• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

cknewsnow desk by cknewsnow desk
November 23, 2023
in POLITICS, STATE
Reading Time: 1 min read
0
ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್
917
VIEWS
FacebookTwitterWhatsuplinkedinEmail

ಸಿಎಂ ತರಾತುರಿ ನಡೆ ಸಂಶಯಾಸ್ಪದವಾಗಿದೆ; ಪಕ್ಷದ ವರಿಷ್ಠರ ಓಲೈಕೆಗೆ ಈ ಆತಿಯಾದ ಆತುರ ; ಮೂಲ ವರದಿ ಕಳುವಿನ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹ

ಬೆಂಗಳೂರು: ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ, ಸಚಿವ ಸಂಪುಟದಲ್ಲೇ ಸಹಮತ ಇಲ್ಲ. ಇಂತಹ ಸಂದರ್ಭದಲ್ಲಿ ವಿವಾದಿತ ವರದಿ ಪಡೆಯಲು ಆತುರ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ವಿಧಾನಸೌಧದ ಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದ ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಸರಕಾರದ ಕೋಟಿಗಟ್ಟಲೇ ಹಣ ಕೊಟ್ಟು ಸಿದ್ಧಪಡಿಸಿದ ವರದಿ ಕಳುವಾಗಲು ಯಾರು ಕಾರಣ? ಅದರ ಹೊಣೆ ಯಾರದ್ದು? ಕಳುವು ಪ್ರಕರಣದ ಬಗ್ಗೆ ಏಕೆ ತನಿಖೆ ನಡೆಸಲಿಲ್ಲ. ಮೂಲ ವರದಿ ಕಳುವಾಗಿದ್ದರೂ ಅದರ ದತ್ತಾಂಶ ಇದೆ ಎಂದು ಪರಿಷ್ಕೃತ ವರದಿ ಸಿದ್ಧಪಡಿಸುವುದು ಎಷ್ಟು ಸರಿ ಎಂದು ಮುಖ್ಯಮಂತ್ರಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಯಾರನ್ನೂ ಓಲೈಸಲು ಸಿಎಂ ಯತ್ನ?

ಹತ್ತು ವರ್ಷಗಳ ಹಿಂದಿನ ಜನಸಂಖ್ಯೆಗೂ, ಈಗಿನ ಜನಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ. ಸಾರ್ವಜನಿಕರಿಂದಲೂ ತಮ್ಮ ಮನೆಗಳಿಗೆ ಸಮೀಕ್ಷೆ ನಡೆಸುವವರು ಬಂದಿರಲಿಲ್ಲ ಎಂದು ವ್ಯಾಪಕ ದೂರುಗಳು ಬಂದಿವೆ. ಇಷ್ಟಾದರೂ ವರದಿ ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಆತುರ ತೋರುತ್ತಿರುವುದು ಜನರಲ್ಲಿ ಸಂಶಯವನ್ನು ಹುಟ್ಟು ಹಾಕಿದೆ ಎಂದರು.

ಈ ಆತಿಯಾದ ಆತುರದ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಓಲೈಸುವ ಹುನ್ನಾರ ಇದ್ದಂತಿದೆ ಎಂದು ಆರೋಪಿಸಿದರು.

ಸಿಎಂ ಅವರ ಈ ನಡುವಳಿಕೆ ಹಿಂದೆ ಏನನ್ನೂ ಮುಚ್ಚಿಡುವ, ಯಾರನ್ನೂ ರಕ್ಷಿಸುವ ಸಂಶಯ ಮೂಡುತ್ತಿದೆ. ಈ ಎಲ್ಲಾ ವಿವಾದಗಳ ಕಾರಣಕ್ಕೆ ನಮ್ಮ ಸರಕಾರ ವರದಿಯ ಸಹವಾಸಕ್ಕೆ ಹೋಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಪಾರದರ್ಶಕತೆ ಪ್ರದರ್ಶಿಸಿ

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂಬ ವಿಷಯದಲ್ಲಿ ನಮ್ಮ ಸಹಮತವಿದೆ. ಆದರೆ ಅವೈಜ್ಞಾನಿಕ, ವಿವಾದಿತ ವರದಿ ಆಧರಿಸಿ ಕ್ರಮಕ್ಕೆ ಮುಂದಾದರೆ ನಮ್ಮ ವಿರೋಧವಿದೆ.

ಒಂದು ವೇಳೆ ಇವರಿಗೆ ನಿಜವಾಗಿಯೂ ಮೀಸಲು ನೀಡುವ ವಿಷಯದಲ್ಲಿ ಬದ್ಧತೆ ಇದ್ದರೆ ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ. ವಿರೋಧ ವ್ಯಕ್ತಪಡಿಸಿರುವ ಸ್ವಾಮೀಜಿಗಳು, ಮುಖಂಡರನ್ನು ಕರೆದು ಅಭಿಪ್ರಾಯ ಕೇಳಲಿ ಎಂದು ಆಗ್ರಹಿಸಿದರು.

ಕಳೆದ ಅವಧಿಯಲ್ಲಿ ಲಿಂಗಾಯತ ವೀರಶೈವರ ವಿಚಾರಕ್ಕೆ ಕೈಹಾಕಿ ಏನಾಯಿತು? ಮತ್ತೆ ಅದೇ ರೀತಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಸಿದ್ದರಾಮಯ್ಯ ಕೈಹಾಕುವುದಿಲ್ಲ ಎಂದು ಭಾವಿಸಿರುವುದಾಗಿ ಹೇಳಿದರು.

ಹೋರಾಟ ನಿಶ್ಚಿತ

ಈ ಎಚ್ಚರಿಕೆ, ವಿರೋಧಗಳ ನಡುವೆಯೂ ತರಾತುರಿಯಲ್ಲಿ ವರದಿ ಪಡೆಯಲು ಮುಂದಾದರೆ ರಾಜ್ಯಾದ್ಯಂತ ಪಕ್ಷವು ಉಗ್ರವಾದ ಹೋರಾಟ ನಡೆಸಲಿದೆ. ಅದಕ್ಕೆ ಅವಕಾಶ ನೀಡದೆ ವರದಿ ಕಳವಿಗೆ ಕಾರಣಗಳನ್ನು ಪತ್ತೆ ಹಚ್ಚಲಿ ಎಂದರು.

ಯಾರ ಮನೆಯಲ್ಲಿ ಕುಳಿತು ಬರೆದರು?

ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ ಎಂಬ ಕಾಂತರಾಜು ಅವರ ಸ್ಪಷ್ಟನೆಗೆ, ಹಾಗಿದ್ದರೆ ಕಾರ್ಯದರ್ಶಿ ಅವರು ಏಕೆ ಸಹಿ ಮಾಡಿಲ್ಲ? ಸಹಿ ಮಾಡಿಸಲು ಆಗಿಲ್ಲ ಎಂದರೆ ಯಾರನ್ನು ಮೆಚ್ಚಿಸಲು, ಯಾರದೊ ಮನೆಯಲ್ಲಿ ಕುಳಿತು ವರದಿ ಬರೆದಿರಬಹುದು. ಒಬ್ಬ ಜವಾಬ್ದಾರಿ ಸ್ಥಾನದಲ್ಲಿ ಇದ್ದ ವ್ಯಕ್ತಿಗೆ ಸರಕಾರಕ್ಕೆ ಸಲ್ಲಿಸುವ ವರದಿಗೆ ಸಹಿ ಮಾಡಿಸಲು ಆಗದಷ್ಟು ಮರೆವು ಇತ್ತೇ ಎಂದು ವ್ಯಂಗ್ಯವಾಡಿದರು.

Tags: caste censusckcknewsnowkarnatakaopposition leaderPoliticsr ashoka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

ಡಿಕೆಶಿ ಅಕ್ರಮ ಆಸ್ತಿ ಕೇಸ್;‌ ಸಿಬಿಐಗೆ ಕೊಟ್ಟಿದ್ದ ಅನುಮತಿ ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ!

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ