• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ

cknewsnow desk by cknewsnow desk
March 6, 2024
in NEWS IN USE, STATE
Reading Time: 1 min read
0
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ
982
VIEWS
FacebookTwitterWhatsuplinkedinEmail

ರಾಜ್ಯ ಸರಕಾರದ ಸುತ್ತೋಲೆ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ 5, 8, 9 ಹಾಗೂ 11ನೇ ತರಗತಿಗಳಿಗೆ ರಾಜ್ಯ ಸರಕಾರ ನಡೆಸಲು ಉದ್ದೇಶಿದ್ದ ಪಬ್ಲಿಕ್ ಪರೀಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರದಂದು ರದ್ದುಪಡಿಸಿದೆ.

ಮಕ್ಕಳ ಕಲಿಕೆಗೆ ಅನುಕೂಲ ಎಂಬ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಪರೀಕ್ಷೆ ಸುತ್ತೊಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಸರಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಸರಕಾರದ ಆದೇಶ ರದ್ದು

ಕೋವಿಡ್ ನಂತರದ ದಿನಗಳಲ್ಲಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೂ ಮುನ್ನ ನಾಲ್ಕು ಹಂತಗಳಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಸರಕಾರ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿತ್ತು.

ಇದುವರೆಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗಷ್ಟೇ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದವು.ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಗಳನ್ನು ನಡೆಸಲು ಹಾಗೂ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶ್ರೇಣೀಕೃತ ತೇರ್ಗಡೆ ನೀಡುತ್ತಿದ್ದವು.

ಸರಕಾರಿ ಅನುದಾನಿತ, ಸರ್ಕಾರಿ ಶಾಲೆಗಳ ಜೊತೆಗೆ ಖಾಸಗಿ ಅನುದಾನರಹಿತ ಶಾಲೆಗಳ ಮಕ್ಕಳು ಕೆಲವು ಘಟ್ಟಗಳಲ್ಲಿ ಬೋರ್ಡ್ ಪರೀಕ್ಷೆ ಬರೆಯಬೇಕೆಂದು ಸರ್ಕಾರ ತೀರ್ಮಾನ ಕೈಗೊಂಡಿತ್ತು.

ಕಲಿಕೆಯಲ್ಲಿ ಗಂಭೀರತೆ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ಅವರ ಕಲಿಕೆಯಲ್ಲಿ ಗಂಭೀರತೆ ಕಾಣಬಹುದೆಂಬ ಅಭಿಪ್ರಾಯ ಹೊಂದಿತ್ತು. ರಾಜ್ಯ ಸರಕಾರ ಕಳೆದ ಡಿಸೆಂಬರ್‌ನಲ್ಲಿ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕೋರ್ಟ್ ಮೆಟ್ಟಿಲೇರಿತ್ತು.

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಸರಕಾರದ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ.

ಪರೀಕ್ಷೆ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿರುವುದರಿಂದ ಸರಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದ್ದು, ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಿ ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇರುವುದರಿಂದ ಈ ವರ್ಷದ ಮಟ್ಟಿಗೆ 5, 8, 9 ಹಾಗೂ 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸಾಧ್ಯತೆ ಇಲ್ಲ, ಅಲ್ಲದೆ, 9 ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಪದ್ಧತಿಯೂ ಇಲ್ಲ.ಈಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ.

Tags: borad examckcknewsnoweducationfifth to eleven classeshigh courtkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

Leave a Reply Cancel reply

Your email address will not be published. Required fields are marked *

Recommended

ಪುನೀತ್‌ ಈಗ ಕರ್ನಾಟಕ ರತ್ನ

ಅಪ್ಪು ಆದರ್ಶಗಳನ್ನು ನಮ್ಮದಾಗಿಸಿಕೊಳ್ಳೋಣ

3 years ago
ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ