• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹಿಂದಿ ದಿವಸ: ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ಜೆಡಿಎಸ್‌ ಶಾಸಕರು

cknewsnow desk by cknewsnow desk
September 14, 2022
in STATE
Reading Time: 1 min read
0
ಹಿಂದಿ ದಿವಸ: ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ಜೆಡಿಎಸ್‌ ಶಾಸಕರು
913
VIEWS
FacebookTwitterWhatsuplinkedinEmail

ಕಲಾಪದಲ್ಲೂ ಹಿಂದಿ ದಿವಸ ವಿರುದ್ಧ ದನಿ ಎತ್ತಿದ ಜನತಾದಳ

ಬೆಂಗಳೂರು: ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಕೇಂದ್ರ ಸರಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು ಮಾಜಿ ಮುಖ್ಯಮಂತ್ರಿಗಳು.

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಕಿಡಿ ಕಾರಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಸದನದಲ್ಲೂ ಹಿಂದಿ ದಿವಸದ ವಿರುದ್ಧ ಪ್ರತಿಭಟನೆ

ಕೇಂದ್ರ ಸರಕಾರದ ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಆಕ್ರೋಶಕ್ಕೆ ಕಾರಣವಾಯಿತು. ಅಲ್ಲದೆ, ತಮ್ಮ ಪಕ್ಷದ ಶಾಸಕರ ಒತ್ತಾಯದ ಬಗ್ಗೆ ಮಾತನಾಡಿದ ಪಕ್ಷದ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು, ಹಿಂದಿ ಹೆಸರಿನಲ್ಲಿ ಕನ್ನಡ ಭಾಷೆಯ ಮೇಲೆ ಆಗುತ್ತಿರುವ ದಬ್ಬಾಳಿಕೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದ್ದನ್ನು ಸಮರ್ಥನೆ ಮಾಡಿಕೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ನಮ್ಮ ಸದಸ್ಯರು ಇಂದು ಹಿಂದಿ ದಿವಸ್ ಆಚರಣೆ ವಿರುದ್ಧ ಸದನದ ಹೊರಗೆ ಧರಣಿ ನಡೆಸಿದರು. ನಮ್ಮ‌ ಕನ್ನಡ ಭಾಷೆಗೆ ಧಕ್ಕೆ ಬರಬಾರದು ಎಂದು ಸದನದಲ್ಲಿ ಗಮನ ಸೆಳೆಯಲು ಈ ವಿಷಯ ಪ್ರಸ್ತಾಪ ಮಾಡಿದ್ದಾರೆ. ಅದನ್ನು ಹೊರತುಪಡಿಸಿ ಸದನದ ಸಮಯ ಹಾಳು ಮಾಡುವ ಉದ್ದೇಶ ನಮ್ಮ ಶಾಸಕರಿಗಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನಮ್ಮ ಪಕ್ಷದ ನಿಲುವು ಇಷ್ಟೇ. ನಮ್ಮ ದೇಶದಲ್ಲಿ ಹಲವಾರು ಭಾಷೆಗಳಿವೆ. 56ಕ್ಕೂ ಹೆಚ್ಚು ಭಾಷೆಗಳಿರುವ ಈ ರಾಷ್ಟ್ರದಲ್ಲಿ ಹಿಂದಿ ಕೂಡ ಒಂದು ಭಾಷೆ ಅಷ್ಟೇ. ಆದರೆ ಒಂದು ಭಾಷೆ, ಒಂದು ರಾಷ್ಟ್ರ ಎಂದು ಮಾಡಲು ಹೊರಟಿದ್ದಾರೆ. ಎಲ್ಲ ಭಾಷೆಗಳಿಗೆ ಅವುಗಳದ್ದೇ ಆದ ಇತಿಹಾಸ ಇದೆ‌. ಆ ದೃಷ್ಟಿಯಿಂದ ಬಲವಂತದಿಂದ ಕತ್ತು ಹಿಸುಕುವ ಕೆಲಸ ಆಗಬಾರದು ಎಂಬುದು ನಮ್ಮ ಪಕ್ಷದ ಒತ್ತಾಯವಾಗಿದೆ ಎಂದು ಕುಮಾರಸ್ವಾಮಿ ಅವರು ನುಡಿದರು.

ಮುಖ್ಯಮಂತ್ರಿಗಳ ಉತ್ತರ

ಮಾಜಿ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿದ ವಿಷಯಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು; ಭಾರತ ವಿವಿಧ ಭಾಷೆ, ಸಂಸ್ಕೃತಿ ಹೊಂದಿರುವ ದೇಶ. ಆದರೆ ಯಾವುದೇ ಒಂದು ಭಾಷೆಯನ್ನು ಮಾತ್ರ ಹೇರಲು ಇಲ್ಲಿ ಅವಕಾಶ ಇಲ್ಲ. ನಮ್ಮ ಪ್ರಧಾನಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಎಲ್ಲಾ ಪ್ರಾದೇಶಿಕ ಭಾಷೆಗಳು ರಾಷ್ಟ್ರೀಯ ಭಾಷೆಗಳೇ ಅಂತ ಹೇಳಿದ್ದಾರೆ. ಕನ್ನಡ ರಕ್ಷಣೆ ಮಾತ್ರವಲ್ಲ, ಬೆಳೆಸಲು ನಮ್ಮ ಪಕ್ಷ ಬದ್ದವಾಗಿದೆ. ಅದರಲ್ಲಿ ಆತಂಕ ಪಡುವ, ರಾಜಿಯಾಗುವ ಪ್ರಶ್ನೆ ಇಲ್ಲ ಎಂದರು.

Tags: cknewsnowhd kumaraswamyHindi DiwasHindi Diwas 2020hindi impositionindiajds
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಕಲಾಪದ ಕಡೆ ತಲೆ ಹಾಕದ ಬಿಜೆಪಿ ಸಚಿವಾಕಾಂಕ್ಷಿಗಳು

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಶಾಲೆ ಅಡುಗೆ ಸಿಬ್ಬಂದಿಗೆ ಒಬ್ಬರಿಗೆ ಕೊರೋನಾ ಪಾಸಿಟಿವ್

ಗುಡಿಬಂಡೆಯಲ್ಲಿ ಶಾಲೆ ಅಡುಗೆ ಸಿಬ್ಬಂದಿಗೆ ಒಬ್ಬರಿಗೆ ಕೊರೋನಾ ಪಾಸಿಟಿವ್

4 years ago
ಸ್ಟಾಲಿನ್‌ಗೆ ಸಿಎಂ ಲೆಟರ್‌ ಬರೆದದ್ದು ತಪ್ಪೆಂದ ಸಿದ್ದು; ಮೇಕೆದಾಟು ಮಾಡಿಯೇ ತೀರುತ್ತೇವೆ ಎಂದ ಬೊಮ್ಮಾಯಿ

ಮೇಕೆದಾಟು ಯೋಜನೆಗೆ CWC ಒಪ್ಪಿಗೆ ಕೊಟ್ಟ ಕೂಡಲೇ ಕಾಮಗಾರಿ ಆರಂಭ: ಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ