• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಜಾತಿಗಣತಿ ವರದಿ ಪರಿಶೀಲನೆಗೆ ಸಂಪುಟ ಉಪಸಮಿತಿ?; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ಎಲ್ಲರ ಚಿತ್ತ

cknewsnow desk by cknewsnow desk
February 29, 2024
in POLITICS, STATE
Reading Time: 1 min read
0
ಜಾತಿಗಣತಿ ವರದಿ ಪರಿಶೀಲನೆಗೆ ಸಂಪುಟ ಉಪಸಮಿತಿ?; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ಎಲ್ಲರ ಚಿತ್ತ
943
VIEWS
FacebookTwitterWhatsuplinkedinEmail

ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ; ಎಲ್ಲವನ್ನೂ ಗುಮಾನಿಯಿಂದಲೇ ನೋಡುತ್ತಿರುವ ಪ್ರಬಲ ಜಾತಿಗಳು

ಬೆಂಗಳೂರು: ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕಾರ ಮಾಡಿದ್ದಾರೆ. ಇದು ಲೋಕಸಭೆ ಚುನಾವಣೆಗೆ ಮುನ್ನವೇ ಹೊಸ ರಾಜಕೀಯ ತಿರುವುಗಳಿಗೆ ಕಾರಣವಾಗುವ ಸಾಧ್ಯತೆಗಳು ದಟ್ಟವಾಗಿ ಗೋಚರವಾಗುತ್ತಿವೆ.

ವರದಿಗೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿ ಇಟ್ಟುಕೊಂಡು ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸಿ ಜಾತಿಗಳನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎರಡೂ ಸಮುದಾಯಗಳ ಮುಖಂಡರು ಆರೋಪ ಮಾಡುತ್ತಿದ್ದಾರೆ.

ಲೋಕಸಭೆ ಚುನಾವಣೆ ದಿನಾಂಕ ಇನ್ನು ಕೆಲ ದಿನಗಳಲ್ಲಿಯೇ ಘೋಷಣೆ ಆಗಲಿದ್ದು, ಅದಕ್ಕೆ ಮೊದಲೇ ಈ ವರದಿ ಸ್ವೀಕಾರ ಮಾಡಿರುವ ಮುಖ್ಯಮಂತ್ರಿ ನಡೆಯನ್ನು ಅವರ ಸ್ವಪಕ್ಷೀಯರೇ ಕಟುವಾಗಿ ಟೀಕಿಸಿದ್ದಾರೆ. ಪ್ರಬಲ ಸಮುದಾಯಗಳು ಅವರನ್ನು ಗುಮಾನಿಯಿಂದ ನೋಡುತ್ತಿವೆ.

ಏಕೆಂದರೆ, ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಸಿಎಂ ಆದ ಮೇಲೆ ಅವರು ಇಡುತ್ತಿರುವ ಹೆಜ್ಜೆಗಳು, ಮಿತಿ ಮೀರಿದ ಅಲ್ಪಸಂಖ್ಯಾತರ ಓಲೈಕೆ, ಜಾತಿ ಸಮಾವೇಶಗಳು, ಮೀಸಲಾತಿ ನೆಪದಲ್ಲಿ ಪ್ರಬಲ ಜಾತಿಗಳ ಮೇಲೆ ಬೆಂಕಿ ಉಗುಳುವ ಭಾಷಣಗಳು ಇಂಥ ಗುಮಾನಿಗೆ ಕಾರಣವಾಗಿವೆ.

ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಪರಿಶೀಲನೆಗಾಗಿ ಸಂಪುಟ ಉಪ ಸಮಿತಿಗೆ ವಹಿಸುವ  ಉದ್ದೇಶ ಮುಖ್ಯಮಂತ್ರಿ  ಅವರಿಗಿದೆ ಎಂದು ಗೊತ್ತಾಗಿದೆ. ಪ್ರಬಲ ಸಮುದಾಯಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂತರಾಜ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಆಯೋಗದಿಂದ ಸಿದ್ದಪಡಿಸಲಾದ ಮೂಲ ವರದಿಯಲ್ಲಿ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆಮೂಲಾಗ್ರ ಬದಲಾವಣೆ ಮಾಡಿದ್ದಾರೆ.

ಕಾಂತರಾಜ್ ವರದಿಯಲ್ಲಿನ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು ಹಾಲಿ ಅಧ್ಯಕ್ಷರ ನೇತೃತ್ವದಲ್ಲಿ ಇಡೀ ರಾಜ್ಯದಲ್ಲಿ ಮತ್ತೊಮ್ಮೆ ಅಗತ್ಯ ಮಾಹಿತಿ ಪಡೆದು ಬೃಹತ್  ಗಾತ್ರದ ವರದಿ ಸಿದ್ಧ ಪಡಿಸಿ ಸಲ್ಲಿಸಲಾಗಿದೆ.

ಅಂದರೆ, ರಾಜ್ಯದಲ್ಲಿರುವ ಪ್ರಮುಖ ಸಮುದಾಯಗಳು ಸಲ್ಲಿಸಿದ್ದ ಮನವಿ ಪತ್ರಗಳನ್ನು ಆಧರಿಸಿ ವಾಸ್ತವ ಸ್ಥಿತಿಯನ್ನು ಅಧ್ಯಯನ  ಮಾಡಿ ವರದಿ ತಯಾರಿಸಿದ್ದಾರೆ ಎನ್ನಲಾಗಿದೆ.

ಕಾಂತರಾಜ್ ಅವರ ಅವಧಿಯ ವರದಿಯಲ್ಲಿ ಪ್ರಬಲ ಸಮುದಾಯಗಳನ್ನು ವಿಭಜನೆ ಮಾಡಿ ಅವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗೆ ಅನುಗುಣವಾಗಿ ಜಾತಿ ಮತ್ತು ಉಪ ಪಂಗಡಗಳನ್ನು ವಿಂಗಡಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.

ಕಾಂತರಾಜ್ ವರದಿಗೆ ವಿರೋಧ

ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಕಾಂತರಾಜ್ ವರದಿಯನ್ನು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದವು. ಅದೇ ಸಮಯಕ್ಕೆ ಸಿದ್ದರಾಮಯ್ಯ ಅವರ ಸಂಪುಟದ ಕೆಲವು ಸಚಿವರು ಸಹ ಆಕ್ಷೇಪ ವ್ಯಕ್ತಪಡಿಸಿ ವೈಜ್ಞಾನಿಕ ಸಮೀಕ್ಷಾ ವರದಿ ತಯಾರಾಗಬೇಕು ಎಂದಿದ್ದರು.

ಸಾರ್ವಜನಿಕವಾಗಿ ವ್ಯಕ್ತವಾದ ತೀವ್ರ ವಿರೋಧವನ್ನು ಮನಗಂಡ ಮುಖ್ಯಮಂತ್ರಿ ಅವರು ಹಾಲಿ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರಿಗೆ ಸರಕಾರಕ್ಕೆ ಸಲ್ಲಿಕೆಯಾದ ಮನವಿಗಳನ್ನು ರವಾನಿಸಿ ಕಾಂತರಾಜ್ ಅಧ್ಯಕ್ಷರಾಗಿದ್ದಾಗ ಸಿದ್ಧಪಡಿಸಿದ್ದ ವರದಿಯಲ್ಲಿ ಲೋಪವಾಗಿದ್ದರೆ, ಅದನ್ನು ಸರಿಪಡಿಸುವಂತೆ ಹೇಳಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕಾಗಿ ಹೆಗ್ಡೆ ಅವರ ಕಾಲಾವಧಿ ಮುಗಿದಿದ್ದರೂ ಮತ್ತೆ ಎರಡು ಬಾರಿ ಅವಧಿ ವಿಸ್ತರಿಸಿ ಪರಿಷ್ಕೃತ ವರದಿ ಸಿದ್ಧಪಡಿಸಲು ಅವಕಾಶ ಮಾಡಿಕೊಟ್ಟಿದರು. ಈಗ ಹೆಗ್ಡೆ ಅವರ ನೇತೃತ್ವದ ಆಯೋಗದ ಅವಧಿ ಮುಕ್ತಾಯಗೊಂಡಿದೆ. ಅಧಿಕಾರದಿಂದ ನಿವೃತ್ತರಾಗುವ ಮುನ್ನ ಅವರು ಮುಖ್ಯಮಂತ್ರಿ  ಹಾಗೂ ಸರಕಾರದ ಉನ್ನತಾಧಿಕಾರಿಗಳಿಗೆ ಮೂಲ ವರದಿಯನ್ನು ಸಲ್ಲಿಸಿದ್ದಾರೆ.

ವರದಿಯಲ್ಲಿ ಸರಕಾರಕ್ಕೆ ಕೆಲವು ಶಿಫಾರಸು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015ರ ಸಮಗ್ರ ವರದಿ-01, ಜಾತಿವಾರು ಜನಸಂಖ್ಯೆ ವಿವರ-01, ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು-8 ಸಂಪುಟ. ಪರಿಶಿಷ್ಟಜಾತಿ ಮತ್ತು ವರ್ಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ತಲಾ ಒಂದು ಸಂಪುಟ. ವಿಧಾನಸಭೆ ಕ್ಷೇತ್ರವಾರು ಜಾತಿವಾರು ಸಮೀಕ್ಷೆಗಳ ಅಂಕಿ-ಅಂಶಗಳಿಗೆ ಸಂಬಂಧಿಸಿದ ಎರಡು ಸಿಡಿ ಸಲ್ಲಿಸಿಕೆಯಾದ ವರದಿಯಲ್ಲಿ ಸೇರಿವೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿಯ ಒಂದು ಸಂಪುಟ ಸೇರಿದಂತೆ ಒಟ್ಟು 13 ದಾಖಲೆಗಳನ್ನು ಎರಡು ಬಾಕ್ಸ್ ಗಳಲ್ಲಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ತಂದು ಸಲ್ಲಿಸಿದ್ದಾರೆ.

ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲಾಗಿದೆ : ಹೆಗ್ಡೆ

ವರದಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ.  ಅದನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ತೀರ್ಮಾನ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

ನಾವು ಸರಕಾರಕ್ಕೆ ಕೆಲವು ಶಿಫಾರಸ್ಸು ಮಾಡಿದ್ದೇವೆ. ಆದರೆ, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ವರದಿ ಸ್ವೀಕರಿಸಿರುವ ಮುಖ್ಯಮಂತ್ರಿ ಅವರು ಅನುಷ್ಠಾನ ಮಾಡುವ ಕುರಿತಂತೆ ತಕ್ಷಣದ ತೀರ್ಮಾನ ಕೈಗೊಂಡಿಲ್ಲ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ವರದಿ ಅನುಷ್ಠಾನಗೊಳಿಸಿದರೆ, ಕೆಲವು ಸಮುದಾಯಗಳು ಅಪಸ್ವರ ಎತ್ತಿದರೂ ಕಾಂಗ್ರೆಸ್ ಗೆ ಹಿನ್ನಡೆಯಾಗಲಿದೆ ಎಂಬ ಭಾವನೆ ಅವರಲ್ಲಿದೆ.

 ಹೆಗ್ಡೆ ಅವರು ನೀಡಿರುವ  ವರದಿ ಪರಿಶೀಲಿಸಿ ನಂತರ ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ ಹಿರಿಯ ಸಚಿವರ ನೇತೃತ್ವದಲ್ಲಿ ಸಂಪುಟದ ಉಪ ಸಮಿತಿ ನೇಮಿಸಿದ್ದು, ಆ ಸಮಿತಿಗೆ ಕೆಲವು ತಜ್ಞರನ್ನು ನೇಮಕ ಮಾಡಲು ಮುಖ್ಯಮಂತ್ರಿ ಅವರು ಆಸಕ್ತಿ ಹೊಂದಿದ್ದಾರೆ.

ಕಾಂತರಾಜ್‌ ವರದಿ ಮೂಲ ಪ್ರತಿಯೇ ಕಣ್ಮರೆ!; ಆದರೂ ನ.24ಕ್ಕೆ ವರದಿ ಸ್ವೀಕರಿಸಲು ಸರಕಾರದ ತರಾತುರಿ
Tags: Backward ClassescasteCaste census reportckcknewsnowJayaprakash Hegdekarnatakasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

Leave a Reply Cancel reply

Your email address will not be published. Required fields are marked *

Recommended

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ: ಸಚಿವ ಡಾ.ಕೆ.ಸುಧಾಕರ್‌

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ: ಸಚಿವ ಡಾ.ಕೆ.ಸುಧಾಕರ್‌

4 years ago
ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ