• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

P K Channakrishna by P K Channakrishna
June 12, 2023
in STATE
Reading Time: 1 min read
0
ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ
915
VIEWS
FacebookTwitterWhatsuplinkedinEmail

10,500 ನಕಲಿ ಹಕ್ಕುಪತ್ರ ಹಂಚಿಕೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ

ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಮುನ್ನ ಅಕ್ರಮವಾಗಿ, ಕಾನೂನುಬಾಹಿರವಾಗಿ ಅಧಿಕಾರಿಗಳ ಶಾಮೀಲಾಗಿ ಮಾಜಿ ಸಚಿವ ಹಾಗೂ ಅಂದಿನ ಶಾಸಕ ಡಾ.ಕೆ.ಸುಧಾಕರ್‌ ಅವರು ಹಂಚಿಕೆ ಮಾಡಿರುವ ಹಕ್ಕುಪತ್ರಗಳ ಹಗರಣದ ಬಗ್ಗೆ ಕೂಲಂಕಶುವಾಗಿ ತನಿಖೆ ನಡೆಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಘೊಷಣೆ ಮಾಡಿದ್ದಾರೆ.

ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು; ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಬಂದಿವೆ, ಜನರಿಂದಲೂ ದೂರುಗಳು ಬಂದಿವೆ. ಈ ಬಗ್ಗೆ ವಿಸ್ತೃತವಾಗಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಗಳ ನಿವೇಶನ ಯೋಜನೆಯಡಿಯಲ್ಲಿ ವಿಧಾನಸಭೆ ಚುನಾವಣೆ ವೇಳೆ ಕಾನೂನು ಬಾಹಿರವಾಗಿ ಹಿಂದಿನ ಶಾಸಕರ ಭಾವಚಿತ್ರ ಹಾಕಿ 10,500 ಹಕ್ಕುಪತ್ರ ಹಂಚಿಕೆ ಮಾಡಲಾಗಿದ್ದು, ಆ ಹಕ್ಕುಪತ್ರಗಳು ಸಿಂಧುವಲ್ಲ ಎಂದು ಅವರು ತಿಳಿಸಿದರು.

ಬಡವರಿಗೆ ಅನ್ಯಾಯ ಆಗಬಾರದು, ಆ ಪ್ರಕರಣದಲ್ಲಿ ತಪ್ಪಾಗಿದ್ದರೆ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು.

ಕಾಲಮಿತಿಯಲ್ಲಿ ವಸತಿ ಯೋಜನೆಗಳ ಅನುಷ್ಟಾನ

ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲು ವಸತಿ ಸಚಿವ ಜಮೀರ್ ಅಹಮದ್ ಗಡುವು ನೀಡಿದ್ದಾರೆ.

ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ. ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣ ಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕು. ಪ್ರತಿ ಯೋಜನೆಗೆ ಬೇಕಾದ ಹಣಕಾಸು ಹೊಂದಿಕೊಂಡು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಆದ ನಂತರವಷ್ಟೇ ಮತ್ತೊಂದು ಯೋಜನೆ ಪ್ರಾರಂಭಿಸಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ.
ಇದು ಕಡ್ಡಾಯವಾಗಿ ಪಾಲನೆ ಆಗಲೇಬೇಕು ಎಂದು ಸೂಚನೆ ನೀಡಿದರು.


ಪ್ರಧಾನ ಮಂತ್ರಿ ಅವಾಸ್, ಯೋಜನೆಯ ಅವಧಿ ಜೂನ್ ಗೆ ಮುಗಿಯಲಿದ್ದು, 1.41 ಮನೆಗಳ ಗುರಿಯ ಪೈಕಿ 37 ಸಾವಿರ ಮನೆಗಳಿಗೆ ಮಾತ್ರ ಅನುಮತಿ ದೊರೆತಿದೆ. ಚುನಾವಣೆ ಮತ್ತಿತರರ ಕಾರಣಕ್ಕೆ ತಡವಾಗಿದ್ದರೆ ತಕ್ಷಣ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಯ ವಿಸ್ತರಣೆಗೆ ಅನುಮತಿ ಪಡೆದುಕೊಳ್ಳಿ. ಅಗತ್ಯ ವಾದರೆ ದೆಹಲಿಗೆ ತೆರಳಿ ಕೇಂದ್ರ ಸಚಿವರ ಜತೆಯೂ ಚರ್ಚೆ ಮಾಡುತ್ತೇನೆ ಎಂದು ಸೂಚನೆ ನೀಡಿದರು.


ಬಸವ ವಸತಿ, ಅಂಬೇಡ್ಕರ್ ನಿವಾಸ್, ದೇವರಾಜ ಅರಸು ನಗರ ಮತ್ತು ಗ್ರಾಮೀಣ ವಸತಿ ಯೋಜನೆ ಯಡಿ ಹಲವು ವರ್ಷ ಕಳೆದರೂ ಘಟಕ ಪೂರ್ಣ ಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ಸಚಿವರು,ಯೋಜನೆ ಜಾರಿಯಾದ ವರ್ಷದಿಂದ ಇದುವರೆಗಿನ ಸಮಗ್ರ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.


ಸ್ಥಳೀಯ ಮಟ್ಟದ ಸಮಸ್ಯೆ ಬಗೆಹರಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ನೂರಾರು ಕೋಟಿ ವೆಚ್ಚ ಮಾಡಿದರೂ ಶೇ.30 ರಷ್ಟು ಪ್ರಗತಿ ಆದರೆ ಏನು ಪ್ರಯೋಜನ ಎಂದು ಪ್ರೆಶ್ನೆ ಮಾಡಿದರು.


ವಸತಿ ಯೋಜನೆಗಳ ಜಾರಿ ವಿಳಂಬಕ್ಕೆ ಫಲಾನುಭವಿಗಳ ಪಾಲಿನ ಹಣ ತುಂಬುವಲ್ಲಿ ಸಮಸ್ಯೆ ಆಗುತ್ತಿರುವ ಬಗ್ಗೆ ಅಧಿಕಾರಿಗಳು ಗಮನಕ್ಕೆ ತಂದಾಗ, ಬ್ಯಾಂಕ್ ಗಳ ಜತೆ ಮಾತನಾಡಿ ಸಾಲ ಸೌಲಭ್ಯ ಕೊಡಿಸುವ ಬಗ್ಗೆ ತುರ್ತು ಸಭೆ ನಡೆಸಿ ಎಂದು ಸೂಚನೆ ನೀಡಿದರು.

ಸಚಿವರ ಅಸಮಾಧಾನ

ಮುಖ್ಯಮಂತ್ರಿ ಗಳ ಒಂದು ಲಕ್ಷ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, 2017 ರಲ್ಲಿ ಆರಂಭ ವಾದ ಯೋಜನೆ ಇನ್ನೂ ಮುಗಿದಿಲ್ಲ. 1040 ಎಕರೆ ಪೈಕಿ 553 ಎಕರೆ ಮಾತ್ರ ಸ್ವಾಧೀನ ಪಡೆದಿದ್ದು 50797 ಅರ್ಜಿದಾರರಲ್ಲಿ 12158 ಮಂದಿ ಆರಂಭಿಕ ಹಣ ಪಾವತಿಸಿದ್ದು ಐದು ಸಾವಿರ ಮನೆ ಪೂರ್ಣಗೊಳಿಸಲಾಗಿದೆ. ಇನ್ನೂ ಫಲಾನುಭವಿಗಳಿಗೆ ಕೊಟ್ಟಿಲ್ಲ, ಹೀಗಾದರೆ ನಂಬಿಕೆ ಬರುವುದಾದರೂ ಹೇಗೆ ಎಂದu ಕೇಳಿದರು.

ಈ ಯೋಜನೆಯಡಿಯಲ್ಲಿ ಇನ್ನೂ ಆರಂಭ ವಾಗದ ಕಡೆ ಜಂಟಿ ಸಹ ಭಾಗಿತ್ವ ದಡಿ ಅನುಷ್ಠಾನ ಸಾಧ್ಯವಾ ಯೋಚಿಸಿ ಎಂದು ಸಲಹೆ ನೀಡಿದರು. ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಿಗೆ ಅಗತ್ಯ ವಾದ ಆರ್ಥಿಕ ನೆರವು ಈ ವರ್ಷ ಪೂರ್ಣ ಗೊಳಿಸ ಬಹುದಾದ ಯೋಜನೆ ಬಗ್ಗೆ ಟಿಪ್ಪಣಿ ತಯಾರಿಸಿ. ಬಜೆಟ್ ಮಂಡನೆಗೆ ಮುಂಚೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸುತ್ತೇನೆ ಎಂದು ಹೇಳಿದರು.

ಸರ್ಕಾರದಿಂದ ಒಂದು ಸಾವಿರ ಕೋಟಿ ರೂ. ಅನುದಾನ ತಕ್ಷಣಕ್ಕೆ ದೊರೆತರೆ ಯೋಜನೆ ಗಳು ಪೂರ್ಣಗೊಳ್ಳಲಿವೆ ಎಂದು ಅಧಿಕಾರಿಗಳು ತಿಳಿಸಿದರು.ಸರ್ಕಾರದ ಖಾತರಿಯೊಂದಿಗೆ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವ ಬಗ್ಗೆಯೂ ಚಿಂತನೆ ನಡೆಸಿ ಎಂದು ಸಲಹೆ ನೀಡಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವ ಶಂಕರ್, ವಸತಿ ಇಲಾಖೆ ಕಾರ್ಯದರ್ಶಿ ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: bjpchikkaballapurackcknewsnowCongresshousing ministerhousing scamindiakarnatakanewsZameer Ahmed Khan
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೆಡಿಎಸ್ ಜನತಾ ಜಲಧಾರೆ ಆರಂಭ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಪಕ್ಷದಿಂದ ಹೊರಗೆ ಕಾಲಿಟ್ಟವರ ಬಗ್ಗೆ ಚಿಂತೆ ಇಲ್ಲ

ಪಕ್ಷದಿಂದ ಹೊರಗೆ ಕಾಲಿಟ್ಟವರ ಬಗ್ಗೆ ಚಿಂತೆ ಇಲ್ಲ

5 years ago
ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ