• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಆಪರೇಷನ್‌ ಕಮಲ; ಎಚ್ಚರ ತಪ್ಪದಂತೆ ಸಿಎಂ, ಡಿಸಿಎಂಗೆ ಹೈಕಮಾಂಡ್‌ ಕಟ್ಟಪ್ಪಣೆ

cknewsnow desk by cknewsnow desk
November 1, 2023
in NATION, POLITICS, STATE
Reading Time: 1 min read
0
ಆಪರೇಷನ್‌ ಕಮಲ; ಎಚ್ಚರ ತಪ್ಪದಂತೆ ಸಿಎಂ, ಡಿಸಿಎಂಗೆ ಹೈಕಮಾಂಡ್‌ ಕಟ್ಟಪ್ಪಣೆ

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಡಿಸಿಎಂ ಡಿ. ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದರು.

1.1k
VIEWS
FacebookTwitterWhatsuplinkedinEmail

ಕಾಂಗ್ರೆಸ್ ಸರಕಾರ ಪತನ ತಂತ್ರಕ್ಕೆ ಆಪರೇಷನ್ ಹಸ್ತದ ಪ್ರತಿತಂತ್ರ; ಸೇರಿಗೆ ಸವ್ವಾಸೇರು ಎನ್ನುವಂತಿದೆ ಲೆಕ್ಕಾಚಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಅಸ್ಥಿತರಗೊಳಿಸಲು ನಡೆಸುತ್ತಿರುವ ತಂತ್ರಕ್ಕೆ ಪ್ರತಿಯಾಗಿ ಆಪರೇಷನ್ ಹಸ್ತ ಮಾಡಲು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿಸಿದೆ.

ಅಧಿಕಾರ ಹಂಚಿಕೆಯ ಬಿಕ್ಕಟ್ಟು, ಸರಕಾರವನ್ನುಉಳಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಬುಧವಾರ ದಿಢೀರನೆ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಂದೀಪ್ ಸಿಂಗ್ ಸುರ್ಜೆವಾಲ ಅವರು ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿದ್ದಾರೆ.

ಸರಕಾರ ಪತನಗೊಳಿಸಲು ಬಿಜೆಪಿ ಭಾರೀ ಪ್ರಯತ್ನ ನಡೆಸುತ್ತಿದ್ದು,  ಈ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ವಹಿಸಲು ರಾಜ್ಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ.

ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಇಬ್ಬರೂ ಪ್ರಧಾನ ಕಾರ್ಯದರ್ಶಿಗಳು ಸಿಎಂ, ಡಿಸಿಎಂಗೆ ತಾಕೀತು ಮಾಡಿದ್ದಾರೆ. ಅಲ್ಲದೆ, ಪಕ್ಷದ ಕೆಲವು ಮುಖಂಡರ ಚಲನವಲನದ ಬಗ್ಗೆ ಗಮನ ಹರಿಸುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ.

ಮಹಾರಾಷ್ಟ್ರ ಮಾದರಿ ಬಗ್ಗೆಯೂ ಚರ್ಚೆ

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮೈತ್ರಿಕೂಟದ ಸರಕಾರವನ್ನು ತೆಗೆದಂತೆ ಕರ್ನಾಟಕದಲ್ಲಿಯೂ ಸರಕಾರವನ್ನು ಅಸ್ಥಿರಗೊಳಿಸುವ ಸಾಧ್ಯತೆ ಇಲ್ಲದಿಲ್ಲ. ಈ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ. ಅತಿಯಾದ ಆತ್ಮವಿಸ್ವಾಸ ಅಪಾಯಕ್ಕೆ ದಾರಿ ಆಗುತ್ತದೆ ಎಂದು ಅವರು ಎಚ್ಚರಿಕೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ಅಲ್ಲದೆ; ರಾಜ್ಯ ಬಿಜೆಪಿ ನಾಯಕರು ಹಾಗೂ ಜೆಡಿಎಸ್‌ ವರಿಷ್ಠ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ಚಲನವಲನಗಳ ಬಗ್ಗೆಯೂ ನಿಗಾ ಇಡುವಂತೆ ಅವರು ನಾಯಕರಿಬ್ಬರಿಗೆ ತಿಳಿಸಿದ್ದಾರೆ ಎನ್ನುವ ಮಾಹಿತಿಯೂ ಸಿಕೆನ್ಯೂಸ್‌ ನೌ ಗೆ ಲಭ್ಯವಾಗಿದೆ.

ಗೌಪ್ಯ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ ಅವರು; “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು”ಎಂದು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.

ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಮಾತ್ರ ಗಮನಹರಿಸಬೇಕು. ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆಯಷ್ಟೇ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.

ಅಶಿಸ್ತಿನ ಹೆಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾರೇ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ.

ರಂದೀಪ್ ಸಿಂಗ್ ಸುರ್ಜೆವಾಲ

ನಿಮ್ಮ ದನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ. ಇಂದು ನಡೆದ ಸುದೀರ್ಘ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಕರ್ನಾಟಕ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯ ಕೇಂದ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲವು ನಿಶ್ಛಿತವಾಗಿದೆ ಎಂದು ಸುರ್ಜೇವಾಲ ಕಟ್ಟಪ್ಪಣೆ ಮಾಡಿದ್ದಾರೆ.

ಇಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿದ್ದು, ಈ ಪವಿತ್ರ ದಿನ ಎಲ್ಲಾ ಕನ್ನಡಿಗರಿಗೂ ಶುಭಕೊರುತ್ತೇನೆ. ಈ ರಾಜ್ಯವನ್ನು ನಾವೆಲ್ಲ ಒಟ್ಟಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯೋಣ. ಮುಂದಿನ 15 ದಿನಗಳಲ್ಲಿ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಯನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆಯಾದರೂ ಅದಕ್ಕೆ ಸಂಬಂಧಿಸಿದ ಸಚಿವರು ಸಮಸ್ಯೆ ಬಗೆಹರಿಸಲಿದ್ದಾರೆ. ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ

ನಿಗಮ-ಮಂಡಳಿಗೆ ಇನ್ನೂ ಎರಡು ವಾರ ನೇಮಕವಿಲ್ಲ

ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ.”

ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, “ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ.

ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

Tags: ckcknewsnowCongresskarnatakakc venugopaloperation hastaoperation kamalaPoliticsRandeep Surjewala
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆ; 37 ಜನರ ರಕ್ತದ ಸ್ಯಾಂಪಲ್ ಬೆಂಗಳೂರಿಗೆ ರವಾನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆ; 37 ಜನರ ರಕ್ತದ ಸ್ಯಾಂಪಲ್ ಬೆಂಗಳೂರಿಗೆ ರವಾನೆ

Leave a Reply Cancel reply

Your email address will not be published. Required fields are marked *

Recommended

ಚಿಂತಾಮಣಿ ಡಾಕ್ಟರ್‌ಗೆ ಅಬುಧಾಬಿ ಆಸ್ಪತ್ರೆಯಲ್ಲಿ ಬಂಪರ್‌ ಆಫರ್; 1 ಕೋಟಿ ರೂ. ಪ್ಯಾಕೇಜ್

ಚಿಂತಾಮಣಿ ಡಾಕ್ಟರ್‌ಗೆ ಅಬುಧಾಬಿ ಆಸ್ಪತ್ರೆಯಲ್ಲಿ ಬಂಪರ್‌ ಆಫರ್; 1 ಕೋಟಿ ರೂ. ಪ್ಯಾಕೇಜ್

5 years ago
ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ