• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವಕೃಪದ ಕಾರ್ಯಕ್ರಮ ಅಲ್ಲ: ಜೆಡಿಎಸ್

P K Channakrishna by P K Channakrishna
November 13, 2022
in STATE
Reading Time: 2 mins read
0
ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದುತಂದ ಪ್ರಧಾನಿ ಮೋದಿ
930
VIEWS
FacebookTwitterWhatsuplinkedinEmail

ಮುಖ್ಯ ಕಾರ್ಯದರ್ಶಿ ಉತ್ತರ ನೀಡಲಿ; ಬಿಜೆಪಿ ವಿರುದ್ಧ ಮುಂದುವರಿದ ಜೆಡಿಎಸ್ ವಾಗ್ದಾಳಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭುಗಳ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಬಿಜೆಪಿ ಸರಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ಮುಂದುವರಿಸಿದೆ.

ಈ ಬಗ್ಗೆ ಪಕ್ಷವು ಆಕ್ಷೇಪ ವ್ಯಕ್ತಪಡಿಸಿದ ನಂತರ, ಅದನ್ನು ತಿರುಚಿ ಹೇಳುತ್ತಿರುವ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮತ್ತಿತರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಬಿಜೆಪಿ ಬದಲು ಮುಖ್ಯಮಂತ್ರಿ ಇಲ್ಲವೇ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ರನ್ನು ಆಹ್ವಾನಿಸದೆ ರಾಜ್ಯ @BJP4Karnataka ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ.
ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. 1/12#ಸುಳ್_ಬಿಜೆಪಿ #ಸುಳ್_ಸಿಎಂ

— Janata Dal Secular (@JanataDal_S) November 13, 2022

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ.
ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ. 2/12#ಗೊಬೆಲ್_ಬಿಜೆಪಿ #gobel_bjp

— Janata Dal Secular (@JanataDal_S) November 13, 2022

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು ಬಿಜೆಪಿಯನ್ನು ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಗಳನ್ನು ಸುಳ್ ಸಿಎಂ ಎಂದು ಕರೆದು ಅವನ್ನೆ ಹ್ಯಾಷ್ ಟ್ಯಾಗ್ ಮಾಡಿದೆ. ಅಲ್ಲದೆ, ಅಡಾಲ್ಫ್ ಹಿಟ್ಲರ್ ಸಂಪುಟದಲ್ಲಿ ಇದ್ದ ಮಂತ್ರಿ ಗೊಬೆಲ್ ಗೆ ಬಿಜೆಪಿಯನ್ನು ಹೋಲಿಸಿ ಜೆಡಿಎಸ್ ತಿರುಗೇಟು ನೀಡಿದೆ.

ಕೇಶವ ಕೃಪದ ಕಾರ್ಯಕ್ರಮ ಅಲ್ಲ

ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವ ಕೃಪದ ಕಾರ್ಯಕ್ರಮವಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ!! 6/12

— Janata Dal Secular (@JanataDal_S) November 13, 2022

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಕಮಲ ಪಕ್ಷಕ್ಕೆ ಟಾಂಗ್ ನೀಡಿದೆ.

ಹೆಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರ ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ ಎಂದು ಜೆಡಿಎಸ್ ಹೇಳಿದೆ.

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ!! ಎಂದು ಜೆಡಿಎಸ್ ಪಕ್ಷವು ಜೆಡಿಎಸ್ ಗೆ ಚುರುಕು ಮುಟ್ಟಿಸಿದೆ.

ಭೂತದ ಬಾಯಲ್ಲಿ ಭಗದ್ಗೀತೆ

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ!! ಎಂದು ಜೆಡಿಎಸ್ ಕಿಡಿಕಾರಿದೆ.

ಸುಳ್‌ ಬಿಜೆಪಿ, ಸುಳ್‌ ಸಿಎಂ

20 ದಿನಗಳ ಹಿಂದೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ಶ್ರೀ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ. ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ? ಎಂದು ಜೆಡಿಎಸ್ ಹೇಳಿದೆ.

ಗೊಬೆಲ್ ಬಿಜೆಪಿ

ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಕುಲ ಕಿಚ್ಚಿನ ರಾಜಕೀಯ

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’, ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ರಾಜ್ಯ ಬಿಜೆಪಿ ನೋಡಲಿಲ್ಲವೆ? ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಶ್ರೀ ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಜೆಡಿಎಸ್ ಕೇಳಿದೆ.

ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ರಾಜ್ಯ ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದು ಜೆಡಿಎಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.

Tags: bjpcknewsnowjdskempegowda international airportkempegowda statue controversynadahabbaNadaprabhu Kempegowda
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್‌ ಶಾ ಕ್ಲಾಸ್

ಅಮಿತ್ ಶಾ ಆಟ ನನ್ನ ಬಳಿ ನಡೆಯಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಸ್ಮರಣಾರ್ಥ ಬಾಗೇಪಲ್ಲಿಯಲ್ಲಿ ಪಂಜಿನ ಮೆರವಣಿಗೆ

ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಸ್ಮರಣಾರ್ಥ ಬಾಗೇಪಲ್ಲಿಯಲ್ಲಿ ಪಂಜಿನ ಮೆರವಣಿಗೆ

5 years ago
ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ