ಜೂನ್ 1ರಿಂದಲೇ ಒಂದು ಗ್ಯಾರಂಟಿ ಜಾರಿಗೆ ಸರಕಾರ ತಯಾರಿ
ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದರು.
ಸಾರಿಗೆ ನಿಗಮಗಳ ಎಂಡಿ ಜೊತೆ ಚರ್ಚಿಸಿದ್ದೇವೆ. ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ಮಾಡಿದ್ದೇವೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ ಎಂದು ಹೇಳಿದರು.
ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜತೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳಿಂದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ವರದಿ ಪಡೆದು ಸಿಎಂಗೆ ಸಲ್ಲಿಸಲಿದ್ದಾರೆ. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ನಮ್ಮಪಕ್ಷದ ಪ್ರಣಾಳಿಕೆಯಲ್ಲಿ ಎಪಿಎಲ್ ಬಿಪಿಎಲ್ ಕಾರ್ಡುದಾರರು ಎಂದು ಹೇಳಿಲ್ಲ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಪ್ರಯಾಣಿಸಬಹುದು ಎಂದು ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದರು.