• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಲೆಕ್ಷನ್‌ಗೆ ನಿಂತ ರಾಜ್ಯ ಬಿಜೆಪಿ ಸರಕಾರ!

cknewsnow desk by cknewsnow desk
October 17, 2022
in STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
939
VIEWS
FacebookTwitterWhatsuplinkedinEmail

ಬೆಂಗಳೂರು ರಸ್ತೆಗುಂಡಿ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ನಗರದ ರಸ್ತೆಗುಂಡಿಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಲುಲೂ ಮಾಲ್ ಸಮೀಪ ಮಹಿಳೆಯೊಬ್ಬರು ಬಿದ್ದು ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿವೆ ಎಂದು ಅವರು ಕಿಡಿಕಾರಿದರು.

ಮತ್ತೆ ಬಲಿಯಾದ ವಿಚಾರಕ್ಕೆ ಬಿಜೆಪಿ ಸರಕಾರದ ವಿರುದ್ಧ ಕಿಡಿ ಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವ ಸ್ಥಿತಿ ಇದೆ ಎಂದು ಹೇಳಿದರು.

ಇವತ್ತು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಇಂತಹ ಕಾನ್ಫರೆನ್ಸ್ ಗಳು ಎಷ್ಟೋ ಆಗಿವೆ. ಆದರೆ ಗುಂಡಿಗಳು ಮಾತ್ರ ಮುಚ್ಚಿಲ್ಲ, ಎಲ್ಲವೂ ಹಾಗೆಯೇ ಇವೆ. ಜನರ ಜೀವಗಳನ್ನು ಕಾಪಾಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಮಳೆ ಬಂದಿರುವುದು ನಿಜ. ಕರ್ನಾಟಕದಲ್ಲಿ ಮಾತ್ರ ಮಳೆ ಆಗಿಲ್ಲ. ಮಳೆಗೆ ಅಗತ್ಯವಾದ ತಯಾರಿ ಈ ಸರಕಾರ ಮಾಡಿಕೊಂಡಿಲ್ಲ. ಒರಿಸ್ಸಾ ಸೇರಿದಂತೆ ಅನೇಕ ಕಡೆ ಪ್ರತಿ ವರ್ಷ ಮಳೆ ಬಂದರೂ ಅಲ್ಲೆಲ್ಲಾ ಏನೂ ಅಪಾಯ ಆಗಿಲ್ಲ. ತಕ್ಷಣವೇ ಎಲ್ಲವನ್ನೂ ಅಲ್ಲಿನ ಸರ್ಕಾರದವರು ಸರಿ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಂತಹ ಕೆಲಸ ಆಗುತ್ತಿಲ್ಲ. ಗುಂಡಿ ಮುಚ್ಚುವ ಕೆಲಸ ಮಾತ್ರ ಆಗ್ತಿಲ್ಲ, ಬದಲಿಗೆ ಗುಂಡಿಗಳ ಹೆಸರಲ್ಲಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ವಸೂಲಿ ಮಾಡುವುದೇ ಸರಕಾರದ ಕೆಲಸ

ಅರಸೀಕೆರೆ ಸಮೀಪ ರಸ್ತೆ ಅಪಘಾತ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ. ಅಗತ್ಯವಾದರೆ ಸರ್ಕಾರ ಇಡೀ ರಾಜ್ಯದಲ್ಲಿ ಒಂದು ಸಮೀಕ್ಷೆ ಮಾಡಿಸಲಿ. ಅದನ್ನು ಮಾಡುವ ಬದಲು ಈ ಸರಕಾರ ವಸೂಲಿ ಮಾಡುವುದಕ್ಕೆ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳಲ್ಲಿ, ಹೆದ್ದಾರಿ ರಸ್ತೆಯಲ್ಲಿ ಎಎಸ್ ಐ ಸೇರಿ 3-4 ಜನ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರೂ ಹಂಚಿಕೊಳ್ಳುತ್ತಾರೆ. ವಸೂಲಿ ಮಾಡುವುದಕ್ಕೆ ಈ ಸರ್ಕಾರ ನಿಂತಿದೆ ಎಂದು ಹೆಚ್ ಡಿಕೆ ಗಂಭೀರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಪ್ರಾರಂಭವಾಗಿ ಸೋಮವಾರ ಬೆಳಗ್ಗೆವರೆಗೆ ವ್ಯಾಪಾರ, ವಹಿವಾಟು, ಬಾರ್ ಪಬ್ಬಿಗೆ ಎಲ್ಲದ್ದಕ್ಕೂ ಸರಕಾರವೇ ಅವಕಾಶ ಕೊಟ್ಟಿದೆ. ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ಸರಕಾರವೇ. ಹೋಟೆಲ್ ಗೆ ರಾತ್ರಿ ವೇಳೆ ಅನುಮತಿ ಕೋಡೋದು ಕೂಡ ಸರಕಾರವೇ. ಕುಡಿದ ಮೇಲೆ ಮತ್ತೆ ಹಣ ವಸೂಲಿ ಮಾಡುವುದು ಕೂಡ ಸರಕಾರವೇ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಕುಂಭಮೇಳ ನಡೆಯುತ್ತಿದೆ. ಇನ್ನು ಆ ಕಾರ್ಯಕ್ರಮ ಮುಗಿದೇ ಇಲ್ಲ. ಆದರೆ, ಕುಂಭಮೇಳಕ್ಕೆ ರಸ್ತೆಗೆ ಹಾಕಿದ್ದ ಡಾಂಬರು ಆಗಲೇ ಕಿತ್ತು ಹೋಗಿದೆ ಎಂದು ನನಗೆ ಮಾಹಿತಿ ಬಂದಿದೆ. ಸ್ವಾಮೀಜಿಗಳು ಎಲ್ಲರೂ ಅಲ್ಲೇ ಇದ್ದರು. ಡಾಂಬರು ಹಾಕಿರುವುದರಲ್ಲಿ 40% ಕಮೀಷನ್ ವ್ಯವಹಾರ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಈ ಸರಕಾರದ ಹಣೆಬರಹ ಎಂದು ಅವರು ವಾಗ್ದಾಳಿ ನಡೆಸಿದರು.

ಜನರು ಜೆಡಿಎಸ್ ಪರ

ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಪೈಪೋಟಿ‌ ಇದೆ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಹೀಗಾಗಿ ಆಕಾಂಕ್ಷಿಗಳನ್ನು ಕರೆದು ಮಾತನಾಡುತ್ತಿದ್ದೇವೆ. ಕ್ಷೇತ್ರಗಳಲ್ಲಿ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ಕ್ಷೇತ್ರವಾರು ಆಕಾಂಕ್ಷಿಗಳನ್ನು, ಮುಖಂಡರನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಎಲ್ಲ ಕಡೆ ಜನರ ಒಲವು ನಮ್ಮ ಪಕ್ಷದ ಕಡೆ ಇದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮೈಸೂರಿನಲ್ಲಿ ಅಭ್ಯರ್ಥಿಗಳಿಗೆ ಕಾರ್ಯಾಗಾರ

ಮೈಸೂರಿನಲ್ಲಿ ಇದೇ ಅ. 19-20ರಂದು ನಮ್ಮ ಪಕ್ಷದ 126 ಅಭ್ಯರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ. ಈ ಕಾರ್ಯಾಗಾರದಲ್ಲಿ ಬಿಡದಿಯಲ್ಲಿ ನಡೆದ ʼಜನತಾ ಪರ್ವʼ ಕಾರ್ಯಾಗಾರದಲ್ಲಿ ಕೊಟ್ಟ ಟಾಸ್ಕ್ ಗಳನ್ನು ಪೂರ್ಣ ಮಾಡಿದ್ದಾರಾ? ಇಲ್ಲವಾ? ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಅಂತ ಸೂಚನೆ ಕೊಡುತ್ತೇವೆ. ಬಿಜೆಪಿ-ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಜೆಡಿಎಸ್ ಪರ ಜನರ ಭಾವನೆ ಇದೆ. ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ. ಹೀಗಾಗಿ ಈ ಕಾರ್ಯಾಗಾರ ಮಹತ್ವವಾಗಿದೆ ಎಂದು ಅವರು ಹೇಳಿದರು.

ಪಂಚರತ್ನ ರಥಯಾತ್ರೆ ಕಾರ್ಯಕ್ರಮ ನವೆಂಬರ್ 1ರಿಂದ ಪ್ರಾರಂಭ ಆಗುತ್ತದೆ. 2-3 ಹಂತದಲ್ಲಿ ರಥಯಾತ್ರೆ ಇರುತ್ತದೆ. ನವೆಂಬರ್ 1ರಿಂದ ಫೆಬ್ರವರಿ ಅಂತ್ಯದವರೆಗೂ ನಿರಂತರವಾಗಿ ಪಂಚರತ್ನ ರಥಯಾತ್ರೆ ನಡೆಯುತ್ತದೆ ಎಂದು ತಿಳಿಸಿದರು.

ಸರ್ವೆ ರಿಪೋರ್ಟ್ ನನಗೆ ಮುಖ್ಯ ಅಲ್ಲ

ಇತರೆ ಪಕ್ಷಗಳು ನಡೆಸುತ್ತಿರುವ ಚುನಾವಣಾ ಸಮೀಕ್ಷೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೋ ಮಾಡುವ ಸರ್ವೆ ರಿಪೋರ್ಟ್ ನನಗೆ ಮುಖ್ಯ ಅಲ್ಲ. ನನ್ನ ಗುರಿ 123 ಅದಕ್ಕೆ ನಾವು ಕೆಲಸ ಮಾಡುತ್ತೇವೆ ಎಂದರು.

ನಾವು ಕೂಡಾ ಸರ್ವೆ ಮಾಡಿಸುತ್ತಿದ್ದೇವೆ. 30-40 ಕ್ಷೇತ್ರ ಸರ್ವೆ ಆಗಿದೆ. ಅಲ್ಲಿ ಕೆಲ ಗೊಂದಲ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಸರ್ವೆ ರಿಪೋರ್ಟ್ ನಮ್ಮ ಪರ ಇದೆ ಅಂತ ಮೈಮರೆಯೋದು ಬೇಡ. ಸರ್ವೆ ನೆಗೆಟಿವ್ ಇರಲಿ ಪಾಸಿಟಿವ್ ಇರಲಿ. ನಾವು ಚುನಾವಣೆ ಗೆಲ್ಲುವುದಕ್ಕೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮನೆ ಮನೆಗೆ ಕನ್ನಡ ಬಾವುಟ

ನವೆಂಬರ್ 1ರಂದು ನಮ್ಮ ಪಕ್ಷದಿಂದ ಮನೆಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು. ಬುಧವಾರ ಈ ಸಂಬಂಧ ಶಾಸಕರ ಸಭೆ ಕರೆಯಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ದ ಮಾಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬಿಡುಗಡೆ ಮಾಡಿದ್ದ ಹಣ ಸಿ.ಪಿ.ಯೋಗೇಶ್ವರ್ ತಡೆ ಹಿಡಿಯಲು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಇಂತಹ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಅವರು ಖುಷಿಗೆ ಇಂತಹದ್ದನ್ನು ಮಾಡುತ್ತಿರುತ್ತಾರೆ. ಇದರಿಂದ ಚನ್ನಪಟ್ಟಣದಲ್ಲಿ ಮತ ಬೀಳೋದಿಲ್ಲ. ಅವರ ಖುಷಿಗೆ ಅದನ್ನು ಮಾಡಿಕೊಳ್ಳಲಿ ಬಿಡಿ ಎಂದು ಪರೋಕ್ಷವಾಗಿ ಯೋಗೇಶ್ವರ್ ವಿರುದ್ದ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Tags: 40% commissionbjpbjp governmentcknewsnowcorruptionhd kumaraswamykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

Leave a Reply Cancel reply

Your email address will not be published. Required fields are marked *

Recommended

ಅಯೋಧ್ಯೆ ಶ್ರೀರಾಮ ಸನ್ನಿಧಿ ಸೇರಲು ತವಕಿಸುತ್ತಿವೆ 800 ವರ್ಷಗಳಷ್ಟು ಹಳೆಯ ಅಪರೂಪದ ಸಪ್ತ ರಾಮಾಯಣ ಗ್ರಂಥಗಳು!

ಅಯೋಧ್ಯೆ ಶ್ರೀರಾಮ ಸನ್ನಿಧಿ ಸೇರಲು ತವಕಿಸುತ್ತಿವೆ 800 ವರ್ಷಗಳಷ್ಟು ಹಳೆಯ ಅಪರೂಪದ ಸಪ್ತ ರಾಮಾಯಣ ಗ್ರಂಥಗಳು!

2 years ago
ಸಮಾಜ ಸೇವೆಗಾಗಿ ಒಡಂಡಿಕೆ ಮಾಡಿಕೊಂಡ ಶ್ರೀ ಸತ್ಯಸಾಯಿ ಒನ್ ನೇಷನ್ ಯೂತ್ ಫೌಂಡೇಶನ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ

ಸಮಾಜ ಸೇವೆಗಾಗಿ ಒಡಂಡಿಕೆ ಮಾಡಿಕೊಂಡ ಶ್ರೀ ಸತ್ಯಸಾಯಿ ಒನ್ ನೇಷನ್ ಯೂತ್ ಫೌಂಡೇಶನ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ