• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಚಿಕ್ಕಬಳ್ಳಾಪುರ, ಕೋಲಾರ ಸೇರಿ ಬಿಜೆಪಿಯ 15 ಹಾಲಿ ಸಂಸದರಿಗೆ ಈ ಸಲ ಟಿಕೆಟ್‌ ಇಲ್ಲ

P K Channakrishna by P K Channakrishna
November 15, 2023
in NATION, POLITICS, STATE
Reading Time: 1 min read
0
ಚಿಕ್ಕಬಳ್ಳಾಪುರ, ಕೋಲಾರ ಸೇರಿ ಬಿಜೆಪಿಯ 15 ಹಾಲಿ ಸಂಸದರಿಗೆ ಈ ಸಲ ಟಿಕೆಟ್‌ ಇಲ್ಲ

ಬಿ.ಎನ್.ಬಚ್ಚೇಗೌಡ & ಮುನಿಸ್ವಾಮಿ

1.1k
VIEWS
FacebookTwitterWhatsuplinkedinEmail

2024ರ ಲೋಕಸಭೆ ಚುನಾವಣೆ; ರಾಜ್ಯದ 15 ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಅನ್ವೇಷಣೆಯಲ್ಲಿ ಕಮಲ ಪಾಳೆಯ; ಬಿ.ಎನ್.ಬಚ್ಚೇಗೌಡರಿಗೆ ಟಿಕೆಟ್‌ ಇಲ್ಲ; ಮುನಿಸ್ವಾಮಿಗೆ ಬಹುತೇಕ ಅನುಮಾನ

ಬೆಂಗಳೂರು: ಕೇಂದ್ರದ ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ವಿ.ಶ್ರೀನಿವಾಸ ಪ್ರಸಾದ್, ಅನಂತ್ ಕುಮಾರ್ ಹೆಗಡೆ ಸೇರಿ ರಾಜ್ಯದ 15 ಹಾಲಿ ಸಂಸದರ ಕ್ಷೇತ್ರಗಳಿಗೆ ಹೊಸ ಮುಖಗಳನ್ನು ತರಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ.

ವಯಸ್ಸಿನ ಕಾರಣ, ಕೆಲವರ ಸ್ವಯಂ ನಿವೃತ್ತಿ, ಆರೋಗ್ಯ ಸೇರಿದಂತೆ ಹಲವು ಕಾರಣಗಳ ಹಿನ್ನೆಲೆಯಲ್ಲಿ ಹಳಬರಿಗೆ ಕೊಕ್‌ ಕೊಡಲಾಗುತ್ತಿದೆ. ಅಲ್ಲದೆ; ವರ್ಚಸ್ಸು ಕುಂದಿರುವ ಸದಸ್ಯರನ್ನು ಕೈಬಿಟ್ಟು ಹೊಸ‌ ಮತ್ತು ಯುವ ಮುಖಗಳಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.

ಜೆಡಿಎಸ್ ಎನ್ ಡಿಎ ಮೈತ್ರಿಕೂಟ ಸೇರಿದ ನಂತರ ಕರ್ನಾಟಕದ ಮಟ್ಟಿಗೆ ಎರಡೂ ಪಕ್ಷಗಳಿಗೆ ಬಲ ಬಂದಿದೆ. ಚುನಾವಣೆ ಮೈತ್ರಿ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ನಡೆದಿರುವ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಾಥಮಿಕ ವರದಿ ಆಧರಿಸಿ ಬಿಜೆಪಿ ಪಕ್ಷವು 15 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳ ಅನ್ವೇಷಣೆ ಆರಂಭಿಸಿದೆ.

ಸಂಸದರಾದ ಶ್ರೀನಿವಾಸ ಪ್ರಸಾದ್ -ಚಾಮರಾಜನಗರ, ಡಿ.ವಿ.ಸದಾನಂದಗೌಡ -ಬೆಂಗಳೂರು ಉತ್ತರ, ಶಿವಕುಮಾರ್ ಉದಾಸಿ -ಹಾವೇರಿ, ಬಿ.ಎನ್.ಬಚ್ಚೇಗೌಡ -ಚಿಕ್ಕಬಳ್ಳಾಪುರ ಅವರುಗಳು ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ವಿವಿಧ ಕಾರಣಗಳಿಗಾಗಿ ಜಿ.ಎಸ್.ಬಸರಾಜು-ತುಮಕೂರು, ಮಂಗಳಾ ಸುರೇಶ್ ಅಂಗಡಿ- ಬೆಳಗಾವಿ, ಪಿ.ಸಿ.ಗದ್ದೀಗೌಡರ್ -ಬಾಗಲಕೋಟೆ, ರಮೇಶ್ ಜಿಗಜಿಣಗಿ-ವಿಜಾಪುರ, ರಾಜಾ ಅಮರೇಶ್ ನಾಯಕ್ -ರಾಯಚೂರು, ದೇವೇಂದ್ರಪ್ಪ -ಬಳ್ಳಾರಿ, ಜಿ.ಎಂ.ಸಿದ್ದೇಶ್ವರ್ -ದಾವಣಗೆರೆ, ಅನಂತ ಕುಮಾರ ಹೆಗಡೆ -ಉತ್ತರ ಕನ್ನಡ; ಈ ಕ್ಷೇತ್ರಗಳಲ್ಲಿ ಹೊಸಬರಿಗೆ ಅವಕಾಶ ನೀಡಲು ಅನ್ವೇಷಣೆ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ (ದಕ್ಷಿಣ ಕನ್ನಡ), ಪ್ರತಾಪಸಿಂಹ (ಮೈಸೂರು), ಎಸ್.ಮುನಿಸ್ವಾಮಿ (ಕೋಲಾರ) ಇವರು ಕಾರ್ಯಕರ್ತರ ಮತ್ತು ಸಾರ್ವಜನಿಕರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂಬ ವರದಿ ಇದೆ. ಇವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುತ್ತಾರೆಯೋ ಅಥವಾ ಇಲ್ಲವೋ ಎಂಬುದು ೫೦:೫೦ ಎನ್ನುವ ಹಾಗೆಯೇ ಇದೆ..

ಲೋಕಸಭೆ ಚುನಾವಣೆಯಲ್ಲೂ ವಿಧಾನಸಭೆ ಮಾದರಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ 75 ಹೊಸ ಮುಖಗಳನ್ನು ಕಣಕ್ಕಿಳಿಸಿ ನಡೆಸಿದ ಪ್ರಯೋಗ ವಿಫಲವಾಗಿದ್ದರೂ ಬಿಜೆಪಿ ಮತ್ತೆ ಅದೇ ಪ್ರಯೋಗವನ್ನು ಲೋಕಸಭೆ ಚುನಾವಣೆಯಲ್ಲೂ ಮಾಡಲು ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು, ಹಿಂದುತ್ವವಾದ ಮತ್ತು ಜೆಡಿಎಸ್ ಮೈತ್ರಿ ಹಾಗೂ ವೀರಶೈವ ಸಮುದಾಯಕ್ಕೆ ಸೇರಿರುವ ಪ್ರಭಾವಿ‌ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದರಿಂದ ಈ ಪ್ರಯೋಗ ಯಶಸ್ವಿಯಾಗಲಿದೆ ಎಂಬ ಲೆಕ್ಕಾಚಾರವಿದೆ.

ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ

ಕಳೆದ 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಅದಕ್ಕಾಗಿ ಹೊಸ ಪ್ರಯೋಗವೂ ನಡೆಸಲಿದೆ.

ಕಾಂಗ್ರೆಸ್ ಕೂಡ ಇದೇ ರೀತಿ 20 ಕ್ಷೇತ್ರಗಳ ಗೆಲುವಿನ‌ ಗುರಿ ಇಟ್ಟುಕೊಂಡು ಹೋರಾಟ ನಡೆಸಿದೆ. ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ಬಿಜೆಪಿ ಎರಡು ಅಂಕಿಗಿಂತ ಕಡಿಮೆ ಸ್ಥಾನ ಗಳಿಸಿರಲಿಲ್ಲ.

ಸಿದ್ದರಾಮಯ್ಯ ನೇತೃತ್ವದ ಸರಕಾರವಿದ್ದರೂ ಮೋದಿ ಅವರ ವರ್ಚಸ್ಸು ಹಾಗೂ ವಿವಿಧ ಕಾರಣಗಳಿಗೆ ರಾಜ್ಯದಲ್ಲಿ ಜನರು ಬಿಜೆಪಿ ಬೆಂಬಲಿಸಲಿದ್ದಾರೆ ಎಂಬ ನಂಬಿಕೆ ವರಿಷ್ಠರಿಗೆ ಇದೆ.

Tags: bjpcandidateschikkaballapurindiakarnatakakolarloksabha electionnewsPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕಾಂಗ್ರೆಸ್ಸಿಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!!

ಕಳ್ಳಕಳ್ಳವಾಗಿ ಪೋಸ್ಟರ್‌ ಅಂಟಿಸುವ ಶಿಖಂಡಿ ಪಕ್ಷ

Leave a Reply Cancel reply

Your email address will not be published. Required fields are marked *

Recommended

ನ್ಯಾಷನಲ್‌ ಕಾಲೇಜ್‌ ವಿಶ್ರಾಂತ ಪ್ರಾಂಶುಪಾಲ ಹೆಚ್‌.ಆರ್.ಕೃಷ್ಣಮೂರ್ತಿ ಇನ್ನಿಲ್ಲ

ನ್ಯಾಷನಲ್‌ ಕಾಲೇಜ್‌ ವಿಶ್ರಾಂತ ಪ್ರಾಂಶುಪಾಲ ಹೆಚ್‌.ಆರ್.ಕೃಷ್ಣಮೂರ್ತಿ ಇನ್ನಿಲ್ಲ

4 years ago
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ