ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; ಡಿಸೆಂಬರ್ 27ರಂದೇ ವರದಿ
ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ ಹಾಗೂ ಸ್ವತಃ ಸಿಎಂ, ಡಿಸಿಎಂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು ಸಿಕೆನ್ಯೂಸ್ ನೌ ಡಿಸೆಂಬರ್ 27ರಂದೇ ವರದಿ ಮಾಡಿತ್ತು. ಕುಮಾರಸ್ವಾಮಿ ಅವರ ಹೇಳಿಕೆ ಈ ವರದಿ ಪುಷ್ಟಿ ನೀಡಿದೆ.
ಭಾನುವಾರದಂದು ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಹೆಚ್ಡಿಕೆ ಅವರು ಮಾಧ್ಯಮಗಳ ಜತೆ ಮಾತನಾಡಿದ್ದರು.
ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಅ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರು ಇವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದು ಕಾಂಗ್ರೆಸ್ ಹೆಜ್ಜೆಗಳನ್ನು ಬಹಿರಂಗ ಮಾಡಿತ್ತು.
ಈ ಬಗ್ಗೆ ಕೆಲ ಗುರುತರ ಅಂಶಗಳನ್ನು ಬಹಿರಂಗ ಮಾಡಿದ್ದ ಕುಮಾರಸ್ವಾಮಿ ಅವರು; ತಮ್ಮ ಕ್ಷೇತ್ರಗಳ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನು ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಅಂತಾರೆ. ಯಾವ ಕಾರಣಕ್ಕೆ ಇದನ್ನು ಮಾಡ್ತೀರಿ. ವಿರೋಧ ಪಕ್ಷ ಉಳಿಸೋಕೆ ಮಾಡ್ತಿರೋದಾ? ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಬಹಿರಂಗ ಮಾಡಿದ್ದಾರೆ.
ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಸಿದ್ದರಾಮಯ್ಯ ಅವರನ್ನೇ ಕುರಿತು ಹೇಳಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ. ಗಾಂಧಿಜೀ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ . ಇವರು ಮಾಡ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟುಗಳನ್ನು ಗೆಲ್ಲುವ ಒಂದೇ ಉದ್ದೇಶದಿಂದ ಸ್ವಪಕ್ಷದಲ್ಲಿರುವ ಮುಖಂಡರು, ನಾಯಕರನ್ನು ನಂಬದ ಸಿಎಂ, ಡಿಸಿಎಂ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಹಾಗೂ ನಾಯಕರ ಕಡೆ ಗಾಳ ಹಾಕುತ್ತಿದ್ದಾರೆ.
ಇಬ್ಬರು ಪಕ್ಷೇತರರು ಸೇರಿ 138 ಶಾಸಕರು ಇದ್ದರೂ ಕಾಂಗ್ರೆಸ್ ಪಕ್ಷಕ್ಕೆ ಅಸ್ಥಿರತೆ ಹಾಗೂ ಲೋಕಸಭೆ ಚುನಾವಣೆ ಸೋಲಿನ ಭೀತಿಯಿಂದ ಆಪರೇಷನ್ ಹಸ್ತ ಮಾಡುತ್ತಿದೆ ಎಂದು ಸಿಕೆನ್ಯೂಸ್ ನೌ ಕಳೆದ ಡಿಸೆಂಬರ್ 27ರಂದೇ ವರದಿ ಮಾಡಿತ್ತು.
ಅಧಿಕಾರ ಕೊಡುವ ಗ್ಯಾರಂಟಿ ಇಲ್ಲ; ಆದರೂ ಇಂಗದ ಆಪರೇಷನ್ ಹಸ್ತದ ದಾಹ