• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ

cknewsnow desk by cknewsnow desk
January 4, 2024
in NATION, POLITICS, STATE
Reading Time: 2 mins read
0
ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು  ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ
1k
VIEWS
FacebookTwitterWhatsuplinkedinEmail

ಕೇಂದ್ರ ಸಚಿವ ಸ್ಥಾನ ಸಿಗುತ್ತದೆ ಎನ್ನುವ ನಿರೀಕ್ಷೆ; ಅಗ್ನಿಪರೀಕ್ಷೆಗೆ ತಾಲೀಮು ನಡೆಸುತ್ತಿರುವ ನಾಯಕರು

ಚಿಕ್ಕಬಳ್ಳಾಪುರ ಟಿಕೆಟ್’ಗೆ ಡಾ.ಕೆ.ಸುಧಾಕರ್ ಪೈಪೋಟಿ; ಮಗನಿಗಾಗಿ ಯಲಹಂಕ ವಿಶ್ವನಾಥ್ ಲಾಬಿ

ಬೆಂಗಳೂರು: ಮುಂದುವರಿದ ನರೇಂದ್ರ ಮೋದಿ ಅವರ ಅಲೆಯಲ್ಲಿ ದಡ ಸೇರಿಕೊಳ್ಳಲು ರಾಜ್ಯ ಬಿಜೆಪಿ ನಾಯಕರ ಧಾವಂತ ಹೆಚ್ಚಾಗಿದ್ದು, ಇದು ಲೋಕಸಭೆ ಟಿಕೆಟ್ ಪಡೆಯಲು ಭಾರೀ ಪೈಪೋಟಿಗೆ ಕಾರಣವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜ್ಯ ಬಿಜೆಪಿ ನಾಯಕರಲ್ಲಿ ಅನೇಕರು ಕೇಂದ್ರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಲೋಕಸಭೆಗೆ ಟಿಕೆಟ್ ಗಿಟ್ಟಿಸಲು ಈಗಾಗಲೇ ಹರಸಾಹಸ ಶುರು ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಮುಖಂಡರು ದೆಹಲಿ ರಾಜಕಾರಣಕ್ಕೆ ತೆರಳಲು ಭಾರೀ ಆಸಕ್ತಿ ತೋರುತ್ತಿದ್ದಾರೆ ಎಂದು ಗೊತ್ತಾಗಿದೆ.

ಹೀನಾಯ ಸೋಲು ಕಂಡಿದ್ದ ನಾಯಕರು

ರಾಜ್ಯ ಬಿಜೆಪಿ ಆಡಳಿತದಲ್ಲಿ ಸತತವಾಗಿ ಅಧಿಕಾರ ಅನುಭವಿಸಿದ್ದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಅಲ್ಲದೆ, ಸಿ.ಟಿ. ರವಿ, ಡಾ.ಕೆ.ಸುಧಾಕರ್ ಸೇರಿದಂತೆ ಕೆಲವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಇವರೆಲ್ಲರೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಅಲೆಯಲ್ಲಿ ಜಯಗಳಿಸಿ ಸಂಸದರಾಗುವುದಷ್ಟೇ ಅಲ್ಲದೆ, ಸಚಿವ ಸ್ಥಾನವೂ ಧಕ್ಕಬಹುದೆಂಬ ಆಶಾಭಾವನೆಯಲ್ಲಿದ್ದಾರೆ.

ಅಲ್ಲದೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದು ಕೇಂದ್ರ ರಾಜಕಾರಣಕ್ಕೆ ತೆರಳುವ ಉತ್ಸಾಹದಲ್ಲಿದ್ದಾರೆ ಎನ್ನುವುದು ಅತ್ಯಂತ ಆಸಕ್ತಿದಾಯಕ ಅಂಶ.

ಹಿರಿತನ, ಜಾತಿ ಆಧಾರ

ಸಂಸದರಾದರೆ ತಮ್ಮ ಹಿರಿತನ, ಜಾತಿ ಆಧಾರದ ಮೇಲೆ ತಮಗೆ ಕೇಂದ್ರದಲ್ಲಿ ಅಧಿಕಾರ ಸಿಗಬಹುದು ಎಂಬ ಆಲೋಚನೆಯಲ್ಲಿದ್ದಾರೆ. ಹಿಂದೆ ಡಿ.ವಿ.ಸದಾನಂದ ಗೌಡರಿಗೆ ಇದೇ ರೀತಿ ಅಧಿಕಾರ ಸಿಕ್ಕಿತ್ತು. ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಅವರು ಮೋದಿ ಅವರ ಸಂಪುಟ ಪ್ರವೇಶಿಸಿ ಪ್ರಭಾವೀ ರೈಲ್ವೆ ಖಾತೆಯನ್ನು ಪಡೆದುಕೊಂಡಿದ್ದರು.

ಗೋವಿಂದ ಕಾರಜೋಳ ಅವರು ವಿಜಯಪುರ ಮೀಸಲು ಕ್ಷೇತ್ರದಿಂದ, ಶ್ರೀರಾಮುಲು ಅವರು ಬಳ್ಳಾರಿ ಮೀಸಲು ಕ್ಷೇತ್ರ, ಸಿ.ಟಿ. ರವಿ ಅವರು ಬೆಂಗಳೂರು ಉತ್ತರ ಅಥವಾ ಉಡುಪಿ-ಚಿಕ್ಕಮಗಳೂರು, ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಇಲ್ಲವೇ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬೆಂಗಳೂರು ಗ್ರಾಮಾಂತರದಿಂದ ಕಣಕ್ಕಿಳಿದು ಸಂಸದರಾಗಿ ಒಕ್ಕಲಿಗ ಕೋಟಾದ ಮೇಲೆ ಸಚಿವರಾಗಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.

ಅಧಿಕಾರ ಪಡೆಯುವ ಹಂಬಲ

ಇದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಪ್ರಭಾವೀ ನಾಯಕರುಗಳು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಅಧಿಕಾರ ಪಡೆಯುವ ಹಂಬಲದಲ್ಲಿದ್ದಾರೆ. ಅಷ್ಟೇ ಅಲ್ಲ, ಟಿಕೆಟ್ ಪಡೆಯಲು ತಮ್ಮ ಮುಖಂಡರುಗಳ ಮೂಲಕ ಕೇಂದ್ರ ನಾಯಕರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಹಲವು ಕಾರಣಗಳಿಗಾಗಿ ತನ್ನ ವರ್ಚಸ್ಸನ್ನು ಕುಂದಿಸಿಕೊಂಡಿದೆ. ಇದು ಹಾಲಿ ಸರಕಾರದ ಬಹುದೊಡ್ಡ ಮೈನಸ್ ಪಾಯಂಟ್.

ಕುಂದುತ್ತಿದೆ ಗ್ಯಾರಂಟಿ ಹವಾ

ಐದು ಗ್ಯಾರಂಟಿ ಯೋಜನೆಗಳ ಜಾರಿ ಕಾರಣಕ್ಕೆ ಆರಂಭದಲ್ಲಿ ಸರಕಾರಕ್ಕೆ ಸಾಕಷ್ಟು ಜನಪ್ರಿಯತೆ ಬಂದಿದ್ದು ನಿಜ. ಆದರೆ, ನಂತರದ ಬೆಳವಣಿಗೆಗಳಲ್ಲಿ ಆ ಜನಪ್ರಿಯತೆ ನಿರಂತರವಾಗಿ ಕುಸಿಯುತ್ತಾ ಸಾಗಿದೆ. ಇದನ್ನು ಬಿಜೆಪಿ ಲಾಭ ಮಾಡಿಕೊಳ್ಳುವುದು ಖಚಿತ.

ಹಿಂದುಳಿದ ವರ್ಗಗಳ ಆಯೋಗದ ವರದಿ ಜಾರಿಗೆ ಮುಂದಾಗಿರುವುದು, ಬಲಿಷ್ಠ ಲಿಂಗಾಯತ ಹಾಗೂ ಒಕ್ಕಲಿಗರ ಕೆಂಗಣ್ಣಿಗೆ ಸರಕಾರ ಗುರಿಯಾಗಿದೆ.

ಈ ಎರಡೂ ಸಮುದಾಯಗಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದವು, ಈ ಕಾರಣಕ್ಕೆ ವಿರೋಧವಾಗುವುದರ ಜತೆಗೆ ಅತಿಯಾಗಿ ಅಲ್ಪಸಂಖ್ಯಾತರನ್ನು ಓಲೈಸುತ್ತಿರುವುದು ಉಳಿದ ಸಮಾಜಗಳವರಿಗೆ ಕಿರಿಕಿರಿ ಉಂಟು ಮಾಡಿದೆ. ಈ ಕಾರಣಕ್ಕೆ ಅಹಿಂದ ವಲಯದಲ್ಲಿರುವ ಕೆಲ ಸಮುದಾಯಗಳನ್ನು ಬಿಟ್ಟರೆ ಉಳಿದ ಬಹುತೇಕ ಸಮುದಾಯಗಳು ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿವೆ.

ಮತದಾರರಲ್ಲಿ ಕೈ ಪಕ್ಷದ ಮೇಲೆ ಭ್ರಮನಿರಸನ

ಐದು ಗ್ಯಾರಂಟಿಗಳ ಜಾರಿಯ ಗುಂಗಿನಲ್ಲಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ಕೊಡುತ್ತಿಲ್ಲ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುತ್ತಿಲ್ಲ, ಇದು ಮತದಾರರಲ್ಲಿ ಬೇಸರ ಮೂಡಿಸಿದೆ. ಇದಕ್ಕಿಂತ ಮಿಗಿಲಾಗಿ ಆಡಳಿತ ಪಕ್ಷದ ಶಾಸಕರೇ ಈಗ ಅನುದಾನದ ವಿಷಯದಲ್ಲಿ ಬೇಸರಗೊಂಡಿದ್ದಾರೆ. ಇದು ಮಾರ ವಿಭಜನೆಗೆ ಕಾರಣವಾಗುವ ಭಯವೂ ಕಾಂಗ್ರೆಸ್ ಪಕ್ಷವನ್ನು ಕಾಡುತ್ತಿದೆ.

ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವರ್ಗಿ ದಂಧೆಯೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದೆಲ್ಲದಕ್ಕೂ ಮಿಗಿಲಾಗಿ ಮತ್ತೆ ರಾಷ್ಟ್ರದಲ್ಲಿ ಸದೃಢ ಸರಕಾರ ತರಲು ನರೇಂದ್ರ ಮೋದಿ ಅವರನ್ನೇ ಬೆಂಬಲಿಸಬೇಕೆಂಬ ಹುಮ್ಮಸ್ಸು ಮತದಾರರಲ್ಲಿ ಕಂಡುಬರುತ್ತಿದೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿರುವ ಹಲವಾರು ಸಮೀಕ್ಷೆಗಳಲ್ಲಿ ಈ ಅಂಶ ಸ್ಪಷ್ಟವಾಗಿ ಹೊರಬಿದ್ದಿದೆ.

ಅಲ್ಲದೆ, ರಾಮಮಂದಿರ ನಿರ್ಮಾಣ ನರೇಂದ್ರ ಮೋದಿ ಅವರ ಕಾರ್ಯ ಕ್ಷಮತೆಗೆ ಕೈಗನ್ನಡಿ ಆಗಿದ್ದು, ಕಾಂಗ್ರೆಸ್ ಪಾಲಿಗೆ ಇದು ಪ್ರಶ್ನಾರ್ಥಕವಾಗಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅಧಿಕಾರ ಇಲ್ಲದೆ ಮನೆಯಲ್ಲಿರುವ ಬಿಜೆಪಿ ನಾಯಕರು ಲೋಕಸಭೆ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಭಾರೀ ಪೈಪೋಟಿ ಶುರುವಾಗಿದೆ.

bjp, Loksabha election, demand for ticket, Congress, karnataka, politics, ck, cknewsnow,

Tags: bjpckcknewsnowCongressdemand for ticketkarnatakaloksabha electionPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ

ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ

Leave a Reply Cancel reply

Your email address will not be published. Required fields are marked *

Recommended

ಕೇಂದ್ರ ಸರಕಾರದ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೆಸ್ ಸರಕಾರ; ಅದಕ್ಕೆ ಅಸಲಿ ಕಾರಣ ಏನು?

ಕೇಂದ್ರ ಸರಕಾರದ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೆಸ್ ಸರಕಾರ; ಅದಕ್ಕೆ ಅಸಲಿ ಕಾರಣ ಏನು?

3 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಹೇಳಲು ನಾನು ‘ಜ್ಯೋತಿಷಿ’ ಅಲ್ಲ ಎಂದ ಡಿಸಿಎಂ; ಸೈನಿಕನಿಗೆ ಪರೋಕ್ಷ ಟಾಂಗ್

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ