• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

cknewsnow desk by cknewsnow desk
January 23, 2024
in NATION, NEWS IN USE, STATE
Reading Time: 1 min read
0
ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ
1.1k
VIEWS
FacebookTwitterWhatsuplinkedinEmail

ಬಿರುಸಿನ ತಯಾರಿ ಮಾಡಿಕೊಳ್ಳುತ್ತಿದೆ ಚುನಾವಣೆ ಆಯೋಗ; ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್

ಬೆಂಗಳೂರು: ಮುಂದಿನ ಮಾರ್ಚ್ ಮೊದಲ ವಾರ, ತಪ್ಪಿದರೆ ಎರಡನೇ ವಾರ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ.

ಚುನಾವಣೆ ಆಯೋಗವು ಮುಕ್ತ ಮತ್ತು ಶಾಂತಿಯುತ ಚುನಾವಣೆ ನಡೆಸಲು ಬಿರುಸಿನ ತಯಾರಿ ಆರಂಭಿಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಏಳರಿಂದ ಹನ್ನೊಂದು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಿದೆ ಎನ್ನಲಾಗಿದ್ದು; ಲೋಕಸಭೆಯ 543 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಪುಟ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿ ಮಾಹಿತಿ ನೀಡಿ, ಫೆಬ್ರವರಿ 23ರ ಒಳಗೆ 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಅನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು ಎನ್ನಲಾಗಿದೆ.

ಫೆಬ್ರವರಿಯಲ್ಲೇ ಬಜೆಟ್

ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳಿಗೆ ಮಾಹಿತಿ ನೀಡಿ, ಫೆಬ್ರವರಿ ಮೂರನೇ ವಾರದ ವೇಳೆಗೆ ಮುಂಗಡ ಪತ್ರ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಮತ್ತು ಸರಕಾರದ ಯೋಜನೆಗಳ ಅನುಷ್ಟಾನಕ್ಕೆ ಗಡುವು ನೀಡಿದೆ.

ಆಯೋಗದ ಸಲಹೆಯಂತೆ ಸಂಪುಟ ಸಭೆಯಲ್ಲಿ ಫೆಬ್ರವರಿ 12ರಂದು ವಿಧಾನ ಮಂಡಲದ ಅಧಿವೇಶನ ಕರೆದು ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡುವ ನಿರ್ಧಾರವನ್ನು ಸರಕಾರ ಕೈಗೊಂಡಿತು.

ಕರ್ನಾಟಕದಲ್ಲಿ 2 ಹಂತ

ಸರಕಾಕ್ಕೆ ಬಂದಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ; ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಈ ಬಾರಿಯೂ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ ಅಂತ್ಯದ ವೇಳೆಗೆ ನಮ್ಮಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ, ಮತ ಎಣಿಕೆ ಮೇ ಮೂರನೇ ವಾರದಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಚುನಾವಣಾ ಆಯೋಗದ ಸಲಹೆಯಂತೆ ಜನವರಿ ಮೂರನೇ ವಾರದ ನಂತರ ಸರಕಾರ ಯಾವುದೇ ವರ್ಗಾವರ್ಗಿಗಳನ್ನು ಮಾಡುವಂತಿಲ್ಲ. ಆ ನಂತರ ಆಯೋಗ ತನಗೆ ಬೇಕಾದಂತೆ ಅಧಿಕಾರಿಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ನಿಯೋಜಿಸಿಕೊಳ್ಳಬಹುದು. ಇದರಲ್ಲಿ ಸರಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ.

ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಂಡ ನಂತರ ಫಲಿತಾಂಶ ಹಾಗೂ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಕ್ಷೇತ್ರಾಭಿವೃದ್ಧಿ: ಶಾಸಕರಿಗೆ ತಲಾ 25 ಕೋಟಿ ರೂ.

ನೀತಿ ಸಂಹಿತೆ ಜಾರಿಗೆ ಮುನ್ನ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಪ್ರಮುಖ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರು ಪ್ರತಿ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಬಿಡುಗಡೆಗೆ ಮುಂದಾಗಿದ್ದಾರೆ.

17ನೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟಗೊಂಡ ನಂತರ ಬಿಜೆಪಿ ಮೊದಲ ಬಾರಿಗೆ 25 ಸ್ಥಾನಗಳಲ್ಲೂ, ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರರು ತಲಾ ಒಂದು ಸ್ಥಾನಗಳಲ್ಲಿ ಜಯ ಗಳಿಸಿದ್ದರು.

Tags: ckcknewsnowelection commission of indiaindiakarnatakaloksabha electionnewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕರ್ನಾಟಕದ ಮತ್ತೊಬ್ಬ ಸುಪ್ರಸಿದ್ಧ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತನೆ ಮಾಡಿರುವ ಕೃಷ್ಣಶಿಲೆಯ ಬಾಲರಾಮ ಮೂರ್ತಿ ಇಲ್ಲಿದೆ ನೋಡಿ

ಕರ್ನಾಟಕದ ಮತ್ತೊಬ್ಬ ಸುಪ್ರಸಿದ್ಧ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತನೆ ಮಾಡಿರುವ ಕೃಷ್ಣಶಿಲೆಯ ಬಾಲರಾಮ ಮೂರ್ತಿ ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

Recommended

ರಾಜಕಾಲುವೆಗಳ ಒತ್ತುವರಿ ತೆರವು ಆರಂಭ; ಅಡ್ಡಿಪಡಿಸಿದರೆ ಕಠಿಣ ಕ್ರಮ

ರಾಜಕಾಲುವೆಗಳ ಒತ್ತುವರಿ ತೆರವು ಆರಂಭ; ಅಡ್ಡಿಪಡಿಸಿದರೆ ಕಠಿಣ ಕ್ರಮ

5 years ago
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಡಿಸೆಂಬರ್ 27ಕ್ಕೆ ಗುಡಿಬಂಡೆ ಪಟ್ಟಣ ಪಂಚಾಯಿತಿ ಉಪ ಚುನಾವಣೆ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ