• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

P K Channakrishna by P K Channakrishna
December 20, 2023
in POLITICS, STATE
Reading Time: 1 min read
0
ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್
1.5k
VIEWS
FacebookTwitterWhatsuplinkedinEmail

ಕಾಂಗ್ರೆಸ್ 35 ಮಂದಿಗೆ ಜಾಕ್‌ ಪಾಟ್; ಹೆಸರುಗಳು ಆಖೈರು

ನವದೆಹಲಿ/ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ನ 35 ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಧಕ್ಕಿದೆ.

ಈ ಪೈಕಿ ಹ್ಯಾಟ್ರಿಕ್‌ ಹೊಡೆದಿರುವ ಬಾಗೇಪಲ್ಲಿ ಕ್ಷೇತ್ರದ ಹಿರಿಯ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿ ಅವರಿಗೆ ಅತ್ಯಂತ ಪ್ರಮುಖವಾದ ನಿಗಮ-ಮಂಡಳಿ ದೊರೆಯಲಿದೆ. ಪಟ್ಟಿಯಲ್ಲಿ ಅವರ ಹೆಸರಿದೆ ಎಂಬ ಮಾಹಿತಿ ಸಿಕೆನ್ಯೂಸ್‌ ನೌ ಗೆ ಸಿಕ್ಕಿದೆ.

ಮೊದಲ ಬಾರಿಗೆ ಶಾಸಕರಾಗಿರುವ ಚಿಕ್ಕಬಳ್ಳಾಪುರದ ಪ್ರದೀಪ್‌ ಈಶ್ವರ್‌ ಅವರಿಗೆ ನಿಗಮ ಮಂಡಳಿ ಅಥವಾ ರಾಜಕೀಯ ಕಾರ್ಯದರ್ಶಿ ಭಾಗ್ಯವಿಲ್ಲ. ಆದರೆ, ಪ್ರಖರ ವಾಗ್ಮಿ ಆಗಿರುವ ಅವರಿಗೆ ಪಕ್ಷದಲ್ಲಿ ಆಯಕಟ್ಟಿನ ಜಾಗ ನೀಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ. ಉಳಿದಂತೆ ಜಿಲ್ಲೆ ಡಾ.ಎಂ.ಸಿ.ಸುಧಾಕರ್‌ ಅವರು ಈಗಾಗಲೇ ಸಚಿವ ಸಂಪುಟದಲ್ಲಿ ಇದ್ದಾರೆ.

ಕೋಲಾರಕ್ಕೆ ಬಂದರೆ, ಬಂಗಾರಪೇಟೆ ಶಾಸಕ ಎಸ್.ಎನ್.‌ನಾರಾಯಣಸ್ವಾಮಿ ಅವರ ಹೆಸರು ಪಟ್ಟಿಯಲ್ಲಿದೆ. ಎರಡನೇ ಬಾರಿಗೆ ಶಾಸಕರಾಗಿರುವ ಕೊತ್ತನೂರು ಮಂಜು ಅವರ ಹೆಸರು ಕೂಡ ಇದೆ ಎನ್ನುವ ಮಾಹಿತಿ ಇದೆ. ಸಂಪುಟದಲ್ಲಿ ಕೋಲಾರ ಜಿಲ್ಲೆಗೆ ಅವಕಾಶ ಇಲ್ಲದ ಕಾರಣಕ್ಕೆ ನಿಗಮ ಮಂಡಳಿಗಳಲ್ಲಿ ಜಿಲ್ಲೆಗೆ ಹೆಚ್ಚು ಅವಕಾಶ ಕೊಡುವ ಇರಾದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ತಿಳಿದು ಬಂದಿದೆ.

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಈಗಾಗಲೇ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್‌ ಸದಸ್ಯ ನಸೀರ್‌ ಅಹಮದ್‌ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದಾರೆ. ಕೆಜಿಎಫ್‌ ಶಾಸಕಿ ರೂಪಕಲಾ ಶಶಿಧರ್‌ ಅವರ ಹೆಸರೂ ಪಟ್ಟಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ನಿಗಮ-ಮಂಡಳಿಗಳಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳ ರಾಜಕೀಯ ಕಾರ್ಯದರ್ಶಿಗಳಾಗಿ ತಲಾ ಇಬ್ಬರು ಹಿರಿಯ ಶಾಸಕರನ್ನು ಕಾಂಗ್ರೆಸ್ ವರಿಷ್ಠರು ನೇಮಕ ಮಾಡಿದ್ದಾರೆ.

ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮ

ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷದ ಪದಾಧಿಕಾರಿಗಳ ಪುನಾರಚನೆ ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ವರಿಷ್ಠರೊಟ್ಟಿಗೆ ಸರಣಿ ಸಭೆಗಳನ್ನು ನಡೆಸಿದ ನಂತರ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.

ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ 35 ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ತೀರ್ಮಾನ ಕೈಗೊಳ್ಳಲಾಯಿತು.

ಪ್ರಥಮ ಬಾರಿ ಶಾಸಕರಾದವರಿಗೆ ಅವಕಾಶ ಇಲ್ಲ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದವರಿಗೆ, ಕಾರ್ಯಕರ್ತರಿಗೆ, ವಿಧಾನ ಪರಿಷತ್ ಸದಸ್ಯರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ದೊರೆತಿಲ್ಲ. ಸಿದ್ಧಗೊಂಡ ಪಟ್ಟಿಗೆ ಅಂಕಿತ ಹಾಕಿಸಿಕೊಳ್ಳಲು ಎಐಸಿಸಿ ಅಧ್ಯಕ್ಷರಿಗೆ ಪಟ್ಟಿ ರವಾನಿಸಿದ್ದು, ಯಾವುದೇ ಸಮಯದಲ್ಲಿ ಪ್ರಕಟಗೊಳ್ಳಲಿದೆ.

ವರಿಷ್ಠರು ಹಸಿರು ನಿಶಾನೆ ನೀಡಿದ ನಂತರ ಸಂಬಂಧಪಟ್ಟ ಇಲಾಖೆಗಳ ಮೂಲಕ ಅಧ್ಯಕ್ಷರ ನೇಮಕಾತಿಯ ಸರಕಾರಿ ಆದೇಶ ಹೊರಬೀಳಲಿದೆ.

Tags: boardchikkaballapurckcknewsnowCongresscorporationkarnataka governmentkolarPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

4 years ago
ದೇವರೆಡ್ಡಿಪಲ್ಲಿ ಗ್ರಾಮಕ್ಕೆ ಡಿಕೆಶಿ ಭೇಟಿ; ಕೋವಿಡ್‌ನಿಂದ ಮೃತಪಟ್ಟ ಮುಖಂಡ ನಾಗಿರೆಡ್ಡಿ ಕುಟುಂಬಕ್ಕೆ ಸಾಂತ್ವನ

ದೇವರೆಡ್ಡಿಪಲ್ಲಿ ಗ್ರಾಮಕ್ಕೆ ಡಿಕೆಶಿ ಭೇಟಿ; ಕೋವಿಡ್‌ನಿಂದ ಮೃತಪಟ್ಟ ಮುಖಂಡ ನಾಗಿರೆಡ್ಡಿ ಕುಟುಂಬಕ್ಕೆ ಸಾಂತ್ವನ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ