• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಶೋಕ್

cknewsnow desk by cknewsnow desk
November 17, 2023
in NATION, POLITICS, STATE
Reading Time: 1 min read
0
ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಶೋಕ್
950
VIEWS
FacebookTwitterWhatsuplinkedinEmail

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದ ಆಯ್ಕೆ; ಮೇಲುಗೈ ಸಾಧಿಸಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಶಾಸಕ ಆರ್.ಅಶೋಕ್ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಸಂಜೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ವರಿಷ್ಠರು ವೀಕ್ಷಕರಾಗಿ ಕಳುಹಿಸಿದ್ದರು.

ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ಗೌತಮ್ ವೀಕ್ಷಕರು ಶಾಸಕಾಂಗ ಪಕ್ಷದ ಸಭೆಗೂ ಮುನ್ನ ವೀಕ್ಷಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚೆ ನಡೆಸಿದ್ದರು.

ತದ ನಂತರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವು ಮುಖಂಡರನ್ನು ಕರೆಸಿಕೊಂಡು ಅಭ್ಯರ್ಥಿ ಆಯ್ಕೆ ಸಂಬಂಧ ಹಾಗೂ ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆಯೂ ಚರ್ಚೆ ಮಾಡಿದರು.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಹೊರ ಹೊಮ್ಮಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ @RAshokaBJP ಅವರಿಗೆ ಆತ್ಮೀಯ ಅಭಿನಂದನೆಗಳು.

ತಮ್ಮ ಹಿರಿತನ, ಸುದೀರ್ಘ ಅನುಭವ ಹಾಗೂ ಹೋರಾಟದ ಹಿನ್ನಲೆಯಲ್ಲಿ ಜನರ ದನಿಯಾಗಿ… pic.twitter.com/AGfkj33ceK

— Vijayendra Yediyurappa (Modi Ka Parivar) (@BYVijayendra) November 17, 2023

ಬಹುತೇಕ ನಾಯಕರು ಹಿರಿಯ ನಾಯಕ ಅಶೋಕ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಕುರಿತು ತಮ್ಮ ಅಭಿಪ್ರಾಯ-ಸಲಹೆ ನೀಡಿದರು.

ನಂತರ, ಶಾಸಕಾಂಗ ಸಭೆಯಲ್ಲಿ ದುಷ್ಯಂತ್ ಕುಮಾರ್ ಗೌತಮ್, ವರಿಷ್ಠರ ಸೂಚನೆಯಂತೆ ನಾಯಕನ ಆಯ್ಕೆಗೆ ಅಭಿಪ್ರಾಯ ಪಡೆದಿದ್ದೇವೆ, ಮಾಜಿ ಉಪ ಮುಖ್ಯಮಂತ್ರಿ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರಾಗಿ ಆಯ್ಕೆ ಮಾಡಲು ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಎಲ್‌ಪಿ ನಾಯಕ ಆಯ್ಕೆ ಕಳೆದ ಆರು ತಿಂಗಳಿಂದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡದೆ, ಟೀಕೆಗೆ ಒಳಗಾಗಿದ್ದ ಪಕ್ಷದ ವರಿಷ್ಠರು, ಇದೀಗ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿದ ಒಂದು ವಾರದಲ್ಲೇ ಬಿಜೆಎಲ್‌ಪಿ ನಾಯಕನನ್ನೂ ಆಯ್ಕೆ ಮಾಡಿದೆ.

ಯಡಿಯೂರಪ್ಪ ಬಣದ ಮೇಲುಗೈ

ಅಶೋಕ್ ನೇಮಕದಿಂದ ಯಡಿಯೂರಪ್ಪ ಪಕ್ಷದಲ್ಲಿ ಮತ್ತೆ ಮೇಲುಗೈ ಸಾಧಿಸಿದ್ದಾರೆ. ಸದಾ ಅವರ ಬಣದಲ್ಲೇ ಗುರುತಿಸಿಕೊಂಡಿದ್ದ ಅಶೋಕ್‌ಗೆ ರಾಷ್ಟ್ರಮಟ್ಟದಲ್ಲಿ ಕೆಲವರ ವಿರೋಧ ಇದ್ದರೂ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಲ ಕೊಡಲು ಅಂತಿಮವಾಗಿ ಇವರನ್ನೇ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅಶೋಕ್ ಸತತ ಏಳು ಬಾರಿ ವಿಧಾನಸಭೆ ಪ್ರವೇಶ ವಿಧಾನಸಭೆ ಕ್ಷೇತ್ರಗಳ ಮರು ವಿಂಗಡಣೆಗೂ ಮುನ್ನ ಉತ್ತರಹಳ್ಳಿ ಕ್ಷೇತ್ರದಿಂದಲೂ ನಂತರ ಪದ್ಮನಾಭನಗರ ಕ್ಷೇತ್ರದಿಂದ ಅಶೋಕ್ ಅವರು ಸತತವಾಗಿ ಏಳು ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ವಿರುದ್ಧ ಕನಕಪುರ ಹಾಗೂ ಪದ್ಮನಾಭನಗರದಿಂದ ಕಣಕ್ಕಿಳಿದು ಶಿವಕುಮಾರ್ ವಿರುದ್ಧ ಸೋತು, ತಮ್ಮ ಹಳೆಯ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.

ಬಸವರಾಜ ಬೊಮ್ಮಾಯಿ ಅವರನ್ನೇ ಈ ಸ್ಥಾನಕ್ಕೆ ತರಬೇಕೆಂಬ ಚರ್ಚೆ ನಡೆದಿತ್ತು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ್ದರಿಂದ ಒಂದೇ ಸಮುದಾಯಕ್ಕೆ ಎರಡು ಸ್ಥಾನಗಳನ್ನು ನೀಡಬಾರದೆಂದು ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಶೋಕ್ ಅವರಿಗೆ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ.

ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಹಿಂದುಳಿದ ವರ್ಗದವರಾಗಿದ್ದು, ಪಕ್ಷ ಮೂರೂ ಸಮುದಾಯಕ್ಕೆ ಪ್ರಮುಖ ಸ್ಥಾನಗಳನ್ನು ನೀಡಿದಂತಾಗಿದೆ.

Tags: bjpckcknewsnowkarnatakakarnataka assemblyopposition leaderPoliticsr ashok
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಕ್ಕಳಿಗೆ ಸರ್‌ ಎಂವಿ, ಸಿಎನ್‌ಆರ್ ರಾವ್‌ ಸ್ಫೂರ್ತಿ

ಮಕ್ಕಳಿಗೆ ಸರ್‌ ಎಂವಿ, ಸಿಎನ್‌ಆರ್ ರಾವ್‌ ಸ್ಫೂರ್ತಿ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ 73ನೇ ಗಣರಾಜ್ಯೋತ್ಸವ

ಚಿಕ್ಕಬಳ್ಳಾಪುರದಲ್ಲಿ 73ನೇ ಗಣರಾಜ್ಯೋತ್ಸವ

4 years ago
ಎತ್ತಿನಹೊಳೆಯಲ್ಲಿ ಮತ್ತಷ್ಟು ಎತ್ತುವಳಿ! ರಾಷ್ಟ್ರೀಯ ಯೋಜನೆ ಸ್ಟೇಟಸ್ ಎಂಬ ಸ್ಮಾರ್ಟ್ ಐಡಿಯಾ!!

ಎತ್ತಿನಹೊಳೆಯಲ್ಲಿ ಮತ್ತಷ್ಟು ಎತ್ತುವಳಿ! ರಾಷ್ಟ್ರೀಯ ಯೋಜನೆ ಸ್ಟೇಟಸ್ ಎಂಬ ಸ್ಮಾರ್ಟ್ ಐಡಿಯಾ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ