• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ 24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು

cknewsnow desk by cknewsnow desk
August 21, 2023
in STATE
Reading Time: 1 min read
0
ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ  24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು
1k
VIEWS
FacebookTwitterWhatsuplinkedinEmail

ಸಣ್ಣ ನೀರಾವರಿ ಸಚಿವ ಎನ್‌ ಎಸ್‌ ಬೋಸರಾಜು ಗಡವು

ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಜತೆ ಚರ್ಚೆ
ಹೊಸಕೋಟೆ ತಾಲ್ಲೂಕಿನ ಕೆರೆಗಳಿಗೆ ಸಂಬಂಧಿಸಿದ ಸಂಸ್ಕರಿಸಿದ ತ್ಯಾಜ್ಯ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಬಗ್ಗೆ ಚರ್ಚೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೆರೆಗಳಿಗೆ ಸಂಬಂಧಿಸಿದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿರುವ ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ 24 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಮಾರ್ಚ್‌ 31ರೊಳಗಾಗಿ ಮುಗಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೋಯ್ಲಿ, ಹೊಸಕೋಟೆ ಶಾಸಕರಾದ ಶರತ್‌ ಬಚ್ಚೇಗೌಡ ಭಾಗವಹಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೆರೆಗಳಿಗೆ ಸಂಬಂಧಿಸಿದ ಸಂಸ್ಕರಿಸಿದ ತ್ಯಾಜ್ಯ ನೀರನ್ನ ತುಂಬಿಸುವ ಏತ ನೀರಾವರಿ ಯೋಜನೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಸಚಿವರು ಕಾಮಾಗಾರಿಗಳ ಪ್ರಗತಿಯ ಬಗ್ಗೆ ಜನಪ್ರತಿನಿಧಿಗಳಿಗೆ ವಿವರಿಸಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ ಮಾತನಾಡಿ, ಸಂಸ್ಕರಿಸಿದ ತ್ಯಾಜ್ಯ ನೀರನ್ನ ಕೆರೆಗಳಿಗೆ ತುಂಬಿಸುವ ಏತ ನೀರಾವರಿ ಯೋಜನೆಯಿಂದಾಗಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಬಹಳಷ್ಟು ಅನುಕೂಲವಾಗಿದೆ. ಅಂತರ್ಜಲ ಹೆಚ್ಚಳವಾಗಿದ್ದು, ರೈತರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಬಾಗೇಪಲ್ಲಿ ಕ್ಷೇತ್ರದ 24 ಮತ್ತು ಹೊಸಕೋಟೆ ಭಾಗದ 43 ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಚುರುಕುಗೊಳಿಸಬೇಕಾದಂತಹ ಅವಶ್ಯಕತೆಯಿದೆ. ಈ ಕಾಮಗಾರಿ ಈಗಾಗಲೇ ಮುಗಿಯಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿಗಳು ವೇಗವನ್ನು ಪಡೆದುಕೊಳ್ಳದೇ ಇರುವುದರ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು.

ಬಾಗೇಪಲ್ಲಿಯ 24 ಕೆರೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನ ಚುರುಕುಗೊಳಿಸಬೇಕು. ಗುತ್ತಿಗೆದಾರರು ಕಾಲಮಿತಿಯಲ್ಲಿ ಕಾಮಗಾರಿಯನ್ನು ಮುಗಿಸುವಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಸಮರೋಪಾದಿಯಲ್ಲಿ ಕಾಮಗಾರಿಗಳನ್ನು ಕೈಗೊಂಡು ಮಾರ್ಚ್‌ 21, 2024 ರೊಳಗಾಗಿ ಕೆರೆ ತುಂಬಿಸುವ ಕಾರ್ಯದ ಉದ್ಘಾಟನೆಯಾಗಬೇಕು. ಈ ನಿಟ್ಟಿನಲ್ಲಿ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಗಡುವು ನೀಡಿದರು.

ಕಲುಷಿತ ನೀರು ಕೆರೆಗಳಿಗೆ ಸೇರದಂತೆ ಕ್ರಮವಹಿಸಿ:
ಕಲುಷಿತ ನೀರು ಕೆರೆಗಳಿಗೆ ಸೇರದಂತೆ ಕ್ರಮವನ್ನು ವಹಿಸಬೇಕಾದ ಜವಾಬ್ದಾರಿಯ ಆಯಾ ಸ್ಥಳೀಯ ಸಂಸ್ಥೆಗಳ ಮೇಲಿದೆ. ಆದರೆ, ಈ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳೂ ಕೂಡಾ ಗಮನ ಹರಿಸಬೇಕಾದ ಅಗತ್ಯವಿದೆ. ಸಂಸ್ಕರಿತ ತ್ಯಾಜ್ಯ ನೀರಿನ ಪರಿಶೀಲನೆ ಮಾಡುವುದು ಮತ್ತು ಕಲುಷಿತ ನೀರು ಕೆರೆ ಸೇರದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸಕೋಟೆ ತಾಲ್ಲೂಕಿನ 43 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ಭರ್ತಿಗೆ ಗಡುವು

ಹೊಸಕೋಟೆ ತಾಲ್ಲೂಕಿನ 43 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ತುಂಬಿಸುವ ಏತ ನೀರಾವರಿಯ ಕಾಮಗಾರಿ ಎರಡು ಹಂತದಲ್ಲಿ ನಡೆಯುತ್ತಿದೆ. ಮೇಡೇಹಳ್ಳಿ ಮತ್ತು ಕಾಡು ಬೀಸನಹಳ್ಳಿ ಭಾಗದ ಕಾಮಾಗಾರಿಯನ್ನು ಸೆಪ್ಟೆಂಬರ್‌ 15 ರ ಒಳಗಾಗಿ ಮುಗಿಸಿ ಟ್ರಯಲ್‌ ರನ್‌ ಪ್ರಾರಂಭ ಮಾಡಬೇಕು. ಅಲ್ಲದೇ ಕೆಆರ್‌ ಪುರಂನ ವ್ಯಾಪ್ತಿಯಲ್ಲಿನ ಕಾಮಗಾರಿಗಳನ್ನ ಅಕ್ಟೋಬರ್‌ 30 ರೊಳಗಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಹೊಸಕೋಟೆ ಶಾಸಕರಾದ ಶರತ್‌ ಬಚ್ಚೇಗೌಡ, ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಯತೀಶ್‌ ಚಂದ್ರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags: bagepallibengaluru waste waterckcknewsnowhoskoteMinister bosarajuveerappa moilywater
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?

ಲೂಟಿ ಹೊಡೆಯೋದು ನಿಲ್ಲಿಸಿದರೆ ನನ್ನ ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ

Leave a Reply Cancel reply

Your email address will not be published. Required fields are marked *

Recommended

ಇದ್ದ ಬುದ್ಧಿ ಬಳಸಿ, ಸಾಧ್ಯವಾದರೆ ಬೆಳೆಸಿ ಎನ್ನುತ್ತಿದ್ದರು ಕಾರಂತರು

ಇದ್ದ ಬುದ್ಧಿ ಬಳಸಿ, ಸಾಧ್ಯವಾದರೆ ಬೆಳೆಸಿ ಎನ್ನುತ್ತಿದ್ದರು ಕಾರಂತರು

5 years ago
ಬಾಗೇಪಲ್ಲಿ: ಭೂಕಂಪದ ತೀವ್ರತೆ ಎಷ್ಟು?

ಬಾಗೇಪಲ್ಲಿ: ಭೂಕಂಪದ ತೀವ್ರತೆ ಎಷ್ಟು?

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ