• About
  • Advertise
  • Careers
  • Contact
Monday, June 15, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೇಂದ್ರ ಸರಕಾರದ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೆಸ್ ಸರಕಾರ; ಅದಕ್ಕೆ ಅಸಲಿ ಕಾರಣ ಏನು?

P K Channakrishna by P K Channakrishna
February 2, 2024
in NATION, NEWS & VIEWS, STATE
Reading Time: 2 mins read
0
ಕೇಂದ್ರ ಸರಕಾರದ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೆಸ್ ಸರಕಾರ; ಅದಕ್ಕೆ ಅಸಲಿ ಕಾರಣ ಏನು?
978
VIEWS
FacebookTwitterWhatsuplinkedinEmail

ಬರಪೀಡಿತ ಕರ್ನಾಟಕಕ್ಕೆ ಕೇಂದ್ರದಿಂದ ಈವರೆಗೆ ನಯಾಪೈಸೆ ಬಂದಿಲ್ಲ; ಫೆಬ್ರವರಿ 7ರಂದು ನವದೆಹಲಿಯಲ್ಲಿ ಸಿದ್ದು, ಡಿಕೆಶಿ ಪ್ರತಿಭಟನೆ

ಬೆಂಗಳೂರು:ಕೇಂದ್ರ ಸರಕಾರದ ಮಲತಾಯಿ ದೋರಣೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ.

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಕ್ಕೆ ಪರಿಹಾರ ನೀಡದಿರುವುದು ಸೇರಿದಂತೆ ಕೇಂದ್ರ ಸರಕಾರ ಎಲ್ಲಾ ಹಂತದಲ್ಲೂ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂದು ಕೇಂದ್ರದ ಗಮನ ಸೆಳೆಯಲು ಒಂದು ದಿನದ ಧರಣಿ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಜತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರು ಹಾಗೂ ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62,000 ಕೋಟಿ ಹಣ ನಷ್ಟವಾಗಿದೆ. 2018-19ರಲ್ಲಿ ಕೇಂದ್ರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ರೂ. ಇತ್ತು. 2023-24ನೇ ಸಾಲಿನಲ್ಲಿ ದುಪ್ಪಟ್ಟಾಗಿ 45 ಲಕ್ಷ ಕೋಟಿ ರೂ. ಆಗಿದೆ. 2018-19ರಲ್ಲಿ ಕೇಂದ್ರ ಬಜೆಟ್ʼನಲ್ಲಿ ರಾಜ್ಯಕ್ಕೆ 46,000 ಕೋಟಿ ರೂ. ಅನುದಾನ ಸಿಕ್ಕಿತ್ತು. 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50,000 ಕೋಟಿ ಮಾತ್ರ. ಕೇಂದ್ರ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಸಿಗುತ್ತಿರುವ ಪಾಲಿನಲ್ಲಿ ಅತ್ಯಲ್ಪ ಏರಿಕೆ ಆಗಿದೆ ಅಷ್ಟೇ.

ಡಿ.ಕೆ. ಶಿವಕುಮಾರ್ , ಉಪ ಮುಖ್ಯಮಂತ್ರಿ

ರಾಷ್ಟ್ರದ ಗಮನಕ್ಕೆ ರಾಜ್ಯದ ಸಂಕಷ್ಟ

ಪ್ರತಿಭಟನೆ ಮೂಲಕ ಕೇಂದ್ರ ಸರಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಇಡೀ ರಾಷ್ಟ್ರದ ಗಮನಕ್ಕೆ ತರಲು ಮುಖ್ಯಮಂತ್ರಿ ಸಜ್ಜಾಗಿದ್ದಾರೆ. ಅದಕ್ಕೆ ಬೇಕಾದ ಎಲ್ಲಾ ವಿವರ, ಅಂಕಿ-ಅಂಶಗಳನ್ನು ಸಿದ್ಧ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್‌ನ ದೆಹಲಿ ನಾಯಕರು ಇಂದು ಬೆಳಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ಚರ್ಚಿಸಿದ ನಂತರ, ರಾಜ್ಯ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಅವರು ಧರಣಿ ಮಾಡುವ ನಿರ್ಧಾರ ಕೈಗೊಂಡರು. ಈಗಾಗಲೇ ಎಲ್ಲಾ ಶಾಸಕರಿಗೆ ಈ ವಿಷಯ ತಿಳಿಸಲಾಗಿದೆ.

ಕರ್ನಾಟಕದ ಬಹುತೇಕ ಭಾಗ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರ ಸರಕಾರ ಇದುವರೆಗೂ ನಯಾಪೈಸೆಯನ್ನೂ ನೀಡಿಲ್ಲ, ಕೋಟ್ಯಂತರ ರೂ. ಬೆಳೆ ನಷ್ಟವಾಗಿದ್ದು ರೈತರಿಗೂ ಪರಿಹಾರ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕಾರ ದೂರುತ್ತಿದ್ದು, ಅದೇ ಅಂಶವನ್ನು ಇಡೀ ದೇಶದ ಗಮನಕ್ಕೆ ತರಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮೇಕೆದಾಟು ಅಣೆಕಟ್ಟೆಗೂ ಮಂಜೂರಾತಿ ನೀಡಿಲ್ಲ

ಬೆಂಗಳೂರಿಗೆ ಕುಡಿಯುವ ನೀರು ಹಾಗೂ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಅನುಕೂಲವಾಗುವಂತೆ ಕೃಷ್ಣರಾಜ ಸಾಗರ ಜಲಾಶಯಕ್ಕೆ ಸಮಾನಾಂತರವಾಗಿ ಮೇಕೆದಾಟು ಸಮೀಪ ಅಣೆಕಟ್ಟೆ ನಿರ್ಮಿಸಲು ಇದುವರೆಗೂ ಕೇಂದ್ರ ಸರಕಾರ ಮಂಜೂರಾತಿ ನೀಡಿಲ್ಲ.

ಹದಿನೈದನೇ ಹಣಕಾಸು ಆಯೋಗ ರಾಜ್ಯಕ್ಕೆ ನಿಗದಿ ಮಾಡಿರುವ ಅನುದಾನದಲ್ಲಿ 5,495 ಕೋಟಿ ರೂ.ಗಳನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಬೆಂಗಳೂರಿನ ವರ್ತುಲ ರಸ್ತೆಗೆ ನೀಡಬೇಕಿದ್ದ 6,000 ಕೋಟಿ ರೂ.ಗಳನ್ನು ಕೇಂದ್ರ ನೀಡಿಲ್ಲ. ಜನರ ಮುಂದೆ ಭರವಸೆಯ ಮಹಾಪೂರವನ್ನೇ ಹರಿಸಿರುವ ಕೇಂದ್ರವು, ನಂತರ ಯಾವುದೇ ಯೋಜನೆಗಳಿಗೆ ಮಂಜೂರಾತಿ ಮತ್ತು ಆರ್ಥಿಕ ನೆರವು ಕೊಟ್ಟಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ ನೀಡಬೇಕಾದ 5,300 ಕೋಟಿ ರೂ.ಗಳನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ, ರಾಜ್ಯದಿಂದ ಸಂಗ್ರಹವಾಗುತ್ತಿರುವ GST ಪಾಲಿನ ವಿಷಯದಲ್ಲೂ ಅನ್ಯಾಯವಾಗುತ್ತಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಿದ್ದ 1,000 ಕೋಟಿ ರೂ.ಗಳನ್ನು ಈಗ ಹಿಡಿದಿಟ್ಟುಕೊಂಡಿದೆ.

ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂಬುದು ನಾವು ಬಯಸುತ್ತೇವೆ. ಬಿಜೆಪಿಯವರು ಕೇಂದ್ರ ಬಜೆಟ್ ನಲ್ಲಿ ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ

ಸಿದ್ದರಾಮಯ್ಯ, ಮುಖ್ಯಮಂತ್ರಿ

ಕೇಂದ್ರದ ಯೋಜನೆಗಳಿಗೆ ಪಾಲು ಕಡಿತ

ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ನೀಡುವ ಬೆಂಬಲ ಬೆಲೆ ಯೋಜನೆಯಡಿ 1,800 ಕೋಟಿ ರೂ.ಗಳನ್ನು ಇದುವರೆಗೆ ಕೇಂದ್ರ ನೀಡಿಲ್ಲ, ಅದೇ ರೀತಿ ರಾಜ್ಯದಲ್ಲಿ ಜಾರಿಯಾಗುವ ಕೇಂದ್ರದ ಯೋಜನೆಗಳಿಗೆ ನೀಡುವ ಪಾಲನ್ನು ಕೂಡ ಕಡಿತ ಮಾಡಲಾಗಿದ್ದು, ಆ ಪ್ರಮಾಣವನ್ನು ಶೇ.10 ಮತ್ತು ಶೇ.25ಕ್ಕೆ ಇಳಿಸಲಾಗಿದೆ!

ಕೇಂದ್ರದ ಪ್ರಾಯೋಜಿತ ಯೋಜನೆಗಳಿಗೆ ಈ ಮೊದಲು ಶೇ.75ರಷ್ಟು ಹಣವನ್ನು ನೀಡಲಾಗುತ್ತಿತ್ತು. ಉಳಿದ ಶೇ.25ರಷ್ಟು ಹಣವನ್ನು ಆಯಾ ರಾಜ್ಯ ಸರಕಾರಗಳು ಭರಿಸುತ್ತಿದ್ದವು. ನಂತರದ ದಿನಗಳಲ್ಲಿ ಆ ಪಾಲಿನ ಪ್ರಮಾಣವನ್ನು ಶೇ.50ಕ್ಕೆ ಇಳಿಸಲಾಯಿತು. ಇದೀಗ ಕೇವಲ ಶೇ.10ರಷ್ಟು ಮಾತ್ರ ಭರಿಸುತ್ತಿದೆ ಕೇಂದ್ರ ಸರಕಾರ. ಉಳಿದದ್ದನ್ನು ರಾಜ್ಯಗಳೇ ಭರಿಸಬೇಕಿದೆ.

ಕೆಲ ವಿಶೇಷ ಯೋಜನೆಗಳಿಗೆ ಮಾತ್ರ ಕೇಂದ್ರ ಸರಕಾರ ಶೇ.25ರಷ್ಟು ಅನುದಾನ ನೀಡುತ್ತದೆ. ಉಳಿದಂತೆ ಎಲ್ಲಾ ಯೋಜನೆಗಳಿಗೆ ರಾಜ್ಯವೇ ಹಣ ಹೊಂದಿಸಬೇಕಿದೆ. ಕೊರತೆ ಬಜೆಟ್ ಸರಿದೂಗಿಸಲು ಕೇರಳಕ್ಕೆ 15,000 ಕೋಟಿ ರೂ. ನೀಡಿರುವ ಕೇಂದ್ರ, ಕರ್ನಾಟಕದಲ್ಲಿ ಕೊರತೆ ಬಜೆಟ್ ಮಂಡನೆಯಾಗಿದ್ದರೂ ನೆರವು ನೀಡುವುದಿಲ್ಲ ಎಂಬುದು ಸೇರಿ ಹಲವು ವಿಷಯಗಳನ್ನು ರಾಷ್ಟ್ರದ ಗಮನಕ್ಕೆ ತರುವ ಮೂಲಕ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ತಂಡ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪ್ರತಿಭಟನೆ ಮೂಲಕ ಬಿಜೆಪಿಗೆ ಶಾಕ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ನಂತರ ಅದರ ಅಲೆಯಲ್ಲಿ ತೇಲುತ್ತಿರುವ ಬಿಜೆಪಿಗೆ ಈ ಪ್ರತಿಭಟನೆಯ ಮೂಲಕ ಶಾಕ್ ನೀಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ.

ಭಾವನಾತ್ಮಕ ವಿಷಯಗಳನ್ನು ಹಿಡಿದುಕೊಂಡು ರಾಜಕೀಯ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರ, ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಎಳೆಎಳೆಯಾಗಿ ದೇಶಕ್ಕೆ ವಿವರಿಸುವುದು ಸಿದ್ದರಾಮಯ್ಯ ಅವರ ದೂರಾಲೋಚನೆ.

ನವದೆಹಲಿಯಲ್ಲಿ ಫೆಬ್ರವರಿ 7ರಂದು ನಡೆಸಲಿರುವ ಪ್ರತಿಭಟನೆಯಲ್ಲಿ ತಾವು ಮತ್ತು ತಮ್ಮ ಸಂಪುಟದ ಸದಸ್ಯರಲ್ಲದೆ ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರೂ ಭಾಗವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.

ಕೇಂದ್ರದ ಅನ್ಯಾಯದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ರೀತಿಯಲ್ಲೇ ಬೀದಿಗಿಳಿದು ಹೋರಾಟಕ್ಕಿಳಿಯುವ ಮೂಲಕ ದೇಶದ ಗಮನ ಸೆಳೆಯಬಹುದು, ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಬಹುದು ಎಂಬುದು ಸಿದ್ದರಾಮಯ್ಯ ಅವರ ಆಲೋಚನೆಯಾಗಿದೆ.

ಡಿಕೆಸು ಹೇಳಿಕೆಯ ಡ್ಯಾಮೇಜ್‌ ಕಂಟ್ರೋಲ್‌

ಅನುದಾನ ಮತ್ತು ತೆರಿಗೆ ಪಾಲು ಹಂಚಿಕೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಷ್ಟ್ರದ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರು ಕೊಟ್ಟಿರುವ ಹೇಳಿಕೆ ದೇಶಾದ್ಯಂತ ಅಲ್ಲೋಲಕಲ್ಲೋಲ ಉಂಟು ಮಾಡಿದೆ. ಇದರಿಂದ ಕಾಂಗ್ರೆಸ್‌ ತೀವ್ರ ಇಕ್ಕಿಟ್ಟಿಗೆ ಸಿಲುಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸ್ವಪಕ್ಷೀಯ ನಾಯಕರೇ ಡಿಕೆಸು ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜತೆಗೆ, ದೇಶಾದ್ಯಂತ ಅದರಲ್ಲೂ ಉತ್ತರ ಭಾರತದ ಎಲ್ಲಾ ನಾಯಕರು ರಾಜಕೀಯ ಭಿನ್ನಭಿಪ್ರಾಯ ಮರೆತು ಸುರೇಶ್‌ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಅದರೆ, ದಕ್ಷಿಣದ ರಾಜ್ಯಗಳಲ್ಲಿ ಅವರಿಗೆ ಅಷ್ಟೇನೂ ಬೆಂಬಲ ವ್ಯಕ್ತವಾಗಿಲ್ಲ. ಬದಲಿಗೆ ವ್ಯಾಪಕ ಟೀಕೆಗಳೇ ಕೇಳಿ ಬರುತ್ತಿವೆ. ಇವರ ಹೇಳಿಕೆಯಿಂದ ಉತ್ತರ ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೊಡೆತ ಬೀಳಬಹುದು ಎಂದು ಕಾಂಗ್ರೆಸ್‌ ಆತಂಕದಲ್ಲಿದೆ. ಈಗಾಗಲೇ ಅಯೋಧ್ಯೆ ಅಲೆಯಲ್ಲಿ ತೇಲುತ್ತಿರುವ ಬಿಜೆಪಿಗೆ ಈ ವಿಷಯವೂ ಪೆಟ್ಟು ಕೊಟ್ಟರೆ ಕಷ್ಟ ಎನ್ನುವುದು ವರಿಷ್ಠರ ಆತಂಕವಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಡ್ಯಾಮೇಜ್‌ ಕಂಟ್ರೋಲ್‌ ಗೆ ಮುಂದಾಗಿದೆ. ಡಿ.ಕೆ.ಸುರೇಶ್‌ ಈ ಹೇಳಿಕೆ ಕೊಡಲು ಮೂಲ ಕಾರಣ ಏನು? ಎನ್ನುವುದನ್ನು ದೇಶಕ್ಕೆ ತಿಳಿಸಲು ಸಿಎಂ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಈ ಮೂಲಕ ದಕ್ಷಿಣದ ರಾಜ್ಯಗಳಲ್ಲಿ ಕೇಂದ್ರ ಸರಕಾರದ ವಿರುದ್ಧ ಮಡುಗಟ್ಟಿರುವ ಅಸಹನೆಯನ್ನು ದೇಶಕ್ಕೆ ತಿಳಿಸುವುದು ಅವರ ಉದ್ದೇಶವಾಗಿದೆ.

Tags: allocationckcknewsnowCongressdevolutiondk sureshfederal systemprotest against bjpseparate nationsiddaramaiahtax
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಕಲ್ಲು ಹೊಡೆದು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ?

Leave a Reply Cancel reply

Your email address will not be published. Required fields are marked *

Recommended

ಮುಂದಿನ ತಿಂಗಳೇ 5 ಗ್ಯಾರಂಟಿ!

ಬಿಜೆಪಿಗೆ ಸಿದ್ದು ಚಾಲೆಂಜ್!‌

3 years ago
ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಅಕ್ಟೋಬರ್‌ ಅ.25ರಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ