• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬಿಜೆಪಿ ಬೇಳೆಕಾಳು ಗೊತ್ತಾಗ್ತದೆ ಎಂದ ಸಿಎಂ ಸಿದ್ದರಾಮಯ್ಯ

cknewsnow desk by cknewsnow desk
August 14, 2023
in NATION, POLITICS, STATE
Reading Time: 1 min read
0
ಮುಂದಿನ ತಿಂಗಳೇ 5 ಗ್ಯಾರಂಟಿ!
916
VIEWS
FacebookTwitterWhatsuplinkedinEmail

ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಭಾಷಣ

ಪ್ರಧಾನಿ ಮೋದಿಯವರು ರೋಡ್ ಶೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿ ಸೋತಿದೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಒಂದು ಕಡೆ RSS ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲಾ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ ಎಂದರು.

ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಆದರೆ ದೇಶದ ಶೇ.90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಜನರ ಜೇಬಿನಲ್ಲಿರುವ ಹಣವನ್ನು ಕಿತ್ತು ಸಾವಿರಾರು ಕೋಟಿ ಒಡೆಯರಾಗಿರುವ ಶ್ರೀಮಂತರಿಗೆ ನೀಡುವುದು ಅವರ ಆರ್ಥಿಕತೆ. ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಮತ್ತು ಆರ್ಥಿಕತೆಯ ನೆರವನ್ನೂ ನೀಡದೆ ಇಡೀ ನಾಡಿನ ಜನತೆಗೆ ಬಿಜೆಪಿ ವಂಚಿಸಿದೆ. ಆದರೆ, ನಾವು ಜನರ ಜೇಬಿನಲ್ಲಿ ಹಣ ಉಳಿಯುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಆಯವ್ಯಯವನ್ನು ನಾವು ಮಂಡಿಸಿದ್ದೇವೆ. ಕರ್ನಾಟಕ ಮಾದರಿಯ ಈ ಅಭಿವೃದ್ಧಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಧ್ಯಯನ ನಡೆಸಿ ಅಳವಡಿಸಿಕೊಳ್ಳಲು ಮುಂದಾಗಿವೆ. ಇದು ಕರ್ನಾಟಕದ ಜನತೆಗೆ ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ನೀಡಿರುವ ಅಭಿವೃದ್ಧಿಯ ಕೊಡುಗೆ ಎಂದರು.

ರಾಜ್ಯದ ಜನರ ಹಸಿವು ನೀಗಿಸಲು ಅಕ್ಕಿ ಕೊಡಿ ಎಂದರೆ ಕೊಡಲು ಒಪ್ಪದ ಬಿಜೆಪಿಯವರು ಈಗ ಆ ಸಾವಿರಾರು ಟನ್ ಅಕ್ಕಿ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಯಲ್ಲಿರುವ ಅಕ್ಕಿಗೆ ಹುಳು ಹಿಡಿಯುತ್ತಿದೆ. ಜನರು ಉಪವಾಸ ಇದ್ದರೂ ಪರ್ವಾಗಿಲ್ಲ, ಅಕ್ಕಿ ಹಾಳಾದರೂ ಪರ್ವಾಗಿಲ್ಲ ಆದರೆ ಹಸಿದವರಿಗೆ ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ ಎಂದು ವ್ಯಂಗ್ಯವಾಡಿದರ

ಬಿಜೆಪಿಯ ಬೇಳೆಕಾಳು ಗೊತ್ತಾಗ್ತದೆ

ದೇಶದ ಜನ‌ ನೆಮ್ಮದಿಯಾಗಿ, ಸಂತೋಷದಿಂದ ಇದ್ದರೆ ಬಿಜೆಪಿ ಗೆ ನೆಮ್ಮದಿ ಹಾಳಾಗುತ್ತದೆ. ಹೊಟ್ಟೆಕಿಚ್ಚು ಹೆಚ್ಚಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲಾ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದೇವೆ. ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ ಎಂದರು.

ಕನಿಷ್ಠ 20 ಲೋಕಸಭಾ ಸ್ಥಾನ ಗೆಲ್ತೀವಿ

ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೈಕಮಾಂಡ್ ಗೆ ಭರವಸೆ ನೀಡಿದ್ದೀನಿ. ಇದಕ್ಕೂ ಹೆಚ್ಚು ಸೀಟು ಗೆಲ್ಲುತ್ತೀವಿ ಎಂದರು.

ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ

ನಾನು ನನ್ನ ಅನುಭವದಿಂದ ಹೇಳ್ತಾ ಇದೀನಿ. ಯಾವುದೇ ಉತ್ಪ್ರೇಕ್ಷೆ ಇಲ್ಲದೆ ಹೇಳುತ್ತೇನೆ. 2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ಈ ಪ್ರಧಾನಿ ಮೋದಿ ಪಾರ್ಲಿಮೆಂಟ್ ಗೆ ಸರಿಯಾಗಿ ಹೋಗಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ. ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ ಎಂದರು.

ಹಿಟ್ ಆಂಡ್ ರನ್ ಗಿರಾಕಿ

ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷವನ್ನು ಮರೆತುಬಿಟ್ಟಿದ್ದಾರೆ. ಬಿಜೆಪಿ ವಕ್ತಾರರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರೊಂಥರಾ ಹಿಟ್ ಆಂಡ್ ರನ್ ಗಿರಾಕಿ. ಖಾಲಿ ಪೆನ್ ಡ್ರೈವ್ ಜೇಬಿಂದ ತೆಗೆಯೋದು ಒಳಗಿಟ್ಟುಕೊಂಡು ಹೋಗೋದು. ಇದೇ ಆಗೋಯ್ತು ಅಂದರು.

ನಮಗೆ 42.8% ಮತ ಬಿದ್ದಿದೆ. ಇದು ಐತಿಹಾಸಿಕ. ಕರ್ನಾಟಕದ ಜನತೆ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದ್ದಾರೆ**ನಾಡಿನ ಜನತೆ ಬಿಜೆಪಿಯ ಅಭಿವೃದ್ಧಿಹೀನ, ಬೆಲೆ ಏರಿಕೆ, ನಿರುದ್ಯೋಗ, ದುರಾಡಳಿತ ಮತ್ತು ಜನರನ್ನು ದ್ವೇಷದ ಆಧಾರದಲ್ಲಿ ವಿಭಜಿಸಿ ದರ್ಬಾರ್ ನಡೆಸುವ ಅನಾಹುತಕಾರಿ ಸಿದ್ಧಾಂತ ಮತ್ತು ರಾಜಕಾರಣವನ್ನು ತಿರಸ್ಕರಿಸಿದ್ದಾರೆ

Tags: ckcknewsnowindiakarnatakanewsPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಮುಂದಿನ ವರ್ಷ NEP ರದ್ದು

Leave a Reply Cancel reply

Your email address will not be published. Required fields are marked *

Recommended

ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ

ಮದುವೆಯಾದ ಐದೇ ತಿಂಗಳಿಗೆ ಭೂಮಿಗೆ ಬಂದ ಕಂದನ ಕಥೆ ಇದು; ಅನುಮಾನಪಟ್ಟ ಅಪ್ಪ, ಮಾರಿಕೊಂಡ ಅಮ್ಮ, ಅಕ್ಕರೆ ಮರೆತ ಅಜ್ಜ-ಅಜ್ಜಿ

5 years ago
ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ದಾಖಲೆ ಕೊಟ್ಟರೆ ಆರೋಪಿತ ಸಚಿವರನ್ನು ವಜಾ ಮಾಡುತ್ತೀರಾ?

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ