• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕಲಾಪದ ಕಡೆ ತಲೆ ಹಾಕದ ಬಿಜೆಪಿ ಸಚಿವಾಕಾಂಕ್ಷಿಗಳು

P K Channakrishna by P K Channakrishna
September 14, 2022
in POLITICS, STATE
Reading Time: 1 min read
0
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!
916
VIEWS
FacebookTwitterWhatsuplinkedinEmail

ಹೈಕಮಾಂಡ್‌ ಮೇಲೆ ಮುನಿಸಿಕೊಂಡ ಬಿಜೆಪಿ ಶಾಸಕರು

ಬೆಂಗಳೂರು: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗದ ಕಾರಣ ಅನೇಕ ಆಕಾಂಕ್ಷಿಗಳು ಕಲಾಪದತ್ತ ಮುಖ ಮಾಡದೆ ಸದನದಿಂದ ದೂರ ಉಳಿದು ಅಸಮಾಧಾನ ‌ವ್ಯಕ್ತಪಡಿಸಿದ್ದಾರೆ. ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದರೂ ಆಡಳಿತಾರೂಢ ಬಿಜೆಪಿಯ ಅನೇಕ ಶಾಸಕರು ಕಲಾಪದತ್ತ ಮುಖ ಮಾಡದೆ ಮುನಿಸಿಕೊಂಡಿದ್ದಾರೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ , ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್ ಸೇರಿದಂತೆ ಅನೇಕರು ಸದನದ ಕಡೆ ತಲೆಯನ್ನೇ ಹಾಕಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಂಗಳವಾರ ಸದನಕ್ಕೆ ಬಂದು ಹಾಜರಾತಿಗೆ ಸಹಿ ಹಾಕಿ ಬಂದಷ್ಟೇ ವೇಗದಲ್ಲಿ ಕ್ಷೇತ್ರಕ್ಕೆ ಹಿಂತಿರುಗಿದ್ದಾರೆ.

ಗುತ್ತಿಗೆದಾರನಿಗೆ ಕಮೀಷನ್ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕಾಯಿತು. ಯಾವಾಗಲೂ ಸದನಕ್ಕೆ ಹಾಜರಾಗಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದ ಈಶ್ವರಪ್ಪ ಗೈರುಹಾಜರಿ ಸದನದಲ್ಲಿ ಎದ್ದು ಕಾಣುತ್ತಿದೆ. ಅತ್ಯಾಚಾರ ಸಿಡಿ ಪ್ರಕರಣದಲ್ಲಿ ಸಿಲುಕಿದ್ದ  ರಮೇಶ್ ಜಾರಕಿಹೊಳಿ  ಈಗಿನದೂ ಸೇರಿ ಹಲವು ಅಧಿವೇಶನಗಳಿಗೆ ಬಂದಿಲ್ಲ.

ಈ ತಿಂಗಳ ಪ್ರಾರಂಭದಲ್ಲಿ ಸಚವ ಸಂಪುಟ ವಿಸ್ತರಣೆ/ಪುನಾರಚನೆ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಚುನಾವಣಾ ವರ್ಷವಾಗಿರುವುದರಿಂದ ಕೆಲವು ಹಿರಿಯರನ್ನು ಕೈಬಿಟ್ಟು ಸಂಘಟನೆ ಹಿನ್ನಲೆಯಿಂದ ಬಂದವರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದೆಂಬ ನಿರೀಕ್ಷೆಯಿತ್ತು.

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಬಾರಿ ದೆಹಲಿಗೆ ಹೋದರೂ ವರಿಷ್ಠರು ಮಾತ್ರ ಹಸಿರುನಿಶಾನೆ ಕೊಟ್ಟಿಲ್ಲ. ಕಳೆದ ವಾರ ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅವರಿಂದ ತೆರವಾಗಿರುವ ಸ್ಥಾನ ಸೇರಿದಂತೆ ಸದ್ಯಕ್ಕೆ ಸಂಪುಟದಲ್ಲಿ 6 ಸ್ಥಾನ ಖಾಲಿ ಉಳಿದಿವೆ.

ಡಾ.ಕೆ.ಸುಧಾಕರ್, ಅಶ್ವಥ್‍ನಾರಾಯಣ ಸೇರಿದಂತೆ ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಿರುವುದು ಶಾಸಕರ ಕಣ್ಣು ಕೆಂಪಾಗುವಂತೆ ಮಾಡಿದೆ. ಜೊತೆಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ 8 ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರ ಮತ್ತು ಸಂಘಟನೆಗೆ ಅನುಕೂಲವಾಗುವಂತೆ ಸಂಪುಟ ಪುನಾರಚನೆ ಮಾಡಬೇಕೆಂಬುದು ಬಹುತೇಕರ ಆಗ್ರಹವಾಗಿದೆ. ಆದರೆ ಸಿಎಂ ಇದಕ್ಕೆ ಒಲವು ತೋರಿಸದಿರುವುದು ಸ್ವತಃ ಹೈಕಮಾಂಡ್ ಒಪ್ಪಿಗೆ ಕೊಡದಿರುವುದು ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟುಮಾಡಿದೆ. ಹೀಗಾಗಿಯೇ ಬಹುತೇಕ ಶಾಸಕರು ಸದನದ ಕಡೆ ಮುಖ ಮಾಡದೆ ಕ್ಷೇತ್ರದಲ್ಲಿ ಉಳಿದಿದ್ದಾರೆ.

Tags: bjpcknewsnowkarnatakamlanewsPoliticsruling party mla
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನೆರೆಗೆ ಕಾರಣ ಹೇಳಿದ ನ್ಯಾ.ಸಂತೋಷ್ ಹೆಗ್ಡೆ

ನೆರೆಗೆ ಕಾರಣ ಹೇಳಿದ ನ್ಯಾ.ಸಂತೋಷ್ ಹೆಗ್ಡೆ

Leave a Reply Cancel reply

Your email address will not be published. Required fields are marked *

Recommended

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

ಗುಡಿಬಂಡೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಚಿಂತಾಮಣಿಗೆ ವರ್ಗ

4 years ago
ಚಿಕ್ಕಬಳ್ಳಾಪುರ-ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು?

ಚಿಕ್ಕಬಳ್ಳಾಪುರ-ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸಲು ಇನ್ನೆಷ್ಟು ವರ್ಷ ಬೇಕು?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ