• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?

cknewsnow desk by cknewsnow desk
August 18, 2023
in CKPLUS, NATION, STATE
Reading Time: 1 min read
0
2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?
970
VIEWS
FacebookTwitterWhatsuplinkedinEmail

ಡಿಕೆ ಸಹೋದರರ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ದೇವೇಗೌಡರು ಸಹಿ ಹಾಕಿದ್ದು ಮಾಡಲಿಕ್ಕೆ, ಭೂಮಿ ಲೂಟಿ ಹೊಡೆಯುವುದಕ್ಕೆ ಅಲ್ಲ

ಮೂಲ ಒಪ್ಪಂದ ತಿರುಚಿ ಚೌಕಟ್ಟಿನ ಒಪ್ಪಂದಕ್ಕೆ (ಫ್ರೇಮ್ ವರ್ಕ್ ಅಗ್ರಿಮೆಂಟ್) ಸಹಿ ಯಾರು?

ಬೆಂಗಳೂರು: ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ಇದ್ದರೆ ನಮ್ಮ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಜಾತ್ಯತೀತ ಜನತಾದಳ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ವಿರುದ್ಧ ಸಂಸದ ಡಿ.ಕೆ.ಸುರೇಶ್ ಮಾಡಿದ್ದ ಟೀಕೆಗಳಿಗೆ ತಿರುಗೇಟು ನೀಡಿದರು.ನೈಸ್ ಯೋಜನೆಗಳ ಅಕ್ರಮಗಳಿಗೆ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಕಾರಣ. ಈ ವಿಷಯ ಇಡೀ ರಾಜ್ಯಕ್ಕೆ ಗೊತ್ತಿದೆ. ನೈಸ್ ಅಕ್ಕಪಕ್ಕ ಜಮೀನುಗಳನ್ನು ಯಾರು ಕೊಳ್ಳೆ ಹೊಡೆದಿದ್ದಾರೆ ಎನ್ನುವುದೂ ತಿಳಿದಿದೆ ಎಂದು ಅವರು ನೇರ ಆರೋಪ ಮಾಡಿದರು.

ನೈಸ್ ಯೋಜನೆಗೆ ಸಹಿ ಹಾಕಿದ್ದು ಅಂದಿನ ಮುಖ್ಯಮಂತ್ರಿ ದೇವೇಗೌಡರು ಎಂದು ಡಿಕೆ ಸುರೇಶ್ ನೀಡಿದ್ದ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು; ದೇವೇಗೌಡರು ಸಹಿ ಹಾಕಿದ್ದು ರಸ್ತೆ ಮಾಡಲಿಕ್ಕೆ. ಅಲ್ಲಿನ ಭೂಮಿ ಲಪಟಾಯಿಸುವುದಕ್ಕೆ ಅಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ನೈಸ್ ವಿಚಾರ ಇಟ್ಟುಕೊಂಡು ಕುಮಾರಸ್ವಾಮಿ ವ್ಯವಹಾರ ಮಾಡುತ್ತಾರೆ ಎಂಬ ಡಿಕೆ ಸುರೇಶ್ ಹೇಳಿಕೆಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು; ಅವನ (ನೈಸ್) ಜತೆ ಶಾಮೀಲಾಗಿ ಜಮೀನು ಲೂಟಿ ಹೊಡೀಲಿ ಅಂತ ದೇವೇಗೌಡರು ಸಹಿ ಹಾಕಿದ್ರಾ? ಒಂದು ಸಣ್ಣ ಸಾಕ್ಷಿ ಇದ್ದರೆ ತೋರಿಸಲಿ, ದೇವೇಗೌಡರ ಕುಟುಂಬವೇ ರಾಜಕೀಯ ನಿವೃತ್ತಿ ಹೊಂದುತ್ತೇವೆ ಎಂದು ಕಿಡಿಕಾರಿದರು.

ಮೂಲ ಒಪ್ಪಂದ ತಿರುಚಿ ಚೌಕಟ್ಟಿನ ಒಪ್ಪಂದಕ್ಕೆ (ಫ್ರೇಮ್ ವರ್ಕ್ ಅಗ್ರಿಮೆಂಟ್) ಸಹಿ ಯಾರು ಹಾಕಿದ್ದು ಯಾರೆಂದು ಗೊತ್ತಿದೆಯಾ ಅವನಿಗೆ? ಆವತ್ತಿನ ನಗರಾಭಿವೃದ್ಧಿ ಸಚಿವರಾಗಿ ಇದ್ದಿದ್ದು ಯಾರು? ಇವನ ಅಣ್ಣನೇ ಅಲ್ವಾ? ಆತನೇ ತಾನೇ ಈ ಒಪ್ಪಂದಕ್ಕೆ ಸಹಿ ಹಾಕಿದ್ದು. ಲೂಟಿ ಹೊಡೆದ ಭೂಮಿಯನ್ನು ಯಾರ ಹೆಸರಿಗೆ ಮಾಡಲು ಹೊರಟಿದ್ದಾರೆ ಅವರು? 2,000 ಎಕರೆ ಭೂಮಿಯನ್ನು ಯಾರ ಹೆಸರಿಗೆ ಮಾಡಿಕೊಳ್ಳೊಕೆ ಹೊರಟಿದ್ದಾರೆ? ಅವರ ಕುಟುಂಬವೇ ನುಂಗಲು ಹೊರಟಿದೆ. ಇಂಥವರು ನಮ್ಮ ಕುಟುಂಬದ ಬಗ್ಗೆ ಮತಾಡ್ತಾರೆ ಎಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು

ರಾಜ್ಯವನ್ನು ಮಾರಾಟ ಮಾಡುತ್ತಿದ್ದಾರೆ

ಶಿಕ್ಷಣ ಇಲಾಖೆಯಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಸಭೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯವನ್ನು ಮಾರಾಟ ಮಾಡಲು ಹೊರಟಿದ್ದಾರೆ ಇವರು. ಬಡ ಮಕ್ಕಳಿಗೆ ಶಿಕ್ಷಣ ಕೊಡಲು ಇವರಿಗೆ ಯೋಗ್ಯತೆ ಇಲ್ಲ. ನಮ್ಮ ರಾಜ್ಯದಲ್ಲಿಯೇ ಈಸ್ಟ್ ಇಂಡಿಯಾ ಕಂಪನಿಗಳಿವೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷ್ಯ ಬೇಕಾ ಎಂದು ಪ್ರಶ್ನಿಸಿದರು.

ನನಗೆ ಜನ ರೆಸ್ಟ್ ಕೊಟ್ಟಿದ್ದಾರಂತೆ. ಇವರಿಗೂ ರೆಸ್ಟ್ ಕೊಡುವ ಕಾಲ ಹತ್ತಿರದಲ್ಲೇ ಇದೆ. ನನಗೆ ಬೆದರಿಕೆ ಹಾಕುವುದು ಬೇಡ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದಂತೆ ನನಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ನೀವು, ನಿಮ್ಮ ಅಣ್ಣ ಬೆದರಿಕೆ ನಮಗೆ ಹಾಕಲು ಆಗಲ್ಲ ಎಂದು ಡಿಕೆ ಸಹೋದರರ ವಿರುದ್ಧ ಹರಿಹಾಯ್ದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ 40 ಪರ್ಸೆಂಟ್ ಬಗ್ಗೆ ತನಿಖೆ ಮಾಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ ಅವರು; 2016-17ರಲ್ಲಿ ಜಾಬ್ ಕಾರ್ಡ್ ದು ಇದೇ ನಾಗಮೋಹನ್ ದಾಸ್ ಅವರ ಬಳಿ ತನಿಖೆ ಮಾಡಿಸಿದ್ದರು. ಅದು ಎಲ್ಲಿದೆ? ಆ ವರದಿ ಕಥೆ ಏನಾಯಿತು? ನ್ಯಾಯಮೂರ್ತಿ ವೀರಪ್ಪ ಅವರ ನೇತೃತ್ವದಲ್ಲಿ ತನಿಖೆ ಎಂದರು.

ಬಹುಶಃ ಅವರು ಒಪ್ಪಿಲ್ಲ ಅಂತ ಕಾಣುತ್ತೆ. ಹಾಗಾಗಿ ಇವರಿಗೆ ವಹಿಸಿದ್ದಾರೆ ಅನಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡರು ಅವರು.ನಾಗಮೋಹನ್ ದಾಸ್ ಅವರ ಕೈಲಿ ತನಿಖೆ ಮಾಡಿಸಿ, ಆ ವರದಿ ಹಾಗೆ ಇಟ್ಟುಕೊಳ್ಳುತ್ತಾರೆ ಅಷ್ಟೆ. ಅದರ ಫಲಿತಾಂಶ ಹೇಗಿರುತ್ತದೆ ಎನ್ನುವುದು ಗೊತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Tags: BengaluruCongressDK Shivakumardk sureshjdskarnatakaLand grabbingnice road
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅನಿವಾರ್ಯವಾಗಿ ರಾಜಕಾರಣಕ್ಕೆ ಬಂದು ಹುತಾತ್ಮರಾದರು ರಾಜೀವ್ ಗಾಂಧಿ

ಅನಿವಾರ್ಯವಾಗಿ ರಾಜಕಾರಣಕ್ಕೆ ಬಂದು ಹುತಾತ್ಮರಾದರು ರಾಜೀವ್ ಗಾಂಧಿ

Leave a Reply Cancel reply

Your email address will not be published. Required fields are marked *

Recommended

ಭಾರತದ ಸಂಧು ಭುವನ ಸುಂದರಿ

ಭಾರತದ ಸಂಧು ಭುವನ ಸುಂದರಿ

4 years ago
ಶಾಸಕರ ಭವನಕ್ಕೆ ಮೊಟ್ಟೆ ನಿರ್ಬಂಧ

ಶಾಸಕರ ಭವನಕ್ಕೆ ಮೊಟ್ಟೆ ನಿರ್ಬಂಧ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ