• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ವಿಕ್ರಮ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತ ಎಲ್ಲವೂ ಒಬ್ಬರದೇ.. ಅವರೇ ಶ್ರೀಮನ್’ಸಿದ್ದರಾಮಣ್ಣ!!

cknewsnow desk by cknewsnow desk
January 6, 2024
in NATION, POLITICS, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್
939
VIEWS
FacebookTwitterWhatsuplinkedinEmail

ಸಿಎಂ ಸೇರಿ ಸಚಿವರಾದ ಪರಮೇಶ್ವರ್, ರಾಜಣ್ಣಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ ಎಂದು ಪ್ರಶ್ನೆ

ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ; ಅಧಿಕಾರಿಯಿಂದ 50 ಲಕ್ಷ ಕಿತ್ತ ಶಾಸಕನ ವಿರುದ್ಧ ಯಾವ ತನಿಖೆ ನಡೆಸುತ್ತೀರಿ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಪ್ರತ್ಯುತ್ತರ ನೀಡಿರುವ ಅವರು; ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ.

ಅಲ್ಲದೆ, ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ.ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. ‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದು ಅವರು ಕಿಡಿಕಾರಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ.. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ? ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡುತ್ತೀರಾ? ನಾನು ಫಿಕ್ಸ್ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸಚಿವರಿಬ್ಬರಿಗೆ ಸವಾಲು ಹಾಕಿದ್ದಾರೆ.

ಸರಿ, ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ ಎಂದು ಎಕ್ಸ್ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ಜತೆ FIR ಪ್ರತಿಯನ್ನು ಅವರು ಟ್ಯಾಗ್ ಮಾಡಿದ್ದಾರೆ.

ಕರ್ನಾಟಕದ 'ನೀರೋ'ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ @DrParameshwara ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ 'ಪರಿಪೂರ್ಣ ಸಹಕಾರ' ಕೊಡುವ ಹಾಸನ ಜಿಲ್ಲಾ ಉಸ್ತುವಾರಿ @KNRajanna_Off ಅವರು ಸಂಸದ @mepratap ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ.1/7 pic.twitter.com/MUuNwo07IO

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 6, 2024

ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ ₹50 ಲಕ್ಷ ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ? ಎಂದು ಅವರು ಸಚಿವರನ್ನು ಕೇಳಿದ್ದಾರೆ.

ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ!! ಎಂದು ಸಿಎಂ ಅವರಿಗೆ ಟಾಂಗ್ ನೀಡಿದ್ದಾರೆ.

Tags: ckcknewsnowCongressforesthd kumaraswamypratap simhaVikram simha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಅಮಾನಿಭೈರ ಸಾಗರ ಏರಿ ಮೇಲೆ ಟಿಪ್ಪರ್‌ ಲಾರಿ ಅಪಘಾತ; ಕಟ್ಟೆಗೆ ಹಾನಿ

ಗುಡಿಬಂಡೆ ಅಮಾನಿಭೈರ ಸಾಗರ ಏರಿ ಮೇಲೆ ಟಿಪ್ಪರ್‌ ಲಾರಿ ಅಪಘಾತ; ಕಟ್ಟೆಗೆ ಹಾನಿ

Leave a Reply Cancel reply

Your email address will not be published. Required fields are marked *

Recommended

ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್

ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್

3 years ago
ನೈಸ್‌ ಅಕ್ರಮ ಪ್ರಸ್ತಾಪಿಸಿದ್ದ ಟಿ.ಬಿ.ಜಯಚಂದ್ರ ಅವರಿಗೆ ಜೀವ ಬೆದರಿಕೆ

ನೈಸ್‌ ಅಕ್ರಮ ಪ್ರಸ್ತಾಪಿಸಿದ್ದ ಟಿ.ಬಿ.ಜಯಚಂದ್ರ ಅವರಿಗೆ ಜೀವ ಬೆದರಿಕೆ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ