• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

cknewsnow desk by cknewsnow desk
March 6, 2024
in NATION, STATE
Reading Time: 1 min read
0
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
953
VIEWS
FacebookTwitterWhatsuplinkedinEmail

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ?; ‘ಪಟ್ಟು-ಮಟ್ಟು-ಒಳಗುಟ್ಟು’ ಕಂಪನಿ ಸೇರಿ ನಿಗೂಢ ಕಂಪನಿಗಳಿಗೆ ಸಮೀಕ್ಷೆ ನೆಪದಲ್ಲಿ ಹಣ

ಕಾರ್ಯಕರ್ತೆಯರಿಗೆ ಬಿಡಿಗಾಸು, ಎಸಿ ರೂಂ ಸಮೀಕ್ಷೆ ಕುಳಗಳಿಗೆ ಕೋಟಿ ಕೋಟಿ ಹಣ

ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು; ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ?

ಹೆಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ.

ಹಾಗಾದರೆ, ಇದಕ್ಕೆ ಹೋಗುತ್ತಿರುವ ವೇತನ, ಭತ್ಯೆಗಳೆಲ್ಲ ವ್ಯರ್ಥವೇ?ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ… ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ? ಎಂದು ಖಾರವಾಗಿ ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನಿಸಿದ್ದಾರೆ.

ಒಬ್ಬ ಕಾರ್ಯಕರ್ತೆಗೆ 120ರಿಂದ 150 ಮನೆ ಹಂಚಿಕೆ ಮಾಡಿದ್ದು, 10–15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ ₹1,000! ಅದೇ ‘ಎಸಿ ರೂಂ ಸಮೀಕ್ಷೆ ಗಿರಾಕಿ’ಗಳಿಗೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಪಟ್ಟು-ಮಟ್ಟು-ಒಳಗುಟ್ಟು’ ಕಂಪನಿ ಸೇರಿ ನಿಗೂಢ ಕಂಪನಿಗಳಿಗೆ ಹಣ

ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! ‘ಪಟ್ಟು-ಮಟ್ಟು-ಒಳಗುಟ್ಟು’ ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರಕಾರ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು!

ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೋ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ ‘ಎಸಿ ರೂಂ ಸಮೀಕ್ಷೆ’ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ ‘ಎಸಿ ರೂಂ ಗಿರಾಕಿ’ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು! ಎಂದು ಅವರು ಆರೋಪ ಮಾಡಿದ್ದಾರೆ.

ಅಂಗನವಾಡಿಗೆ ಬರುವ ಮಕ್ಕಳ ಲಾಲನೆ– ಪಾಲನೆ, ಗರ್ಭಿಣಿಯರು- ಬಾಣಂತಿಯರಿಗೆ ಊಟ, ಪ್ರತಿ ತಿಂಗಳ ಮೊದಲ & 3ನೇ ಶುಕ್ರವಾರ ಪೋಷಣ್‌ ಅಭಿಯಾನ, 3ನೇ ಶನಿವಾರ ಬಾಲವಿಕಾಸ ಸಮಿತಿ ಸಭೆಗೆ ಹಾಜರಿ; ಜತೆಗೆ ಇಲಾಖೆ ನಿಯೋಜಿಸುವ ಕೆಲಸಗಳನ್ನೂ ನಿರ್ವಹಿಸಬೇಕು. ಮಾರ್ಚ್ 3ರಿಂದ ಗ್ಯಾರಂಟಿ ಸಮೀಕ್ಷೆ ಬೇರೆ ಮಾಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಚಾರಕ್ಕೆ ಬರವಿಲ್ಲ

ಹಾಗಾದರೆ, ಸಿದ್ದರಾಮಯ್ಯ ಅವರ ಸರಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ? ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ? ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: anganawadiAsha workersckcknewsnowfive guaranteekarnatakanewsSarvey
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಹೈದರಾಬಾದ್‌ನಲ್ಲಿ ರಾಕಿಭಾಯ್;‌ ಕೆಜಿಎಫ್‌ ಚಾಪ್ಟರ್-‌2 ಕೊನೆ ಹಂತದ ಶೂಟಿಂಗ್‌ ಶುರು

ಹೈದರಾಬಾದ್‌ನಲ್ಲಿ ರಾಕಿಭಾಯ್;‌ ಕೆಜಿಎಫ್‌ ಚಾಪ್ಟರ್-‌2 ಕೊನೆ ಹಂತದ ಶೂಟಿಂಗ್‌ ಶುರು

5 years ago
ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ  ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ