಇದನ್ನೇ ಚುನಾವಣೆಯ ಅಜೆಂಡಾ ಮಾಡಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ ಭ್ರಷ್ಟಾಚಾರ ಮಾಡಿದ್ದಕ್ಕೆ ಜನರು ಅವರನ್ನು ಇಡೀ ದೇಶದಿಂದ ಕಿತ್ತೊಗೆದಿದ್ದಾರೆ. ಈಗ ಬಿಜೆಪಿಯ ಪ್ರಾಮಾಣಿಕತೆಗೆ ತಿರುಮಂತ್ರ ಹಾಕಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‌ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟುಮಾಡಿ ಮತ ಕೇಳಲಾಗುತ್ತದೆ ಎಂದರು.

ಕೆಂಪಣ್ಣ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಬಗ್ಗೆ ಹೇಳಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡುವುದಾದರೆ, ಭ್ರಷ್ಟಾಚಾರಿಗಳಿಗೆ ಶಿಕ್ಷೆಯಾಗಬೇಕೆಂದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು. ಆದರೆ ಮಾಧ್ಯಮದ ಮುಂದೆ ಬಂದು ಹೇಳಿಕೆ ನೀಡುವುದನ್ನು ನೋಡಿದರೆ ಅವರ ಉದ್ದೇಶ ಏನೆಂಬುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‌ ಪಕ್ಷ ಕೆಂಪಣ್ಣನವರನ್ನು ಬಲಿಪಶು ಮಾಡುವ ಪ್ರಯತ್ನ ಮಾಡುತ್ತಿದೆ. ಅವರ ಹಿರಿತನ, ಅನುಭವವನ್ನು ಕಾಂಗ್ರೆಸ್‌ ಬಳಸಿಕೊಳ್ಳುತ್ತಿದೆ. ಕೆಂಪಣ್ಣನವರು ಇದಕ್ಕೆ ಬಲಿಯಾಗುವುದು ಬೇಡ ಎಂದು ಸಲಹೆ ನೀಡಿದರು.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ 40% ಕಮೀಷನ್‌ ಕಲೆಕ್ಷನ್‌ ಆರೋಪ

ಡಾ.ಸುಧಾಕರ್‌ ವಿರುದ್ಧವೂ ದೂರಿದ್ದರು ಕೆಂಪಣ್ಣ

ಈಗ ಕೆಂಪಣ್ಣ ಅವರ ಆರೋಪದ ಬಗ್ಗೆ ಟೀಕಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ವಿರುದ್ಧವೂ ಹಿಂದೆ ಇದೇ ಕೆಂಪಣ್ಣ ಅವರು ಕಮೀಷನ್‌ ಕಲೆಕ್ಷನ್‌ ಆರೋಪ ಮಾಡಿದ್ದರು. ಸಚಿವರು ತಮ್ಮ ಸಂಬಂಧಿಕರು, ಆಪ್ತರ ಮೂಲಕ ಗುತ್ತಿಗೆದಾರರಿಂದ ಹಣ ಕೀಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ಬಿಜೆಪಿ ಸರಕಾರದಲ್ಲಿ ಡಾ.ಸುಧಾಕರ್‌ ಹೊಂದಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳಲ್ಲಿ ಅತಿಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಂಪಣ್ಣ ಅವರು ಆರೋಪ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಸಚಿವರು ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು.

Tags: 40% commissionbribecknewsnowdr k sudhakarkempanna
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಹೆಚ್.ಡಿ.ಕುಮಾರಸ್ವಾಮಿ ಕಿವಿಮಾತು

ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಹೆಚ್.ಡಿ.ಕುಮಾರಸ್ವಾಮಿ ಕಿವಿಮಾತು

Leave a Reply Cancel reply

Your email address will not be published. Required fields are marked *

Recommended

ಹಣ ವಸೂಲಿ: ಸಚಿವ ಚೆಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಕೃಷಿ ಅಧಿಕಾರಿಗಳು

ಚಲುವರಾಯಸ್ವಾಮಿ ಜನ್ಮ ಜಾಲಾಡಿದ ಸುರೇಶ್‌ ಗೌಡ

3 years ago
ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

ಸರ್ವಾಧಿಕಾರಿಗಳಿಗೇ ಚರಮಗೀತೆ ಹಾಡಿದ ಸೋಶಿಯಲ್ ಮೀಡಿಯಾ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ