• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

cknewsnow desk by cknewsnow desk
December 21, 2023
in NATION, POLITICS, STATE
Reading Time: 2 mins read
0
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ
1k
VIEWS
FacebookTwitterWhatsuplinkedinEmail

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಹೆಚ್.ಡಿ.ದೇವೇಗೌಡರು & ಹೆಚ್.ಡಿ.ಕುಮಾರಸ್ವಾಮಿ; ಕಾಡುಗೊಲ್ಲರಿಗೆ ಮೀಸಲು, ಕೊಬರಿ ಖರೀದಿ, ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಿ ಜತೆ ಚರ್ಚಿಸಿದ ಮಾಜಿ ಪ್ರಧಾನಿ

ಹೆಚ್‌ಡಿಕೆ ಸುದ್ದಿಗೋಷ್ಠಿ ಮುಖ್ಯಾಂಶಗಳು

  • ಜನವರಿ ಅಂತ್ಯಕ್ಕೆ ಕ್ಷೇತ್ರ ಹಂಚಿಕೆ
  • ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ
  • ನಿಖಿಲ್‌ 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ
  • ಮಲ್ಲಿಕಾರ್ಜುನ ಖರ್ಗೆ ನಡೆ ಬಗ್ಗೆ ಕಟು ಟೀಕೆ


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು.

ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಪ್ರಧಾನಿಗಳ ಕಾರ್ಯಾಲಯಕ್ಕೆ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು ಆಗಮಿಸಿದರು. ಇಬ್ಬರು ನಾಯಕರ ಜತೆ ಪ್ರಧಾನಿಗಳು ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಿದರು.

ಇದೇ ವೇಳೆ ಕೊಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್‌ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ, ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ ಜತೆಯಲ್ಲಿದ್ದರು.

ಬಳಿಕ ಮಾಜಿ ಮುಖ್ಯಮಂತ್ರಿ ಕುಮಾಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನಿಖಿಲ್ ಕುಮಾರಸ್ವಾಮಿ ಪ್ರಚಾರ ಮಾಡುತ್ತಾರೆ

ನಿಖಿಲ್‌ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ? ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಮಾಜಿ ಮುಖ್ಯಮಂತ್ರಿಗಳು; ನಿಖಿಲ್ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.

ಜನವರಿ ಅಂತ್ಯದ ಹೊತ್ತಿಗೆ ಕ್ಷೇತ್ರ ಹಂಚಿಕೆ

ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎನ್ನುವ ಪ್ರಶ್ನೆಗೂ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ನಾವು ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲಾ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಲೋಕಸಭೆ ಚುನಾವಣೆಗೆ ನಿಲ್ಲಲ್ಲ ಎಂದ ಹೆಚ್‌ಡಿಕೆ

ತಮ್ಮ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಅವರು; ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.

ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಕುಮಾರಸ್ವಾಮಿ ಅವರು; ಯಾರ ಹಣೆಯ ಮೇಲೆ ಏನ್ ಬರೆದಿದೆಯೋ ಅಂತ ಗೊತ್ತಿಲ್ಲಾ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.

ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಹಾಗೂ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಉರುಳುತ್ತಾ ಎನ್ನುವ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಕರ್ನಾಟದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ, ಅಜೀತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.

ಪ್ರಧಾನಿಗಳ ಭೇಟಿ ಬಗ್ಗೆ ಹೆಚ್ಡಿಕೆ ಹರ್ಷ

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ನಡೆ ಬಗ್ಗೆ ಕಟು ಟೀಕೆ

ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್‌ ಪಕ್ಷ ಸಂಸತ್‌ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್‌ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು ಕುಮಾರಸ್ವಾಮಿ ಅವರು.

ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು? ಎಂದ ಕೇಳಿದ ಮಾಜಿ ಮುಖ್ಯಮಂತ್ರಿಗಳು; ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು ಕರ್ನಾಟಕದಲ್ಲಿ. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದರು.

#PictureOfTheIndia @hd_kumaraswamy @JanataDal_S @BJP4Karnataka #NarendraModi #hddevegowda pic.twitter.com/bvrgkBTwUy

— Channakrishna PK (@pkchannakrishna) December 21, 2023

Tags: ckcknewsnowhd kumaraswamyindiakarnatakanewsPM Narendra Modi meets former PM HD DeveGowdaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಅವರಿಂದ ವೈಕುಂಠ ಏಕಾದಶಿಗೆ ಒಂದು ಲಕ್ಷ ಲಡ್ಡು ಪ್ರಸಾದ

ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಅವರಿಂದ ವೈಕುಂಠ ಏಕಾದಶಿಗೆ ಒಂದು ಲಕ್ಷ ಲಡ್ಡು ಪ್ರಸಾದ

Leave a Reply Cancel reply

Your email address will not be published. Required fields are marked *

Recommended

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್‌ ಶಾ ಕ್ಲಾಸ್

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್‌ ಶಾ ಕ್ಲಾಸ್

4 years ago
ಸರಕಾರದಿಂದ H.D.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್!

ಸರಕಾರದಿಂದ H.D.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್!

2 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ