• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ

P K Channakrishna by P K Channakrishna
May 27, 2023
in NATION, POLITICS, STATE
Reading Time: 1 min read
0
ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ
1.1k
VIEWS
FacebookTwitterWhatsuplinkedinEmail

ಕೋಲಾರಕ್ಕೆ ಇಲ್ಲ ಪ್ರಾತಿನಿಧ್ಯ; ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ರೀಪ್ಲೇಸ್‌ ಮಾಡಿದ ಸುಧಾಕರ್!

ಬೆಂಗಳೂರು: ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್‌ ಸೇರಿದಂತೆ ಒಟ್ಟು 24 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾದರು. ಅಲ್ಲಿಗೆ ಮೊದಲು ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಸೇರಿ ಎಂಟು ಸಚಿವರನ್ನೊಳಗೊಂಡ ಸಿದ್ದು ಸಂಪುಟ ಈಗ ಫುಲ್‌ ಭರ್ತಿಯಾಗಿದೆ.

ಕೋಲಾರಕ್ಕೆ ಸಂಪುಟದಲ್ಲಿ ಅವಕಾಶ ಸಿಗಬಹುದು ಎಂದು ನೀರಿಕ್ಷೆ ಇತ್ತಾದರೂ ಕೆ.ಎಚ್.ಮುನಿಯಪ್ಪ ಅವರು ಮೊದಲ ಹಂತದಲ್ಲಿ ಹಾಗೂ ಕೃಷ್ಣಭೈರೇಗೌಡರು ಎರಡನೇ ಹಂತದಲ್ಲಿ ಸಂಪುಟ ಸೇರಿದ್ದಾರೆ.

ಮುನಿಯಪ್ಪ, ಕೃಷ್ಣಭೈರೇಗೌಡರು ಮೂಲತಃ ಕೋಲಾರ ಜಿಲ್ಲೆಯವರೇ. ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಿಂದ ಕೃಷ್ಣಭೈರೇಗೌಡರು ಬ್ಯಾಟರಾಯನಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದಾರೆ.

ಹೀಗಾಗಿ ಪ್ರತ್ಯೇಕವಾಗಿ ಕೋಲಾರಕ್ಕೆ ಪ್ರಾತಿನಿಧ್ಯ ಅಗತ್ಯವಿಲ್ಲ ಎಂದು ಕಾಂಗ್ರೆಸ್‌ ವರಿಷೃರು ನಿರ್ಧರಿಸಿದ್ದ ಪರಿಣಾಮವಾಗಿಯೇ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಸಚಿವರಾಗುವ ಅವಕಾಶ ತಪ್ಪಿತು ಎಂದು ಗೊತ್ತಾಗಿದೆ.

ಈ ಇಬ್ಬರಲ್ಲಿ ಒಬ್ಬರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿ ಕೊಡುವುದು ಖಚಿತ. ಸುಧಾಕರ್‌ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ದೊರೆಯುವುದು ಗ್ಯಾರಂಟಿ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಉನ್ನತ ಮೂಲವೊಂದು ಸಿಕೆನ್ಯೂಸ್‌ ನೌ ಗೆ ಖಚಿತ ಮಾಹಿತಿ ನೀಡಿದೆ.

Live ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ https://t.co/y1KDAW2Byl

— Karnataka Congress (@INCKarnataka) May 27, 2023

ಪ್ರಮಾಣ ಸೀಕರಿಸಿದ ಸಚಿವರು

ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರು ಅಧಿಕಾರ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಹಿರಿಯ ರಾಜಕಾರಣಿ, ಗದಗ ಶಾಸಕ ಹೆಚ್.ಕೆ ಪಾಟೀಲ್, ನಾಗಮಂಗಲ ಶಾಸಕ ಎನ್​​.ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್, ಬಾಲ್ಕಿ ಶಾಸಕ ಈಶ್ವರ ಖಂಡ್ರೆ, ಬ್ಯಾಟರಾಯನಪುರ ಶಾಸಕ ಕೃಷ್ಣಬೈರೇಗೌಡ, ಟಿ.ನರಸೀಪುರ ಶಾಸಕ, ಹಿರಿಯ ರಾಜಕಾರಣಿ ಡಾ.ಹೆಚ್​. ಸಿ.ಮಹದೇವಪ್ಪ, ಮಧುಗಿರಿ ಶಾಸಕ ಕೆಎನ್ ರಾಜಣ್ಣ, ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್, ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್, ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ, ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ, ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ , ಭಟ್ಕಳ ಶಾಸಕ ಮಂಕಾಳು ವೈದ್ಯ (ಇವರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.) ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್, ಹಿರಿಯೂರು ಶಾಸಕ ಡಿ.ಸುಧಾಕರ್, ಕಲಘಟಗಿ ಶಾಸಕ ಸಂತೋಷ್ ಲಾಡ್, ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್​​, ಸೊರಬದ ಮಧು ಬಂಗಾರಪ್ಪ, ಬಳ್ಳಾರಿ ಕ್ಷೇತ್ರದ ಬಿ.ನಾಗೇಂದ್ರ ಅವರು ​​ಪ್ರಮಾಣವಚನ ಸ್ವೀಕರಿಸಿದರು.

ಶಾಸಕರೂ ಅಲ್ಲದ, ಎಂಎಲ್ ಸಿಯೂ ಅಲ್ಲದ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಅವರು ಆರು ತಿಂಗಳ ಒಳಗಾಗಿ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಾಗಬೇಕಿದೆ. ಶೀಘ್ರವೇ ಬೋಸರಾಜ್‌ ಅವರನ್ನು ವಿಧಾನ ಪರಿಷತ್‌ ಗೆ ಆಯ್ಕೆ ಮಾಡಿ ಕಳಿಸಲಾಗುವುದು ಎಂದು ಡಿಕೆಶಿ ಅವರ ಆಪ್ತ ಮೂಲವೊಂದು ತಿಳಿಸಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರಿದ ಏಕೈಕ ಸಚಿವೆ.

ರಹೀಂ ಖಾನ್ ಅವರು ಇಂಗ್ಲಿಷ್ ಭಾಷೆಯಲ್ಲಿ ಹಾಗೂ ಉಳಿದೆಲ್ಲರೂ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ‌ಸ್ವೀಕರಿಸಿದರು.

ಸಂಪುಟಕ್ಕೆ ಸೇರಿದವರ ಪಟ್ಟಿ

ಮೊದಲ ಬಾರಿಗೆ ಸಚಿವರು

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕೆ ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ, ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ‌ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ ನಾಗೇಂದ್ರ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಉಳಿದವರು ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿದ್ದಾರೆ.

ಹೆಚ್.ಸಿ ಮಹದೇವಪ್ಪ ಅವರು ಸತ್ಯ ನಿಷ್ಠೆಯ ಹೆಸರಿನಲ್ಲಿ, ಕೆ ಎನ್ ರಾಜಣ್ಣ ಅವರು ಬುದ್ಧ ಬಸವ ಅಂಬೇಡ್ಕರ್ ಹಾಗೂ ಮ‌ಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ, ದಿನೇಶ್ ಗುಂಡೂರಾವ್ ಅವರು ಯಾವ ಹೆಸರೂ ಉಲ್ಲೇಖಿ‌ಸದೇ, ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣ ಅವರ ಹೆಸರಿನಲ್ಲಿ, ಎಸ್ ಎಸ್ ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ ಛತ್ರಪತಿ ಶಿವಾಜಿ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನತೆ ಮತ್ತು ತಮ್ಮ ತಾಯಿ ಗಿರಿಜಾ ಬಾಯಿ ಅವರ ಹೆಸರಿನಲ್ಲಿ, ರಹೀಂ ಖಾನ್ ಅವರು ಅಲ್ಲಾಹ್ ಹೆಸರಿನಲ್ಲಿ, ಬಿ ನಾಗೇಂದ್ರ ಅವರು ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಹಾಗೂ ಉಳಿದ ಎಲ್ಲರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Tags: cabinetchikkaballapurckcknewsnowCongressDK Shivakumarkarnatakakolarraj bhavansiddaramaiahswearing ceremony
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

Leave a Reply Cancel reply

Your email address will not be published. Required fields are marked *

Recommended

ಜಸ್ಟೀಸ್ ನೂತಲಪಾಟಿ ವೆಂಕಟರಮಣ  (ಎನ್.ವಿ.ರಮಣ): ಪತ್ರಕರ್ತರು, ವಕೀಲರು,  ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು

ಜಸ್ಟೀಸ್ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ): ಪತ್ರಕರ್ತರು, ವಕೀಲರು, ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು

5 years ago
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಜಕ್ಕೂರು ಕೆರೆಯಲ್ಲಿ ರಾಶಿ, ರಾಶಿ ಮೀನುಗಳ ಸಾವು!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ