• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

cknewsnow desk by cknewsnow desk
January 13, 2024
in NATION, POLITICS, STATE
Reading Time: 1 min read
0
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು
984
VIEWS
FacebookTwitterWhatsuplinkedinEmail

ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿಏನು ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಯ್ತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನೆನಪಿನ ಶಕ್ತಿ ಇದೆ ಎಂದರು ಮಾಜಿ ಪ್ರಧಾನಿಗಳು.

ಮೋದಿ ವ್ರತಾಚರಣೆ ಬಗ್ಗೆ ಮೆಚ್ಚುಗೆ

ನರೇಂದ್ರ ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು; ಮೋದಿ‌ ಅವರು ನಿಷ್ಠೆಯಿಂದ, ಕ್ರಮಬದ್ದತೆಯಿಂದ ಮೋದಿ ವ್ರತಾಚರಣೆ ಮಾಡುತ್ತಿದ್ದಾರೆ. ಸೀತಾಮಾತೆ ಅಪಹರಣ ಮಾಡಿದ ನಾಸಿಕ್ ನಿಂದ ಅವರು ವ್ರತಾಚರಣೆ ಶುರು ಮಾಡಿದ್ದಾರೆ. ಅಲ್ಲಿ ಕರಿರಾಮ ಅಂತ ವಿಗ್ರಹ ಸ್ಥಾಪನೆ ಮಾಡಿದ್ದಾರೆ ಎಂದರು.

ಮೋದಿ ಅವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು ಮಾಜಿ ಪ್ರಧಾನಿಗಳು.

ನಾನು ಕೂಡ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. 99% ನಾನು ಹೋಗುತ್ತೇನೆ. ನನ್ನ ಶ್ರೀಮತಿ ಜೊತೆ ಹೋಗುವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಜನವರಿ 22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು; ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ ವಿಚಾರ. ಸಾಫ್ಟ್ ಹಿಂದುತ್ವವೋ, ಇನ್ನೊಂದೋ ಗೊತ್ತಿಲ್ಲ. ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗುವ ಹೇಳಿಕೆ ಸ್ವಾಗತಾರ್ಹ ಎಂದು ಅವರು ತಿಳಿಸಿದರು.

ಯುವನಿಧಿ ಯೋಜನೆ ಬಗ್ಗೆಯೂ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಈ ಯೋಜನೆ ಒಳ್ಳೆಯದು, ಯುವ ಜನರಿಗೆ ಹಣ ಕೊಡಲಿ. ಅದರಲ್ಲಿ ತಪ್ಪೇನೂ ಇಲ್ಲ. ಎಲ್ಲಾ ಯುವಕರಿಗೂ ಹಣ ಕೊಡಲಿ. ಆ ಯುವಜನರು ಕೂಡ ರಾಮ ಮಂದರಕ್ಕೆ ಹೋಗಿ ಬರಲಿ. ಕೂಡಲೇ ಯುವನಿಧಿಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಿ ಎಂದು ಹೇಳಿದರು.

ಹಾಸನದಿಂದ ಪ್ರಜ್ವಲ್ ಸ್ಪರ್ಧೆ

ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಮತ್ತೆ ಸ್ಪರ್ಧೆ ಮಾಡುತ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ; ಈ ಬಗ್ಗೆ ನಿಮಗೆ ಅನುಮಾನ ಏಕೆ? ಪ್ರಜ್ವಲ್ ಗೆ ಮೋದಿ‌ ಅವರು ಆಶೀರ್ವಾದ ಮಾಡ್ತಾರೆ‌. ಕುಮಾರಸ್ವಾಮಿ ಕೂಡಾ ಆಶೀರ್ವಾದ ಮಾಡ್ತಾರೆ. ನಾನು ಕೂಡಾ ಆಶೀರ್ವಾದ ಮಾಡಿದ್ದೀನಿ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.

Tags: ckcknewsnowhd devegowdahd kumaraswamynarendra modiPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

Leave a Reply Cancel reply

Your email address will not be published. Required fields are marked *

Recommended

ಡಿ.ಬಿ.ಚಂದ್ರೇಗೌಡ ಇನ್ನಿಲ್ಲ; ಕಳಚಿದ ಶ್ರೇಷ್ಠ ಸಂಸದೀಯ ಪರಂಪರೆಯ ಕೊಂಡಿ

ಡಿ.ಬಿ.ಚಂದ್ರೇಗೌಡ ಇನ್ನಿಲ್ಲ; ಕಳಚಿದ ಶ್ರೇಷ್ಠ ಸಂಸದೀಯ ಪರಂಪರೆಯ ಕೊಂಡಿ

3 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಜುಲೈ- ಆಗಸ್ಟ್ ತಿಂಗಳು ಕೌಶಲ್ಯ ಮಾಸ: ಡಿಸಿಎಂ ಘೋಷಣೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ