• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬೆಂಗಳೂರಿನಲ್ಲಿ ಮಹಾ ಮಳೆ; ಯುವತಿ ಬಲಿ

P K Channakrishna by P K Channakrishna
May 21, 2023
in NATION, STATE
Reading Time: 1 min read
0
ಗುಡಿಬಂಡೆಯಲ್ಲಿ ವರುಣ ತಾಂಡವ
954
VIEWS
FacebookTwitterWhatsuplinkedinEmail

ಬಿಬಿಎಂಪಿ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಗರದ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬ ವರ್ಗದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ. ಮಳೆ ಅನಾಹುತದ ಮಾಹಿತಿ ದೊರೆಯುತಗತಿದ್ದಂತೆ ಸಿದ್ದರಸಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ತೀವ್ರ ಆಘಾತ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ; ಮಳೆ ಮುನ್ಸೂಚನೆ ಇದ್ದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ ಬಗ್ಗೆ ಕಿಡಿ

ಇದೇ ವೇಳೆ ರಾಜಧಾನಿಯಲ್ಲಿ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಅವರು ಬಲಿಯಾದ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಬಿಬಿಎಂಪಿ ಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?

ಹೆಚ್.ಡಿ.ಕುಮಾರಸ್ವಾಮಿ

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿಯೂ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿರುವ ಅವರು; ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದಿದ್ದಾರೆ.

Tags: bagalore rainsck. cknewsnowkarnatakanewsrainsyoung women died
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜಕೀಯ ಗುರುವಿನ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

ರಾಜಕೀಯ ಗುರುವಿನ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

Leave a Reply Cancel reply

Your email address will not be published. Required fields are marked *

Recommended

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

5 years ago
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

ಚಿಕ್ಕಬಳ್ಳಾಪುರದಲ್ಲಿ ಶ್ರೀ ಆದಿಚುಂಚನಗಿರಿ ಮಠದಿಂದ ಕೋವಿಡ್‌ ಕೇರ್;‌ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಸೇವೆಗೆ ಮುಕ್ತ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ