• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಕೈಜೋಡಿಸಿ ಮನವಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

P K Channakrishna by P K Channakrishna
February 7, 2024
in NATION, STATE
Reading Time: 1 min read
0
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು
918
VIEWS
FacebookTwitterWhatsuplinkedinEmail

ಗ್ಯಾರಂಟಿಗಳನ್ನು ಸೋ ಕಾಲ್ಡ್‌ ಗ್ಯಾರಂಟಿಗಳು ಎಂದು ಕರೆದ ಹೆಚ್.ಡಿ.ದೇವೇಗೌಡರು

  • ರಾಜಕೀಯ ಉದ್ದೇಶದ, ತಾತ್ಕಾಲಿಕ ಲಾಭದ ಗ್ಯಾರಂಟಿಗಳು
  • ಮೋದಿ ಗ್ಯಾರಂಟಿ ವಿಭಿನ್ನ, ನನಗೆ ಗೊತ್ತಿದೆ
  • ಎಸ್‌ ಟಿ ಪ್ರವರ್ಗಕ್ಕೆ ಕಾಡುಗೊಲ್ಲ ಸಮುದಾಯ; ಪ್ರಧಾನಿಗೆ ಮನವಿ
  • ರಾಜ್ಯಸಭೆಯಲ್ಲಿ ವಿಜಯವಾಣಿ ವರದಿ ಪ್ರಸ್ತಾಪಿಸಿದ ದೇವೇಗೌಡರು//*

ರಾಜ್ಯಸಭೆ, ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದರು.

ಕಾಂಗ್ರೆಸ್‌ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.

ಮೋದಿ ಗ್ಯಾರಂಟಿ ವಿಭಿನ್ನ, ನನಗೆ ಗೊತ್ತಿದೆ

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರೊಬ್ಬರು ಮೋದಿ ಗ್ಯಾರಂಟಿಗಳ ಬಗ್ಗೆ ಏನು ಹೇಳುತ್ತೀರಿ ಎಂದಾಗ, “ನಾನು ಹೇಳುತ್ತಿರುವುದು ಕರ್ನಾಟಕ ಸರಕಾರದ ಗ್ಯಾರಂಟಿಗಳ ಬಗ್ಗೆ. ಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ” ಎಂದು ಗುಡುಗಿದರು. ಅಲ್ಲದೆ; “ನಾನು ತಪ್ಪು ಮಾಹಿತಿ ಹೇಳಿದ್ದರೆ ಕ್ಷಮೆ ಕೇಳುತ್ತೇನೆ. ಯಾರಿಗೂ, ಯಾವುದಕ್ಕೂ ಅಪಖ್ಯಾತಿ ತರುವ ಉದ್ದೇಶ ನನ್ನದಲ್ಲ. ಕರ್ನಾಟಕ ಸರಕಾರ ಒಳ್ಳೆಯದು ಮಾಡಿದರೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ನನಗೆ ಅದರಿಂದ ಏನೂ ಆಗಬೇಕಿಲ್ಲ” ಎಂದರು ಅವರು.

ಹಣ ಇಲ್ಲ, ಪ್ರತಿಭಟನೆ ಮಾಡುತ್ತೇವೆ ಎಂದು ನಮ್ಮನ್ನೆಲ್ಲ ಕರೆಯುತ್ತಾರೆ. ಆದರೆ, ಕೇರಳದಲ್ಲಿ ಇದೇ ಉದ್ದೇಶಕ್ಕೆ ಅಲ್ಲಿನ ಎಲ್‌ ಡಿಎಫ್‌ ಸರಕಾರ ಕರೆದರೆ ಕಾಂಗ್ರೆಸ್‌ ನವರು ಬಹಿಷ್ಕಾರ ಹಾಕುತ್ತಾರೆ. ಇದು ರಾಜಕೀಯ ಪರಿಸ್ಥಿತಿ ಎಂದು ಅವರು ಬೇಸರಿಸಿದರು.

ಮನ ಕಲಕುವ ಘಟನೆ ವಿವರಿಸಿದ ಮಾಜಿ ಪ್ರಧಾನಿಗಳು

ಗ್ಯಾರಂಟಿಗಳ ಹೆಸರಿನಲ್ಲಿ ಕರ್ನಾಟಕದಲ್ಲಿ ಏನಾಗಿದೆ? ಒಂದು ಘಟನೆ ಬಗ್ಗೆ ವಿವರಿಸುತ್ತೇನೆ. “ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ್ದ ಟ್ವೀಟ್‌ʼನ ಒಂದು ತುಣುಕನ್ನು ಓದಿದರು ಹಾಗೂ ಆ ಬಗ್ಗೆ ವಿಜಯವಾಣಿ ಪತ್ರಿಕೆ ವರದಿ ಮಾಡಿದ್ದ ಪತ್ರಿಕೆಯ ತುಣುಕನ್ನು ಪ್ರದರ್ಶಿಸಿದರು. “ಆ ಯುವಕ ಕೆಲಸಕ್ಕಾಗಿ ತಾಯಿಯೊಂದಿಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುತ್ತಾನೆ. ಟಿಕೆಟ್‌ ಇಲ್ಲದ ಕಾರಣಕ್ಕೆ ಅವರಿಬ್ಬರನ್ನು ಧಾರವಾಡದ ಬಳಿ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ” ಎಂದು ಮಾಜಿ ಪ್ರಧಾನಿಗಳು ಅತೀವ ಬೇಸರ ವ್ಯಕ್ತಪಡಿಸಿದರು.

ನಾನು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾಗ ಒಬ್ಬ ಶಾಸಕರನ್ನೂ ನಿಗಮ ಮಂಡಳಿಗಳಿಗೆ ನೇಮಕ ಮಾಡಲಿಲ್ಲ. ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ನೀರಾವರಿ ಯೋಜನೆಗಳಿಗೆ ತೆಗೆದಿಟ್ಟೆ. ಜನರನ್ನು ದುಡ್ಡಿನಲ್ಲಿ ಒಂದು ಪೈಸೆಯನ್ನೂ ಅನಗತ್ಯವಾಗಿ ವೆಚ್ಚ ಮಾಡಲಿಲ್ಲ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಹಾಗೆಯೇ ಕೆಲಸ ಮಾಡಿದ್ದೇನೆ ಎಂದು ಅವರು ಸದನದಲ್ಲಿ ಒತ್ತಿ ಹೇಳಿದರು.

ಕಾಡುಗೊಲ್ಲ ಸಮುದಾಯದ ಬಗ್ಗೆ ಪ್ರಸ್ತಾಪ

ನರೇಂದ್ರ ಮೋದಿ ಅವರು ಪ್ರಧಾನಿಗಳಾಗಿ ಹತ್ತು ವರ್ಷ ಪೂರೈಸಿದ್ದಾರೆ. ನಾನು ಕೇವಲ ಹತ್ತು ತಿಂಗಳು ಮಾತ್ರ ಆ ಹುದ್ದೆಯಲ್ಲಿದ್ದೆ. ಆದರೆ, ನಾನು ಅವರಿಗೆ ಹೋಲಿಕೆ ಮಾಡಿಕೊಳ್ಳುತ್ತಿಲ್ಲ. ನನ್ನ ಅರವತ್ತು ವರ್ಷಗಳ ಸಾರ್ವಜನಿಕ ಜೀವನದ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ, ಅಷ್ಟೇ. ಕರ್ನಾಟಕದಲ್ಲಿ ಕಳೆದ ಏಳು ತಿಂಗಳಿಂದ ರಾಜ್ಯ ಸರಕಾರ ಹಲವಾರು ವಿಚಾರಗಳನ್ನು ಮುಂಚೂಣಿಗೆ ತಂದಿದೆ. ಮೀಸಲಾತಿ ಬಗ್ಗೆ ನಾನು ಯಾರನ್ನೂ ದೂರುವುದಿಲ್ಲ. ಆನೇಕ ಮೀಸಲಾತಿ ವರದಿಗಳ ಬಗ್ಗೆ ನನಗೆ ಗೊತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿ ಅನ್ಯಾಯಕ್ಕಾಗಿ ತುತ್ತಾಗಿದೆ. 2014ರಿಂದಲೂ ಇವರನ್ನು ಎಸ್‌ಟಿ ಪ್ರವರ್ಗಕ್ಕೆ ಸೇರಿಸುವ ಪ್ರಸ್ತಾವನೆ ಇತ್ತು. ಈಗ 2024. ಪ್ರಧಾನಮಂತ್ರಿಗಳು ನಾಳೆ ಸದನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಅವರ ಗಮನ ಸೆಳೆಯುವುದಕ್ಕಾಗಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದೇನೆ ಎಂದು ದೇವೇಗೌಡರು ಹೇಳಿದರು.

ಈ ಸಮುದಾಯದ ಪರವಾಗಿ ನೂತನ ಸಂಸತ್‌ ಭವನದಲ್ಲಿ ಪ್ರಧಾನಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದೆ. ನನ್ನ ಬಗ್ಗೆ ಅವರು ಅತೀವ ಪ್ರೀತಿ ವಾತ್ಸಲ್ಯ ತೋರಿದರು. ನನಗೀಗ 91 ವರ್ಷ ವಯಸ್ಸು. ಹಿಂದೆ ಅನೇಕ ಪ್ರಧಾನಿಗಳನ್ನು ನೋಡಿದ್ದೇನೆ, ಭೇಟಿಯಾಗಿದ್ದೇನೆ. ಯಾರೂ ನನ್ನ ಬಗ್ಗೆ ಇಷ್ಟೊಂದು ಪ್ರೀತಿ ತೋರಿಸಿರಲಿಲ್ಲ. ಅಂದು ಕಾಡುಗೊಲ್ಲ ಸಮುದಾಯವನ್ನು ಎಸ್‌ ಟಿ ಪ್ರವರ್ಗಕ್ಕೆ ಸೇರಿಸಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೆ. ತಕ್ಷಣವೇ ಅವರು ಹೇಳಿದರು, ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು. 2022-2023ರಲ್ಲಿ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವೂ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಕರ್ನಾಟಕದ 13 ಜಿಲ್ಲೆಗಳಲ್ಲಿರುವ ಕಾಡುಗೊಲ್ಲ ಸಮುದಾಯದ ಹಿತಕ್ಕಾಗಿ ಪ್ರಧಾನಿಗಳು ನಿರ್ಧಾರ ಪ್ರಕಟಿಸಬೇಕು ಎಂದು ಸದನದ ಮೂಲಕ ಮನವಿ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಮಾಲಿನ್ಯ ನಿಯಂತ್ರಣ ಮಸೂದೆಗೆ ಸ್ವಾಗತ

ಸದನದಲ್ಲಿ ಮಂಡಸಲಾಗಿದ್ದ ಮಾಲಿನ್ಯ ನಿಯಂತ್ರಣ ಮಸೂದೆಯನ್ನು ಸ್ವಾಗತಿಸಿದ ಮಾಜಿ ಪ್ರಧಾನಿಗಳು; ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಕರ್ನಾಟಕವೂ ಸೇರಿದಂತೆ ಎಲ್ಲೆಡೆ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನನಗೆ ಗೊತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಮ್ಮ ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಬಗ್ಗೆ ಮುಖ್ಯಮಂತ್ರಿ ಆಗಿದ್ದ ನನಗೆ ಚನ್ನಾಗಿ ಗೊತ್ತಿದೆ ಎಂದರು ಅವರು.

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ

ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಮಾಜಿ ಪ್ರಧಾನಿಗಳು; ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟರಲ್ಲದೆ, ಕೇಂದ್ರ ಸರಕಾರವು 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ʼನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ದಯಮಾಡಿ ಪ್ರಧಾನಿಗಳು ಮಧ್ಯಪ್ರವೇಶ ಮಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ಮನವಿಕೊಂಡರು.

Tags: cauveryckcknewsnowfive guaranteeshd devegowdakarnatakaMekedatuRajya Sabhatamilnadu
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ

ಲೋಕಸಭೆ ಚುನಾವಣೆ ಕಣಕ್ಕೆ IAS/IPS ಅಧಿಕಾರಿಗಳು, ಪತ್ರಕರ್ತರು

Leave a Reply Cancel reply

Your email address will not be published. Required fields are marked *

Recommended

ಭರತಭೂಮಿಯ ಶಕ್ತಿ ಎಂದರೆ ಇದೇನಾ? ಈಶಾನ್ಯ ಕಣಿವೆಗಳಲ್ಲಿ ಚಿತ್ತಾಗಿ ಓಡಿದರಾ ಜಗದೇಕವೀರರು!!

ಭರತಭೂಮಿಯ ಶಕ್ತಿ ಎಂದರೆ ಇದೇನಾ? ಈಶಾನ್ಯ ಕಣಿವೆಗಳಲ್ಲಿ ಚಿತ್ತಾಗಿ ಓಡಿದರಾ ಜಗದೇಕವೀರರು!!

6 years ago
ನಾನು ಹಿಂದೂ ರಾಮಯ್ಯ ಕೃತಿ ಲೋಕಾರ್ಪಣೆ

ನಾನು ಹಿಂದೂ ರಾಮಯ್ಯ ಕೃತಿ ಲೋಕಾರ್ಪಣೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ