ಕಷ್ಟದ ದಿನಗಳನ್ನು ಸ್ಮರಿಸಿಕೊಂಡ ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ನೋಡಿದ ಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಂದು ಕ್ಷಣ ಭಾವುಕರಾಗಿ ಕಣ್ಣೀರು ಸುರಿಸಿದರು. ಅಲ್ಲದೆ, ತಮ್ಮ ಜೈಲುವಾಸದ ದಿನಗಳಲ್ಲಿ ಸ್ಮರಿಸಿಕೊಂಡು ದುಃಖಿತರಾದರು.
ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, “ಅಖಂಡ ಕರ್ನಾಟಕದ ಜನತೆಗೆ ಸಾಷ್ಟ್ರಾಂಗ ನಮಸ್ಕಾರಗಳು” ಎಂದು ಹೇಳಿದರು.
ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಅತಿ ಹೆಚ್ಚು ಕ್ಷೇತಗರಗಳಲ್ಲಿ ಜಯ ಗಳಿಸಲು ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಶ್ರಮ ಕಾರಣ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಎಲ್ಲ ನಾಯಕರಿಗೂ ಡಿಕೆಶಿ ಧನ್ಯವಾದ ಸಲ್ಲಿಸಿದರು
ನಾವು ಹೇಳಿದಂತೆ ಕರ್ನಾಟಕದ ಜನತೆ ನಮಗೆ ಅತಿ ಹೆಚ್ಚು ಬಹುಮತ ಕೊಟ್ಟಿದ್ದಾರೆ ನಾವು 130 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದೆವು ಅದು ನಿಜ ಆಗಿದೆ ಅದಕ್ಕಾಗಿ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ತಿಳಿಸಿದರು.