• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

cknewsnow desk by cknewsnow desk
September 10, 2023
in NATION, POLITICS, STATE
Reading Time: 1 min read
0
ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್
957
VIEWS
FacebookTwitterWhatsuplinkedinEmail


ಪ್ರತೀ ಚದರಅಡಿಗೆ ₹100 ಫಿಕ್ಸ್;‌ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ.ಕುಮಾರಸ್ವಾಮಿ


ನೈಸ್‌ ಅಕ್ರಮದಲ್ಲಿ 2-3 ಲಕ್ಷ ಕೋಟಿ ಮೌಲ್ಯದ ಭೂಮಿ ಗುಳುಂ; ಪ್ರಭಾವೀ ಸಚಿವರೇ ಶಾಮೀಲು

ವಿದ್ಯುತ್‌ ಖರೀದಿಯಲ್ಲೂ ಕಾಂಗ್ರೆಸ್‌ ಸರಕಾರಕ್ಕೆ ಹಬ್ಬ ಎಂದ ಮಾಜಿ ಸಿಎಂ

ಬೆಂಗಳೂರು: ಕಾಸಿಗಾಗಿ ಪೋಸ್ಟಿಂಗ್‌, ಗುತ್ತಿಗೆದಾರರಿಂದ ಹಣ ಸುಲಿಗೆ ಸೇರಿ ಕಾಂಗ್ರೆಸ್‌ ಸರಕಾರದ ಮೇಲೆ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಿಯಲ್‌ ಎಸ್ಟೇಟ್‌ ಬಿಲ್ಡರುಗಳಿಂದ ಈ ಸರಕಾರದ ಪ್ರಭಾವಿಗಳು 2,000 ಕೋಟಿ ರೂಪಾಯಿ ಸುಲಿಗೆ ಮಾಡಲು ಹೊರಟಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ದೊಡ್ಡ ಬಿಲ್ಡರುಗಳ ಸಭೆ ಮಾಡಿರುವ ಪ್ರಭಾವಿಗಳು, ಲೋಕಸಭೆ ಚುನಾವಣೆಯ ನೆಪ ಇಟ್ಟುಕೊಂಡು ಬಿಲ್ಡರುಗಳಿಂದ ಪ್ರತೀ ಚದರ ಅಡಿಗೆ 100 ರೂಪಾಯಿ ಲೆಕ್ಕದಲ್ಲಿ ವಸೂಲಿಗೆ ಇಳಿದಿದ್ದಾರೆ. ಆ ಮೂಲಕ ಭರ್ತಿ 2,000 ಕೋಟಿ ರೂಪಾಯಿ ಸಂಗ್ರಹಕ್ಕೆ ಗುರಿ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಹೆಸರಿಗೆ ʼಇಂಡಿಯಾʼ ಎಂದು ಕೂಟ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಯೇ ನಾಮಕರಣ ಮಾಡಿಕೊಂಡರು. ಈಗ ಅದೇ ʼಇಂಡಿಯಾʼ ಹೆಸರಿನಲ್ಲಿ ನಾಡಿನ ಸಂಪತ್ತು ಲೂಟಿ ಮಾಡಲು ಹೊರಟಿದ್ದಾರೆ. ಬಿಲ್ಡರುಗಳ ಸಭೆ ನಡೆಸಿ ಇಷ್ಟಿಷ್ಟು ಕಪ್ಪ ಒಪ್ಪಿಸಲೇಬೇಕು ಎಂದು ಡಿಮಾಂಡ್‌ ಮಾಡಿದ್ದಾರೆ. ಅವರಿಗೆ ಜನರು ಪೆನ್ನು ಪೇಪರ್‌ ಕೊಟ್ಟಿದ್ದು ಈ ರೀತಿ ಸುಲಿಗೆ ಮಾಡಲಿಕ್ಕಾಗಿಯೇ ಎಂದು ಯಾರ ಹೆಸರನ್ನೂ ಹೇಳದೇ ದೂರಿದರು ಮಾಜಿ ಮುಖ್ಯಮಂತ್ರಿಗಳು.

ನೈಸ್‌ ಅಕ್ರಮದಲ್ಲಿ 2-3 ಲಕ್ಷ ಕೋಟಿ ಮೌಲ್ಯದ ಭೂಮಿ ಗುಳುಂ

ಬೆಂಗಳೂರು-ಮೈಸೂರು ಮೂಲಭೂತ ಕಾರಿಡಾರ್‌ ಯೋಜನೆ (ನೈಸ್‌ ರಸ್ತೆ) ಬಹುಕೋಟಿ ರೂಪಾಯಿಗಳ ಅತಿದೊಡ್ಡ ಹಗರಣವಾಗಿದ್ದು, ಸುಮಾರು 2-3 ಲಕ್ಷ ಕೋಟಿ ರೂ. ಮೌಲ್ಯದ ಭೂಮಿಯನ್ನು ಪಟ್ಟಭದ್ರರು ನುಂಗಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರೈತರಿಂದ ಕಸಿದುಕೊಂಡಿರುವ ಈ ಭೂಮಿಯನ್ನು ವಾಪಸ್‌ ಪಡೆದು ರೈತರಿಗೆ ಮರು ಹಸ್ತಾಂತರ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರಲ್ಲದೆ; ನೈಸ್‌ ಭೂ ಕರ್ಮಕಾಂಡದಲ್ಲಿ ಈ ಸರಕಾರದ ಪ್ರಭಾವೀ ಸಚಿವರೊಬ್ಬರು ನೇರವಾಗಿ ಶಾಮೀಲಾಗಿದ್ದಾರೆ. ಆ ಕಂಪನಿ ಜತೆ ಕೈಜೋಡಿಸಿ ಸಾವಿರಾರು ಕೋಟಿ ರೂ. ಬೆಲೆಯ ರೈತರ ಭೂಮಿಯನ್ನು ಲೂಟಿ ಮಾಡಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ನನಗೂ ಒಮ್ಮೆ ಪೆನ್ನು ಪೇಪರ್‌ ಕೊಡಿ ಎಂದು ಚುನಾವಣೆಗೂ ಮುನ್ನ ಜನರಿಗೆ ದುಂಬಾಲು ಬಿದ್ದಿದ್ದರು ಅವರು ಎಂದು ಪದೇಪದೆ ಕೆಣಕಿದ ಅವರು; ಪೆನ್ನು, ಪೇಪರ್ ಸಿಕ್ಕಿದ ಮೇಲೆ ಜನರ ಸಂಪತ್ತನ್ನು ಎಗ್ಗಿಲ್ಲದೆ ಕೊಳ್ಳೆ ಹೊಡೆಯುತ್ತಿದ್ದಾರೆ. ಅವರೂ ನೈಸ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

14 ಸಾವಿರ ಎಕರೆ ಹೆಚ್ಚುವರಿ ಭೂಮಿ

ರೈತರಿಂದ ಈ ಯೋಜನೆಗೆ 14 ಸಾವಿರ ಎಕರೆ ಭೂಮಿಯನ್ನು ಹೆಚ್ಚುವರಿಯಾಗಿ ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಅದನ್ನು ಕೂಡಲೇ ವಾಪಸ್ ಪಡೆಯಬೇಕು. ಸಿದ್ದರಾಮಯ್ಯ ಅವರೇ ಎರಡನೇ ಬಾರಿಗೆ ಸಿಎಂ ಆಗಿದ್ದಾರೆ. ಪೂರ್ಣ ಬಹುಮತವೂ ಇದೆ. ರೈತರ ಬಗ್ಗೆ ಕಾಳಜಿ ಇದ್ದರೆ, ಅವರನ್ನು ಉಳಿಸಬೇಕಲ್ಲವೇ? ಹಾಗಿದ್ದರೆ ಕೂಡಲೇ ಕ್ರಮ ತೆಗೆದುಕೊಳ್ಳಿ. ದಮ್ಮು, ‌ತಾಕತ್ತಿನ ಬಗ್ಗೆ ಹೇಳುತ್ತೀರಲ್ಲ, ನಿಮಗೆ ದಮ್ಮು ತಾಕತ್ತು ಇದ್ದರೆ ರೈತರ ಜಮೀನು ವಾಪಸ್ ಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.

ಸಿಂಗಾಪುರಕ್ಕೆ ಬಂದಿದ್ದ ನೈಸ್‌ ಕುಳ

ನಾನೊಮ್ಮೆ ಮುಖ್ಯಮಂತ್ರಿ ಆಗಿದ್ದಾಗ ಸಿಂಗಾಪುರಕ್ಕೆ ಅಧಿಕೃತ ಪ್ರವಾಸಕ್ಕೆ ಹೋಗಿದ್ದೆ. ಅಲ್ಲಿಗೆ ಈ ನೈಸ್‌ ಕಂಪನಿಯವನು ವ್ಯವಹಾರ ಕುದುರಿಸಲು ಬಂದಿದ್ದ ವಿಧಾನಸೌಧದ ಮೂರನೇ ಮಹಡಿಗೆ ಬಾ ಎಂದು ಉಗಿದು ಕಳಿಸಿದೆ. ಅವತ್ತು ನಾನು ಆ ಪಾಪದ ಕೆಲಸಕ್ಕೆ ಕೈ ಜೋಡಿಸಲಿಲ್ಲ. ಅಂದು ಈ ಬಗ್ಗೆ ನಾನೇನು ಅಂದುಕೊಂಡಿದ್ದೆನೋ ಈಗ ಅದೇ ನಡೆಯುತ್ತಿದೆ. ಟಿ.ಬಿ.ಜಯಚಂದ್ರ ಅವರು ಕೊಟ್ಟಿರುವ ಸದನ ಸಮಿತಿ ವರದಿ ಇದೆ. ಆ ವರದಿಯಲ್ಲಿ ನೈಸ್‌ ಅಕ್ರಮದ ವಿರಾಟ್‌ ರೂಪವೇ ತೆರೆದುಕೊಂಡಿದೆ. ಆಗ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೂ ಸದನ ಸಮಿತಿ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ನೈಸ್‌ ರಸ್ತೆ ಬೇಕೆಂದು ಬಯಸಿದ್ದು ದೇವೇಗೌಡರೇ. ಆ ಯೋಜನೆಯಲ್ಲಿ ರೈತರ ಭೂಮಿ ಹೊಡೆಯಲು ಹೊರಟಾಗ ಬೀದಿಗಿಳಿದು ಹೋರಾಟ ಮಾಡಿದ್ದು ಕೂಡ ದೇವೇಗೌಡರೇ. ಅವರು ರಸ್ತೆ ಆಗಲಿ ಎಂದು ಸಹಿ ಹಾಕಿದ್ದರು. ಆದರೆ, ಇಲ್ಲೊಬ್ಬರು ನನ್ನನ್ನು ಅಣ್ಣಾ ಅಂತ ಕರೆಯುವ ವ್ಯಕ್ತಿ ರೈತರ ಭೂಮಿ ಲಪಟಾಯಿಸಲು ಜನರಿಂದ ಪೆನ್ನು, ಪೇಪರ್‌ ಪಡೆದುಕೊಂಡಿದ್ದಾರೆ. ನಾನು ಪ್ರಾಣ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಅಂಥವರಿಗೆ ಎರಡು ಕೋಟಿ ದಂಡ ವಿಧಿಸಿದ ಕಾನೂನು ವ್ಯವಸ್ಥೆ ನಮ್ಮಲ್ಲಿದೆ. ಆದರೂ ಅವರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾನು ಹೇಳುವುದಿಷ್ಟೇ. 2018ರಲ್ಲಿ ನೀವೇ ಸಿಎಂ ಆಗಿದ್ದಿರಿ. ಆಗಲೇ ನೈಸ್‌ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಬಹುದಿತ್ತಲ್ಲವೇ ಎಂದು ಕೇಳಬಹುದು. ಆಗ ನನಗೆಲ್ಲಿ ಮಾಡಲು ಬಿಟ್ಟರು, ನಾನು ಅವರ ಹಂಗಿನಲ್ಲಿದ್ದೆ. ಅವತ್ತು ನಾನು ವಿಷಕಂಠನಾಗಿದ್ದೆ. ಕಾರ್ಯಕರ್ತರ ನೋವು ಗೊತ್ತಿತ್ತು ಎಂದು ಅವರು ಹೇಳಿದರು.

ವಿದ್ಯುತ್‌ ಖರೀದಿಯಲ್ಲಿ ಹಬ್ಬ

ಕಾಂಗ್ರೆಸ್‌ ಸರಕಾರ ಎಲ್ಲಾ ಇಲಾಖೆಗಳಲ್ಲಿಯೂ ಲೂಟಿಗೆ ಟಾಋಗೆಟ್‌ ಫಿಕ್ಸ್‌ ಮಾಡಿಕೊಂಡಿದೆ. ಈಗ ಇಂಧನ ಇಲಾಖೆಯಲ್ಲು ಮೇಯಲು ಹೊರಟಿದೆ. ವಿದ್ಯುತ್ ಖರೀದಿಗೆ ಹೊರಟಿದ್ದಾರೆ, ವಿದ್ಯುತ್‌ ಖರೀದಿ ಎಂದರೆ ಇವರಿಗೆ ಹಬ್ಬ. ಖರೀದಿ‌ ಮಾಡಿದಷ್ಟು ಕಿಕ್ ಬ್ಯಾಕ್ ಜಾಸ್ತಿ. ಪ್ರತಿ ತಿಂಗಳು 1,500 ಕೋಟಿ ರೂ. ಖರ್ಚು ಮಾಡೋದಕ್ಕೆ ಹೊರಟಿದ್ದಾರೆ. ಇದರಲ್ಲಿ ಎಷ್ಟು ಹೊಡೆಯುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದರು.

ರಾಜ್ಯದ ಉದ್ದಗಲಕ್ಕೂ ಈಗ ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ. ರೈತರಿಗೆ ಸರಿಯಾಗಿ ಕರೆಂಟ್ ಕೊಡುತ್ತಿಲ್ಲ. ಈಗ ದೀಪಾವಳಿಗೆ ಮನೆಮನೆಗೂ ಮಣ್ಣಿನದೀಪ ಕೊಡಲು ಹೊರಟಿದ್ದಾರೆ. ಎಲ್ಲಿ ಕೊಟ್ಟಿದ್ದೀರಿ 200 ಯುನಿಟ್ ವಿದ್ಯುತ್ ಶಿವಕುಮಾರ್, ಸಿದ್ದರಾಮಯ್ಯನವರೇ? ಕಾಕಾ ಪಾಟೀಲ್ ಗೂ ಫ್ರೀ, ಮಹಾದೇವಪ್ಪಗೂ ಫ್ರೀ ಅಂದರು.‌ ಎಲ್ಲಿದೆ ಫ್ರೀ? ಸರಾಸರಿ ಅಂತ ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದೆ ಈ ಸರಕಾರ. ಆದರೂ ನುಡಿದಂತೆ ನಡೆದಿದ್ದೇವೆ ಎಂದು ಪೊಳ್ಳು ಹೇಳುತ್ತಿದ್ದಾರೆ ಎಂದು ಅವರು ಆರೋಪ ಮಾಡಿದರು.
2006ರಲ್ಲಿ ಬಿಜೆಪಿ ಜತೆ ಸರಕಾರ ರಚನೆ ಮಾಡಿದ್ದೆ. ಆಗ ದೇವೇಗೌಡರು ತೀವ್ರ ಅನಾರೋಗ್ಯಕ್ಕೆ ತುತ್ತಾದರು. ಅವತ್ತು ಬಿಜೆಪಿ ಅವರು ಬಂದು ಸರಕಾರ ಮಾಡೋಣ ಎಂದರು. ಆ ಸಂದರ್ಭದಲ್ಲಿ ನಾನು ಎಂ.ಪಿ.ಪ್ರಕಾಶ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಆಗಿ ಎಂದು ಮನವಿ ಮಾಡಿಕೊಂಡೆ. ಅವರು ಒಪ್ಪಲಿಲ್ಲ. ಪಕ್ಷ ಉಳಿಸಲು ನಾನು ಬಿಜೆಪಿ ಜತೆ ಸರಕಾರ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆ ದಿನಗಳನ್ನು ನೆನಪು ಮಾಡಿಕೊಂಡರು.

ಅವತ್ತು ಇದೇ ಡಿ.ಕೆ.ಶಿವಕುಮಾರ್ ಅವರು ನನ್ನ ಜತೆಯಲ್ಲಿ ಇದ್ದರು. ನನ್ನ ಕೈಯ್ಯನ್ನೂ ಮೇಲೆ ಎತ್ತಿದ್ದರು. ನಮ್ಮಿಬ್ಬರನ್ನು ಜೋಡೆತ್ತು ಅಂತ ಕರೆಯುತ್ತಿದ್ದರು. ಮಂಡ್ಯದ ಲೋಕಸಭೆ ಚುನಾವಣೆಯಲ್ಲಿ ನನ್ನ ಕೈಯ್ಯೆತ್ತಿ ಎತ್ತಿಗಾಡಿ, ಎತ್ತುಗಳನ್ನು ಹೈಜಾಕ್‌ ಮಾಡಿಕೊಂಡು ಹೋದರು. ನನ್ನ ನಡುರಸ್ತೆಯಲ್ಲಿ ಬಿಟ್ಟುಹೋದರು. ನಾನು ಅವರಿಗೆ ಮರುಳಾಗಿ ಹೋದೆ. ನಾನು ಅವರು ಬದಲಾಗಿರಬಹುದು ಎಂದು ನಂಬಿ ಮೋಸ ಹೋದೆ. ಈಗ ಸಿದ್ದರಾಮಯ್ಯ ಅವರ ಕೈ ಮೇಲೆತ್ತಿ ದಿನವೂ ಪೋಸು ಕೊಡುತ್ತಿದ್ದಾರೆ. ಅದೆಷ್ಟು ದಿನ ಅಂತ ನೋಡೋಣ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಗ್ಯಾರಂಟಿಗಳ ನೆಪ ಹೇಳಿ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿದ್ದಾರೆ. ಜನರಿಗೆ ಟೋಪಿ ಹಾಕುತ್ತಿದ್ದಾರೆ. ಕರ್ನಾಟಕ ಸಂಪದ್ಭರಿತ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನೈಸ್‌ ಒಂದು ಯೋಜನೆಯನ್ನು ಸರಕಾರದ ವಶಕ್ಕೆ ತೆಗೆದುಕೊಂಡರೆ ಇಂಥ ನೂರು ಗ್ಯಾರಂಟಿಗಳನ್ನು ಜಾರಿಗೆ ತರಬಹುದು. ಅಲ್ಲಿನ ಹೆಚ್ಚುವರಿ ಭೂಮಿಯನ್ನು ಕೂಡಲೇ ಸರಕಾರ ವಾಪಸ್‌ ಪಡೆಯಬೇಕು ಎಂದು ಅವರು ಒತ್ತಾಯ ಮಾಡಿದರು.

Tags: BuildersckcknewsnowCongresscorruptionDK Shivakumarhd kumaraswamyjdskarnatakareal estatesiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮೈತ್ರಿ ಬಗ್ಗೆ ಕ್ಲಾರಿಟಿ ಕೊಟ್ಟ ದಳಪತಿಗಳು

ಮೈತ್ರಿ ಬಗ್ಗೆ ಕ್ಲಾರಿಟಿ ಕೊಟ್ಟ ದಳಪತಿಗಳು

Leave a Reply Cancel reply

Your email address will not be published. Required fields are marked *

Recommended

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

3 weeks ago
ಹಲೋ ಅಪ್ಪಾ..!

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳಲ್ಲೇ ವರ್ಗದ ಪಟ್ಟಿಯಲ್ಲೂ ಒಳನುಸಳಿದ್ದು ಹೇಗೆ?

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ