ಕೀರ್ತನಾ, ಯಶವಂತ್, ವಂದನಾ ಸಾಧನೆ ಮಾಡಿದ ಮಕ್ಕಳು
by GS Bharath Gudibande
ಗುಡಿಬಂಡೆ: ತಾಲೂಕಿನ ಆದರ್ಶ ವಿದ್ಯಾಲಯದ ಕೀರ್ತನಾ ಮತ್ತು ಯಶವಂತ್ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ವಂದನಾ ಎಂಬ ವಿದ್ಯಾರ್ಥಿಗಳು ರಸಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಕ್ಕಳ ಸಾಧನೆಯ ಬಗ್ಗೆ ಪೋಷಕರು, ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಮಕ್ಕಳು ಜಿಲ್ಲಾಮಟ್ಟದ ʼಪ್ರಾಚ್ಯಪ್ರಜ್ಞೆʼ ಸ್ಪರ್ಧೆಯ ರಸಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕ ಸಿ.ಎ.ಉಮಾಶಂಕರ್, ಮುಖ್ಯ ಶಿಕ್ಷಕ ಲಕ್ಷ್ಮೀ ನರಸಿಂಹ ಗೌಡ ಅವರಿಗೆ ತಾಲೂಕಿನಾದ್ಯಂತ ಅಭಿನಂದನೆ ವ್ಯಕ್ತವಾಗಿದೆ.
ಬಡವರ ಮಕ್ಕಳೇ ವ್ಯಾಸಂಗ ಮಾಡುವ ಶಾಲೆಯ ಮಕ್ಕಳ ಸಾಧನೆಗೆ ತಾಲೂಕಿನಾದ್ಯಂತರ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಹಾಗೂ ತಾಲೂಕಿನ ಜನತೆ ಮಕ್ಕಳಿಗೆ ಶುಭ ಕೋರಿದ್ದಾರೆ.
ಕೊಂಡರೆಡ್ಡಿಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಂದನಾ ಎಂಬ ವಿದ್ಯಾರ್ಥಿನಿ ಜಿಲ್ಲಾಮಟ್ಟದ ಪ್ರಾಚ್ಯ ಪ್ರಜ್ಞೆ ಸ್ಫರ್ಧೆಯ ಚಿತ್ರಕಲೆ ವಿಭಾಗದಲ್ಲಿ ತೃತೀಯ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರಾದ ಲವಾನಾಯಕ್, ನಾಗರಾಜ್ ಹಾಗೂ ಪ್ರಾಂಶುಪಾಲರಾದ ನಾಗರಾಜ್ ಅವರಿಗೂ ಪೋಷಕರು ಕೃತಜ್ಞತೆ ವ್ಯಕ್ತಪಡಿಸಿದರು.
ಗುಡಿಬಂಡೆ ತಾಲೂಕಿನಿಂದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೋತ್ಸಾಹ ನೀಡಿದ ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ಮುನೇಗೌಡ ಹಾಗೂ ಶಾಲೆಯ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಚಂದ್ರಶೇಖರ್ ಜಿ.ವಿ, ನೋಡಲ್ ಅಧಿಕಾರಿ, ಗುಡಿಬಂಡೆ