15ರಂದು ಚುನಾವಣಾ ಪ್ರಚಾರಕ್ಕೆ ಚಾಲನೆ; ವರಿಷ್ಠರು ಹೇಳಿದರೆ ಸ್ಪರ್ಧೆ ಮಾಡುತ್ತೇನೆ ಎಂದ ಡಾ.ಕೆ.ಸುಧಾಕರ್
by GS Bharath Gudibande
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15 ರಂದು ಚಾಲನೆ ನೀಡಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದ ಮಾಜಿ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಟಿಕೆಟ್ ಗಾಗಿ ನಾನು ಯಾವುದೇ ಪ್ರಯತ್ನ ಮಾಡ್ತಿಲ್ಲ. ಅವಕಾಶ ಮಾಡಿಕೊಟ್ಟರೆ ಉಮೇದುವಾರಿಕೆ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಣದಲ್ಲಿರುತ್ತೇನೆ ಅಲ್ಲದೇ ಪ್ರಧಾನಿ ಮೋದಿ ಅವರ ಹೆಗಲಿಗೆ ಹೆಗಲು ಕೊಟ್ಟು ಅವರ ಬೆನ್ನಲುಬಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಧ್ವನಿಯಾಗಿ ಕೆಲಸ ಮಾಡುತ್ತೇನೆ
ಪ್ರಧಾನಿ ಮೋದಿಯ ದ್ವನಿಯಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಧ್ವನಿ ದೇಶದಲ್ಲಿ ಕೇಳುವಂಥಹ ಕೆಲಸ ಮಾಡುತ್ತೇನೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರವನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗುತ್ತೇನೆ .ಮೂರು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಮುಂದುವರೆದ ಭಾಗವಾಗಿ ಮತ್ತಷ್ಟು ಶಕ್ತಿಯುತವಾಗಿ ಬಲಪಡಿಸುತ್ತೇನೆ ಎಂದರು.
ಜೆಡಿಎಸ್ ಪಕ್ಷದ ಮೈತ್ರಿಯಿಂದ ಮತ್ತಷ್ಟು ಶಕ್ತಿಬಂದಿದೆ
ಕಾಂಗ್ರೆಸ್ ವಿರುದ್ದ ಗೆಲ್ಲುವುದಕ್ಕೆ ಬಿಜೆಪಿಗೆ ಗೆಲ್ಲುವ ಪೂರಕ ವಾತಾವರಣ ಇದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಮತ್ತಷ್ಟು ಶಕ್ತಿ ಬಂದಿದೆ ಎಂದು ಸುಧಾಕರ್ ಅವರು ಹೇಳಿದರು.
ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪರೋಕ್ಷವಾಗಿ ಟೀಕಿಸಿದ ಸುಧಾಕರ್, ಹಗಲು ರಾತ್ರಿ ನಾನು ಕ್ಷೇತ್ರಕ್ಕಾಗಿ ದುಡಿದೆ. ಆದರೂ ನನ್ನನ್ನು ಸೋಲಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
Comments 1