ಆಡಳಿತ ಪಕ್ಷದಲ್ಲಿ ತಣಿಯದ ತಳಮಳ
- ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ
- ನನಗೂ ಮೂಲ ಆದರ್ಶಗಳಿವೆ
- ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಮೇಲೆ ಅಪಾರ ವಿಸ್ನಂಹ್ವದ ಇದ್ಬಿeಕೆ ಇದೆ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಪ್ರಭಾವೀ ಸಚಿವರೊಬ್ಬರು 50-60 ಶಾಸಕರ ಜೊತೆಯಲ್ಲಿ ಬಿಜೆಪಿಗೆ ಜಿಗಿಯಲು ತಯಾರಾಗಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು. ಆದರೆ, ಆ ಪ್ರಭಾವೀ ಸಚಿವರು ಯಾರು? ಎಂಬುದನ್ನು ಅವರು ಹೇಳಿರಲಿಲ್ಲ. ಯಾರ ಹೆಸರನ್ನೂ ಅವರು ಉಲ್ಲೇಖ ಮಾಡಿರಲಿಲ್ಲ.
ಅದರೆ, ಕುಮಾರಸ್ವಾಮಿ ಅವರ ಹೇಳಿಕೆ ಆಡಳಿತ ಪಕ್ಷ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿತ್ತು. ಆದರೆ, ಮಾಧ್ಯಮಗಳು ಸೇರಿ ಅನೇಕರು ಆ ಪ್ರಭಾವೀ ಸಚಿವರು ಡಿಸಿಎಂ ಡಿ.ಕೆ.ಶಿವಕುಮಾರ್ ಇರಬಹುದೇ? ಎಂದು ಲೆಕ್ಕ ಹಾಕಿದ್ದರು. ಆ ಊಹೆ, ಲೆಕ್ಕದ ಬೆನ್ನಲ್ಲಿಯೇ ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
Operation: 50-60 ಶಾಸಕರ ಜತೆ ಬಂದುಬಿಡ್ತೀನಿ, ರಕ್ಷಿಸಿ ಎಂದು ಕೇಂದ್ರ ಬಿಜೆಪಿ ನಾಯಕರ ಜತೆ ಪ್ರಭಾವೀ ಸಚಿವರಿಂದ ಚೌಕಾಸಿ
ಡಿಕೆಶಿ ಹೇಳಿದ್ದೇನು?
ಡಿಸಿಎಂ ಡಿಕೆಶಿ ತಮ್ಮ ಸುತ್ತ ಎದ್ದಿರುವ ಅನುಮಾನದ ಹುತ್ತವನ್ನು ಕೆಡವಲು ಬೆಳಗಾವಿಯಲ್ಲಿ ತಾವೇ ಈ ಬಗ್ಗೆ ಮಾತನಾಡಿದ್ದಾರೆ. ಅವರ ಮಾತು ಹೀಗಿದೆ;

ನಾನು ಹುಟ್ಟುತ್ತಲೇ ಕಾಂಗ್ರೆಸಿಗ, ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ, ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ, ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ ಇದೆ.
ಕುಮಾರಸ್ವಾಮಿ ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ, ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ.
ನಾನು ಕಾಂಗ್ರೆಸ್ ನಲ್ಲಿ ಇದ್ದೇನೆ. ಜೀವನ ಪರ್ಯಂತ ಅಲ್ಲಿಯೇ ಇರುತ್ತೇನೆ. ಯಾರಿಗೂ ಅನುಮಾನ ಬೇಡ.
ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿಗೆ ಇಳಿದ ಪ್ರಭಾವೀ ಸಚಿವ ಯಾರು?
ಇದರ ಜತೆಗೆ ಜಾತಿ ಗಣತಿ ಬಗ್ಗೆಯೂ ಅವರು ಮಾತನಾಡಿದ್ದಾರೆ.
ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಯಬೇಕು. ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ, ಸಮೀಕ್ಷೆ ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ.
ಅನೇಕ ಶಾಸಕರು ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಮನೆ, ಮನೆಗೆ ತೆರಳಿ ಸಮೀಕ್ಷೆ ಮಾಡಿಲ್ಲ ಎಂಬ ದೂರುಗಳು ಬಂದಿವೆ. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ, ಜಾತಿ ಗಣತಿ ವೈಜ್ಞಾನಿಕವಾಗಿ ಆಗಿದೆಯೇ ಎಂಬ ಬಗ್ಗೆ ಸ್ಪಷ್ಟೀಕರಣ ಕೇಳಿದ್ದೇವೆ.
ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ಬೆಂಬಲವಾಗಿ ನಿಲ್ಲುತ್ತೇವೆ, ಕೇಂದ್ರ ಸರಕಾರದ ವರ್ಗೀಕರಣದ ಪ್ರಕಾರ ನಾನೂ ಸಹಾ ಇತರೆ ಹಿಂದುಳಿದ ವರ್ಗದ ಸಮುದಾಯದಕ್ಕೆ ಸೇರುತ್ತೇನೆ, ಆದರೆ, ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು.
ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ವಿಚಾರ ನನಗೆ ಗೊತ್ತಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ, ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.
















