• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

cknewsnow desk by cknewsnow desk
December 19, 2023
in COVID-19, NATION, STATE
Reading Time: 1 min read
0
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ
931
VIEWS
FacebookTwitterWhatsuplinkedinEmail

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

ಬೆಂಗಳೂರು: ಕೊರೊನಾ ರೂಪಾಂತರಿ ತಳಿ ಜೆಎನ್.1 ಹೊಸ ವರ್ಷದ ಸಂಭ್ರಮಕ್ಕೆ ಕೊಳ್ಳಿ ಇಡುವ ಎಲ್ಲಾ ಸಾದ್ಯತೆ ಕಾಣುತ್ತಿದೆ.

ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಕಂಡು ಬಂದಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು, ಉಸಿರಾಟದ ತೊಂದರೆ ಇರುವವರು ಹಾಗೂ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಅಲ್ಲದೆ, ಹೆಚ್ಚು ಜನ ಸೇರುವ ಹೊಸ ವರ್ಷ ಹಾಗೂ ಕ್ರಿಸ್ ಮಸ್ ವೇಳೆಯಲ್ಲಿ ಕೆಲ ಗಂಭೀರ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ನಡೆಸುತ್ತಿದೆ.

ರಾಷ್ಟ್ರದ ವಿವಿಧ ಭಾಗಗಳಲ್ಲಿ ರೂಪಾಂತರಿ ತಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸಲಹಾ ಸಮಿತಿಯಿಂದ ಸಲಹೆ

ಡಾ.ರವಿ ನೇತೃತ್ವದ ಸಲಹಾ ಸಮಿತಿ ಕಳೆದ ಎರಡು ದಿನಗಳಿಂದ ಸಭೆ ನಡೆಸಿ ಸರಕಾರಕ್ಕೆ ಕೆಲ ಪ್ರಮುಖ ಸಲಹೆ, ಸೂಚನೆಗಳನ್ನು ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಾಳೆ (ಮಂಗಳವಾರ) ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಲಹಾ ಸಮಿತಿಯ ಶಿಫಾರಸುಗಳನ್ನು ಆದೇಶದ ಮೂಲಕ ಜಾರಿಗೊಳಿಸಲಿದೆ.

ರೂಪಾಂತರಿ ತಳಿ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ, ಆದರೆ ಅತಿ ಎಚ್ಚರಿಕೆ ಅವಶ್ಯಕ ಎಂದಿರುವ ಸಲಹಾ ಸಮಿತಿ, ರಾಜ್ಯಾದ್ಯಂತ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಸಲಹೆ ಮಾಡಿದೆ.

ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಅಲರ್ಟ್

ಕೇರಳ ಗಡಿಭಾಗಕ್ಕೆ ಹೊಂದಿಕೊಂಡಿರುವ ಚಾಮರಾಜನಗರ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಭಾಗದಲ್ಲಿ ಒಂದಷ್ಟು ಹೆಚ್ಚಿನ ಮುಂಜಾಗ್ರತೆ ಅವಶ್ಯವಿದೆ. ಈ ಬಗ್ಗೆ ಸರಕಾರ ಈವರೆಗೆ ಕೇವಲ ಸೂಚನೆ ಕೊಟ್ಟಿದೆಯೆ ಹೊರತು ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ.

ಕೋವಿಡ್ ಲಸಿಕೆ ನೀಡುವುದರ ಜತೆಗೆ ಪರೀಕ್ಷೆಗಳನ್ನು ಕೂಡ ಹೆಚ್ಚಿಸಿ, ಅದರ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು.

ಉಸಿರಾಟದ ಸಮಸ್ಯೆ ಇರುವವರಿಗೆ ಮೊದಲ ಹಂತದಲ್ಲಿ ಪರೀಕ್ಷೆ ಮಾಡಿದರೆ, ಇದರ ಫಲಿತಾಂಶದ ಆಧಾರದ ಮೇಲೆ ಈ ಸಾಂಕ್ರಾಮಿಕದ ಸ್ವರೂಪ ತಿಳಿಯಲು ಸಾಧ್ಯ ಎಂದು ವೈದ್ಯರ ತಂಡ ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ಸಿಕೆನ್ಯೂಸ್ ನೌ ಗೆ ಸಿಕ್ಕಿದೆ.

60 ವರ್ಷ ಮೇಲ್ಪಟ್ಟವರು ಮತ್ತು ತೀವ್ರ ಆರೋಗ್ಯ ಸಮಸ್ಯೆ ಇರುವವರು ಮಾಸ್ಕ್ ಧರಿಸುವ ಜೊತೆಗೆ ಜನಸಂದಣಿಯಿಂದ ದೂರ ಉಳಿಯುವುದು ಉತ್ತಮ.

ಮುನ್ನೆಚ್ಚರಿಕೆಯಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ನಿಗಾ ಘಟಕಗಳನ್ನು ಮೀಸಲಿಡಬೇಕು, ಪ್ರಾಥಮಿಕ ಜಿಲ್ಲಾ ಆಸ್ಪತ್ರೆಗಳಲ್ಲೂ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುವಂತಾಗಬೇಕು, ಸೋಂಕಿಗೆ ಅಗತ್ಯವಿರುವ ಔಷಧಗಳು ಮತ್ತು ಆಕ್ಸಿಜನ್ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರಕಾರ ಯಾವುದೇ ಮಾರ್ಗಸೂಚಿಯನ್ನು ಈವರೆಗೆ ನೀಡಿಲ್ಲ. ಹೊಸ ರೂಪಾಂತರಿ ತಳಿ ಬಗ್ಗೆ ಇದುವರೆಗೂ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಕೇಂದ್ರ ಸರಕಾರ ಯಾವುದೇ ಮಾರ್ಗಸೂಚಿಗಳನ್ನು ನೀಡಿಲ್ಲ.ಆದರೆ ರೂಪಾಂತರಿ ತಳಿ ರಾಷ್ಟ್ರದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ನಾವು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವುದು ಅವಶ್ಯಕ ಎಂದಿದೆ ಸಲಹಾ ಸಮಿತಿ.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು; ಶೀತ, ಜ್ವರ, ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು, ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಲಿದೆ, ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲದ ಕಾರಣ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

Tags: ckcknewsnowcovidcovide new vairantHealthkarnatakakerala
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೇಟೆಗೆ ಸಿಗದ ದಾವೂದ್‌; ಕೇಂದ್ರದ ಬಗ್ಗೆ ನೂರೆಂಟು ಪ್ರಶ್ನೆ

ಬೇಟೆಗೆ ಸಿಗದ ದಾವೂದ್‌; ಕೇಂದ್ರದ ಬಗ್ಗೆ ನೂರೆಂಟು ಪ್ರಶ್ನೆ

Leave a Reply Cancel reply

Your email address will not be published. Required fields are marked *

Recommended

ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಅತಿಥಿ ಉಪನ್ಯಾಸಕ ಹುದ್ದೆ: 55,000ಕ್ಕೂ ಹೆಚ್ಚು ಅರ್ಜಿ!

4 years ago
ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ

ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ