• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದು ಹೇಳಿಕೆ; ಬ್ಲ್ಯಾಕ್’ಮೇಲ್ ರಾಜಕಾರಣ ಎಂದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
February 1, 2024
in NATION, POLITICS, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
916
VIEWS
FacebookTwitterWhatsuplinkedinEmail

ಕಾಂಗ್ರೆಸ್ ಪಕ್ಷದ ರಹಸ್ಯ ಚರ್ಚೆ ಬಯಲಾಗಿದೆ ಎಂದ ಮಾಜಿ ಮುಖ್ಯಮಂತ್ರಿ

ಬೆಂಗಳೂರು/ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು ಎಂದು ಮಾಗಡಿ ಶಾಸಕರು ಹೇಳಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇದು ಬ್ಲಾಕ್ ಮೇಲ್ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಹೇಳಿಕೆಯನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಇದು ಬ್ಲಾಕ್ ಮೇಲ್ ರಾಜರಾರಣ ಎಂಬುದರಲ್ಲಿ ಸಂಶಯವಿಲ್ಲ. ಅವರ ಮಾತಿಗೆ ಪ್ರಾಶಸ್ತ್ಯ ಕೊಡುವುದು ಅನಾವಶ್ಯಕ ಎಂದರು.

ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು. ಆ ಗಿಫ್ಟ್ ಕಾರ್ಡ್ ಕೊಟ್ಟು ಜನರನ್ನು ವಂಚಿಸಿದ್ದಾರೆ. ಈ ಗ್ಯಾರಂಟಿ ಯೋಜನೆಗಳೂ ಅದೇ ರೀತಿ ಎಂದು ನೇರವಾಗಿ ಆರೋಪ ಮಾಡಿದರು ಕುಮಾರಸ್ವಾಮಿ.

ಈ ಗ್ಯಾರಂಟಿಗಳು ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತವೆ. ಪಕ್ಷದ ಮಟ್ಟದಲ್ಲಿ ಅಗಿರುವ ಚರ್ಚೆ ಬಗ್ಗೆ ಈ ವ್ಯಕ್ತಿ ಜನರ ಎದುರು ಹೇಳಿದ್ದಾರೆ. ಇವರೆಲ್ಲ ಇದನ್ನೆ ಚರ್ಚೆ ಮಾಡಿದ್ದಾರೆ. ಪಾರ್ಲಿಮೆಂಟ್ ವರೆಗೂ ಗ್ಯಾರಂಟಿ ಕೊಡೊಣ, ಬಳಿಕ ನಿಲ್ಲಿಸೋಣ ಎಂಬ ಚರ್ಚೆ ಆಗಿದೆ. ಅವರ ಒಳಗಡೆಯ ಚರ್ಚೆ ಇಲ್ಲಿ ಬಯಲಾಗಿದೆ. ಪಕ್ಷದ ರಹಸ್ಯ ರಿವೀಲ್ ಆಗಿದೆ ಎಂದು ಹೇಳಿದರು ಅವರು.

ಸಮರ್ಪಕವಾಗಿ ಗ್ಯಾರಂಟಿ ಕೊಡಲು ಅವಕಾಶ ಇದೆ. ಅದೇನು ಅಂತಹ ದೊಡ್ಡ ಕಾರ್ಯಕ್ರಮ ಅಲ್ಲ, ಕೊಡಲು ಸಮಸ್ಯೆಯೂ ಇಲ್ಲ. ಸರಿಯಾದ ಮಾರ್ಗದಲ್ಲಿ ಹೋಗಿದಿದ್ದರೆ ಈ ಐದು ಗ್ಯಾರಂಟಿಗಳನ್ನ ಕೊಟ್ಟು, ರಾಜ್ಯದ ಅಭಿವೃದ್ಧಿ ಸಹ ಮಾಡಬಹುದಿತ್ತು. ಅದು ಇವರ ತಪ್ಪುಗಳಿಂದ ಹೀಗೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ಬಿಜೆಪಿಯವರು ಅಕ್ಷತೆಗೆ ಜನರು ಮತ ಹಾಕುವುದಾದರೆ ಅದನ್ನು ಕಾಂಗ್ರೆಸ್ ನವರೂ ಮಾಡಲಿ. ಬೇಡ ಎಂದವರು ಯಾರು? ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ ಮಾಜಿ ಸಿಎಂ; ಅವರ ಅಕ್ಷತೆಗೆ ಜನ ಓಟ್ ಹಾಕಿದರೆ ನಿಮ್ಮ ಅಕ್ಷತೆಗೆ ಜನ ಓಟ್ ಹಾಕಲ್ವಾ? ನೀವೂ ಒಂದು ಪ್ರಯೋಗ ಮಾಡಿ ಎಂದರು.

ಇಡೀ ಬೆಟ್ಟವನ್ನೆ ಅಭಿವೃದ್ಧಿ ಮಾಡಲಿ

ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು; ಕಾಂಗ್ರೆಸ್ ನಾಯಕರ ಹೇಳಿಕೆಗೆ ಸ್ವಾಗತ. 20ಎಕರೆಯಲ್ಲಿ ಅಲ್ಲ 100 ಎಕರೆಯಲ್ಲಿ ರಾಮಮಂದಿರ ಕಟ್ಟಿ, ನಿಮಗೆ ನನ್ನ ಬೆಂಬಲ ಇದೆ. ಇಡೀ ಬೆಟ್ಟವನ್ನೆಲ್ಲಾ ಅಭಿವೃದ್ಧಿ ಮಾಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ಕೊಡಿ ಎಂದು ರಾಮದೇವರ ಬೆಟ್ಟ ಅಭಿವೃದ್ಧಿ ವಿಚಾರದ ಕುರಿತಾಗಿ ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಲೋಕಸಭೆ ಚುನಾವಣೆವರೆಗೂ ಇದನ್ನು ಹೇಳ್ತಾರೆ ಅಷ್ಟೇ ಇವರು. ಹಾರೋಬೆಲೆಯಲ್ಲಿ ಇವರು ಕಟ್ಟಿರೋದು ಏನು? ಯೇಸುಕ್ರಿಸ್ತ ಪ್ರತಿಮೆಯನ್ನು ಯಾಕೆ ಕಟ್ಟಿದ್ದಾರೆ ಅಲ್ಲಿ? ಅಲ್ಲಿ ಚರ್ಚ್ ಒಳಗೆ ಬಹಳ ವರ್ಷ ಏನಿಟ್ಟಿದ್ದರು? ಇದೆಲ್ಲಾ ಗೊತ್ತಿಲ್ಲದೇ ಇರೋದಾ? ಚರ್ಚ್ ಕಟ್ಟಿದ್ದು ಯೇಸು ಮೇಲಿನ ಭಕ್ತಿಗಲ್ಲ. ಇದೆಲ್ಲಾ ನಾನು ಕಾಣದೇ ಇರೋದಾ? ಎಂದು ಅವರು ವ್ಯಂಗ್ಯವಾಡಿದರು.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಅವರಿಗೆ ಭಯ ತಂದಿದೆ. ಇವರು ಏನೇ ತಿಪ್ಪರಲಾಗ ಹಾಕಿದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲ ಎನ್ ಡಿಎ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ.

ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ ಎಂದಿರುವ ಅವರು, ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ ಎಂದಿದ್ದಾರೆ.

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ. ಹಿಂದಿನ ಐದು ವರ್ಷದ ಆಡಳಿತದಲ್ಲಿ ಯಾವ ಯಾವ ವಲಯಕ್ಕೆ ಶಕ್ತಿ ತುಂಬಿದ್ದೇವೆ ಅನ್ನುವ ಮಾಹಿತಿಯನ್ನು ಹಣಕಾಸು ಸಚಿವರು ನೀಡಿದ್ದಾರೆ. ಯುವಜನತೆ ಸೇರಿ ಹಲವು ವರ್ಗಕ್ಕೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಭರವಸೆ ನೀಡಿದ್ದಾರೆ. ಉತ್ಪಾದನಾ ಕ್ಷೇತ್ರದ ಓಟಕ್ಕೆ ಇಂಬು ಕೊಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಂತರ ಬಜೆಟ್ ನಲ್ಲಿ ಪ್ರವಾಸೋದ್ಯಮ, ಮೀನುಗಾರಿಕೆಗೆ ಆದ್ಯತೆ ಕೊಟ್ಟಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದಾರೆ ಎಂದಿದ್ದಾರೆ ಅವರು.

ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವೆ

ರಾಜ್ಯದ ಅಭಿವೃದ್ಧಿ ಬಗ್ಗೆ ಮುಂದಿನ ದಿನಗಳಲ್ಲಿ ಕೇಂದ್ರ ಬಿಜೆಪಿ ನಾಯಕರ ಜತೆ ಮುಕ್ತವಾಗಿ ಚರ್ಚೆ ಮಾಡುತ್ತೇನೆ. ಇದು ಮಧ್ಯಂತರ ಬಜೆಟ್. ಹಾಗಾಗಿ ಚುನಾವಣೆ ಬಳಿಕ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ. ನನಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಅರಿವಿದೆ. ಎಲ್ಲಿ ಅನ್ಯಾಯವಾಗಿದೆ ಅದೆಲ್ಲವನ್ನೂ ಸರಿಮಾಡುವ ನಿಟ್ಟಿನಲ್ಲಿ ಕೇಂದ್ರದ ಮನವೊಲಿಸುತ್ತೇವೆ. ಪ್ರಾಮಾಣಿಕವಾಗಿ ರಾಜ್ಯದ ಜನತೆ ಪರವಾಗಿ ಧ್ವನಿ ಎತ್ತುತ್ತೇನೆ. ಅದರ ಜತೆಗೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾದಾಗ ಕರ್ನಾಟಕಕ್ಕೆ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ನೆರವು ಸಿಗುತ್ತದೆ ಎನ್ನುವ ನಿರೀಕ್ಷೆ ನನಗಿದೆ ಎಂದು ಅವರು ಹೇಳಿದ್ದಾರೆ.

Tags: ckcknewsnowCongressfive guaranteesjdskarnatakaloksabha election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಷ್ಟ್ರಪತಿ ಚುನಾವಣೆ: ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್‌ ಬೆಂಬಲ ಘೋಷಣೆ

ಸಂಸತ್ತಿನ ಜಂಟಿ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣ

Leave a Reply Cancel reply

Your email address will not be published. Required fields are marked *

Recommended

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

5 years ago
ಬರದಿಂದ ನಲುಗಿದ್ದ ಬಾಗೇಪಲ್ಲಿ ಜನರಿಗೆ ಅನ್ನ ಕೊಡಿಸಿದ್ದರು ಆಸ್ಕರ್

ಬರದಿಂದ ನಲುಗಿದ್ದ ಬಾಗೇಪಲ್ಲಿ ಜನರಿಗೆ ಅನ್ನ ಕೊಡಿಸಿದ್ದರು ಆಸ್ಕರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ