• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕರ್ನಾಟಕದಲ್ಲಿ ರೈತ ಸಾಂತ್ವನ ಯಾತ್ರೆ

P K Channakrishna by P K Channakrishna
November 4, 2023
in NATION, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
935
VIEWS
FacebookTwitterWhatsuplinkedinEmail

ಬರ, ವಿದ್ಯುತ್ ಕ್ಷಾಮದಿಂದ ಬಳಲಿರುವ ರೈತರಿಗೆ ಸಾಂತ್ವನ ಹೇಳಲಿರುವ ಮಾಜಿ ಸಿಎಂ; ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಮುಖಂಡರ ಜತೆ HDK ರಾಜ್ಯ ಪರ್ಯಟನೆ

ಬೆಂಗಳೂರು: ಬರ, ವಿದ್ಯುತ್ ಕ್ಷಾಮ ಸೇರಿ ಅನೇಕ ಗಂಭೀರ ಸಮಸ್ಯೆಗಳಿಂದ ಬಸವಳಿದಿರುವ ರೈತ ಸಮುದಾಯಕ್ಕೆ ಧೈರ್ಯ ತುಂಬುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಘೋಷಣೆ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬರ ಅಧ್ಯಯನಕ್ಕಾಗಿ ಪಕ್ಷದ ಜಿಲ್ಲಾ ಮಟ್ಟದ ತಂಡಗಳನ್ನು ರಚನೆ ಮಾಡುವ ಸಂಬಂಧ ಕರೆಯಲಾಗಿದ್ದ ಮಹತ್ವದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯ ಪ್ರಕಟಿಸಿದರು.

ಮುಂಬರುವ ವಿಧಾನ ಮಂಡಲ ಅಧಿವೇಶನ ಮುಗಿದ ಕೂಡಲೇ ನಮ್ಮ ಪಕ್ಷದ ಎಲ್ಲಾ ಶಾಸಕರು, ಕೋರ್ ಕಮಿಟಿ ಸದಸ್ಯರು, ಮಾಜಿ ಸಚಿವರು, ಜಿಲ್ಲಾ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರ ಜತೆಗೂಡಿ ಎಲ್ಲಾ ಜಿಲ್ಲೆಗಳಲ್ಲಿ ರೈತ ಸಾಂತ್ವನ ಯಾತ್ರೆ ಮಾಡುತ್ತೇನೆ. ಅವರ ನೋವಿಗೆ ದನಿ ಆಗುತ್ತೇನೆ. ಅವರ ಹಕ್ಕುಗಳಿಗಾಗಿ ಸರಕಾರದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಜ್ಯದಲ್ಲಿ ಈ ವರ್ಷ ಮುಂಗಾರು ಕೃಷಿ ಚಟುವಟಿಕೆಗಳಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡಿ ವರದಿ ಕೊಟ್ಟಿದ್ದಾರೆ. ಕೇಂದ್ರಕ್ಕೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ತೀವ್ರ ಬರಗಾಲ ನೋಡಿರಲಿಲ್ಲ ಅಂತ ಸರಕಾರವೇ ಹೇಳಿದೆ. ಮಳೆ ಅಭಾವದಿಂದ 65 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಾಶ ಆಗಿದೆ ಅಂತ ಕೇಂದ್ರ ಸರಕಾರಕ್ಕೆ ವರದಿಯನ್ನೂ ನೀಡಿದೆ. ಆದರೆ, ರೈತರಿಗೆ ಸಹಾಯ ಹಸ್ತ ಚಾಚುವಲ್ಲಿ ಸೋತಿದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆ ಬೊಟ್ಟು ಮಾಡುತ್ತಿರುವ ಸರಕಾರ

ರಾಜ್ಯ ಕಾಂಗ್ರೆಸ್ ಸರಕಾರವು ಕಳೆದ ಐದು ತಿಂಗಳಿನಿಂದ ವೈಫಲ್ಯಗಳ ಕೂಪದಲ್ಲಿ ಸಿಲುಕಿದೆ. ಈ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಎಲ್ಲದಕ್ಕೂ ಕೇಂದ್ರದ ಕಡೆಗೇ ಬೊಟ್ಟು ಮಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿದೆ. ಇದು ಸರಿಯಲ್ಲ. ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಮಾಡುವ ಬದಲು ಕೇಂದ್ರದ ಬಳಿ ಹೋಗಿ ಪರಿಹಾರ ಕೇಳಬಹುದಿತ್ತಲ್ಲವೇ ಎಂದು ಸಿಎಂ ಹೇಳಿದ್ದಾರೆ. ಸಿಎಂ ಆದವರು ಹೇಳುವ ಮಾತೇ ಇದು? ಎಂದು ಅವರು ತರಾಟೆಗೆ ತೆಗೆದುಕೊಂಡರು.

ಕೇಂದ್ರ ಸರಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡುತ್ತಿಲ್ಲ ಎನ್ನುತ್ತಾರೆ. ವಿದ್ಯುತ್ ಕೊರತೆ ಆದಾಗ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಅಂತಾರೆ. ಎಲ್ಲದಕ್ಕೂ ಕೇಂದ್ರದ ಕಡೆಗೇ ಕೈ ತೋರಿಸುತ್ತಾರೆ. ಹಾಗಾದರೆ, ರಾಜ್ಯ ಸರಕಾರ ಎನ್ನುವುದು ಏತಕ್ಕೆ? ಇಲ್ಲಿ ಕೂತು ಇವರು ಏನು ಮಾಡುತ್ತಿದ್ದಾರೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಬರ ಇದ್ದರೆ ಸಿಎಂ ಡಾನ್ಸ್ ಮಾಡುತ್ತಾರೆ!!

214 ತಾಲೂಕುಗಳಲ್ಲಿ ಬರ ಇದೆ ಅಂತ ಸರಕಾರವೇ ಕೇಂದ್ರಕ್ಕೆ ವರದಿ ಕೊಟ್ಟಿದೆ. ಎಸ್ ಡಿ ಆರ್ ಎಫ್ ನಲ್ಲಿ 529 ಕೋಟಿ ರೂ. ಹಣ ಇಟ್ಟಿದ್ದೇವೆ ಅಂತ ಹೇಳಿಕೆ ಕೊಟ್ಟಿದ್ದಾರೆ ಸಚಿವರು. ಎಲ್ಲಾ ಕಡೆ ಬರ ಪರಿಸ್ಥಿತಿ ಇದೆ ಎಂದು ಮಾದ್ಯಮಗಳಲ್ಲಿ ನಿತ್ಯವೂ ವರದಿಗಳು ಬರುತ್ತಿವೆ. ಮುಖ್ಯಮಂತ್ರಿಗಳು ಎಲ್ಲೋ ಹೋಗಿ ಡಾನ್ಸ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಜನರು ಕಷ್ಟದಲ್ಲಿದ್ದರೆ ಇವರಿಗೆ ಸಂಭ್ರಮವೋ ಸಂಭ್ರಮ! ಸಂಭ್ರಮ ಮಾಡಿಕೊಂಡು ಜನರನ್ನು ಅಣಕ ಮಾಡುತ್ತಿದ್ದಾರೆ. ಅಲ್ಲಿ ರೈತರ ಕಷ್ಟಕ್ಕೆ ಏನಾದರೂ ಪರಿಹಾರ ಕೊಟ್ಟು ಬಂದರಾ ಇವರು ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

2018 ಚುನಾವಣೆಗೆ ಮುನ್ನ ರೈತರಿಗೆ ಹತ್ತು ಸಾವಿರ ಕೊಡುತ್ತೇವೆ ಎಂದು ರೈತರಿಗೆ ಭರವಸೆ ಕೊಟ್ಟಿದ್ದರು ಕಾಂಗ್ರೆಸಿನವರು. ಆದರೆ ಸರಕಾರ ಖಜಾನೆಯಲ್ಲಿ ಹಣ ಇಟ್ಟಿರಲಿಲ್ಲ ಇವರು. ನಂತರ ನಾನು ಮುಖ್ಯಮಂತ್ರಿ ಆದಾಗ ಅದನ್ನು ಕೊಡಲು ಆಗಲಿಲ್ಲ ಎಂದ ಅವರು; ಬಿಜೆಪಿ ಸರಕಾರದಲ್ಲಿ ಕೊಡಲಾಗುತ್ತಿದ್ದ ʼಕಿಸಾನ್ ಸಮ್ಮಾನ್ʼ ಯೋಜನೆಯನ್ನು ಕಾಂಗ್ರೆಸ್ ಸರಕಾರ ನಿಲ್ಲಿಸಿತು. ಗ್ಯಾರಂಟಿ ಎಂದು ಹೇಳಿಕೊಂಡು ಜನರಿಗೆ ಟೋಪಿ ಹಾಕಿದರು ಎಂದು ಅವರು ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆಗೆ ಚಾಟಿ

ಕಲಬುರಗಿ ನಾಯಕರೊಬ್ಬರು ಮೈಸೂರಿನಲ್ಲಿ ಏನೇನನ್ನೋ ಹೇಳಿದ್ದಾರೆ. ಬಿಜೆಪಿಗೆ ನಾಯಕರು ಜಾಬ್‌ಲೆಸ್, ಜೆಡಿಎಸ್ ಪೀಪಲ್‌ಲೆಸ್‌ಎಂದಿದ್ದಾರೆ. ಅದೇನು ಎನ್ನುವುದನ್ನು ನಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೋರಿಸುತ್ತೇವೆ. ಆದರೆ, ಅವರು ಪ್ರತಿನಿಧಿಸುವ ಕಲಬುರಗಿ ಜಿಲ್ಲೆಯ ಜನರಿಗೆ ಏನು ಕೊಟ್ಟಿದ್ದಾರೆ ಎಂದು ಹೇಳಲಿ. ಆ ಜಿಲ್ಲೆಯಲ್ಲಿನ ತೊಗರಿ ಬೆಳೆಗಾರರ ಸಂಕಷ್ಟ ಗೊತ್ತಿದೆಯಾ ಅವರಿಗೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಾಜಿ ಮುಖ್ಯಮಂತ್ರಿಗಳು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ವಿರೋಧ ಪಕ್ಷಗಳು ಟೀಕೆ ಮಾತಾಡಿದ ತಕ್ಷಣ ಅವರಿಗೆ ಏನೂ ಕೆಲಸ ಇಲ್ಲ ಎಂದು ಸರಕಾರ ಅಹಂಕಾರದಿಂದ ಹೇಳುತ್ತದೆ. ಈ ರೀತಿ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಲಿ. ಇಲ್ಲದಿದ್ದರೆ, ಜನರ ಮುಂದೆ ನಿಮ್ಮ ಗೌರವವೇ ಕಡಿಮೆ ಆಗುತ್ತದೆ.

ಹೆಚ್.ಡಿ.ಕುಮಾರಸ್ವಾಮಿ

ಪಕ್ಷದ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಬಂಡೆಪಪ್‌ಕಾಶೆಂಪೂರ್‌, ವೆಂಕಟರಾವ್‌ನಾಡಗೌಡ, ಆಲ್ಕೊಡ್‌ಹನುಮಂತಪ್ಪ, ಶಾಸಕರಾದ ಸಮೃದ್ಧಿ ಮಂಜುನಾಥ್‌, ಸ್ವರೂಪ್‌ಪ್ರಕಾಶ್‌, ನೇಮಿರಾಜ್‌ನಾಯಕ್‌, ಮಾಜಿ ಶಾಸಕ ಆರ್.ಮಂಜಿನಾಥ್‌, ರಾಜಾ ವೆಂಕಟಪ್ಪ ನಾಯಕ್‌, ನಗರ ಜೆಡಿಎಸ್‌ಅಧ್ಯಕ್ಷ ಹೆಚ್.ಎಂ.ರಮೇಶ್‌ಗೌಡ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

Tags: ckcknewsnowdroughtformershd kumaraswamyjdskarnatakanewsraita santwana yatre
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಡಿಕೆಶಿಗೆ ಭರ್ಜರಿ ಆಫರ್‌ ಕೊಟ್ಟ ಹೆಚ್‌ ಡಿಕೆ

Leave a Reply Cancel reply

Your email address will not be published. Required fields are marked *

Recommended

ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ  ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌  ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌ ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

5 years ago
ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

ಕೇಂದ್ರದಿಂದ ರೈತರಿಗೆ 9ನೇ ಕಂತಿನ ಪರಿಹಾರ ಬಿಡುಗಡೆ ಆಗುತ್ತಿದ್ದಂತೆ ರಾಜ್ಯದಲ್ಲೂ 1,023 ಕೋಟಿ ರೂ. ರಿಲೀಸ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ