• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟಕ್ಕೆ ಮುಖಂಡರಿಗೆ ರಣವೀಳ್ಯ ನೀಡಿದ ಹೆಚ್.ಡಿ.ಕುಮಾರಸ್ವಾಮಿ

P K Channakrishna by P K Channakrishna
May 25, 2023
in ELECTION2024, NATION, POLITICS, STATE
Reading Time: 2 mins read
0
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟಕ್ಕೆ ಮುಖಂಡರಿಗೆ ರಣವೀಳ್ಯ ನೀಡಿದ ಹೆಚ್.ಡಿ.ಕುಮಾರಸ್ವಾಮಿ
954
VIEWS
FacebookTwitterWhatsuplinkedinEmail

ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಕಾಂಗ್ರೆಸ್ ಸರಕಾರದ ಭವಿಷ್ಯ ನಿಂತಿದೆ ಎಂದ ಮಾಜಿ ಸಿಎಂ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಗೆದ್ದರೆ ನಾವು ಗೆಲುವಿನ ಕಾರಣಗಳನ್ನು ಹುಡುಕಲು ಹೋಗುವುದಿಲ್ಲ. ಸೋತರೆ ಕಾರಣಗಳನ್ನು ಹುಡುಕಬೇಕಾಗುತ್ತದೆ. ನಾನು ಹುಡುಕುತ್ತಿದ್ದೇನೆ, ಆ ಕಾರಣಗಳೇನು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಕೊನೆ ಕ್ಷಣದಲ್ಲಿ ನಾನು ನನ್ನ ಅಭ್ಯರ್ಥಿಗಳಿಗೆ ನಿರೀಕ್ಷಿತ ಆರ್ಥಿಕ ನೆರವು ಕೊಡಲಾಗಲಿಲ್ಲ. ಅಂತಿಮ ಕ್ಷಣದಲ್ಲಿ ನನ್ನ ಪಕ್ಷಗಳ ಅಭ್ಯರ್ಥಿಗಳಿಗೆ ನೆರವು ಕೊಡುವುದು ಕಷ್ಟವಾಯಿತು. ನಿಮ್ಮ ಸಹಾಯಕ್ಕೆ ನಿಲ್ಲದೆ ಹೋದ ಕಾರಣಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಅವರು ಸೋತ ಅಭ್ಯರ್ಥಿಗಳ ಕ್ಷಮೆ ಕೇಳಿದರು.

ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು. ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್ ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕುತಂತ್ರದಿಂದ ಗೆದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು. ಅವರ ಪಕ್ಷದವರು ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು ಎಂದು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್, ಬಿಜೆಪಿ ಪಕ್ಷಗಳು ಹೇರಳವಾಗಿ ಹಣ ವೆಚ್ಚ ಮಾಡಿದವು, ಆಮಿಷಗಳನ್ನು ಒಡ್ಡಿದವು. ಅವುಗಳಿಗೆ ಪೈಪೋಟಿ ಕೊಡಲು ನನ್ನಿಂದ ಸಾಧ್ಯವಾಗಲಿಲ್ಲ. ನಾನು ಅಂತಹ ಕೆಲಸ ಮಾಡಲು ಹೋಗಲಿಲ್ಲ. ವೈಯಕ್ತಿಕ ನೆಲೆಗಟ್ಟಿನಲ್ಲಿ ಯಾರನ್ನೂ ನಾವು ಟೀಕೆ ಮಾಡಲಿಲ್ಲ, ತೇಜೋವಧೆ ಮಾಡಲಿಲ್ಲ, ಅಭಿವೃದ್ಧಿ ವಿಷಯ ಇಟ್ಟುಕೊಂಡು ಹೋದೆವು. ಅದಕ್ಕಾಗಿ ನಾವು ಸೋಲಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಯಿಂದ ನಲುಗಿದ ಒಂದು ಸಮಾಜದ ಪರವಾಗಿ ನಾವು ದನಿ ಎತ್ತಿದೆವು, ಅಚಲವಾಗಿ ಬೆಂಬಲ ಕೊಟ್ಟೆವು, ಹೆಜ್ಜೆ ಹೆಜ್ಜೆಗೂ ಅವರಿಗೆ ಬಿಜೆಪಿ ಸರಕಾರ ತೊಂದರೆ ಕೊಟ್ಟಾಗ ಧೈರ್ಯವಾಗಿ ನಿಂತೆವು. ಆದರೆ ಅವರು ನಮ್ಮ ಪಕ್ಷದ ಪರವಾಗಿ ನಿಲ್ಲದೆ ಹೋದರು ಎಂದು ಕುಮಾರಸ್ವಾಮಿ ಅವರು ನೊಂದು ನುಡಿದರು.

ಆರ್ಥಿಕ ಸಮಸ್ಯೆಗಳೂ ನಮ್ಮ ಸೋಲಿಗೆ ಕಾರಣ, ಅಭ್ಯರ್ಥಿಗಳ ಖರ್ಚಿಗೆ ನಾವು ಹಣ ಕೊಡಲಿಲ್ಲ. ಬಿಜೆಪಿ ಕಾಂಗ್ರೆಸ್ ಪಕ್ಷಗಳಿಗೆ ಸರಿ ಸಮವಾಗಿ ಖರ್ಚು ಮಾಡಲು ನಮ್ಮಿಂದ ಆಗಲಿಲ್ಲ. ಕೇವಲ 600 ಮತಗಳಲ್ಲಿ ಸೋತ ಕುಮಟಾ ಕ್ಷೇತ್ರದ ಸೂರಜ್ ನಾಯಕ್ ಸೋನಿ ಅವರ ಸೋಲು ನನಗೆ ಅತೀವ ನೋವು ಉಂಟು ಮಾಡಿದೆ.

ಫಲಿತಾಂಶದಿಂದ ಧೃತಿಗೆಡಬೇಕಿಲಿಲ್ಲ. 1989ರಲ್ಲಿ ದೇವೇಗೌಡರು ಎರಡು ಕ್ಷೇತ್ರಗಳಲ್ಲಿ ಸೋತಿದ್ದರು. ಆ ನಂತರ ಐದು ವರ್ಷಗಳಲ್ಲಿ ದೇವೇಗೌಡರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ರಾಜ್ಯ ಸರಕಾರ ಬಂದು ಅವರು ಮುಖ್ಯಮಂತ್ರಿ ಆಗಿ, ಆ ನಂತರ ಪ್ರಧಾನಿಯೂ ಅದರು. ಇಂಥ ಸೋಲು ಶಾಶ್ವತ ಅಲ್ಲ, ಹಾಗಂತ ಮೈಮರೆಯಬೇಡಿ ಎಂದು ಮುಖಂಡರಿಗೆ ತಾಕೀತು ಮಾಡಿದರು ಮಾಜಿ ಮುಖ್ಯಮಂತ್ರಿಗಳು.

ಲೋಕಸಭೆ ಚುನಾವಣೆ ನಂತರ ಏನು ಬೇಕಾದರೂ ಆಗಬಹುದು

ಮುಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಈ ಸರಕಾರದ ಭವಿಷ್ಯ ನಿಂತಿದೆ. ಈ ಸರಕಾರ ಇರಬಹುದು ಅಥವಾ ಹೋಗಬಹುದು. ನಾನೇನು ಭವಿಷ್ಯ ಹೇಳುತ್ತಿಲ್ಲ, ಆ ನಂತರ ಏನೆಲ್ಲಾ ಬೆಳೆವಣಿಗೆ ನಡೆಯಿತ್ತೂ ಗೊತ್ತಿಲ್ಲ. ಏನು ಬೇಕಾದರೂ ಆಗಬಹುದು ಎಂದರು ಅವರು.

ಕಾಂಗ್ರೆಸ್ 135 ಕ್ಷೇತ್ರ ಗೆದ್ದಿದೆ, ಆದರೆ ಆ ಸರಕಾರದಲ್ಲಿ ವಿಶ್ವಾಸದ ಕೊರತೆ ಇದೆ. ಜನರ ಕೆಲಸ ಮಾಡಲು ಅವರಿಗೆ ಆಗುತ್ತಿಲ್ಲ. ಆದರೆ ನಾವು ಸಂಘಟನೆ ಕಡೆ ಗಮನಕ್ಕೆ ಕೊಡೋಣ, ವಿಷಯಾಧಾರಿತವಾಗಿ ನಾವು ಹೋರಾಟ ನಡೆಸಬೇಕು. ಸಂಘಟನೆಯನ್ನು ಬಳಪಡಿಸಿಕೊಂಡು ಜನರ ಜತೆ ನಿಲ್ಲೋಣ ಎಂದು ಅವರು ಹೇಳಿದರು.

ಜಿಲ್ಲಾಧ್ಯಕ್ಷರಿಗೆ ಚಳಿ ಬಿಡಿಸಿದ ಮಾಜಿ ಸಿಎಂ

ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡುವಲ್ಲಿ, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಲೋಪ ಎಸಗಿರುವ ಪಕ್ಷದ ಜಿಲ್ಲಾ ಅಧ್ಯಕ್ಷರುಗಳನ್ನು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

ಅಧ್ಯಕ್ಷಗಿರಿ ಎಂದರೆ ಸ್ವಂತ ಜಹಗೀರು ಅಲ್ಲ, ಸಂಘಟನೆಯನ್ನು ಸರಿಯಾಗಿ ಮಾಡಿಲ್ಲ, ಯಾರೂ ಸಮರ್ಥವಾಗಿ ಕೆಲಸ ಮಾಡಿಲ್ಲ, ಎಲ್ಲಾ ಹಂತಗಳಲ್ಲಿಯೂ ಸಂಘಟನೆ ಸೋತಿದೆ, ನಾನೇ ಅಭ್ಯರ್ಥಿ ಹುಡುಕಿ ಕೊಡಬೇಕಾದ ಪರಿಸ್ಥಿತಿ ಬಂದಿದೆ, ಹಾಗಾದರೆ ಜಿಲ್ಲಾಧ್ಯಕ್ಷರು ಮಾಡಿದ್ದೇನು? ಇವರೇನು ಅಲಂಕಾರಕ್ಕೆ ಇದ್ದಾರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆರ್ಥಿಕವಾಗಿ ನಾನೆಷ್ಟು ಕಷ್ಟಪಟ್ಟೆ ಎನ್ನುವುದು ನನಗಷ್ಟೇ ಗೊತ್ತು, ಯಾರೂ ನನ್ನ ನೋವು ಹಂಚಿಕೊಳ್ಳಲು ಮುಂದೆ ಬರಲಿಲ್ಲ. ಹಿಂದೆ ಯಾರನ್ನಾದರೂ ಹಾಳು ಮಾಡಬೇಕಾದರೆ ಹಳೆಯ ಲಾರಿ ಕೊಡಿಸು ಎನ್ನುವ ಮಾತಿತ್ತು. ಈಗ ಯಾರ ಮನೆಯನ್ನಾದರೂ ಹಾಳು ಮಾಡಬೇಕಾದರೆ ಅವರನ್ನು ರಾಜಕೀಯಕ್ಕೆ ಕರೆದುಕೊಂಡು ಬಂದು ಅಭ್ಯರ್ಥಿ ಮಾಡು ಎನ್ನುವಂತೆ ಆಗಿದೆ. ಈ ಚುನಾವಣೆಯಲ್ಲಿ ಕಂಡಂಥ ಕಟುಸತ್ಯ ಇದು. ನಿಮ್ಮನ್ನು ಮತೆ ಅಭ್ಯರ್ಥಿಗಳಾಗಿ ಎಂದು ಹೇಳುವ ಧೈರ್ಯ ನನ್ನಲ್ಲಿ ಉಳಿದಿಲ್ಲ ಎಂದು ಕುಮಾರಸ್ವಾಮಿ ಅವರು ಅಭ್ಯರ್ಥಿಗಳನ್ನು ಉದ್ದೇಶಿಸಿ ಹೇಳಿದರು.

ಗ್ಯಾರಂಟಿಗಳ ಬಗ್ಗೆ ದನಿ ಎತ್ತಿ

ನಾವು ಹಣದಿಂದ ಚುನಾವಣೆ ನಡೆಸಲು ಸಾಧ್ಯವಿಲ್ಲ. ರಾಜಕೀಯ ಮಾಡಲಾಗದು. ಜನರ ಮನಸ್ಸು ಗೆದ್ದು ರಾಜಕಾರಣ ಮಾಡಬೇಕು. ಈಗ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸರಕಾರ ಈಗ ಷರತ್ತು ಅನ್ವಯ ಅನ್ನುತ್ತಿದೆ. ನಂಗೂ ಫ್ರೀ ನಿಂಗೂ ಫ್ರೀ ಎಂದವರು ಈಗ ಕಂಡಿಷನ್ಸ್ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಹೇಳಿದ್ದೇನು, ಡಿಕೆಶಿ ಹೇಳಿದ್ದೇನು? ಖರ್ಗೆ ಹೇಳಿದ್ದೇನು? ಇದನ್ನೇ ನಾವು ಜನರ ಮುಂದೆ ಇಡಬೇಕು. ಈ ಬಗ್ಗೆಯೇ ಆಂದೋಲನವನ್ನೇ ಮಾಡಬೇಕು. ಜನರ ಜತೆ ನಿಲ್ಲಬೇಕು. ಜನರನ್ನೇ ಆಂದೋಲನಕ್ಕೆ ಧುಮುಕುವಂತೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಕರೆ ನೀಡಿದರು.

ಕೆಲ ಅಭ್ಯರ್ಥಿಗಳಿಗೆ ಚಾಟಿ

ಬೆಂಗಳೂರು ನಗರದಲ್ಲಿ ಪಕ್ಷ ಸಂಘಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಕಳೆದ ಹಲವು ವರ್ಷಗಳಿಂದ ರಾಜಧಾನಿಯಲ್ಲಿ ಪಕ್ಷದ ಸಂಘಟನೆ ನೆನೆಗುದಿಗೆ ಬಿದ್ದಿದೆ. ಚುನಾವಣೆ ಹತ್ತಿರಕ್ಕೆ ಬಂದಾಗ ಬಂದು ಗೋಳಾಡಿ ಬೀ ಫಾರಂ ತೆಗೆದುಕೊಂಡು ಹೋಗುತ್ತೀರಿ, ಆಮೇಲೆ ಯಾವನೋ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ ಎಂದು ಖಾರವಾಗಿ ಕೆಲವರ ಮೇಲೆ ಚಾಟಿ ಬೀಸಿದರು.

ಇನ್ನು ಮುಂದೆ ಬೆಂಗಳೂರಿನಲ್ಲಿ ಸಂಘಟನೆ ಬಗ್ಗೆ ನಿರ್ಲಕ್ಷ್ಯ ಮಾಡುವುದಿಲ್ಲ. ನಗರದ ನಾಲ್ಕು ವಿಭಾಗಕ್ಕೆ ನಾಲ್ವರು ಅಧ್ಯಕ್ಷರನ್ನು ಮಾಡಿ ಆದೇಶ ಹೊರಡಿಸಿ ವೇದಿಕೆಯ ಮೇಲೆ ಕೂತಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸೂಚನೆ ನೀಡಿದ ಮಾಜಿ ಮುಖ್ಯಮಂತ್ರಿಗಳು, ಒಬ್ಬರಿಗೆ ಕೊಟ್ಟರೆ ಅವರು ಏಕ ಚಕ್ರಾಧಿಪತ್ಯ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲ ನೂತನ ಶಾಸಕರು, ಮಾಜಿ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

Tags: ckcknewsnowelection 2023hd devegowdahd kumaraswmyjds
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

Leave a Reply Cancel reply

Your email address will not be published. Required fields are marked *

Recommended

ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುತ್ತಿದೆ ಕಾಂಗ್ರೆಸ್

ಬೆಂಗಳೂರು ನಗರಕ್ಕೆ 18 ಟಿಎಂಸಿ ಬದಲು 24 ಟಿಎಂಸಿ ಕಾವೇರಿ ನೀರು

2 years ago
ಬಿಜೆಪಿ, ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವುದೇನು? ನಿಗೂಢ! ಆದರೆ, ಆಟ ಆಡಿಸುತ್ತಿರುವವರು ಯಾರು?

ಬಿಜೆಪಿ, ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವುದೇನು? ನಿಗೂಢ! ಆದರೆ, ಆಟ ಆಡಿಸುತ್ತಿರುವವರು ಯಾರು?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ