• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

P K Channakrishna by P K Channakrishna
October 6, 2022
in EDITORS'S PICKS, ELECTION2024, NATION, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
917
VIEWS
FacebookTwitterWhatsuplinkedinEmail

ತೆಲಂಗಾಣದ ಮಾದರಿಯಲ್ಲಿ ರೈತಬಂಧು, ಕೃಷಿಬಂಧು ಯಾಜನೆಗಳ ಜಾರಿ

ವಿಧಾನಸಭೆ ಚುನವಣೆಯಲ್ಲಿ ಬಿಎಸ್ಆರ್ ಪಕ್ಷದ ಅಭ್ಯರ್ಥಿಗಳು ಕಣ್ಣಕ್ಕಿಳಿಯಲ್ಲ; ನಮಗೆ ಬೆಂಬಲಿಸುತ್ತಾರೆ ಎಂದ ಮಾಜಿ ಸಿಎಂ

ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.

ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಸಕ್ತಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ಇಲ್ಲ.‌ ಆದರೆ, ಜೆಡಿಎಸ್‌‌ ಅಭ್ಯರ್ಥಿಗಳನ್ನೇ ಬೆಂಬಲಿಸುವ ನಿರ್ಧಾರಕ್ಕೆ ತೆಲಂಗಾಣ ಮುಖ್ಯಮಂತ್ರಿಗಳು ಬಂದಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

2024ರ ಲೋಕಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಸಿಆರ್ ಅವರು ಚಿಂತನೆ ನಡೆಸಿದ್ದಾರೆ. ಅದರಂತೆ ರಾಜ್ಯದ ಗಡಿ ಭಾಗದಲ್ಲಿ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಪಕ್ಷದ ಶಾಸಕರ ಜತೆ ಸೇರಿ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇನೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. 2006ರ 20 ತಿಂಗಳ ನಿಮ್ಮ ಆಡಳಿತ ನೋಡಿದ್ದೇನೆ. ಯಾವುದೇ ಕಪ್ಪುಚುಕ್ಕೆ ಇಲ್ಲದ ರೀತಿ ಆಡಳಿತ ನಡೆಸಿದ್ದೀರಿ. ಅದೇ ರೀತಿ ಮುಂದುವರೆಯಿರಿ ಎಂದು ಅವರು ನನಗೆ ಸಲಹೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ದಲಿತರ ಮೇಲಿನ ದೌರ್ಜನ್ಯ, ರೈತರ ನೆರವಿಗೆ ಧಾವಿಸುವ ಸಲುವಾಗಿ ನಾವು ಒಗ್ಗೂಡುತ್ತಿದ್ದೇವೆ. ಅದನ್ನೇ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮಾಡಿಕೊಂಡು ಮುಂದುವರಿಯುತ್ತಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗ ಟಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು ಕುಮಾರಸ್ವಾಮಿ.

ರಾಜ್ಯದಲ್ಲಿ ರೈತಬಂಧು ಯಾಜನೆ ಜಾರಿ

ತೆಲಂಗಾಣದಲ್ಲಿ ಜಾರಿ ಮಾಡಲಾಗಿರುವ ರೈತಬಂದು, ದಲಿತ ಬಂಧು ಯೋಜನೆಗಳನ್ನು ರಾಜ್ಯದಲ್ಲಿಯೂ ಜಾರಿಗೆ ತರಲಾಗುವುದು ಎಂದು ಹೇಳಿದ ಕುಮಾರಸ್ವಾಮಿ ಅವರು; ಅಲ್ಲಿ ರೈತಬಂಧು ಯೋಜನೆಯಡಿ 24 ಗಂಟೆ ಉಚಿತ ವಿದ್ಯುತ್, ಪ್ರತಿ ವರ್ಷ ಎಕರೆಗೆ ಹತ್ತು ಸಾವಿರ ಸಹಾಯ ಧನ ಕೊಡುತ್ತಿದ್ದಾರೆ. ರೈತ ಅಕಾಲಿಕ ಮರಣಕ್ಕೀಡಾದರೆ ತಕ್ಷಣ 5 ಲಕ್ಷ ರೂಪಾಯಿ ವಿಮಾ ಪರಿಹಾರ ತಲುಪಿಸುತ್ತಿದ್ದಾರೆ. ರೈತರಿಗೆ ವಿಮೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮೂಲಕ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ದಲಿತರಿಗೆ ಕುಟುಂಬದಲ್ಲಿಯೇ ಸ್ವ ಉದ್ಯೋಗ ಮಾಡಲು ಹತ್ತು ಲಕ್ಷ ರೂಪಾಯಿ ನೆರವನ್ನು ನೀಡುತ್ತಿದೆ ತೆಲಂಗಾಣ ಸರಕಾರ. ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡುವ ದಲಿತಬಂಧು ಯೋಜನೆ ಮಾಡಲಾಗಿದೆ. ಪ್ರತಿ ಜಿಲ್ಲೆಯಿಂದ ಕೆಲ ಸಂಘಟನೆ, ಪ್ರಗತಿ ಪರ ರೈತರು, ದಲಿತ ಸಂಘಟನೆ ಮುಖಂಡರನ್ನ ತೆಲಾಂಗಣಕ್ಕೆ ಅಧ್ಯಯನ‌ ಪ್ರವಾಸಕ್ಕೆ ಕಳುಹಿಸಿ. ಈ ಮೂಲಕ ನಿಮ್ಮ ಚುನಾವಣಾ ಪ್ರಚಾರಕ್ಕೆ ಈ ಅಂಶಗಳನ್ನು ಅಳವಡಿಸಿಕೊಳ್ಳಿ ಎಂದು ಕೆಸಿಆರ್ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಸಾಗುವಳಿ ಚೀಟಿ ಸಿಕ್ಕಿರುವುದು ರಾಜ್ಯಕ್ಕೆ ಮಾತ್ರ

ನಾನು ರಾಷ್ಟ್ರಮಟ್ಟದ ರಾಜಕೀಯಕ್ಕೆ ಹೋಗಲು ನಮ್ಮದು ಸಣ್ಣ ಪಕ್ಷ. ನಮಗೆ ಸಾಗುವಳಿ ಚೀಟಿ ಸಿಕ್ಕಿರುವುದು ಕರ್ನಾಟಕದ್ದು ಮಾತ್ರ. ಹೀಗಾಗಿ ನಾವು ಹೊರಗೆ ಬಕರ್ ಹುಕುಂ ಜಾಗ ಹುಡುಕುವುದಕ್ಕೆ ಆಗುತ್ತಾ ಎಂದ ಕುಮಾರಸ್ವಾಮಿ ಅವರು, ಕರ್ನಾಟಕ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಭಾವ ಬೀರುತ್ತದೆ ಎಂದರು.

ರಾಜ್ಯದಲ್ಲಿ 15-20 ಕ್ಷೇತ್ರಗಳ ಮೇಲೆ ಕೆಸಿಆರ್ ಪ್ರಭಾವ ಇರಬಹುದು. ಅವರ ಅನೇಕ ಶಾಸಕರುಗಳಿಗೆ ಆ ಭಾಗದಲ್ಲಿ ನೆಂಟಸ್ಥನ ಇದೆ. ಹೈದರಾಬಾದ್ ಕರ್ನಾಟಕದಲ್ಲಿ ನಾವು ನಾಲ್ಕು ಸ್ಥಾನ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ ನಾವು 15-20 ಕ್ಷೇತ್ರ ಕಲ್ಯಾಣ ಕರ್ನಾಟಕದಲ್ಲಿ ಗೆಲ್ಲಬಹುದು. ಅಲ್ಲಿ ನಮ್ಮ ಪಕ್ಷದ ಸಂಘಟನೆ ಉತ್ತಮವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ಜೋಡೋ

ಭಾರತ್ ಜೋಡೋ ಯಾಕೆ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸುಮ್ಮನೆ ಹೋಗ್ತಿದ್ದಾರೆ ಎಂದು ಜನ ಹೇಳ್ತಿದ್ದಾರೆ‌. ರಾಹುಲ್ ಗಾಂಧಿ ಅವರ ಹೇಳಿಕೆ ನೋಡಿದರೆ ಭಾರತ್ ಜೋಡೋಗಿಂತ ಕಾಂಗ್ರೆಸ್ ಜೋಡೋ ಮಾಡುವ ರೀತಿ ಇದೆ. ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದಾಗ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈ ಹಿಡಿದು ರಾಹುಲ್ ಗಾಂಧಿ ನಗಾರಿ ಬಾರಿಸಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಹೋಗಿ ಅಂತ ಪದೇ ಪದೇ ಹೇಳ್ತಿದ್ದಾರೆ‌.ಈ ಪಾದಯಾತ್ರೆ ಮೇಲೆ ಚುನಾವಣೆ ನಡೆಯಲ್ಲ ಎಂದು ವ್ಯಂಗ್ಯವಾಡಿದರು.

ಇನ್ನು ಜನಸ್ಪಂದನ ಎಂದು ಬಿಜೆಪಿ ಕಾರ್ಯಕ್ರಮ ಮಾಡಿದೆ. ತಾಕತ್ತು, ದಮ್ಮು, ತೊಡೆ ತಟ್ಟುವುದಕ್ಕೆ ಮಾತ್ರ ಆ ಕಾರ್ಯಕ್ರಮ ಸೀಮಿತ ವಾಗಿದೆ ಎಂದರು ಅವರು.

ಪಕ್ಷ ನೆಲ ಕಚ್ಚಿದ ಮೇಲೆ ಖರ್ಗೆಗೆ ಸ್ಥಾನ

ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಯಾರು ಇಲ್ಲದ ಸಂದರ್ಭದಲ್ಲಿ, ಪಕ್ಷ ನೆಲ ಕಚ್ಚಿರುವ ವೇಳೆ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರನ್ನು ಕೂರಿಸಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಪಕ್ಷ ಸದೃಢವಾಗಿದ್ದಾಗಲೇ ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಒಂದು ವರ್ಗದ ಮತಗಳು ಪರಿವರ್ತನೆ ಆಗುತ್ತವೆ ಅಂತ ಲೆಕ್ಕಾಚಾರದಲ್ಲಿದ್ಧಾರೆ. ಮುಂದೆ ಅವರಿಗೆ ಏನು ಪ್ರಾಮುಖ್ಯತೆ ಸಿಗುತ್ತದೆ ಅನ್ನೋದು ಮುಖ್ಯ ಅಲ್ಲವೇ? ಅವರು ಅಧ್ಯಕ್ಷರಾಗುವುದರಿಂದ ಏನು ಪ್ರಭಾವ ಬೀರುತ್ತದೆ ಎಂಬುದನ್ನು ಈಗಲೇ ಚರ್ಚೆ ಮಾಡೋದು ಬೇಡ. ಏನೆಂಬುದು ಇನ್ನ ಆರು ತಿಂಗಳು ಇದ್ದಾಗ ಗೊತ್ತಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಅಭ್ಯರ್ಥಿಗಳ ಕಾರ್ಯಾಗಾರ

ಈ ತಿಂಗಳ 17 ಮತ್ತು 18 ರಂದು ಅಭ್ಯರ್ಥಿಗಳ ಕಾರ್ಯಗಾರ ಇಟ್ಟುಕೊಂಡಿದ್ದೇವೆ. ರಾಜ್ಯದ 130 ಕ್ಷೇತ್ರ ಗೆಲ್ಲಲು ಶ್ರಮ ವಹಿಸುತ್ತಿದ್ದೇವೆ. ಒಂದಿಷ್ಟು ಕ್ಷೇತ್ರಗಳಲ್ಲಿ ಎರಡು ಮೂರು ಜನ ಅಭ್ಯರ್ಥಿಗಳು ಇದ್ದಾರೆ. ಹೀಗಾಗಿ ಅವರೊಟ್ಟಿಗೂ ಹಾಗೂ ಕ್ಷೇತ್ರದ ಮುಖಂಡರ ಜೊತೆಗೂ ಚರ್ಚೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ದಾಸರಹಳ್ಳಿ ಮಂಜುನಾಥ್, ನಿಸರ್ಗ ನಾರಾಯಣಸ್ವಾಮಿ ಮುಂತಾದವರು ಹಾಜರಿದ್ದರು.

Tags: cknewsnowelection 2023free electricityfree powerkarnatakaPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ

ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ

Leave a Reply Cancel reply

Your email address will not be published. Required fields are marked *

Recommended

40,000ಕ್ಕೂ ಹೆಚ್ಚು ಗೀತಪುಷ್ಪಗಳ ಹಾರದೊಂದಿಗೆ ಸ್ವರಮಾತೆಯ ಮಡಿಲಲ್ಲಿ ಐಕ್ಯರಾದ ಬಾಲು

ಎಸ್ ಪಿ ಬಾಲಸುಬ್ರಹ್ಮಣ್ಯಂ; ಹಾಡಿನ ಜೀವನದಿ

5 years ago
ಶಾಂತಿ ಕದಡಿದರೆ ಆರೆಸ್ಸೆಸ್‌, ಭಜರಂಗದಳವೂ ಬ್ಯಾನ್

ಶಾಂತಿ ಕದಡಿದರೆ ಆರೆಸ್ಸೆಸ್‌, ಭಜರಂಗದಳವೂ ಬ್ಯಾನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ