• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಕೋಲಾರಕ್ಕೆ ಬಂದಿದ್ದಕ್ಕೆ ಕಾರಣ ಹೇಳಿದ ಸಿದ್ದರಾಮಯ್ಯ

P K Channakrishna by P K Channakrishna
November 13, 2022
in ELECTION2024, STATE
Reading Time: 2 mins read
0
ಕೋಲಾರಕ್ಕೆ ಬಂದಿದ್ದಕ್ಕೆ ಕಾರಣ ಹೇಳಿದ ಸಿದ್ದರಾಮಯ್ಯ
975
VIEWS
FacebookTwitterWhatsuplinkedinEmail

ಬಾದಾಮಿಯಿಂದ ಸ್ಪರ್ಧಿಸುವುದು ರೂಲ್ಡೌಟ್‌ ಎಂದ ಪ್ರತಿಪಕ್ಷ ನಾಯಕ

ಕೋಲಾರ: ಬಾದಾಮಿ ಕ್ಷೇತ್ರದ ಶಾಸಕನಾದ ನನ್ನನ್ನು ಕೋಲಾರಕ್ಕೆ ಬಂದು ಸ್ಪರ್ಧೆ ಮಾಡುವಂತೆ ಇಲ್ಲಿನ ಜನರ ಒತ್ತಾಯ ಇತ್ತು. ಅದಕ್ಕೆ ಕೋಲಾರಕ್ಕೆ ಬಂದಿದ್ದೇನೆ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕೋಲಾರದಲ್ಲಿ ದೇವಾಲಯ, ಚರ್ಚ್‌, ಮಸೀದಿಗಳಿಗೆ ಭೇಟಿ, ಪ್ರತಿಮೆಗಳಿಗೆ ಮಾಲಾರ್ಪಣೆ ಇತ್ಯಾದಿಗಳನ್ನು ಮುಗಿಸಿದ ಮೇಲೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನನಗೆ ಈ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಜನರು ಮತ್ತು ನಮ್ಮ ಪಕ್ಷದ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಎರಡು ದಿನ ನೀವು ಕೋಲಾರಕ್ಕೆ ಬಂದರೆ ಸಾಕು, ನಾವೆಲ್ಲಾ ಸೇರಿ ಒಟ್ಟಾಗಿ ಗೆಲ್ಲಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಬಂದಿದ್ದೇನೆ ಎಂದು ಅವರು ತಿಳಿಸಿದರು.

ನನಗೆ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡಲು ಅಂಜಿಕೆ ಇಲ್ಲ. ಬಾದಾಮಿ ಕ್ಷೇತ್ರದಲ್ಲಿ ಸ್ವರ್ಧೆ ಮಾಡುವಂತೆ ಒತ್ತಾಯವಿದೆ. ವಯಸ್ಸಾದ ಕಾರಣ ದೂರದ ಬಾದಾಮಿಗೆ ಓಡಾಡಲು ನನಗೆ ಕಷ್ಟವಾಗುತ್ತಿದೆ. ಅದಕ್ಕಾಗಿ ಹತ್ತಿರದ ಕ್ಷೇತ್ರವೊಂದು ಬೇಕಾಗಿತ್ತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೋಲಾರ ಭಾಗದ ಮುಖಂಡರು ಕೋಲಾರಕ್ಕೇ ಬರುವಂತೆ ಒತ್ತಾಯ ಮಾಡಿದ್ದರು. ಅದಕ್ಕಾಗಿ ಇವತ್ತು ಕೋಲಾರಕ್ಕೆ ಭೇಟಿ ಮಾಡಿರುವೆ. ಸಿ.ಬೈರೇಗೌಡರು ಮತ್ತು ನಾನು ಸ್ನೇಹಿತರು. ಅದಕ್ಕಾಗಿ ಬೈರೇಗೌಡರ ಸಮಾಧಿಗೆ ಗೌರವ ಸಲ್ಲಿಸಿದ್ದೇನೆ ಎಂದರು ಸಿದ್ದರಾಮಯ್ಯ.

ಬಾದಾಮಿ ದೂರ ಇರುವ ಕಾರಣಕ್ಕೆ ಸರಿಯಾಗಿ ಅಲ್ಲಿನ ಜನರ ಕಷ್ಟಸುಖಕ್ಕೆ ಸ್ಪಂದಿಸಲು ಆಗುತ್ತಿಲ್ಲ ಅದಕ್ಕಾಗಿ ಹತ್ತಿರದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನನತೆ ಒತ್ತಾಯಗಳು ಬರುತ್ತಿವೆ ಎಂದು ಅವರು ಹೇಳಿಕೊಂಡರು.

ನನ್ನ ಸ್ಪರ್ಧೆ ಬಗ್ಗೆ ನಾನು ಈಗಾಗಲೇ ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದೇನೆ. ಬೇರೆ ಕಡೆ ಸ್ಪರ್ಧೆ ಮಾಡಬೇಕು ಅಂದಾಗ‌ ಹಲವೆಡೆಯಿಂದ ಆಹ್ವಾನ ಬಂದಿದೆ. ವರಿಷ್ಠರು, ನೀವು ಎಲ್ಲಾದರೂ ನಿಲ್ಲಿ, ನೀವೇ ನಿರ್ಧಾರ ಮಾಡಿ ಎಂದಿದ್ದಾರೆ. ಕೋಲಾರದಲ್ಲಿ ನನಗೆ ಹೆಚ್ವಿನ ಸ್ನೇಹಿತರು ಇದ್ದಾರೆ. ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಕೆ.ಹೆಚ್.ಮುನಿಯಪ್ಪ‌ ಅವರ ಜತೆಗೂ ಮಾತನಾಡಿದ್ದೇನೆ. ಅವರು ಸಪೋರ್ಟ್ ಮಾಡುವುದಾಗಿ ಹೇಳಿದ್ದಾರೆ. ಹಾಲಿ ಶಾಸಕ ಶ್ರೀನಿವಾಸಗೌಡ ಅವರು ಒತ್ತಾಯ ಮಾಡುತ್ತಿದ್ದಾರೆ. ಅದಕ್ಕೆ ಇವರೆಲ್ಲರಿಗೂ ಇಲ್ಲಾ ಎಂದು ಹೇಳಲಾಗುತ್ತಿಲ್ಲ ಎಂದರು ಸಿದ್ದರಾಮಯ್ಯ.

ಅಂತಿಮವಾಗಿ ಹೈಕಮಾಂಡ್ ಎಲ್ಲಿ ನಿಲ್ಲಲು ಸೂಚಿಸಿದರೆ ಅಲ್ಲಿ ನಿಲ್ಲುತ್ತೇನೆ. ಬಾದಾಮಿ ರೂಲ್ಡ್ ಔಟ್, ಅಲ್ಲಿ ಆಗೋದಿಲ್ಲ. ಕೋಲಾರದ ಎಲ್ಲಾ ನಾಯಕರ ಒತ್ತಾಸೆಗೆ ನಾನು ಚಿರಋಣಿ ಆಗಿರುವೆ. ಎಲ್ಲರ ಅಭಿಪ್ರಾಯ ಪಡೆದು ಹೈಕಮಾಂಡ್‌ ಜತೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೋಲಾರದಿಂದಲೇ ಪಂಚರತ್ನ ಯಾತ್ರೆ ಶುರು ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ಇಲ್ಲ. ನಾನು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.

ಕೋಲಾರ ರೌಂಡ್ಸ್‌

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಇಡೀ ಕೋಲಾರವನ್ನು ಸುತ್ತು ಹಾಕಿದರು. ಬೆಂಗಳೂರಿನಿಂದ ಬರುವ ದಾರಿಯಲ್ಲೇ ಬೆಂಗಳೂರು ನಗರದ ಕೊಳಚೆ ನೀರಿನಿಂದ ತುಂಬಿರುವ ನರಸಾಪುರ ಕೆರೆಯನ್ನು ಸಿದ್ದರಾಮಯ್ಯ ಅವರು ವೀಕ್ಷಿಸಿದರು. ಮಾಜಿ ಸಚಿವ ಕೃಷ್ಣಭೈರೇಗೌಡ, ವಿಧಾನ ಪರಿಷತ್‌ ಸದಸ್ಯ ನಸೀರ್‌ ಅಹಮದ್‌, ಶಾಸಕರಾದ ರಮೇಶ್‌ ಕುಮಾರ್‌, ನಾರಾಯಣಸ್ವಾಮಿ, ಅನಿಲ್‌ ಕುಮಾರ್‌, ನಂಜೇಗೌಡ, ಜೆಡಿಎಸ್‌ ಶಾಸಕ ಶ್ರೀನಿವಾಸಗೌಡ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್‌ ನಾಯಕರೆಲ್ಲರೂ ಹಾಜರಿದ್ದರು.

ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ
ಕೆ.ಸಿ.ವ್ಯಾಲಿ ಯೋಜನೆಯ ನೀರಿನಿಂದ ಭರ್ತಿಯಾಗಿರುವ ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಇಂದು ಭೇಟಿನೀಡಿದೆ.
ನಮ್ಮ ಈ ಯೋಜನೆ ರೈತರ ಬದುಕಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗಿರುವುದು ಖುಷಿ ನೀಡಿದೆ. pic.twitter.com/lvJeMXYieP

— Siddaramaiah (@siddaramaiah) November 13, 2022

ಅಲ್ಲಿಂದ ಅವರು ವೇಮಗಲ್ ಸಮೀಪದ ಸೀತಿಬೆಟ್ಟಕ್ಕೆ ತೆರಳಿ ಶ್ರೀ ಬೈರವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಇಂದಿನ ನನ್ನ ಕೋಲಾರ ಪ್ರವಾಸದ ಸಂದರ್ಭದಲ್ಲಿ ವೇಮಗಲ್ ಸಮೀಪದ ಸೀತಿ ಬೆಟ್ಟಕ್ಕೆ ತೆರಳಿ ಶ್ರೀ ಬೈರವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದೆ. pic.twitter.com/aN9dzRzsqP

— Siddaramaiah (@siddaramaiah) November 13, 2022

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬೈರೇಗೌಡರ ಪುತ್ರರೂ ಆದ ಮಾಜಿ‌ ಸಚಿವ @krishnabgowda, ಶಾಸಕರಾದ ನಂಜೇಗೌಡ, ಶ್ರೀನಿವಾಸಗೌಡ, ಶರತ್ ಬಚ್ಚೇಗೌಡ, ಅನಿಲ್ ಕುಮಾರ್, ನಜೀರ್ ಅಹಮದ್, ಮಾಜಿ ಶಾಸಕರಾದ ಡಾ. ಸುಧಾಕರ್ ಮತ್ತಿತರ ನಾಯಕರು ಈ ವೇಳೆ ಹಾಜರಿದ್ದರು. 2/2 pic.twitter.com/H5VfpLDzsy

— Siddaramaiah (@siddaramaiah) November 13, 2022

ಕೋಲಾರ ನಗರದ ಕನಕ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ, ಕ್ಲಾಕ್ ಟವರ್ ನಲ್ಲಿರುವ ದರ್ಗಾಕ್ಕೆ ಭೇಟಿನೀಡಿ ಪ್ರಾರ್ಥನೆ ಸಲ್ಲಿಸಿದೆ. 4/4 pic.twitter.com/8GJDTqrj2t

— Siddaramaiah (@siddaramaiah) November 13, 2022

ಕೋಲಾರ ನಗರದಲ್ಲಿರುವ ಮಹರ್ಷಿ ವಾಲ್ಮೀಕಿ, ಸರ್ವಜ್ಞ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದೆ. 3/4 pic.twitter.com/O9UE8QvblD

— Siddaramaiah (@siddaramaiah) November 13, 2022

ಕೋಲಾರದ ಇತಿಹಾಸ ಪ್ರಸಿದ್ಧ ಶ್ರೀ ಕೋಲಾರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಳಿಕ ಮೆಥೋಡಿಸ್ಟ್ ಚರ್ಚ್ ಗೆ ಭೇಟಿನೀಡಿ ಪ್ರಾರ್ಥನೆ ಸಲ್ಲಿಸಿದೆ. 2/4 pic.twitter.com/cK8Y1Z9Zeu

— Siddaramaiah (@siddaramaiah) November 13, 2022

ಕೋಲಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಆತ್ಮೀಯವಾಗಿ ಸ್ವಾಗತ ಕೋರಿದರು.
ಕೋಲಾರದ ಜನರ ಪ್ರೀತಿ ಅಭಿಮಾನಕ್ಕೆ ನಾನು ಸದಾ ಋಣಿ. 1/4 pic.twitter.com/tGDZRir8z7

— Siddaramaiah (@siddaramaiah) November 13, 2022
Tags: cknewsnowCongresselection 2023kolarnewsPoliticssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಅಸಲಿಗೆ ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆ ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

Recommended

ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

6 years ago
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಚಿಕ್ಕಬಳ್ಳಾಪುರ, ಕೋಲಾರ: ವಿಷನೀರಿನ 3ನೇ ಹಂತದ ಶುದ್ಧೀಕರಣ; ಸಣ್ಣ ನೀರಾವರಿ ಸಚಿವರ ಹೊಸ ಪಠಣ!!

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ