• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಡಿಕೆಶಿಗೆ ಭರ್ಜರಿ ಆಫರ್‌ ಕೊಟ್ಟ ಹೆಚ್‌ ಡಿಕೆ

P K Channakrishna by P K Channakrishna
November 5, 2023
in NATION, POLITICS, STATE
Reading Time: 1 min read
0
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು
980
VIEWS
FacebookTwitterWhatsuplinkedinEmail

ಡಿ.ಕೆ.ಶಿವಕುಮಾರ್‌ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್‌ʼನ 19 ಶಾಸಕರ ಬೆಂಬಲ

  • ರಾಜ್ಯದಲ್ಲಿರುವುದು TCM & DCM ಸರಕಾರ!! TCM & DCM ಎಂದರೆ ಏನು?
  • 5 ವರ್ಷಗಳಲ್ಲಿ ಎಷ್ಟು ಸಿಎಂಗಳು ಆಗುತ್ತಾರೋ ಗೊತ್ತಿಲ್ಲ
  • ವೈಫಲ್ಯ ಮುಚ್ಚಿ, ಜನರ ಗಮನ ಬೇರೆಡೆಗೆ ಸೆಳೆಯಲು ಆಪರೇಷನ್ ಹಸ್ತದ ನಾಟಕ

ಬೆಂಗಳೂರು: ಕಾಂಗ್ರೆಸ್ ಸರಕಾರದ ದುಸ್ಥಿತಿ ನೋಡಿದರೆ ಐದು ವರ್ಷದಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳಾಗುತ್ತಾರೋ ಗೊತ್ತಿಲ್ಲ. ಸದ್ಯದ ಸ್ಥಿತಿಯನ್ನು ನೋಡಿದರೆ ಈ ಸರಕಾರವನ್ನು ಟಿಸಿಎಂ-TCM (ಟೆಂಪರರಿ ಮುಖ್ಯಮಂತ್ರಿ) ಹಾಗೂ ಡಿಸಿಎಂ-DCM (ಡೂಪ್ಲಿಕೇಟ್ ಮುಖ್ಯಮಂತ್ರಿ ) ಸರಕಾರವೆಂದು ಕರೆಯಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸುವ ಸಂಬಂಧ ಕರೆದಿದ್ದ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದ ಜನರು ಬರಕ್ಕೆ ಸಿಲುಕಿ ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ತಮ್ಮ ಕಣ್ಮುಂದೆಯೇ ಫಸಲು ಬಿಸಲಿನಲ್ಲಿ ಬೆಂದು ಹೋಗುತ್ತಿದ್ದರೆ ಕಣ್ಣೀರು ಹಾಕುತ್ತಿದ್ದಾರೆ. ಇಂಥ ವೇಳೆಯಲ್ಲಿ ಒಬ್ಬರೇನೋ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಇನ್ನೊಬ್ಬರು ಮುಖ್ಯಮಂತ್ರಿ ಆಗಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಉಳಿದವರು ಅನೇಕರು ʼನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿʼ ಎಂದು ಹಾದಿಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಇದೆಲ್ಲಾ ನೋಡಿದರೆ ಈ ಸರಕಾರವನ್ನು ಟಿಸಿಎಂ ಹಾಗೂ ಡಿಸಿಎಂ ಸರಕಾರವೆಂದು ಕರೆಯದೆ ಇನ್ನೇನೆಂದು ಕರೆಯಬೇಕು ಎಂದು ಲೇವಡಿ ಮಾಡಿದರು.

ಯಾರಿಗೂ ಗ್ಯಾರಂಟಿ ಇಲ್ಲದ ಈ ಸರಕಾರದಲ್ಲಿ ಐದು ವರ್ಷದಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳಾಗುತ್ತಾರೋ ಗೊತ್ತಿಲ್ಲ. ಆದರೆ, ೧೩೬ ಶಾಸಕರು ಇರುವ ಈ ಸರಕಾರಕ್ಕೆ ಕೇವಲ ಐದೇ ತಿಂಗಳಲ್ಲಿ ಅಭದ್ರತೆಯ ಭಾವನೆ ಕಾಡುತ್ತಿದೆ. ಅದಕ್ಕಾಗಿ ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ಶಾಸಕರ ಮನೆಗಳ ಮುಂದೆ ಕೈಕಟ್ಟಿಕೊಂಡು ಕಾಂಗ್ರೆಸ್ ನವರು ನಿಲ್ಲುತ್ತಿದ್ದಾರೆ. “ಸರ್ ನೀವು ಬನ್ನಿ, ಅಕ್ಕ ನೀವು ಬನ್ನಿ” ಎಂದು ಗೋಗರೆಯುತ್ತಿದ್ದಾರೆ ಎಂದು ಕುಟುವಾಗಿ ಟೀಕಿಸಿದರು ಮಾಜಿ ಮುಖ್ಯಮಂತ್ರಿಗಳು.

https://www.youtube.com/watch?v=zKBLEIAvbp8
ನೀವು ಮುಖ್ಯಮಂತ್ರಿ ಆಗುತ್ತೀರಾ? 19 ಶಾಸಕರ ಬೆಂಬಲ ಕೊಡುತ್ತೇನೆ!!

ತಮ್ಮ ಮಾತಿನ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರವಾಗಿ ಚಾಟಿ ಬೀಸಿದ ಮಾಜಿ ಮುಖ್ಯಮಂತ್ರಿಗಳು; “ನೀವು ಮುಖ್ಯಮಂತ್ರಿ ಆಗುತ್ತೀರಾ ಹೇಳಿ. ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲವನ್ನೂ ಕೊಡುತ್ತೇವೆ” ಎಂದು ಡಿಕೆಶಿ ಅವರಿಗೆ ಓಪನ್ ಆಫರ್ ಕೊಟ್ಟರು ಕುಮಾರಸ್ವಾಮಿ ಅವರು.

“ಜಿ.ಟಿ.ದೇವೇಗೌಡರನ್ನು ಮಂತ್ರಿ ಮಾಡುತ್ತೇನೆ. ಅವರ ಮಗನಿಗೆ ಇನ್ನೇನೋ ಮಾಡುತ್ತೇನೆ” ಎಂದು ಆಮಿಷ ಒಡ್ಡುತ್ತಿದ್ದಾರೆ. ಕರೆಮ್ಮ ನಾಯಕ್ ಅವರು ತಮ್ಮ ಕ್ಷೇತ್ರದ ಕೆಲಸಕ್ಕಾಗಿ ಮೀಟಿಂಗ್ ಗೆ ಹೋದರೆ, “ಬನ್ನಿ ಅಕ್ಕ ನಮ್ಮ ಪಕ್ಷಕ್ಕೆ” ಅಂತಾರೆ. ನಮ್ಮ ಶಾಸಕರಿಗೆ ಆಪರೇಷನ್ ಮಾಡುವುದಕ್ಕೆ ಅವರು ಭಾರೀ ಪ್ರಯತ್ನ ಮಾಡುತ್ತಿದ್ದಾರೆ. ಅವರ (ಕಾಂಗ್ರೆಸ್) ಶಾಸಕರಿಗೆ ಅನುದಾನ ನೀಡುವುದಕ್ಕೆ ಗತಿ ಇಲ್ಲ, ಆದರೆ ಇತರೆ ಪಕ್ಷಗಳ ಶಾಸಕರಿಗೆ ಅದು ಮಾಡುತ್ತೇವೆ ಇದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಅವರು ಗುಡುಗಿದರು.

ಸುತ್ತಿ ಬಳಸಿ ಇದೆಲ್ಲಾ ಏಕೆ? ನಾನೇ ನೇರವಾಗಿ ಹೇಳುತ್ತಿದ್ದೇನೆ. ನೀವು ನಾಳೆಯೇ ಮುಖ್ಯಮಂತ್ರಿ ಆಗಿ. ನಮ್ಮ ಅಷ್ಟೂ ಶಾಸಕರ ಬೆಂಬಲವನ್ನು ನಿಮಗೆ ಘೋಷಣೆ ಮಾಡುತ್ತೇನೆ ಎಂದು ಡಿಕೆಶಿ ಅವರಿಗೆ ತಿರುಗೇಟು ಕೊಟ್ಟರು ಕುಮಾರಸ್ವಾಮಿ ಅವರು.

ಜಾಹೀರಾತಿನಲ್ಲಿ ಮಾತ್ರ ಸಿಎಂ, ಡಿಸಿಎಂ ಭದ್ರವಾಗಿ ಕೈ ಕೈ ಹಿಡಿದುಕೊಂಡಿದ್ದಾರೆ. ಭದ್ರವಾಗಿ ಕೈ ಹಿಡಿದುಕೊಳ್ಳಿ, ನಿಮಗೂ ಹೊಸ ಹೆಸರು ಕೊಡಬಹುದು ಎಂದು ಅವರು ಟಾಂಗ್‌ಕೊಟ್ಟರು.

ಡಿನ್ನರ್ ಮೀಟಿಂಗ್ ಆಯ್ತು. ಇವಾಗಾ ಬ್ರೇಕ್ ಫಾಸ್ಟ್ ಮೀಟಿಂಗ್. ನಂತರ ಲಂಚ್ ಮೀಟಿಂಗ್. ಇದೇ ಮಾಡ್ಕೊಂಡು ಇರ್ತೀರೋ ಇಲ್ಲವೇ ಕೆಲಸ ಮಾಡ್ತೀರೋ ಎಂದ ಅವರು; ದಿನಾ ಬೆಳಗ್ಗೆ ಡಂಗುರ ಹೊಡೆಯುತ್ತಾ ಇದ್ದಾರೆ, ಆ ಪಾರಟಿ ಶಾಸಕರು ಬರುತ್ತಾರೆ, ಈ ಪಾರ್ಟಿ ಶಾಸಕರು ಬರುತ್ತಾರೆ ಎಂದು. ತಮ್ಮ ವೈಫಲ್ಯಗಳನ್ನು ಮುಚ್ಚಿ ಜನರ ಗಮನ ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್‌ನವರು ʼಆಪರೇಷನ್‌ಹಸ್ತʼ ಎನ್ನುವ ಗುಮ್ಮವನ್ನು ತೇಲಿಬಿಟ್ಟಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

https://www.youtube.com/watch?v=upfbAM8NBCI
Tags: Congress governmentDCM governmentDK Shivakumarformer Chief Ministerhd kumaraswamysiddaramaiahTCM government
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಿಕೆಶಿಗೆ ಭರ್ಜರಿ ಆಫರ್‌ ನೀಡಿದ ಕುಮಾರಸ್ವಾಮಿ!!

ಡಿಕೆಶಿಗೆ ಭರ್ಜರಿ ಆಫರ್‌ ನೀಡಿದ ಕುಮಾರಸ್ವಾಮಿ!!

Leave a Reply Cancel reply

Your email address will not be published. Required fields are marked *

Recommended

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ನರೇಂದ್ರ ಮೋದಿ ಲಸಿಕೆ ರಾಯಭಾರ: ಹೊರಗೆ ಗುಣಗಾನ, ಒಳಗೆ ಅಪಮಾನ, ಪಾಕಿಸ್ತಾನದಲ್ಲೂ ಚೀನಾ ಮೇಲೆ ಅನುಮಾನ! ಭಾರತದ ಬಗ್ಗೆ ಅಭಿಮಾನ!! ಟೀಕೆ ವಿಪರ್ಯಾಸ ಮತ್ತು ವಿಪರೀತ

5 years ago
62 ಗಂಟೆಗಳ ನಂತರ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡರ ಮೃತದೇಹ ಪತ್ತೆ

62 ಗಂಟೆಗಳ ನಂತರ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡರ ಮೃತದೇಹ ಪತ್ತೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ