• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ

cknewsnow desk by cknewsnow desk
March 2, 2024
in NEWS IN USE, STATE
Reading Time: 1 min read
0
ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ
990
VIEWS
FacebookTwitterWhatsuplinkedinEmail

582 ಹುದ್ದೆಗಳಿಗೆ ಮುಂಬಡ್ತಿ; 100 ಕೃಷಿ & 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ನಿರ್ಧರಿಸಿದೆ.

ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ- #kpsc ) ಮೂಲಕ 100 ಕೃಷಿ ಹಾಗೂ 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

582 ಹುದ್ದೆಗಳಿಗೆ ಮುಂಬಡ್ತಿ

ನಾಲ್ಕು ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿ ಒಟ್ಟು 582 ಹುದ್ದೆಗಳಿಗೆ ಮುಂಬಡ್ತಿ ನೀಡಿ ಉತ್ತಮ ಕಾರ್ಯನಿರ್ವಹಣೆಗೆ ಪ್ರೋತ್ಸಾಹಿಸಲಾಗಿದೆ.

ಮಳೆಯಾಶ್ರಿತ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ 100 ಕೋಟಿ ರೂ.ಗಳ ಅನುದಾನದೊಂದಿಗೆ ಸುಮಾರು 10,000 ಕೃಷಿ ಹೊಂಡಗಳನ್ನು ನಿರ್ಮಿಸುವುದರ ಮೂಲಕ ಅನುಷ್ಟಾನ ಮಾಡಲಾಗುತ್ತಿದೆ.

ಕೃಷಿಯಲ್ಲಿ ಯಾಂತ್ರೀಕರಣ ಪ್ರೋತ್ಸಾಹಿಸಲು 63,783 ಫಲಾನುಭವಿಗಳಿಗೆ (ಟ್ರ್ಯಾಕ್ಟರ್-370, ಪವರ್ ಟಿಲ್ಲರ್-5946, ಸ್ವಯಂಚಾಲಿತ ಕೃಷಿ ಯಂತ್ರೋಪಕರಣಗಳು-12,060 ಹಾಗೂ ಟ್ರ್ಯಾಕ್ಟರ್/ಇಂಜಿನ್/ಮೋಟರ್ ಚಾಲಿತ ಯಂತ್ರೋಪಕರಣಗಳು-36,907) ಮತ್ತು 8,500 ಕೃಷಿ ಸಂಸ್ಕರಣಾ ಘಟಕಗಳಿಗೆ 284.92 ಕೋಟಿ ರೂ. ಸಹಾಯಧನ ನೀಡಲಾಗಿದೆ ಅವರು ತಿಳಿಸಿದ್ದಾರೆ.

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (ಸಂಗ್ರಹ ಚಿತ್ರ)

ಹೈಟೆಕ್ ಹಾರ‍್ವೆಸ್ಟರ್ ಹಬ್

ನೂರು ಹೈಟೆಕ್ ಹಾರ‍್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, 50 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಸುಮಾರು 2.74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ 2.34 ಲಕ್ಷ ಫಲಾನುಭವಿಗಳಿಗೆ 484 ಕೋಟಿ ರೂ. ಸಹಾಯಧನ ನೀಡಲಾಗಿದೆ. ವಿಶೇಷ ಘಟಕ ಉಪಯೋಜನೆಯಡಿ ಎಲ್ಲಾ ಪರಿಶಿಷ್ಟ ಜಾತಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಅರ್ಜಿ ಹಾಕಿದ ಎಲ್ಲಾ ರೈತರಿಗೆ 48 ಗಂಟೆಯೊಳಗೆ ಕಾರ್ಯಾದೇಶ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯಗಳ ಉತ್ಪಾದನೆ, ಉತ್ಪಾದಕತೆ ಮತ್ತು ಬಳಕೆ ಹೆಚ್ಚಿಸಲು ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ.ನಂತೆ ಗರಿಷ್ಠ 2 ಹೆಕ್ಟೇರ್‌ಗಳವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದುವರೆಗೆ 8,521 ರೈತರಿಗೆ 8.56 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, 48 ನವೋದ್ಯಮಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ರೈತ ಕರೆ ಕೇಂದ್ರ

ರೈತ ಸಮುದಾಯದ ಕಲ್ಯಾಣಕ್ಕಾಗಿ ಇಲಾಖೆ ವತಿಯಿಂದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಗಳ ಕುರಿತು ರೈತರು ಮಾಹಿತಿ ಪಡೆಯಲು ಅನುಕೂಲವಾಗುವಂತೆ ನೂತನ “ರೈತ ಕರೆ ಕೇಂದ್ರ”ವನ್ನು 1800-425-3553 ಏಕರೂಪ ಸಂಖ್ಯೆಯೊಂದಿಗೆ ಸ್ಥಾಪಿಸಲಾಗಿದೆ ಎಂದಿದ್ದಾರೆ ಅವರು.

ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ’ಕರ್ನಾಟಕ ರೈತ ಸಮೃದ್ಧಿ ಯೋಜನೆ’ ಜಾರಿ ಮಾಡಲಾಗುವುದು, ಇದರಡಿ ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆ ಒಳಗೊಂಡಂತೆ ಸಮಗ್ರ ಕೃಷಿ ಮೂಲಕ ಆದಾಯ ಸುಸ್ಥಿರತೆ ಕಂಡುಕೊಳ್ಳಲು ಬೆಂಬಲ ನೀಡಲಾಗುವುದು.

ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆ ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬುದರ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುವುದು, ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿ ಸಂಗ್ರಹಣೆ ಹಾಗೂ ಸಂರಕ್ಷಣೆ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು.

ಪ್ರಗತಿಪರ ರೈತರು, ರೈತ ಉತ್ಪಾದಕ ಸಂಸ್ಥೆಗಳು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟ ಹಾಗೂ ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಉತ್ತಮ ದೇಸಿ ತಳಿಗಳ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Tags: agricultureckcknewsnowJobjobskarnatakanewsnews in userequitement
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಟ್ಟಣ ಪಂಚಾಯಿತಿಯ ಕೆಲ ಸದಸ್ಯರು ನನ್ನ ಬೆನ್ನಿಗೆ ಇರಿದರು, ಕಾಂಗ್ರೆಸ್‌ʼಗೆ ದ್ರೋಹ ಎಸಗಿದರು! ಶಾಸಕರಿಗೂ ಮೋಸ ಮಾಡಿದರು!!

ಆರೋಗ್ಯ ರಕ್ಷಾ ಸಮಿತಿ ಸದಸ್ಯರಾಗಿ ಬುಲೆಟ್ ಶ್ರೀನಿವಾಸ್

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ