• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬೆಸ್ಕಾಂಗೆ 68,526 ರೂ. ದಂಡ ಪಾವತಿಸಿದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
November 17, 2023
in NATION, POLITICS, STATE
Reading Time: 2 mins read
0
ಬೆಸ್ಕಾಂಗೆ 68,526 ರೂ. ದಂಡ ಪಾವತಿಸಿದ ಹೆಚ್.ಡಿ.ಕುಮಾರಸ್ವಾಮಿ
980
VIEWS
FacebookTwitterWhatsuplinkedinEmail

ದಂಡದಲ್ಲೂ ದೋಷವಿದೆ ಎಂದು ಬೆಸ್ಕಾಂ ವಿರುದ್ಧ ದೂರಿದ ಮಾಜಿ ಸಿಎಂ

  • ಆರಂಭಕ್ಕೆ ಮುನ್ನ 6 ತಿಂಗಳು ವಿದ್ಯುತ್‌ ಬಿಲ್‌ ಕಟ್ಟದ ಲುಲು ಮಾಲ್‌!!
  • ಲುಲು ಮಾಲ್‌ ಕೆಳಕ್ಕೆ ಹೋಗಿರುವ ಹೈಟೆನ್ಷನ್‌ ವೈರ್‌ ರಹಸ್ಯ ಏನು?
  • ಲುಲು ಮಾಲ್‌ ದಾಖಲೆ ಶೀಘ್ರ ಬಹಿರಂಗ ಎಂದ ಮಾಜಿ ಸಿಎಂ


ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ವಿಚಕ್ಷಣಾ ದಳ ತಮಗೆ ವಿಧಿಸಿದ್ದ 68,526 ರೂ. ದಂಡವನ್ನು ಪಾವತಿ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಅಲ್ಲದೆ; ಬೆಸ್ಕಾಂ ವಿಧಿಸಿರುವ ದಂಡದ ಮೊತ್ತ ಲೋಪದಿಂದ ಕೂಡಿದ್ದು ಈ ಬಗ್ಗೆ ತಮಗೆ ಸ್ಪಷ್ಟನೆ ಕೊಡಬೇಕು ಎಂದು ಅವರು ಇಂಧನ ಇಲಾಖೆಯನ್ನು ಒತ್ತಾಯ ಮಾಡಿದ್ದಾರೆ.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜೆ.ಪಿ‌.ನಗರದ ತಮ್ಮ ಮನೆಗೆ ಕಂಬದಿಂದ ವಿದ್ಯುತ್ ಪಡೆದಿರುವುದಕ್ಕೆ ಬೆಸ್ಕಾಂ ವಿಚಕ್ಷಣಾ ದಳ ವಿಧಿಸಿರುವ ದಂಡವೇ ಅಕ್ರಮ ಎಂದು ಅವರು ಕುಮಾರಸ್ವಾಮಿ ಅರೋಪ ಮಾಡಿದ್ದಾರೆ.

ನನ್ನ ಮನೆಗೆ ನಾನು 33 KV ಅನುಮತಿ ಪಡೆದಿದ್ದೇನೆ. ವಿದ್ಯುತ್ ಕಳವು ಆರೋಪದಲ್ಲಿ 2.5 ಕೆವಿ ವಿದ್ಯುತ್ ಪಡೆಯಲಾಗಿದೆ ಎಂದು ಬೆಸ್ಕಾಂ ಹೇಳಿದೆ. ಅಸಲಿಗೆ 1 ಕೆವಿ ವಿದ್ಯುತ್ ಮಾತ್ರ ನಮ್ಮ ಮನೆಯ ಲೈಟಿಂಗ್ ಗೆ ಬಳಕೆ ಮಾಡಲಾಗಿತ್ತು. ಆದರೂ ಬೆಸ್ಕಾಂ ಅಧಿಕಾರಿಗಳು 2.5 ಕೆವಿ ಅಂತ ಸುಳ್ಳು ಲೆಕ್ಕ ‌ತೋರಿಸಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕುಮಾರಸ್ವಾಮಿ ಅವರು ಬೆಸ್ಕಾಂಗೆ ದಂಡ ಪಾವತಿಸಿದ ಪಡೆದ ರಸೀತಿ.Download

ನಾನು ಬಳಕೆ ಮಾಡಿರುವುದು 71 ಯುನಿಟ್. ಅದಕ್ಕೆ 3 ಪಟ್ಟು ಫೈನ್ ಅಂದರೂ 2,526 ರೂ. ದಂಡ ಆಗುತ್ತದೆ. ಆದರೆ ಬೆಸ್ಕಾಂನವರು 68 ಸಾವಿರ ದಂಡ ಪಾವತಿ ಮಾಡಲು ಹೇಳಿದೆ. ನನ್ನ ಮನೆಗೆ ಅನುಮತಿ ಪಡೆದಿರೋ 33 ಕೆವಿಗೂ 66 ಸಾವಿರ ಬಿಲ್ ಹಾಕಿ.ಒಟ್ಟಾರೆ 68,526 ಬಿಲ್ ಹಾಕಿದೆ. ನಿಯಮದ ಪ್ರಕಾರ ಬಿಲ್ ಹಾಕದೇ ಹೆಚ್ಚುವರಿ ಬಿಲ್ ಹಾಕಿದೆ. ಮಾಜಿ ಮುಖ್ಯಮಂತ್ರಿ ಒಬ್ಬರಿಗೇ ಹೀಗಾದರೆ ಸಾಮಾನ್ಯ ಜನರ ಕಥೆ ಏನು? ಎಂದು ಅವರು ಪ್ರಶ್ನಿಸಿದರು.

ಈ ಬಗ್ಗೆ ಬೆಸ್ಕಾಂ ನವೆರಿಗೆ ಮರು ಪರಿಶೀಲನಾ ಪತ್ರ ಬರೆದಿದ್ದೇನೆ ಹಾಗೂ ದಂಡವನ್ನೂ ಕಟ್ಟಿದ್ದೇನೆ. ಆದರೆ ಇಷ್ಟು ಬಿಲ್ ಯಾಕೆ ಅಂತ ವಿವರಣೆ ಕೊಡಿ ಎಂದು ಆಕ್ಷೇಪಣೆ ವ್ಯಕ್ತಪಡಿಸಿ ಪತ್ರ ಬರೆದಿದ್ದೇನೆ. ಬೆಸ್ಕಾಂ ವಿಜಿಲೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ದ ಕುಮಾರಸ್ವಾಮಿ ಕಿಡಿಕಾರಿದರು.

ದೀಪಾವಳಿ ಹಬ್ಬದ ವೇಳೆ ನಮ್ಮನೆ ಹುಡುಗರು ದೀಪಾಲಂಕಾರ ಮಾಡುವಾಗ ಅಚಾತುರ್ಯ ಆಗಿತ್ತು. ಇದಕ್ಕೆ ನಾನೇ ವಿಷಾದ ವ್ಯಕ್ತಪಡಿಸಿ ದಂಡ ಪಾವತಿ ಮಾಡುವುದಾಗಿ ಹೇಳಿದ್ದೆ. ಅದರಂತೆ ದಂಡ ಪಾವತಿ ಮಾಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಯಾರೋ ಹುಡುಗರು ಮಾಡಿದ ತಪ್ಪಿಗೆ ವಿಷಾದ ವ್ಯಕ್ತಪಡಿಸಿ, ಅದರ ಜವಾಬ್ದಾರಿ ನಾನೇ ಹೊತ್ತೆ. ಈಗ ವಿದ್ಯುತ್ ಕಳ್ಳ ಅಂತ ಪಟ್ಟ ಬೇರೆ ಕೊಟ್ಟಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಹೇಳಿಕೆ ಕೊಟ್ಟಿದ್ದರು. ದಂಡದ ಬಿಲ್ ಕೊಟ್ಟರು, ಕಟ್ಟಿದ್ದೇನೆ ಎಂದರು ಕುಮಾರಸ್ವಾಮಿ ಅವರು.

ಲುಲು ಮಾಲ್ ಗೆ ಬಳಸಿದ್ದ ಬಿಲ್ ಗೆ ದಂಡ ಕಟ್ಟಿದ್ದಾರ?

ಬೆಂಗಳೂರಿನ ಸುಜಾತ ಬಸ್ ನಿಲ್ದಾಣದ ಬಳಿ ಆಕಾಶದ ಎತ್ತರಕ್ಕೆ ಕಟ್ಟಿರುವ ಲುಲು ಮಾಲ್ ಪ್ರಾರಂಭಕ್ಕೂ ಮುನ್ನ 6 ತಿಂಗಳು ಬಳಕೆ ಮಾಡಿದ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂ ವಿಚಕ್ಷಣ ದಳ ಮಾಹಿತಿ ನೀಡುತ್ತಾ? ಅದರ ಬಗ್ಗೆ ಇರುವ ಮಾಹಿತಿಯನ್ನು ಅವರು ಬಹಿರಂಗ ಮಾಡುತ್ತಾರಾ? ಎಂದು ಅವರು ಪ್ರಶ್ನೆ ಮಾಡಿದರು.

ಲುಲು ಮಾಲ್ ಆರಂಭಕ್ಕೆ ಮೊದಲು 6 ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಿಟ್ಟಿಲ್ಲ. ಹಾಗಾದರೆ, ಅವರು ಎಲ್ಲಿಂದ ವಿದ್ಯುತ್ ಬಳಿಸಿದರು. ಆಕಾಶದಿಂದ ವಿದ್ಯುತ್ ಉತ್ಪಾದನೆ ಮಾಡಿದ್ರಾ ಇವರು. ಇವರ ಯೋಗ್ಯತೆಗೆ ನನ್ನನ್ನು ಕಳ್ಳ ಕಳ್ಳ ಅಂತಾರೆ ಎಂದು ಲುಲು ಮಾಲ್ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಗಂಭೀರ ಆರೋಪ ಮಾಡಿದರು.

ಡಿಡಿ ಮೂಲಕ ದಂಡ ಪಾವತಿ ಮಾಡಿರುವುದು ಹಾಗೂ ಅವರು ಸಲ್ಲಿಸಿರುವ ಆಕ್ಷೇಪDownload

ಲುಲು ಮಾಲ್‌ ಬಗ್ಗೆ ತನಿಖೆ ಮಾಡಿಸಿ

ಕುಮಾರಸ್ವಾಮಿಯನ್ನು ಕರೆಂಟ್ ಕಳ್ಳ ಅನ್ನುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಕದಲ್ಲಿಯೇ ಕೂರುವ ಮಹಾನ್‌ ಕಳ್ಳನ ಕಡೆಯೂ ನೋಡಬೇಕು. ಅಷ್ಟೇ ಅಲ್ಲ; ಲುಲು ಮಾಲ್‌ ಕೆಳಗಡೆ ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಅದಕ್ಕೆ ಅವರು ಎಷ್ಟು ಹಣ ಕಟ್ಟಿದ್ದಾರೆ? ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್ ನೊಳಕ್ಕೆ ಹೋಯಿತು? ಇದನ್ನು ಜನರಿಗಾಗಿ ಮಾಡಿದಿರಾ ಅಥವಾ ತಮ್ಮ ಸ್ವಾರ್ಥಕ್ಕಾಗಿ ಮಾಡಿದರಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಕಲಿ ಸೊಸೈಟಿಯನ್ನು ಅಸಲಿ ಮಾಡಿಕೊಂಡವರು ಇವರು. ಮೇಲೆ ಇದ್ದ ಹೂ ಟೆನ್ಷನ್‌ ವೈರ್‌ ಅನ್ನು ಅಂಡರ್‌ ಗ್ರೌಂಡ್‌ ಗೆ ತೆಗೆದುಕೊಂಡು ಹೋಗುವುದು ಇವರಿಗೆ ಕಷ್ಟವೇ? ಎಂದ ಕುಮಾರಸ್ವಾಮಿ ಅವರು, ಲುಲು ಮಾಲ್ ಮಾತ್ರವೇ ಅಲ್ಲ; ಮೇಕೆದಾಟು ಪಾದಯಾತ್ರೆ ಮಾಡಿದಾಗ ಎಲ್ಲಿಂದ ಇವರು ಎಲ್ಲಿಂದ ವಿದ್ಯುತ್‌ ತೆಗೆದುಕೊಂಡಿದ್ದರು? ಕನಕಪುರದಲ್ಲಿ ನಡೆಯುವ ʼಕನಕೋತ್ಸವʼಕ್ಕೆ ಕರೆಂಟ್ ಯಾವ ಮೀಟರ್ ನಿಂದ ಪಡೆದುಕೊಂಡಿದ್ದರು? ಅದಕ್ಕೆ ಕರೆಂಟ್ ಬಿಲ್ ಎಷ್ಟು ಕಟ್ಟಿದ್ದಾರೆ? ಈಗ ಯಾರು ದೊಡ್ಡ ಕಳ್ಳ? ಕಣ್ಣಮುಂದೆ ಎಲ್ಲ ವಿಡಿಯೋ ಇದೆ. ಬೇಕಿದ್ದರೆ ಸಾಕ್ಷಿ ಕೊಡೋಣ ಎಂದು ತಿರುಗೇಟು ಕೊಟ್ಟರು.

ನಾನು ದಂಡ ಕಟ್ಡಿದ್ದೇನೆ. ಈಗಲಾದರೂ ಕರೆಂಟ್ ಕಳ್ಳ ಅನ್ನೋದು ಬಿಡಿ. ನಾನು ನಿಮ್ಮಷ್ಟು ದೊಡ್ಡ ಕಳ್ಳ ಅಲ್ಲ ಅಂತ ಅವರು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಉಪಸ್ಥಿತರಿದ್ದರು.

Tags: BengalurubescomckcknewsnowCongresshd kumaraswamyjdskarnatakapenaltypower
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

ಜೆಡಿಎಸ್‌ ನಿಂದ ಸಿಎಂ ಇಬ್ರಾಹಿಂ ಸಸ್ಪೆಂಡ್

Leave a Reply Cancel reply

Your email address will not be published. Required fields are marked *

Recommended

ಅಡುಗೆ ಸಹಾಯಕರಿಗೆ ದಿನಸಿ ಕಿಟ್ ನೀಡಿದ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್

ಅಡುಗೆ ಸಹಾಯಕರಿಗೆ ದಿನಸಿ ಕಿಟ್ ನೀಡಿದ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್

5 years ago
ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ

ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ